news kadaba desk

ಈ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಹೊಸ ಮಾದರಿ ಪ್ರಶ್ನೆಪತ್ರಿಕೆ..! ➤ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.  ಈ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಗಳ ಮಾದರಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ ಎಂದು ತಿಳಿದುಬಂದಿದೆ. ಪ್ರಮುಖವಾಗಿ ಎಲ್ಲಾ ವಿಷಯಗಳಲ್ಲೂ 1 ಅಂಕದ ಪ್ರಶ್ನೆಗಳನ್ನು 20ಕ್ಕೆ ಹೆಚ್ಚಿಸಿ ಬಹು ಆಯ್ಕೆ ಮಾದರಿ ಪ್ರಶ್ನೆಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಉಳಿದಂತೆ 2, 3, 4, 5 ಮತ್ತು 6 ಅಂಕಗಳ ಪ್ರಶ್ನೆಗಳ ಸಂಖ್ಯೆಯನ್ನು ವಿಷಯವಾರು ಕೊಂಚ ಹೆಚ್ಚು ಕಡಿಮೆ […]

ಈ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಹೊಸ ಮಾದರಿ ಪ್ರಶ್ನೆಪತ್ರಿಕೆ..! ➤ ರಾಜ್ಯ ಸರ್ಕಾರ Read More »

ಕರ್ನಾಟಕ
crime, arrest, suspected

ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ, ಶಿವಮೊಗ್ಗ ಬಾಂಬ್‌ ಸ್ಫೋಟ ತಾಲೀಮು ಹಾಗೂ ಐಸಿಸ್‌ ಉಗ್ರ ಸಂಘಟನೆ ಜತೆ ನಂಟು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮತ್ತೊಬ್ಬನನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ಮಂಗಳೂರು ಹೊರವಲಯದ ಬಬ್ಬುಕಟ್ಟೆನಿವಾಸಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ಎಂದು ಗುರುತಿಸಲಾಗಿದೆ. ಆರೋಪಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ದೇರಳಕಟ್ಟೆಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡಿದ್ದು, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಈತ ಬಂಧಿತ ಶಂಕಿತ

ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಡೀಪುರ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ..!!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ.12.  ರೈತರ ಜಮೀನುಗಳಿಗೆ ಲಗ್ಗೆಯಿಟ್ಟು ಫಸಲು, ಆಸ್ತಿ-ಪಾಸ್ತಿ ನಷ್ಟ ಮಾಡುತ್ತಿದ್ದ, ಹಾಗೂ ಜನರ ಮೇಲೆಯೇ ದಾಳಿ ಮಾಡಲು ಮುಂದಾಗುತ್ತಿದ್ದ ಪುಂಡಾನೆಯನ್ನು ಸಾಕಾನೆ ಅಭಿಮನ್ಯು ಮತ್ತು ಇತರೆ ಸಾಕಾನೆಗಳ ಸಹಕಾರದೊಂದಿಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಯ ಕಡೆಕೋಟಿ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಾಕಾನೆಗಳಾದ ಕೂಂಬಿಂಗ್ ಆಪರೇಷನ್ ಸ್ಪೆಷಲಿಸ್ಟ್ಗಳಾದ ಅಭಿಮನ್ಯು, ಮಹೇಂದ್ರ, ಗಣೇಶ

ಬಂಡೀಪುರ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ..!! Read More »

ಕರ್ನಾಟಕ

ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು ಯುವಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಮಾಲೂರು, ಜ.12.  ನೀರಿನ ಹೊಂಡಕ್ಕೆ ಕಾಲು ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮಾಲೂರಿನಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಲಕ್ಕೂರು ಗ್ರಾಮದ ಜಾವೀದ್ (23) ಎಂದು ಗುರುತಿಸಲಾಗಿದೆ. ಕುಡಿತದ ದಾಸನಾಗಿದ್ದ ಈತನನ್ನು  ನಾಲ್ಕು ತಿಂಗಳ ಹಿಂದೆ ಚಟದಿಂದ ಬಿಡಿಸಲು ನವಚೈತನ್ಯ ಫೌಂಡೇಶನ್ ಗೆ ಪೋಷಕರು ಸೇರಿಸಿದ್ದರು ಎಂದಿ ತಿಳಿದುಬಂದಿದೆ. ಈ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು ಯುವಕ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಡುಗೆ ಸಿಲಿಂಡರ್‌ ಸೋರಿಕೆಯಿಂದ ಮನೆಗೆ ಬೆಂಕಿ ➤ ದಂಪತಿ ಹಾಗೂ ನಾಲ್ವರು ಮಕ್ಕಳು ಮೃತ್ಯು..!!

(ನ್ಯೂಸ್ ಕಡಬ) newskadaba.com ಚಂಡೀಗಢ, ಜ. 12. ಅಡುಗೆ ಸಿಲಿಂಡರ್ ಸೋರಿಕೆಯಾದ ಪರಿಣಾಮ ಮನೆಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ಆರು ಸದಸ್ಯರು ಮೃತಪಟ್ಟ ಭೀಕರ ಘಟನೆ ಚಂಡೀಗಢದ ಪಾಣಿಪತ್‌ನಲ್ಲಿ ವರದಿಯಾಗಿದೆ. ಮೃತರನ್ನು ಅಬ್ದುಲ್ (45), ಅವರ ಪತ್ನಿ(40) ಮತ್ತು 18 ಮತ್ತು 16 ವರ್ಷದ ಇಬ್ಬರು ಪುತ್ರಿಯರು ಹಾಗೂ 12 ಮತ್ತು 10 ವರ್ಷದ ಇಬ್ಬರು ಪುತ್ರರು ಎಂದು ಗುರುತಿಸಲಾಗಿದೆ. ಪಾಣಿಪತ್ ಜಿಲ್ಲೆಯ ಬಿಚ್ಪರಿ ಗ್ರಾಮದ ಬಳಿಯ ತಹಸಿಲ್ ಕ್ಯಾಂಪ್ ಪ್ರದೇಶದಲ್ಲಿ ಈ ದುರ್ಘಟನೆ  ಸಂಭವಿಸಿದೆ ಎನ್ನಲಾಗಿದೆ.

ಅಡುಗೆ ಸಿಲಿಂಡರ್‌ ಸೋರಿಕೆಯಿಂದ ಮನೆಗೆ ಬೆಂಕಿ ➤ ದಂಪತಿ ಹಾಗೂ ನಾಲ್ವರು ಮಕ್ಕಳು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿರಂತರ ಜೀವಬೆದರಿಕೆ ಹಿನ್ನೆಲೆ ➤ ಗನ್ ಲೈಸೆನ್ಸ್ ಪಡೆದುಕೊಂಡ ನೂಪುರ್ ಶರ್ಮಾ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 12. ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಆತ್ಮರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.   ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್‌ ಶರ್ಮ, ಖಾಸಗಿ ಟಿವಿ ವಾಹಿನಿಯೊಂದರಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಪ್ರವಾದಿ ಪೈಗಂಬರ್‌ ಕುರಿತಾಗಿ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿತ್ತು. ಬಳಿಕ ದೇಶಾದ್ಯಂತ ಭಾರೀ ಪ್ರತಿಭಟನೆಯೂ ನಡೆದಿತ್ತು ಅಲ್ಲದೇ ಹಲವು ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಬೆನ್ನಲ್ಲೇ ಬಿಜೆಪಿ ಕೂಡಾ ಇವರನ್ನು ಪಕ್ಷದಿಂದ ಹೊರಹಾಕುವ ನಿರ್ಧಾರ ಮಾಡಿತ್ತು.

ನಿರಂತರ ಜೀವಬೆದರಿಕೆ ಹಿನ್ನೆಲೆ ➤ ಗನ್ ಲೈಸೆನ್ಸ್ ಪಡೆದುಕೊಂಡ ನೂಪುರ್ ಶರ್ಮಾ..! Read More »

ರಾಷ್ಟ್ರೀಯ ನ್ಯೂಸ್

ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಮುಂದೆಯೇ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.  ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಮುಂದೆ ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಪೇದೆಯನ್ನು ಹೆಗಡೆ ನಗರದ ನಿವಾಸಿ ನವೀನ್‌ ಕುಮಾರ್‌ (25) ಎಂದು ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವರ ಮನೆ ಮುಂದೆ ಎಡಗೈ ಕುಯ್ದುಕೊಂಡು ನಿತ್ರಾಣನಾಗಿ ನವೀನ್‌ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದರು ಎನ್ನಲಾಗಿದೆ. ವೈದ್ಯಕೀಯ ಚಿಕಿತ್ಸೆಗೆ ಕಾನ್‌ಸ್ಟೇಬಲ್‌

ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಮುಂದೆಯೇ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನ.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ ಯಾದಗಿರಿಯ ಶ್ರೀಗಳು ವಿಧಿವಶ

(ನ್ಯೂಸ್ ಕಡಬ) newskadaba.com ಯಾದಗಿರಿ, ಜ. 12.  ಹಿರೇಮಠದ  ಪೀಠಾಧಿಪತಿ  ಷ. ಬ್ರ. ಶ್ರೀ  ವೀರಮಹಾಂತ ಶಿವಾಚಾರ್ಯರು (48) ತೀವ್ರ ಹೃದಯಘಾತದಿಂದ ಲಿಂಗೈಕ್ಯರಾಗಿದ್ದಾರೆ ಎನ್ನಲಾಗಿದೆ.   ಶ್ರೀಗಳಿಗೆ ಬೆಂಗಳೂರು ರೈಲು ನಿಲ್ದಾಣದಲ್ಲಿ ತೀವ್ರ ಹೃದಯಾಘಾತ ಆದಾಗ, ಅವರಿಗೆ ನೀಡಿದ ಪ್ರಾಥಮಿಕ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.  25ನೇ ವರ್ಷದ  ಪಟ್ಟಾಧಿಕಾರ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ಗಣ್ಯರಿಗೆ ಆಹ್ವಾನ ನೀಡಲು ಶ್ರೀಗಳು ಬೆಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ. ಬೆಂಗಳೂರಿನಲ್ಲಿ  ಬಿ. ವೈ. ವಿಜಯೇಂದ್ರ ಸೇರಿದಂತೆ ಮತ್ತಿತರ

ಹೃದಯಾಘಾತದಿಂದ ಯಾದಗಿರಿಯ ಶ್ರೀಗಳು ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ 9 ಮಂದಿಯ ವಿರುದ್ದ ಎಫ್ಐಆರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ತಾಯಿ ತೇಜಸ್ವಿನಿ ಸುಲಾಖೆ ಮತ್ತು ಆಕೆಯ ಎರಡೂವರೆ ವರ್ಷದ ಮಗ ವಿಹಾನ್ ಎಲ್ ಸುಲಾಖೆ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಎಫ್‌ಐಆರ್‌ನಲ್ಲಿ ನಾಗಾರ್ಜುನ ಕಂಪನಿ ಸೇರಿ ಒಟ್ಟು 9 ಮಂದಿಯ ಹೆಸರನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ತನಿಖೆಗೆ ಹಾಜರಾಗುವಂತೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಅಧಿಕಾರಿಗಳು ಮತ್ತು ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ (ಎನ್‌ಸಿಸಿ)ಗೆ ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ. ನಾಗಾರ್ಜುನ ಕಂಪನಿ

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ 9 ಮಂದಿಯ ವಿರುದ್ದ ಎಫ್ಐಆರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.  ಪ್ರತ್ಯೇಕ ಘಟನೆಗಳಿಂದಾಗಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಕಾನೂನು ವಿದ್ಯಾರ್ಥಿ ರಿಜ್ವಾನ್ (25) ಮತ್ತು ಡಿಫಾರ್ಮಸಿ ವಿದ್ಯಾರ್ಥಿ ಶ್ರೀನಾಥ್ (25) ಎಂದು ಗುರುತಿಸಲಾಗಿದೆ. ರಿಜ್ವಾನ್ ಕೆ.ಜಿ.ಹಳ್ಳಿಯ ಪಿ ಮತ್ತು ಟಿ ಕಾಲೋನಿ ನಿವಾಸಿಯಾಗಿದ್ದರೆ, ಶ್ರೀನಾಥ್ ಕೋಲಾರದ ಶ್ರೀನಿವಾಸಪುರದವರಾಗಿದ್ದು, ಕೆಆರ್ ಪುರಂನ ಫಾರ್ಮಸಿ ಕಾಲೇಜಿನಲ್ಲಿ ಓದುತ್ತಿದ್ದರೆಂದು ತಿಳಿದುಬಂದಿದೆ. ಕೆಲ ತಿಂಗಳ ಹಿಂದೆ ರಿಜ್ವಾನ್ ಮದುವೆಯಾಗಿತ್ತು ಎನ್ನಲಾಗಿದೆ. ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ

ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top