news kadaba desk

 ‘ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ’      ಸಿಎಂ ಸಿದ್ದರಾಮಯ್ಯ ಘೋಷಣೆ  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಹಂಚಿಕೊಂಡ ಸಿಎಂ, ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ […]

 ‘ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ’      ಸಿಎಂ ಸಿದ್ದರಾಮಯ್ಯ ಘೋಷಣೆ   Read More »

ಕರ್ನಾಟಕ

ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ 4 ಅಪ್ರಾಪ್ತರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಬಾಲಮಂದಿರದಿಂದ ತಪ್ಪಿಸಿಕೊಂಡು ಬಂದು ಮತ್ತೆ ಕಳ್ಳತನ ಮಾಡಿದ್ದ ನಾಲ್ವರು ಅಪ್ರಾಪ್ತರನ್ನು ಪೀಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಸಂಬಂಧ ಅವರ ಪೋಷಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ. ಬಾಲಕರಿಂದ 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, 2 ದ್ವಿಚಕ್ರ ವಾಹನ ಹಾಗೂ 1 ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ. ಕೆಲ ದಿನಗಳ ಹಿಂದೆ ಕೆಂಪಯ್ಯ ಗಾರ್ಡನ್‌ ಬಳಿ ಮಹಿಳೆಯೊಬ್ಬರು ಬೆಳಗ್ಗೆ ಕೆಲಸಕ್ಕೆ ನಡೆದು ಹೋಗುತ್ತಿದ್ದಾಗ ದ್ವಿ-ಚಕ್ರ

ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ 4 ಅಪ್ರಾಪ್ತರ ಬಂಧನ Read More »

ಕರ್ನಾಟಕ

ಮಂಗಳೂರು: ಮರದ ದಿಮ್ಮಿ ಆಕ್ರಮ ಸಾಗಾಟ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಮಂಗಳೂರಿನ ಅರಣ್ಯ ಸಂಚಾರಿ ದಳದ ವತಿಯಿಂದ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ರೂ. 5.50 ಲಕ್ಷ ಮೌಲ್ಯದ ಅಕೇಶಿಯ, ಮ್ಯಾಂಜಿಯಮ್ ದಿಮ್ಮಿಗಳನ್ನು ವಾಹನ ಸಮೇತ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಅರಣ್ಯ ಸಂಚಾರಿದಳ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಅವರ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್, ಶಿವಾನಂದ ಮಾದರ, ನವೀನ ರಿಚರ್ಡ್

ಮಂಗಳೂರು: ಮರದ ದಿಮ್ಮಿ ಆಕ್ರಮ ಸಾಗಾಟ ಪತ್ತೆ Read More »

ಕರಾವಳಿ

ಹವಾಮಾನ ವೈಪರೀತ್ಯ ವಯನಾಡು ಭೇಟಿ ಮುಂದೂಡಿದ ರಾಹುಲ್, ಪ್ರಿಯಾಂಕಾ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.31. ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡು ಭೇಟಿಯನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದೂಡಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ವಯನಾಡಿಗೆ ತೆರಳುವುದು ಕಷ್ಟಕರವಾಗಿದೆ. ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ಆದಷ್ಟು ಬೇಗ ವಯನಾಡಿಗೆ ಭೇಟಿ ನೀಡುತ್ತೇನೆ. ಈ ಮಧ್ಯೆ ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇವೆ ಮತ್ತು ಅಗತ್ಯವಿರುವ

ಹವಾಮಾನ ವೈಪರೀತ್ಯ ವಯನಾಡು ಭೇಟಿ ಮುಂದೂಡಿದ ರಾಹುಲ್, ಪ್ರಿಯಾಂಕಾ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಜು.31. ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ಮುಖ್ಯಮಂತ್ರಿಗಳ‌ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

(ನ್ಯೂಸ್ ಕಡಬ)newskadaba.com ದೆಹಲಿ, ಜು.31. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು

ಮುಖ್ಯಮಂತ್ರಿಗಳ‌ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಭಾರಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ…!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಸುರಿದ ಭಾರಿ ಮಳೆಗೆ ತಡರಾತ್ರಿ ಇತಿಹಾಸ ಪ್ರಸಿದ್ಧ ಗುಜ್ಜರಕೆರೆ ಬಳಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಅಗತ್ಯ ಕಾರ್ಯಾಚರಣೆಗೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು. ಮರ ಬಿದ್ದ ಪರಿಣಾಮ ಗುಜ್ಜರ ಕೆರೆಯ ಸುತ್ತಲೂ ಮಕ್ಕಳು ಹಾಗೂ ಹಿರಿಯರ ಸುರಕ್ಷತೆಯ ದೃಷ್ಟಿಯಿಂದ ಹಾಕಲಾಗಿದ್ದ ಸ್ಟಿಲ್ ರೇಲಿಂಗ್ ಮುರಿದಿದೆ. ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಮಂಗಳೂರು: ಭಾರಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ…! Read More »

ಕರಾವಳಿ, ಕ್ರೈಮ್ ನ್ಯೂಸ್

ಲೋಕಸೇವಾ ಆಯೋಗದ ನೂತನ ಅಧ್ಯಕ್ಷೆಯಾಗಿ ಪ್ರೀತಿ ಸೂದನ್ ಆಯ್ಕೆ…! ಆಗಸ್ಟ್ 1ರಂದು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.31. ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. 1983ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ ನಂತರ ಈ ಹುದ್ದೆ ಖಾಲಿಯಾಗಿತ್ತು. ಪ್ರೀತಿ ಸೂದನ್ ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿಯಾಗಿದ್ದರು. ಮಹಿಳಾ

ಲೋಕಸೇವಾ ಆಯೋಗದ ನೂತನ ಅಧ್ಯಕ್ಷೆಯಾಗಿ ಪ್ರೀತಿ ಸೂದನ್ ಆಯ್ಕೆ…! ಆಗಸ್ಟ್ 1ರಂದು ಅಧಿಕಾರ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಭಾರೀ ಮಳೆಯಿಂದ ಹಂಪಿಯಲ್ಲಿ ಕನಿಷ್ಠ 12 ಸ್ಮಾರಕಗಳು ಮುಳುಗಡೆ…!

(ನ್ಯೂಸ್ ಕಡಬ)newskadaba.com ಹೊಸಪೇಟೆ, ಜು.31. ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ ಗೂ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಭಾರೀ ಮಳೆಯಿಂದ ಒಳ ಹರಿವು ಹೆಚ್ಚಿರುವ ಕಾರಣ ತುಂಗಭದ್ರಾ ಅಣೆಕಟ್ಟೆಯಿಂದ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವಾಗ ನದಿಯ ಸಮೀಪ ಎಲ್ಲೆಂದರಲ್ಲಿ ಪ್ರಯಾಣಿಸದಂತೆ ವಿಜಯನಗರ ಆಡಳಿತ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದೆ. ತುಂಗಭದ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ 20 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಂಪಿಯ ಪುರಂದರ ಮಂಟಪ,

ಭಾರೀ ಮಳೆಯಿಂದ ಹಂಪಿಯಲ್ಲಿ ಕನಿಷ್ಠ 12 ಸ್ಮಾರಕಗಳು ಮುಳುಗಡೆ…! Read More »

ಕರ್ನಾಟಕ

ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ…! ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಚಿನ್ನಾಭರಣ, ವಜ್ರಾಭರಣ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿರುವ ಮಾರತ್ತಹಳ್ಳಿ ಪೊಲೀಸರು, 30 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನೀಲಸಂದ್ರ ನಿವಾಸಿಗಳಾದ ದಿವ್ಯಾ(22) ಮತ್ತು ಆಕೆಯ ಚಿಕ್ಕಮ್ಮ ಮಂಜು(39) ಹಾಗೂ ಮಂಜು ಅವರ ಪರಿಚಯಸ್ಥ ಈಜಿಪುರದ ರೋಮನ್ ಎಂದು ಗುರುತಿಸಲಾಗಿದೆ. ದಿವ್ಯಾ ಎಂಬ ಮಹಿಳೆ ಉದ್ಯಮಿ ವಿಕ್ರಮ ವೈದ್ಯನಾಥನ್ ಅವರ ನಿವಾಸದಲ್ಲಿ ಮನೆಗೆಲಸ ಮಾಡುತ್ತಿದ್ದರು. ವೈದ್ಯನಾಥನ್ ಅವರು ತಮ್ಮ ಮನೆಯಿಂದ 60 ಲಕ್ಷ ರೂಪಾಯಿ

ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ…! ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top