news kadaba desk

ಯುವಕನೋರ್ವನಿಗೆ ಅಪರಿಚಿತ ತಂಡದಿಂದ ಹಲ್ಲೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಸೆ.11. ಯುವಕನೋರ್ವನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳದವರನ್ನು ನಿಸಾರ್ ಎಂದು ಗುರುತಿಸಲಾಗಿದೆ. ನಿಸಾರ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದು, ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ […]

ಯುವಕನೋರ್ವನಿಗೆ ಅಪರಿಚಿತ ತಂಡದಿಂದ ಹಲ್ಲೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸೂರ್ಯನತ್ತ ಇಸ್ರೋ ಹೆಜ್ಜೆ….!! – ಆದಿತ್ಯ L1 ಉಡಾವಣೆ ಗೆ ಕ್ಷಣಗಣನೆ ಆರಂಭ

(ನ್ಯೂಸ್ ಕಡಬ)newskadaba.com ನವದೆಹಲಿ, ಸೆ.02. ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನಿತ್ತ ದೃಷ್ಟಿ ಇಟ್ಟಿದೆ ಎನ್ನಲಾಗಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ – ಎಲ್ 1 ಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಿಷನ್ ಇಂದು ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ಭೇಟಿ

ಸೂರ್ಯನತ್ತ ಇಸ್ರೋ ಹೆಜ್ಜೆ….!! – ಆದಿತ್ಯ L1 ಉಡಾವಣೆ ಗೆ ಕ್ಷಣಗಣನೆ ಆರಂಭ Read More »

ರಾಷ್ಟ್ರೀಯ ನ್ಯೂಸ್

ಆನ್ ಲೈನ್ ಗೇಮ್ ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.30. ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ‌ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದರು ಎಂದು ವರದಿಯಾಗಿದೆ. ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆನ್ ಲೈನ್ ಗೇಮ್ ಗಳಾದ ಡ್ರೀಮ್ 11, ಮೈ ಸರ್ಕಲ್ ಮುಂತಾದ ಆ್ಯಪ್

ಆನ್ ಲೈನ್ ಗೇಮ್ ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ Read More »

ಕರ್ನಾಟಕ

ಆ.30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.24. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ದೊರೆಯಲಿದ್ದು, ಭರ್ಜರಿ ಸಿದ್ಧತೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ. ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2000 ರೂ. ಜಮೆ ಮಾಡಲಾಗುತ್ತಿದ್ದು, ಯೋಜನೆಗಾಗಿ ಅರ್ಜಿ ಸಲ್ಲಿಸಿದವರು ಮಾತ್ರ ಯೋಜನೆಯ ಫಲ ಪಡೆಯಬಹುದು. ಸಿಎಂ ಸಿದ್ದರಾಮಯ್ಯ ಕೂಡ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದ್ದು, ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಫಲಾನುಭವಿಗಳನ್ನು ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ

ಆ.30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ Read More »

ಕರ್ನಾಟಕ

ಮೇಯಲು ಬಿಟ್ಟಿದ್ದ ದನ ಕರುಗಳ ಕಳವು – ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಆ.17. ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರು ಮತ್ತು ಎರಡು ದನಗಳು ಕಳವಾಗಿದ್ದು, ಮೇಯಲು ಹೋಗಿದ್ದ ದನ ಕರುಗಳ ಪೈಕಿ 2 ದನಗಳು ಮನೆಗೆ ಮರಳಿದ್ದು, ಒಂದು ಕರು ವಾಪಸಾಗಿಲ್ಲ. ಈ ಕುರಿತು ಹುಡುಕಾಟ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಸಮೀಪದಲ್ಲಿರುವ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ತಿಳಿಸಿದ್ದರು. ಅದರಂತೆ ಸಿಸಿ ಕ್ಯಾಮರಾ ಪರಿಶೀಲಿಸಿದಾಗ

ಮೇಯಲು ಬಿಟ್ಟಿದ್ದ ದನ ಕರುಗಳ ಕಳವು – ಪ್ರಕರಣ ದಾಖಲು Read More »

ಕರಾವಳಿ

ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ – ಅಧಿಕಾರಿ ನಾಪತ್ತೆ – ದಾಖಲೆ ಪರಿಶೀಲನೆ

(ನ್ಯೂಸ್ ಕಡಬ)newskadaba. com ರಾಮನಗರ, ಆ.17. ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕನಕಪುರದಲ್ಲಿರುವ ಬಿಬಿಎಂಪಿ ಅಧಿಕಾರಿ ನಟರಾಜ್ ಅವರ ಮನೆ ಹಾಗೂ ಫಾರಂ ಹೌಸ್‌ ಗೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ರಾಮನಗರ ಲೋಕಾಯುಕ್ತ ಎಸ್ಪಿ ನೇತೃತ್ವದ ತಂಡ ಅಪಾರ ಪ್ರಮಾಣದ ಅಕ್ರಮ‌ ಆಸ್ತಿ ಸಂಪಾದನೆ ಆರೋಪ‌‌ ಹಿನ್ನೆಲೆ ಮನೆ ಜೊತೆಗೆ ಫಾರಂ ಹೌಸ್ ಮೇಲೂ ದಾಳಿ ಮಾಡಿದ್ದು, ಬಳಿಕ ಅಧಿಕಾರಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ – ಅಧಿಕಾರಿ ನಾಪತ್ತೆ – ದಾಖಲೆ ಪರಿಶೀಲನೆ Read More »

ಕರ್ನಾಟಕ

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.17. BMTC ಬಸ್ ಹರಿದು 4ರ ಹರೆಯದ ಬಾಲಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಪೂರ್ವಿ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಶಾಲೆಗೆ ಬಿಡಲೆಂದು ತಂದೆ ಪ್ರಸನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಮುಖ್ಯರಸ್ತೆಯ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ವೇಳೆ ಪ್ರಸನ್ನ ಅವರು ಎಡಬದಿಗೆ

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.16. MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ‘‘ಡ್ರಗ್ಸ್ ಫ್ರಿ ಮಂಗಳೂರು’’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದೆ. ನಾಲ್ವರನ್ನು ಬಂಧಿಸಿದ ಪೊಲೀಸರು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ ಎನ್ನಲಾಗಿದೆ. ಬೆಂಗಳೂರಿನಿಂದ ಎಂಡಿಎಂ ಮಾದಕ

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ Read More »

ಕರಾವಳಿ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪಣಂಬೂರು, ಆ.15. ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪಣಂಬೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಾಲಕಿ ಸಹಿತ ಆರೋಪಿಯನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮುಹಮ್ಮದ್‌ ಸರ್ಫರಾಝ್‌ ಯಾನೆ ಚಪ್ಪು (22) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅಪಹರಣ ಮಾಡಿರುವುದಾಗಿ ಬಾಲಕಿಯ ಪೋಷಕರು ಪಣಂಬೂರು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್ Read More »

ಕರಾವಳಿ

ಕರ್ನಾಟಕದಲ್ಲಿ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.15. ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನವನ್ನು ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿದ ಹಿರಿಯ ನಾಯಕ ರೆಹಮಾನ್ ಖಾನ್, ಆರ್‌ಎಸ್‍ಎಸ್ ಕಾರ್ಯಸೂಚಿಯ ಭಾಗವಾಗಿರುವ ಎನ್‍ಇಪಿಯನ್ನು ರಾಜ್ಯದಲ್ಲಿ ಕೈಬಿಡಬೇಕು ಎಂದು ಆಗ್ರಹಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷದಿಂದ ಎನ್‍ಇಪಿ ರದ್ದು ಮಾಡುತ್ತೇವೆ. ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತೇವೆ ಎಂದರು ಎನ್ನಲಾಗಿದೆ. ಎನ್‍ಇಪಿ ಗೆ

ಕರ್ನಾಟಕದಲ್ಲಿ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top