news kadaba desk

ಭಾರತೀಯ ವಿದ್ಯಾರ್ಥಿಯ ಥಳಿಸಿ ಹತ್ಯೆ…!

(ನ್ಯೂಸ್ ಕಡಬ)newskadaba.com  ಟೊರಂಟೊ, ಜು.25. ಕೆನಡಾದಲ್ಲಿ 24 ವರ್ಷದ ಭಾರತೀಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ದಾಳಿಕೋರರು ಆತನನ್ನು ಹತ್ಯೆಮಾಡಿ ಆತನಲ್ಲಿದ್ದ ಹಣವನ್ನು ದರೋಡೆಮಾಡಿರುವ ಪ್ರಕರಣ ಕೆನಡಾದಲ್ಲಿ ವರದಿಯಾಗಿದೆ. ಕೆನಡಾದಲ್ಲಿ ಶಿಕ್ಷಣ ಪಡೆಯುತ್ತಿರುವ ಗುರ್ವಿಂದರ್‌ ನಾಥ್‌ ಬಿಡುವಿನ ವೇಳೆಯಲ್ಲಿ ಆಹಾರ ಪೂರೈಸುವ ಕೆಲಸವನ್ನೂ ಮಾಡುತ್ತಿದ್ದ ಎನ್ನಲಾಗಿದೆ. ಆತನ ಬಳಿ ಆಹಾರಕ್ಕೆ ಆರ್ಡರ್‌ ಮಾಡಿದ ಶಂಕಿತ ಆರೋಪಿಗಳು ಆತ ಅಲ್ಲಿಗೆ ಬರುತ್ತಿರುವಂತೆ ಮಾತಿನ ಚಕಮಕಿ ನಡೆಸಿ ಆತನ ಮೇಲೆ ಹಲ್ಲೆ ನಡೆಸಿ ಆತನಲ್ಲಿದ್ದ ಹಣ ಮತ್ತು ವಾಹನವನ್ನು ಕಿತ್ತುಕೊಳ್ಳಲು […]

ಭಾರತೀಯ ವಿದ್ಯಾರ್ಥಿಯ ಥಳಿಸಿ ಹತ್ಯೆ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

`IRCTC’ ವೆಬ್ ಸೈಟ್ ಸರ್ವರ್ ಡೌನ್ ➤  ರೈಲು ಟಿಕೆಟ್ ಬುಕ್ ಮಾಡಲು ಪ್ರಯಾಣಿಕರ ಪರದಾಟ

(ನ್ಯೂಸ್ ಕಡಬ)newskadaba.com  ನವದೆಹಲಿ, ಜು.25. ರೈಲ್ವೆ ಟಿಕೆಟಿಂಗ್ ಸೇವೆಗಳನ್ನು ನೀಡುವ ಆನ್ಲೈನ್ ಪ್ಲಾಟ್ಫಾರ್ಮ್ ಐಆರ್ ಸಿಟಿಸಿ ತಾಂತ್ರಿಕ ಕಾರಣಗಳಿಂದಾಗಿ ವೆಬ್ ಸೈಟ್ ಡೌನ್ ಆಗಿದ್ದು, ಟಿಕೆಟ್ ಬುಕ್ ಮಾಡಲು ಪ್ರಯಾಣಿಕರು ಪರದಾಡುವಂತಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಟಿಕೆಟಿಂಗ್ ಸೇವೆ ಲಭ್ಯವಿಲ್ಲದ ಕಾರಣ ಟಿಕೆಟ್ ಬುಕ್ ಮಾಡಲು ಪ್ರಯಾಣಿಕರು ಇಂದು ಐಆರ್ ಸಿಟಿಸಿ ವೆಬ್ಸೈಟ್ನಲ್ಲಿ ಸಮಸ್ಯೆಗಳನ್ನು ಎದುರಿಸಿದರು. ಟಿಕೆಟ್ ಕಾಯ್ದಿರಿಸಲು ಸಾಧ್ಯವಾಗದಿದ್ದಾಗ ಮುಂಜಾನೆಯ ಸಮಯದಲ್ಲಿ ಕೆಲವು ಬಳಕೆದಾರರು ಈ ಸಮಸ್ಯೆಯ ಬಗ್ಗೆ ಹೇಳಿಕೊಂಡಿದ್ದಾರೆ. ಐಆರ್ ಸಿಟಿಸಿ ತಕ್ಷಣವೇ ಸಮಸ್ಯೆಯನ್ನು ಒಪ್ಪಿಕೊಂಡಿತು.

`IRCTC’ ವೆಬ್ ಸೈಟ್ ಸರ್ವರ್ ಡೌನ್ ➤  ರೈಲು ಟಿಕೆಟ್ ಬುಕ್ ಮಾಡಲು ಪ್ರಯಾಣಿಕರ ಪರದಾಟ Read More »

ರಾಷ್ಟ್ರೀಯ ನ್ಯೂಸ್

ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜು. 27 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ವಿಧಾನಸೌಧದ ಸಚಿವ ಸಂಪುಟದ ಸಭಾ ಮಂದಿರದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿಯೇ ಅನುಷ್ಟಾನಗೊಳಿಸುತ್ತಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ

ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ Read More »

ಕರ್ನಾಟಕ

ಕಟ್ಟಿಗೆಗಾಗಿ ಗುಡ್ಡೆಗೆ ಹೋದ ವ್ಯಕ್ತಿ ಹೆಜ್ಜೇನು ಕಡಿದು ಮೃತ್ಯು

(ನ್ಯೂಸ್ ಕಡಬ)newskadaba.com  ಪುತ್ತೂರು, ಜು.25. ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡೆಗೆ ಹೋಗಿದ್ದ ವೇಳೆ ಹೇಜ್ಜೇನು ಕಡಿದು ಗಂಭೀರ ಗಾಯಗೊಂಡಿದ್ದ ಒಳಮೊಗ್ರು ಗ್ರಾಮದ ಕೈಕಾರ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಗುರುವ(55) ಎಂದು ಗುರುತಿಸಲಾಗಿದೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಟ್ಟಿಗೆಗಾಗಿ ಗುಡ್ಡೆಗೆ ಹೋದ ವ್ಯಕ್ತಿ ಹೆಜ್ಜೇನು ಕಡಿದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಳೆಗೆ ಧ್ವಂಸಗೊಂಡ ಮನೆ – ಅದೃಷ್ಟವಶಾತ್ ಯಜಮಾನಿ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com  ಬೆಟ್ಟಂಪಾಡಿ, ಜು.25. ನಿರಂತರ ಸುರಿಯುತ್ತಿರುವ ಮಳೆಗೆ ಇಲ್ಲಿನ ಇರ್ದೆ ಅರಂಬ್ಯ ಸುಶೀಲ ಎಂಬವರ ಮನೆ ಬಿದ್ದು ಸಂಪೂರ್ಣ ಧ್ವಂಸಗೊಂಡಿರುವ ಘಟನೆ ಸಂಭವಿಸಿದೆ. ಹಂಚಿನ ಛಾವಣಿ ಸಂಪೂರ್ಣ ಕುಸಿದು, ಇಟ್ಟಿಗೆ ಗೋಡೆ ಹಾನಿಗೊಳಗಾಗಿದೆ. ಮನೆ ಬೀಳುವ ವೇಳೆಗೆ ಸುಶೀಲರವರು ಮಗಳ ಹೋಗಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೆಟ್ಟಂಪಾಡಿ ಪಂಚಾಯತ್ ಪಿಡಿಒ ಸೌಮ್ಯ, ಸಿಬ್ಬಂದಿ ಸಂದೀಪ್. ಟಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.  

ಮಳೆಗೆ ಧ್ವಂಸಗೊಂಡ ಮನೆ – ಅದೃಷ್ಟವಶಾತ್ ಯಜಮಾನಿ ಅಪಾಯದಿಂದ ಪಾರು Read More »

ಕರಾವಳಿ

ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿದ್ದು, ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಸಾರ್ವಜನಿಕರಿಗೆ ತೊಂದರೆಯಾಗಿಲ್ಲ.

ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿ Read More »

ಕರಾವಳಿ

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ➤  ಮಾದಕ ವಸ್ತು ಸೇವನೆ ಬೆಳಕಿಗೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಂಪ್ಯ ಪೊಲೀಸರು ವಿಚಾರಿಸಿದಾಗ ಯುವಕ ಗಾಂಜಾ ಸೇವನೆ ಮಾಡಿರುವುದು ಧೃಢಪಟ್ಟಿದೆ ಎನ್ನಲಾಗಿದೆ. ಪುತ್ತೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿ ತಿಳಿಸಿದೆ.

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ➤  ಮಾದಕ ವಸ್ತು ಸೇವನೆ ಬೆಳಕಿಗೆ Read More »

ಕರಾವಳಿ

ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ವಿಟ್ಲ, ಜು.25. ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಅಕ್ರಮವಾಗಿ ಹಣ ಪಡೆಯುತ್ತಿದ್ದ 3 ಸೈಬರ್ ಕೇಂದ್ರಗಳು – FIR ದಾಖಲು

(ನ್ಯೂಸ್ ಕಡಬ)newskadaba.com ರಾಯಚೂರು, ಜು.25. ಗೃಹಲಕ್ಷ್ಮಿ ಯೋಜನೆಗೆ ಖಾಸಗಿ ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಸೈಬರ್ ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಾನ್ವಿ ತಾಲೂಕಿನ ಮೂರು ಖಾಸಗಿ ಸೈಬರ್ ಕೇಂದ್ರಗಳಲ್ಲಿ 100-200 ರೂಪಾಯಿ ಹಣ ಪಡೆದು ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸರ್ಕಾರದ ಐಡಿ ಹೆಸರಲ್ಲಿ ಅಕ್ರಮವಾಗಿ ಅರ್ಜಿ

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಅಕ್ರಮವಾಗಿ ಹಣ ಪಡೆಯುತ್ತಿದ್ದ 3 ಸೈಬರ್ ಕೇಂದ್ರಗಳು – FIR ದಾಖಲು Read More »

ಕರ್ನಾಟಕ

ಆ.1ರಂದು ‘ಆಯುಷ್ಮಾನ್ ಭವ 3.0’ ಕಾರ್ಯಕ್ರಮಕ್ಕೆ ಚಾಲನೆ – ‘ಮನೆ ಬಾಗಿಲಿಗೆ’ ಆರೋಗ್ಯ ಸೇವೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.25. ಆಗಸ್ಟ್ 1ರಿಂದ ಕೇಂದ್ರ ಸರ್ಕಾರದಿಂದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭವ 3.0 ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯವು ‘ಆಯುಷ್ಮಾನ್ ಭವ’ ಕಾರ್ಯಕ್ರಮವನ್ನು ಪ್ರಾರಂಭಿಸಲು ಯೋಜಿಸುತ್ತಿದೆ, ಇದು ಎಲ್ಲಾ ಸರ್ಕಾರಿ ಆರೋಗ್ಯ ಯೋಜನೆಗಳನ್ನು ಕೊನೆಯ ಮೈಲಿಯಲ್ಲಿರುವವರು ಸೇರಿದಂತೆ ಪ್ರತಿಯೊಬ್ಬ ಉದ್ದೇಶಿತ ಫಲಾನುಭವಿಗೆ ಗರಿಷ್ಠ ಪ್ರಮಾಣದಲ್ಲಿ ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ಯೋಜಿಸುತ್ತಿದ್ದು, ಆಯುಷ್ಮಾನ್ ಅಪ್ಕೆ ದ್ವಾರ್ 3.0, ಆಯುಷ್ಮಾನ್ ಸಭಾ, ಆಯುಷ್ಮಾನ್ ಮೇಳ ಮತ್ತು ಆಯುಷ್ಮಾನ್ ಗ್ರಾಮ್ ಈ ಕಾರ್ಯಕ್ರಮದ ಅಡಿಯಲ್ಲಿ ಯೋಜಿಸಲಾದ ಕೆಲವು ಚಟುವಟಿಕೆಗಳಾಗಿವೆ

ಆ.1ರಂದು ‘ಆಯುಷ್ಮಾನ್ ಭವ 3.0’ ಕಾರ್ಯಕ್ರಮಕ್ಕೆ ಚಾಲನೆ – ‘ಮನೆ ಬಾಗಿಲಿಗೆ’ ಆರೋಗ್ಯ ಸೇವೆ Read More »

ರಾಷ್ಟ್ರೀಯ ನ್ಯೂಸ್
Scroll to Top