news kadaba desk

ಮಂಗಳೂರು: ‘ಆಪರೇಷನ್ ಟೈಗರ್’ ಕಾರ್ಯಾಚರಣೆ…!    ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.30. ‘ಆಪರೇಷನ್ ಟೈಗರ್’ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದ್ದು, ಇದನ್ನು ಖಂಡಿಸಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಗೆ ಬೀದಿ ಬದಿ ವ್ಯಾಪಾರಿಗಳು ಮುತ್ತಿಗೆ ಹಾಕಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಟೈಗರ್ ಕಾರ್ಯಾಚರಣೆ ನಿಲ್ಲಿಸಬೇಕು ಮತ್ತು ಬೀದಿಬದಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಯುಕ್ತರ ಕಚೇರಿ ಮುಂದೆ ಧರಣಿ ಆರಂಭಿಸಿದ್ದಾರೆ. ನಿನ್ನೆ ನಡೆದ ಟೈಗರ್ ಕಾರ್ಯಾಚರಣೆಯಲ್ಲಿ ತಳ್ಳುಗಾಡಿ, ಗೂಡಂಗಡಿಗಳು, ಸಾಮಗ್ರಿಗಳಿಗೆ ಹಾನಿ ಮಾಡಿದ್ದಲ್ಲದೆ ಆಹಾರ, ತಿಂಡಿತಿನಿಸುಗಳನ್ನು ನಾಶಪಡಿಸಿರುವುದರ ವಿರುದ್ಧ ಪ್ರತಿಭಟನಾಕಾರರು […]

ಮಂಗಳೂರು: ‘ಆಪರೇಷನ್ ಟೈಗರ್’ ಕಾರ್ಯಾಚರಣೆ…!    ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ Read More »

ಕರಾವಳಿ

ಪುತ್ತೂರು: ಯುವಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ…! ಗಾಯಾಳು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.30. ಪೊಲೀಸರು ಮನೆಗೆ ನುಗ್ಗಿ ವಿನಾಕಾರಣ ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಈಶ್ವರಮಂಗಲ ಪಂಚೋಡಿಯಲ್ಲಿ ನಡೆದಿದೆ. ಎಸಿ ಟೆಕ್ನಿಷಿಯನ್ ಆಗಿರುವ ಭ್ರಮೀಷ್ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ. ರಾತ್ರಿ 11 ಗಂಟೆ ಸುಮಾರಿಗೆ ತಾನು ಮನೆಯಲ್ಲಿ ಮಲಗಿದ್ದಾಗ ಬಾಗಿಲು ತಟ್ಟುವ ಶಬ್ದ ಕೇಳಿಸಿತು. ಬಾಗಿಲು ತೆರೆದಾಗ ನಾಲ್ವರು ಪೊಲೀಸರು ಮನೆಯಲ್ಲಿ ಬೇರೆ ಯಾರಾದರೂ ಇದ್ದಾರೆಯೇ ಎಂದು ಕೇಳಿದರು.

ಪುತ್ತೂರು: ಯುವಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ…! ಗಾಯಾಳು ಆಸ್ಪತ್ರೆಗೆ ದಾಖಲು Read More »

ಕರಾವಳಿ

ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್  

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜು.30. ಗುಡ್ಡ ಕುಸಿದ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಹೀಗಾಗಿ ಅಜಿಲಮೊಗರು – ಸರಳಿಕಟ್ಟೆ – ಉಪ್ಪಿನಂಗಡಿ ಸಂಪರ್ಕ ಕಡಿತಗೊಂಡಿದೆ ಎನ್ನಲಾಗಿದೆ. ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ. ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ

ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್   Read More »

ಕರಾವಳಿ

ಪ್ರವಾಹದಲ್ಲಿ ತೇಲಿಬಂದ ಶವಗಳು.! ಸೇನಾ ಹೆಲಿಕಾಪ್ಟರ್‌ ಲ್ಯಾಂಡ್‌ ಆಗೋಕು ಸ್ಥಳವಿಲ್ಲದೆ ಪರದಾಟ

(ನ್ಯೂಸ್ ಕಡಬ)newskadaba.com ಕೇರಳ, ಜು.30. ಕೇರಳದ ವಯ್ನಾಡ್‌ ನಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಇದರಲ್ಲಿ ಸಂಪೂರ್ಣ ನಾಲ್ಕು ಗ್ರಾಮಗಳೇ ನಾಪತ್ತೆಯಾಗಿವೆ ಎಂದು ವರದಿಯಾಗಿದೆ. ಇಲ್ಲಿಯವರೆಗೂ 40ಕ್ಕೂ ಅಧಿಕ ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ. ಭಾರಿ ಮಳೆ, ಭೂಕುಸಿತದ ಬೆನ್ನಲ್ಲಿಯೇ ಸಂಭವಿಸಿದ ಪ್ರವಾಹದಲ್ಲಿ ಶವಗಳು ವಯನಾಡ್ ಜಿಲ್ಲೆಯ ಗಲ್ಲಿಗಲ್ಲಿಗಳಿಗೆ ತೇಲಿಬಂದಿವೆ ಎನ್ನಲಾಗಿದೆ. ನಿಲಂಬೂರಿನ ಪೋತುಕಲ್ ಪ್ರದೇಶದ ನದಿಯಲ್ಲಿ 19 ಮಂದಿಯ ಶವಗಳು ವಿವಿಧೆಡೆ ಕೊಚ್ಚಿ ಹೋಗಿವೆ. ಬೆಳಗಿನ ಜಾವ ಹಲವೆಡೆ ಇತರ ದೇಹಗಳು ಹಾಗೂ ದೇಹದ ಭಾಗಗಳು ತೇಲುತ್ತಿವೆ

ಪ್ರವಾಹದಲ್ಲಿ ತೇಲಿಬಂದ ಶವಗಳು.! ಸೇನಾ ಹೆಲಿಕಾಪ್ಟರ್‌ ಲ್ಯಾಂಡ್‌ ಆಗೋಕು ಸ್ಥಳವಿಲ್ಲದೆ ಪರದಾಟ Read More »

ಕ್ರೈಮ್ ನ್ಯೂಸ್

ಅನಧಿಕೃತ ಫ್ಲೆಕ್ಸ್-ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.30. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಲ್ಲಾ ವಲಯ ಆಯುಕ್ತರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದರು ಎಂದು ವರದಿ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ

ಅನಧಿಕೃತ ಫ್ಲೆಕ್ಸ್-ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ Read More »

ಕರ್ನಾಟಕ

ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌     ಇಬ್ಬರು ಮೃತ್ಯು, 20 ಮಂದಿಗೆ ಗಾಯ    

(ನ್ಯೂಸ್ ಕಡಬ)newskadaba.com  ನವದೆಹಲಿ, ಜು.30. ಇಂದು ಮುಂಜಾನೆ ಜಾರ್ಖಂಡ್‌ ನ ಚಕ್ರಧರಪುರ ಜಿಲ್ಲೆಯ ರಾಜ್‌ಖರ್ಸಾವನ್ ಮತ್ತು ಬಡಬಾಂಬೋ ನಡುವೆ 12810 ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌ ನ 18 ಬೋಗಿಗಳು ಹಳಿತಪ್ಪಿ ಇಬ್ಬರು ಮೃತಪಟ್ಟು 20 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಆಗ್ನೇಯ ರೈಲ್ವೆಯ (SER) ಚಕ್ರಧರಪುರ ವಿಭಾಗದ ಅಡಿಯಲ್ಲಿ ಜಮ್ಶೆಡ್‌ಪುರದಿಂದ 80 ಕಿಮೀ ದೂರದಲ್ಲಿರುವ ಬಾರಾಬಾಂಬೂ ಬಳಿ ಇಂದು ನಸುಕಿನ ಜಾವ 3.45ಕ್ಕೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.  

ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌     ಇಬ್ಬರು ಮೃತ್ಯು, 20 ಮಂದಿಗೆ ಗಾಯ     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಜ್ವಲ್ ರೇವಣ್ಣ ‘ಸಾಮೂಹಿಕ ಅತ್ಯಾಚಾರಿ’ ಎಂದ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕನ ವಿರುದ್ಧ PIL ದಾಖಲು

(ನ್ಯೂಸ್ ಕಡಬ)newskadaba.com ಹಾಸನ, ಜು.30. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಕರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕರ್ನಾಟಕದಲ್ಲಿ ಸಾರ್ವಜನಿಕ ಭಾಷಣ ಮಾಡಿದ್ದ ರಾಹುಲ್ ಗಾಂಧಿಯವರು ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಉಲ್ಲೇಖಿಸಿದ್ದರು.

ಪ್ರಜ್ವಲ್ ರೇವಣ್ಣ ‘ಸಾಮೂಹಿಕ ಅತ್ಯಾಚಾರಿ’ ಎಂದ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕನ ವಿರುದ್ಧ PIL ದಾಖಲು Read More »

ಕರ್ನಾಟಕ

ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ    ಹಲವಾರು ಮಂದಿ ಸಿಲುಕಿರುವ ಶಂಕೆ ರಕ್ಷಣಾ ಕಾರ್ಯ ಮುಂದುವರಿಕೆ    

(ನ್ಯೂಸ್ ಕಡಬ)newskadaba.com  ಕೇರಳ, ಜು.30. ಉತ್ತರ ಕನ್ನಡ ಶಿರೂರು ಬಳಿ ಭೂಕುಸಿತದ ಕಹಿ ಘಟನೆ ಮಾಸುವ ಮುನ್ನವೇ ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದೆ ಎಂದು ತಿಳಿದುಬಂದಿದೆ. ನೂರಾರು ಮಂದಿ ಮಣ್ಣಿನೊಳಗೆ ಸಿಲುಕಿ ಹಾಕಿಕೊಂಡಿರುವ ಶಂಕೆಯಿದ್ದು ಹದಿನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ನಸುಕಿನ ಜಾವ ದುರ್ಘಟನೆ ಸಂಭವಿಸಿದ್ದು, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಭೂಕುಸಿತವಾದ ಪ್ರದೇಶಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ ಗೆ

ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ    ಹಲವಾರು ಮಂದಿ ಸಿಲುಕಿರುವ ಶಂಕೆ ರಕ್ಷಣಾ ಕಾರ್ಯ ಮುಂದುವರಿಕೆ     Read More »

ಕರಾವಳಿ

ದನದ ಮಾಂಸ ಸಾಗಾಟ…! ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಜ್ಪೆ, ಜು.30. ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಆರೀಫ್ (24) ಮೊಹಮ್ಮದ್ ಸುಲ್ತಾನ್ (19) ಎಂದು ಗುರುತಿಸಲಾಗಿದೆ. ಆರೋಪಿಗಳು ಬಜ್ಪೆಯ ಪೋಲಿಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಬೈತಾರಿ ಎಂಬಲ್ಲಿ ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದರು. ಬಜಪೆ ಠಾಣೆಯ ಪಿಎಸ್‌ಐ ರೇವಣಸಿದ್ದಪ್ಪ ಅವರು ಸಿಬ್ಬಂದಿಯೊಂದಿಗೆ ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಜೊತೆಗೆ

ದನದ ಮಾಂಸ ಸಾಗಾಟ…! ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾರ್ಮಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ…! ರಸ್ತೆ ಸಂಚಾರ ಬಂದ್

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಜು.30.    ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಡಿ ಘಾಟ್‌ ನಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆ ಸಂಚಾರ ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು, ಘಾಟ್ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದೆ ಎನ್ನಲಾಗಿದೆ. ಇನ್ನು ಘಾಟ್

ಚಾರ್ಮಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ…! ರಸ್ತೆ ಸಂಚಾರ ಬಂದ್ Read More »

ಕರಾವಳಿ
Scroll to Top