news kadaba desk

ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.17. ಮರವಂತೆ ಬೀಚ್ ನಲ್ಲಿ ಯುವಕನೋರ್ವ ಸಮುದ್ರಪಾಲಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಸಮುದ್ರಪಾಲಾದ ಯುವಕನನ್ನು ಗದಗ ಜಿಲ್ಲೆಯ ಮುಂಡ್ರಂಗಿ ತಾಲೂಕು ಮೇವಂಡಿ ಗ್ರಾಮದ ಪೀರ್ ನದಾಫ್ ಎಂದು ಗುರುತಿಸಲಾಗಿದೆ. ಮೂವರು ಯುವಕರು ಬೀಚ್‌ ನಲ್ಲಿ ಈಜಲು ಹೋದಾಗ ಘಟನೆ ಸಂಭವಿಸಿದೆ. ನೀರಿಗೆ ಈಜಲು ಇಳಿದಿದ್ದು, ಈ ವೇಳೆ ಅಲೆಯ ರಭಸಕ್ಕೆ ಓರ್ವ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ಬಳಿಕ ಸ್ಥಳೀಯರ ತಂಡ ಹಾಗೂ ಅಗ್ನಿಶಾಮಕ ದಳ ಮತ್ತು ಕೋಸ್ಟಲ್ ಗಾರ್ಡ್ ಸಿಬ್ಬಂದಿಗಳು ಹಾಗೂ ಗಂಗೊಳ್ಳಿ […]

ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜು. 19. ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ವರದಿಯಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೌಶಿಕ್(17) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 19. ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಬೇಳದಲ್ಲಿ ಸಂಭವಿಸಿದೆ. ಮೃತರನ್ನು ದಾಮೋದರ ಪುತ್ರಿ ಅಶ್ವತಿ(25) ಎಂದು ಗುರುತಿಸಲಾಗಿದೆ. ಅಶ್ವಥಿಯವರ ಮೃತದೇಹ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಈ ಕೃತ್ಯ ನಡೆದಿದೆ. ತಾಯಿ ಸುಜಾತರವರು ಮನೆ ಸಮೀಪದ ಬೀಡಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮಧ್ಯಾಹ್ನ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಬಾಗಿಲು ಬಡಿದರೂ ತೆರೆಯದಿದ್ದುದರಿಂದ

ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಕಮಿಷನರ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ವಿಧ್ವಂಸಕ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದು, ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಈ ಕುರಿತು ಬೆಂಗಳೂರು ಕಮಿಷನರ್ ದಯಾನಂದ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಿಸಿಬಿ ಪೊಲೀಸರು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಹಾಗೂ ಜಾಹಿದ್ ಎಂಬ ಶಂಕಿತ ಉಗ್ರರನ್ನು ಇಂದು ಬಂಧಿಸಿದ್ದು, ಇವರ ಹಿಂದೆ ಉಗ್ರ ಸಂಘಟನೆಯ ಕೈವಾಡವಿರುವ ಶಂಕೆಯಿದೆ ಎಂದು ಹೇಳಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಐವರು

ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಕಮಿಷನರ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಹಠಾತ್ ದೋಷ ಕಂಡು ಬಂದ ಹಿನ್ನೆಲೆ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನ ವಿಮಾನ ನಿಲ್ದಾನದಲ್ಲಿ ವರದಿಯಾಗಿದೆ. ಕಳೆದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆದ  ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿ ದೆಹಲಿಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.  

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ಕಲಬುರಗಿ

ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..! Read More »

ಕರಾವಳಿ

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು- ಐವರು ಉಗ್ರರ ಬಂಧಿಸಿದ ಸಿಸಿಬಿ ಪೊಲೀಸರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿರುವ ಘಟನೆ ನಡೆದಿದೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಸೈಯ್ಯದ್, ಸುಹೇಲ್ ಉಮೇರ್, ಜುನೇದ್, ಮುದಾಸಿನ್, ಜಾಹೀದ್ ಎಂದು ಗುರುತಿಸಲಾಗಿದೆ. ಸಿಸಿಬಿ ಪೊಲೀಸರು ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆರೋಪದ ಮೇಲೆ ಐವರು ಉಗ್ರರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು- ಐವರು ಉಗ್ರರ ಬಂಧಿಸಿದ ಸಿಸಿಬಿ ಪೊಲೀಸರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್- ಸಂಚಾರ ನಿಮಯ ಉಲ್ಲಂಘನೆಯ ದಂಡದ ವಿವರ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 19. ಭಾರತದಲ್ಲಿ ಯಾವ ಸಂಚಾರ ನಿಯಮವನ್ನು ಉಲ್ಲಂಘಿಸಿದರೆ ಎಷ್ಟು ದಂಡ ಕಟ್ಟಬೇಕಾಗುತ್ತದೆ ಎಂಬುದನ್ನು ಎಲ್ಲರೂ ತಿಳಿದುಕೊಳ್ಳುವುದು ಬಹುಮುಖ್ಯ. ಅದರಲ್ಲೂ ವಾಹನಗಳನ್ನು ರಸ್ತೆಗಿಳಿಸಿದಾಗ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಹಲವಾರು ಪ್ರಯೋಜನಗಳಿದ್ದು, ಟ್ರಾಫಿಕ್‌ನಲ್ಲಿ ವಾಹನಗಳು ಸುಗಮವಾಗಿ ಚಲಿಸುತ್ತದೆ. ಸದ್ಯ ಭಾರತದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಭಾರೀ ದಂಡ ತೆರಬೇಕಾಗುತ್ತದೆ. ಇದರೊಂದಿಗೆ ಕೆಲವು ಪ್ರಕರಣಗಳಲ್ಲಿ ನಿಯಮ ಉಲ್ಲಂಘಿಸಿದ ವ್ಯಕ್ತಿ ಜೈಲು ಪಾಲಾಗುವ ಸಾಧ್ಯತೆಯೂ ಹೆಚ್ಚಿದೆ. ಇಂತಹ ಪರಿಸ್ಥಿತಿಯಲ್ಲಿ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್- ಸಂಚಾರ ನಿಮಯ ಉಲ್ಲಂಘನೆಯ ದಂಡದ ವಿವರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 19. ವಿದ್ಯಾರ್ಥಿನಿಗೆ ಶಾಲೆಗೆ ಹೋಗುವ ಸಂಧರ್ಭದಲ್ಲಿ ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಗೆ ಸಂಬಂಧಿಸಿದಂತೆ ಓರ್ವನ ವಿರುದ್ಧ ದೂರು ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿ ಬೆಳಂದೂರಿನ ಪ್ರವೀಣ್ ಯಾನೆ ಸೀತಾರಾಮ ಎಂಬವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.    

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅರೆಕಾಲಿಕ ಉಪನ್ಯಾಸಕರಿಗೆ ಬಿಗ್ ಶಾಕ್..! – 4 ತಿಂಗಳಿನಿಂದ ವೇತನ ಇಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯದ ಸರ್ಕಾರಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೆ ಕಳೆದ 4 ತಿಂಗಳಿಂದ ವೇತನವಿಲ್ಲದೆ ಕಂಗೆಟ್ಟಿದ್ದು, ಮಾರ್ಚ್ ತಿಂಗಳಿನಿಂದ 1,250 ಅರೆಕಾಲಿಕ ಉಪನ್ಯಾಸಕರಿಗೆ ವೇತನ ನೀಡಿಲ್ಲ ಎಂದು ಅರೆಕಾಲಿಕ ಉಪನ್ಯಾಸಕರ ಸಂಘದ ಅಧ್ಯಕ್ಷ ಪ್ರಶಾಂತ್ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅರೆಕಾಲಿಕ ಉಪನ್ಯಾಸಕರಿಗೆ ತಿಂಗಳಿಗೆ 12,500 ರೂ. ವೇತನ ಕೊಡಲಾಗುತ್ತಿದ್ದು, ಕಳೆದ ಮಾರ್ಚ್ ನಿಂದ ವೇತನ ಪಾವತಿಯಾಗಿಲ್ಲ. ಅರೆಕಾಲಿಕ ಉಪನ್ಯಾಸಕರು ವಾರಕ್ಕೆ 10ರಿಂದ 12 ಗಂಟೆ ಪಾಠದಂತೆ ತಿಂಗಳಿಗೆ ಕನಿಷ್ಠ

ಅರೆಕಾಲಿಕ ಉಪನ್ಯಾಸಕರಿಗೆ ಬಿಗ್ ಶಾಕ್..! – 4 ತಿಂಗಳಿನಿಂದ ವೇತನ ಇಲ್ಲ Read More »

ಕರ್ನಾಟಕ
Scroll to Top