news kadaba desk

ನೀವು ಯಾವಾಗ ಚುನಾವಣೆಗೆ ನಿಲ್ಲುತ್ತೀರಿ ? – ಚಕ್ರವರ್ತಿ ಸೂಲಿಬೆಲೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31.  ‘ನೀವು ಕರ್ನಾಟಕದ ಯುವಬಜನತೆಯೊಂದಿಗೆ ಸಾಕಷ್ಟು ತಮಾಷೆ, ಚೆಲ್ಲಾಟಗಳನ್ನು ಆಡಿದ್ದಾಗಿದೆ. ಒಂದಿಷ್ಟು ಪ್ರಾಮಾಣಿಕತೆಯಿಂದ ವರ್ತಿಸಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಲಿಬೆಲೆ ಟ್ವೀಟ್‍ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಅವರು, ‘ಕೇಸರಿ ಶಾಲು ಧರಿಸಿ ಪ್ರತಿಭಟನೆ ಮಾಡುವ ನೀವು ಎಂದಿಗೂ ಮುಂಚೂಣಿಯಲ್ಲಿಲ್ಲ, ಯುವ ಅಮಾಯಕರಿಗೆ ಮಾತ್ರ ಮುನ್ನಡೆಸಲು ಅವಕಾಶ ನೀಡುತ್ತಿಲ್ಲವೇ ? ನೀವು ಯೂಟ್ಯೂಬರ್ ಮತ್ತು ಪ್ರೇರಕರಾಗಿ ನಿಮ್ಮನ್ನು ಏಕೆ ಸೀಮಿತಗೊಳಿಸುತ್ತಿದ್ದೀರಿ ? ನೀವು ಯಾವಾಗ […]

ನೀವು ಯಾವಾಗ ಚುನಾವಣೆಗೆ ನಿಲ್ಲುತ್ತೀರಿ ? – ಚಕ್ರವರ್ತಿ ಸೂಲಿಬೆಲೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು Read More »

ಕರ್ನಾಟಕ

ಅರಶಿಣ ಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.30. ವಾರದ ಹಿಂದೆ ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆಗೆ ಹೋಗಿ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಭದ್ರಾವತಿ ಮೂಲದ ಯುವಕ ಶರತ್ ಜು. 23ರಂದು ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತ ನೋಡಲು ಸ್ನೇಹಿತನೊಂದಿಗೆ ಹೋಗಿದ್ದು, ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದ ಅವರು ಜಾರಿ ನೀರಿಗೆ ಬಿದ್ದಿದ್ದರು. ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸುತ್ತಿದ್ದವು . ಆದರೆ

ಅರಶಿಣ ಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ Read More »

ಕರ್ನಾಟಕ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.30. ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಶಾಫಿ ಎಂದು ಗುರುತಿಸಲಾಗಿದೆ. 12 ವರ್ಷದ ಬಾಲಕಿಯನ್ನು ಆರೋಪಿಯು ಹಲವು ಬಾರಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು. ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎನ್ನಲಾಗಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಆಟೋ ಚಾಲಕ ಗಾಯಗೊಂಡಿದ್ದು, ಹನೀಪ್ ಎಂದು ಗುರುತಿಸಲಾಗಿದೆ. ಕಾರು ಮಂಗಳೂರು ಕಡೆಯಿಂದ ಪುತ್ತೂರಿಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಅಪಘಾತವಾದ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಲ್ವರು ‘IFS’ ಅಧಿಕಾರಿಗಳ ವರ್ಗಾವಣೆ.!! – ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ನಾಲ್ವರು ಐಎಫ್ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ವರದಿ ತಿಳಿಸಿದೆ. ವೆಂಕಟೇಶ್ ಎಸ್-ಅರಣ್ಯ ಸಂರಕ್ಷಣಾಧಿಕಾರಿ, ಸರೀನಾ ಎಸ್-ಅರಣ್ಯ ಉಪಸಂರಕ್ಷಣಾಧಿಕಾರಿ, ಪ್ರಶಾಂತ್ ಸಂಕಿನಮಠ ಅರಣ್ಯ ಉಪಸಂರಕ್ಷಣಾಧಿಕಾರಿ, ಚಿಕ್ಕಮಗಳೂರು, ಶ್ರೀ ಪತಿ ಬಿಎಸ್-ಅರಣ್ಯ ಉಪ ಸಂರಕ್ಷಣಾಧಿಕಾರಿ , ಧಾರವಾಡ ಇವರುಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎನ್ನಲಾಗಿದೆ.

ನಾಲ್ವರು ‘IFS’ ಅಧಿಕಾರಿಗಳ ವರ್ಗಾವಣೆ.!! – ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಕಡಬ: ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು.!!

(ನ್ಯೂಸ್ ಕಡಬ)newskadaba.com ಕಡಬ, ಜು.29. ಸಂಪರ್ಕ ರಸ್ತೆ ಇಲ್ಲದ ಕಾರಣ ರೋಗಿಯೊಬ್ಬರನ್ನು ಚೇರ್ ಮೇಲೆ ಕುಳ್ಳಿರಿಸಿ ಆಸ್ಪತ್ರೆಗೆ ಹೊತ್ತುಕೊಂಡು ಹೋಗುವ ಘಟನೆ ವರದಿಯಾಗಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಇಚ್ಲಂಪ್ಪಾಡಿಯ ಕೆರ್ನಡ್ಕ ನಿವಾಸಿ ಸಾವಿತ್ರಿ ಗೋಪಾಲ್ ಅವರಿಗೆ ವಾರಕ್ಕೆ 2 ದಿನ ಪುತ್ತೂರು ಆಸ್ಪತ್ರೆಯಗೆ ಹೋಗಿ ಚಿಕಿತ್ಸೆ ಪಡೆಯಬೇಕಾಗಿದೆ. ಅವರ ಮನೆಗೆ ವಾಹನ ಸಂಚಾರಕ್ಕೆ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಹೊತ್ತೇ ಸಾಗಬೇಕಾದ ಸ್ಥಿತಿ ಇದೆ. ಸಾವಿತ್ರಿ

ಕಡಬ: ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು.!! Read More »

ಕರಾವಳಿ

ಕೆ.ಆರ್.ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ

(ನ್ಯೂಸ್ ಕಡಬ)newskadaba.com ಮಂಡ್ಯ, ಜು.29. ಶ್ರೀರಂಗಪಟ್ಟಣ ತಾಲೂಕಿನ‌ಲ್ಲಿರುವ ಕೆ ಆರ್ ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದ್ದು, ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ. ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ ಮುಳಗಿ ಮತ್ತೆ ಮೇಲೆ ಬಂದು ಕ್ಯಾಮರಾ ನೋಡುತ್ತಿರುವ ದೃಶ್ಯ ಕೂಡ ಕಂಡುಬಂದಿದೆ.

ಕೆ.ಆರ್.ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ Read More »

ಕರ್ನಾಟಕ

ವಿವಾಹಿತ ಮಹಿಳೆ ಪಕ್ಕದ ಮನೆಯ ಯುವತಿಯೊಂದಿಗೆ ನಾಪತ್ತೆ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಜು. 29. ವಿವಾಹಿತ ಮಹಿಳೆಯೊಬ್ಬಳು ಪಕ್ಕದ ಮನೆ ಯುವತಿಯೊಂದಿಗೆ ಓಡಿ ಹೋಗಿರುವ ವಿಚಿತ್ರ ಪ್ರಕರಣ ಉತ್ತರಪ್ರದೇಶದಿಂದ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಇಬ್ಬರ ನಡುವೆ ಮೊಬೈಲ್ ಫೋನ್‌ ಮೂಲಕ ದಿನಂಪ್ರತಿ ಕನಿಷ್ಠ ಏಳರಿಂದ ಎಂಟು ಗಂಟೆಗಳವರೆಗೆ ಫೋನ್ ಮೂಲಕ ಸಂಭಾಷಣೆ ನಡೆಯುತ್ತಿತ್ತು. ಈ ನಡುವೆ, ಪಕ್ಕದ ಮನೆಯ ಯುವತಿ ಮತ್ತು ವಿವಾಹಿತ ಮಹಿಳೆ ಇದ್ದಕಿದ್ದಂತೆ ನಾಪತ್ತೆ ಆಗಿ ಬಿಟ್ಟಿದ್ದಾರೆ ಎನ್ನಲಾಗಿದೆ. ಪತಿಯೊಂದಿಗೆ ಮಾರುಕಟ್ಟೆಗೆ ತೆರಳಿದ್ದ ವಿವಾಹಿತ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದರಿಂದ ಚಿಂತಿತನಾದ

ವಿವಾಹಿತ ಮಹಿಳೆ ಪಕ್ಕದ ಮನೆಯ ಯುವತಿಯೊಂದಿಗೆ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಪತ್ನಿಗೆ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಗಳನ್ನು ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಕುಮಾರ್ ಅವರು ಎನ್.ಐ.ಎ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಳಿಕ ಪ್ರತಿದಿನ ಬಿಸಿರೋಡಿನ ಪೊಲೀಸ್ ವಸತಿ ಗೃಹಕ್ಕೆ ಬರಲು

ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ಪಡಿತರ ಚೀಟಿಯಿಂದ ಮೃತರ ಹೆಸರು ತೆಗೆಯಲು ಡಿಸಿ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29 ದ.ಕ ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ ಕೂಡ ಅವರ ಹೆಸರು ಪಡಿತರ ಚೀಟಿಯಲ್ಲಿ ತೆಗೆದು ಹಾಕಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಅಕ್ರಮವಾಗಿ ಉಳಿಸಿರುವುದು ಪತ್ತೆಯಾಗಿದೆ. ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸಬೇಕು. ಇಲ್ಲದಿದ್ದರೆ ನಿಯಾಮಾನುಸಾರ ಅನರ್ಹಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪಡಿತರ ಚೀಟಿಯಿಂದ ಮೃತರ ಹೆಸರು ತೆಗೆಯಲು ಡಿಸಿ ಸೂಚನೆ Read More »

ಕರಾವಳಿ
Scroll to Top