news kadaba desk

ಶಿರೂರು ಗುಡ್ಡಕುಸಿತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ NH-66 ಮತ್ತೆ ಸಂಚಾರಕ್ಕೆ ಮುಕ್ತ

(ನ್ಯೂಸ್ ಕಡಬ)newskadaba.com ಕಾರವಾರ, ಆ.01. ಶಿರೂರು ಗುಡ್ಡ ಕುಸಿತದ ನಂತರ ಸಂಚಾರ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿ-66 ಅನ್ನು ಎರಡು ವಾರಗಳ ಬಳಿಕ ಮತ್ತೆ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತಿದೆ ಎನ್ನಲಾಗಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು, ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರಿಗೆ ಪತ್ರ ಬರೆದಿದ್ದು, ರಾಷ್ಟ್ರಿಯ ಹೆದ್ದಾರಿ ಸಂಚಾರಕ್ಕೆ ಮುಕ್ತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಿರೂರು ಗುಡ್ಡಕುಸಿತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ NH-66 ಮತ್ತೆ ಸಂಚಾರಕ್ಕೆ ಮುಕ್ತ Read More »

ಕರ್ನಾಟಕ

 ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ   

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.01. ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ-ಸಂಧಾನಕ್ಕೆಂದು ಸ್ನೇಹಿತನೊಂದಿಗೆ ಹೋಗಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ರಾಮನಗರ ಟೌನ್ ನಲ್ಲಿ ನಡೆದಿದೆ. ರಾಮನಗರದ ರೆಹಮಾನಿಯಾ ನಗರದ ನಿವಾಸಿ ಸೈಯದ್ ಅಫ್ಸಾನ್ (28) ಎಂದು ಗುರುತಿಸಲಾಗಿದೆ.    

 ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ    Read More »

ಕರ್ನಾಟಕ, ಕ್ರೈಮ್ ನ್ಯೂಸ್

 ವ್ಯಕ್ತಿ ನಾಪತ್ತೆ….!!        ದೂರು ದಾಖಲು                              

(ನ್ಯೂಸ್ ಕಡಬ)newskadaba.com ಉಡುಪಿ, ಆ.01. ಪೆರ್ಡೂರು ಗ್ರಾಮದ ಕಲ್ಲುಬೆಟ್ಟು ನಿವಾಸಿ ರವಿಕುಮಾರ್ (34) ಮನೆಯಿಂದ ಹೋದವರು ವಾಪಸ್ ಬಾರದೆ ಕಾಣೆಯಾಗಿದ್ದಾರೆ. ಅವನು 5 ಅಡಿ 4 ಇಂಚು ಎತ್ತರ, ಎಣ್ಣೆಯುಕ್ತ ಕಂದು ಮೈಬಣ್ಣ ಮತ್ತು ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಅವರು ಕನ್ನಡ, ತುಳು, ಹಿಂದಿ ಮತ್ತು ಇಂಗ್ಲಿಷ್ ಮಾತನಾಡುತ್ತಾರೆ. ಇವರ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ ಎಂದು ವರದಿ ತಿಳಿಸಿದೆ.    

 ವ್ಯಕ್ತಿ ನಾಪತ್ತೆ….!!        ದೂರು ದಾಖಲು                               Read More »

ಕರಾವಳಿ

‘ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಗುರುತಿಸಬೇಕು’ ಸ್ಪೀಕರ್ ಯು ಟಿ ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಗುರುತಿಸಬೇಕು ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಅವರು ಜುಲೈ 31 ರಂದು ಬುಧವಾರ ಒತ್ತಾಯಿಸಿದರು. ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಖಾದರ್, ತುಳುವಿನ ಸಾಂಸ್ಕೃತಿಕ ಮತ್ತು ಭಾಷಿಕ ಮಹತ್ವವನ್ನು ಒತ್ತಿ ಹೇಳಿದರು, “ಕಲಾವಿದರು, ನಾಟಕಕಾರರು ಮತ್ತು ಚಲನಚಿತ್ರ ನಿರ್ಮಾಪಕರು ಭಾಷೆಯನ್ನು ಜಾಗತಿಕವಾಗಿ ಗಮನಾರ್ಹವಾಗಿ ಪ್ರಚಾರ ಮಾಡಿದ್ದಾರೆ. ತುಳು ಲೇಖಕರು ಅದರ ಖ್ಯಾತಿಯನ್ನು ಬಹಳವಾಗಿ ಹೆಚ್ಚಿಸಿದ್ದಾರೆ. ತುಳುವಿನ ಪ್ರೀತಿ, ಸಂಪ್ರದಾಯ, ಪರಂಪರೆಯನ್ನು

‘ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಗುರುತಿಸಬೇಕು’ ಸ್ಪೀಕರ್ ಯು ಟಿ ಖಾದರ್ Read More »

ಕರಾವಳಿ

‘ಪ್ರಕೃತಿ ವಿಕೋಪದ ಬಗ್ಗೆ ಈ ಮೊದಲೇ ಕೇರಳ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು’ ಕೇಂದ್ರ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಪ್ರಾಕೃತಿಕ ವಿಕೋಪ ಸಂಭವಿಸುವ ಬಗ್ಗೆ ಕೇರಳ ಸರ್ಕಾರಕ್ಕೆ ಈ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಎನ್‌ಡಿಆರ್‌ಎಫ್ ತಂಡಗಳು ಕೇರಳಕ್ಕೆ ತೆರಳಿದ್ದವು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು. ಕೇಂದ್ರ ಸರ್ಕಾರದ ಮುನ್ನೆಚ್ಚರಿಕೆ ವ್ಯವಸ್ಥೆ ಮತ್ತು ದುರಂತದ ಪ್ರತಿಕ್ರಿಯೆ ಬಗ್ಗೆ ವಿಪಕ್ಷಗಳು ಟೀಕಿಸಿದ ಹಿನ್ನೆಲೆ, ರಾಜ್ಯ ಸಭೆಯಲ್ಲಿ ಉತ್ತರಿಸಿದ ಅವರು, ಮುಂಚಿತವಾಗಿ ನೀಡಿದ್ದ ಎಚ್ಚರಿಕೆಗೆ ಕೇರಳ ಸರ್ಕಾರ ಕಿವಿಗೊಡಲಿಲ್ಲ. ಕೊನೆ ಪಕ್ಷ ಎನ್‌ಡಿಆರ್‌ಎಫ್ ತಂಡಗಳು ರಾಜ್ಯಕ್ಕೆ ಬಂದಿರುವುದು ಗೊತ್ತಾದರೂ ಎಚ್ಚೆತ್ತುಕೊಳ್ಳಲಿಲ್ಲ. ಈಗ

‘ಪ್ರಕೃತಿ ವಿಕೋಪದ ಬಗ್ಗೆ ಈ ಮೊದಲೇ ಕೇರಳ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು’ ಕೇಂದ್ರ ಗೃಹ ಸಚಿವ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.01. ಮಳೆಯ ಆರ್ಭಟ ಮುಂದುವರಿದಿದ್ದು, ನೆರೆಯಿಂದ ಆವೃತವಾದ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ. ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌            

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ ಎಂದು ತಿಳಿಸಿದ್ದಾರೆ.

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌             Read More »

ಕರಾವಳಿ, ಕ್ರೈಮ್ ನ್ಯೂಸ್

ಮದುವೆಗೆ ಪರಿಸರ ಸ್ನೇಹಿ ಪತ್ರಿಕೆ ಮಾಡಿಸಿದ ತರುಣ್, ಸೋನಾಲ್

(ನ್ಯೂಸ್ ಕಡಬ)newskadaba.com ಬೆಂಗಳೂರ, ಜು.31. ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಅವರ ಮದುವೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಮದುವೆಗೆ ಈಗಾಗಲೇ ಭರ್ಜರಿ ತಯಾರಿ ಆರಂಭವಾಗಿದೆ. ಇದೀಗ ತರುಣ್ ಮತ್ತು ಸೋನಾಲ್ ತಮ್ಮ ವಿವಾಹ ಪತ್ರಿಕೆಯನ್ನ ಪೂರ್ತಿಯಾಗಿ ಪರಿಸರ ಸ್ನೇಹಿಯಾಗಿ ಮಾಡಿಸಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರೆಟಿಗಳು ಪತ್ರಿಕೆಯೊಂದಿಗೆ ಒಂದು ಗಿಡ ಕೊಟ್ಟು ಮದುವೆಗೆ ಕರೆಯುತ್ತಾರೆ. ಆದರೆ ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್

ಮದುವೆಗೆ ಪರಿಸರ ಸ್ನೇಹಿ ಪತ್ರಿಕೆ ಮಾಡಿಸಿದ ತರುಣ್, ಸೋನಾಲ್ Read More »

ಕರ್ನಾಟಕ

ಕೊಡಗಿಗೆ ರೆಡ್ ಅಲರ್ಟ್ ಘೋಷಣೆ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧ

(ನ್ಯೂಸ್ ಕಡಬ)newskadaba.com ಕೊಡಗು, ಜು..31. ಮಳೆಯ ಅಬ್ಬರ ಮುಂದುವರಿದ್ದು, ಆಗಸ್ಟ್ 1 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ. ಅತಿಯಾದ ಮಳೆಯಿಂದ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ ಎಂದು ಕೊಡಗು

ಕೊಡಗಿಗೆ ರೆಡ್ ಅಲರ್ಟ್ ಘೋಷಣೆ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧ Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.31. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಇಳಿಜಾರು ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಲ ಭಾಗದಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿಯಾಗಿ ಹೆದ್ದಾರಿ ಬದಿಗೆ ಅಳವಡಿಸಿದ ಕಬ್ಬಿಣದ ತಡೆಬೇಲಿಯ ಮೇಲೇರಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಗಳು ಹೆದ್ದಾರಿಗೆ ಬಿದ್ದು ವಾಹನ ಸಂಚಾರಕ್ಕೆ ಕೆಲ ಹೊತ್ತು

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top