news kadaba desk

‘ಹರ್ ಘರ್ ತಿರಂಗಾ’ ಅಭಿಯಾನ            ಜನತೆಗೆ ಪ್ರಧಾನಿ ಮೋದಿ ಕರೆ         

(ನ್ಯೂಸ್ ಕಡಬ)newskadaba.com ನವದೆಹಲಿ, ಆ.09. ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜ ಹಾಕುವಂತೆ ಮನವಿ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬರುತ್ತಿದ್ದು, ಮತ್ತೊಮ್ಮೆ ಹರ್ ಘರ್ ತಿರಂಗಾವನ್ನು ಸಾಮೂಹಿಕ ಅಭಿಯಾನವನ್ನಾಗಿ ಮಾಡೋಣ. ನಾನು ನನ್ನ ಪ್ರೊಫೈಲ್ ಚಿತ್ರವನ್ನು ಬದಲಾಯಿಸುತ್ತಿದ್ದೇನೆ. ನೀವೂ ನಿಮ್ಮ ಸಾಮಾಜಿಕ ಮಾಧ್ಯಮ […]

‘ಹರ್ ಘರ್ ತಿರಂಗಾ’ ಅಭಿಯಾನ            ಜನತೆಗೆ ಪ್ರಧಾನಿ ಮೋದಿ ಕರೆ          Read More »

ರಾಷ್ಟ್ರೀಯ ನ್ಯೂಸ್

ಕಾಳಿ ಸೇತುವೆ ಕುಸಿತಕ್ಕೆ NHAI ನಿರ್ಲಕ್ಷವೇ ಕಾರಣ ಜಿಲ್ಲಾಡಳಿತ ಮಂಡಳಿ ಆರೋಪ

(ನ್ಯೂಸ್ ಕಡಬ)newskadaba.com ಕಾರವಾರ, ಆ.09. ಕಾಳಿ ಸೇತುವೆಯ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ನಿರ್ಲಕ್ಷ್ಯವೇ ಕಾರಣ ಎಂದು ಉತ್ತರ ಕನ್ನಡ ಜಿಲ್ಲಾಡಳಿತ ಮಂಡಳಿ ಆರೋಪಿಸಿದೆ ಎನ್ನಲಾಗಿದೆ. ಉತ್ತರ ಕನ್ನಡ ಜಿಲ್ಲಾಡಳಿತದ ಉನ್ನತ ಅಧಿಕಾರಿಯೊಬ್ಬರು ಮಾತನಾಡಿ, ಗೋವಾ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಕಾರವಾರದ ಎನ್‌ಎಚ್ 66 ರಲ್ಲಿ ಸೇತುವೆ ಕುಸಿಯಲು ಎನ್‌ಎಚ್‌ಎಐನ ಸಂಪೂರ್ಣ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದ್ದಾರೆ. 2013ರಲ್ಲಿ ಸೇತುವೆಯನ್ನು ಎನ್‌ಎಚ್‌ಎಐ ಅಧೀನಕ್ಕೆ ವರ್ಗಾಯಿಸಲಾಗಿದ್ದು, ಹಳೆಯ ಸೇತುವೆಯನ್ನು ನಿರ್ವಹಿಸಲು ಪ್ರಾಧಿಕಾರವು ಒಪ್ಪಂದ ಮಾಡಿಕೊಂಡಿತ್ತು. ನಿರ್ವಹಣೆಯ ನಂತರ

ಕಾಳಿ ಸೇತುವೆ ಕುಸಿತಕ್ಕೆ NHAI ನಿರ್ಲಕ್ಷವೇ ಕಾರಣ ಜಿಲ್ಲಾಡಳಿತ ಮಂಡಳಿ ಆರೋಪ Read More »

ಕರ್ನಾಟಕ

ಪ್ರಾಂಶುಪಾಲ ಹುದ್ದೆ ಭರ್ತಿಗೆ ಹೊಸ ನಿಯಮ    ಉಪನ್ಯಾಸಕರ ತೀವ್ರ ವಿರೋಧ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ರಾಜ್ಯದ ಹಲವು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪೂರ್ಣಾವಧಿ ಪ್ರಾಂಶುಪಾಲರಿಲ್ಲ ಮತ್ತು ಖಾಲಿ ಇರುವ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಣ ಇಲಾಖೆಯ ಈ ನಡೆ ಸರ್ಕಾರಿ ಕಾಲೇಜುಗಳ ಉಪನ್ಯಾಸಕರ ಆತಂಕಕ್ಕೆ ಕಾರಣವಾಗಿದೆ. ಖಾಸಗಿ ಸಂಸ್ಥೆಗಳ ಉಪನ್ಯಾಸಕರು ತಮ್ಮ ಕಾಲೇಜುಗಳ ಪ್ರಾಂಶುಪಾಲರಾಗಲು ಅವಕಾಶ ನೀಡುವುದರಿಂದ ಅವರು ಈ ಕ್ರಮಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಕರ್ನಾಟಕದಲ್ಲಿ 430 ಸರ್ಕಾರಿ ಪದವಿ ಕಾಲೇಜುಗಳು ಬಿಎ, ಬಿಕಾಂ, ಬಿಎಸ್ಸಿ

ಪ್ರಾಂಶುಪಾಲ ಹುದ್ದೆ ಭರ್ತಿಗೆ ಹೊಸ ನಿಯಮ    ಉಪನ್ಯಾಸಕರ ತೀವ್ರ ವಿರೋಧ Read More »

ಕರ್ನಾಟಕ
Death, deadbody, Waterfall

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ತೀವ್ರ ಜ್ವರದಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಮೃತ ಪಟ್ಟವರನ್ನು ಸುಬ್ರಹ್ಮಣ್ಯ ನಾಯ್ಕ್ (52) ಎಂದು ಗುರುತಿಸಲಾಗಿದ್ದು, ಲೆಪ್ಟೊಸ್ಪೈರೋಸಿಸ್ (ಇಲಿ ಜ್ವರ) ದಿಂದ ನಿಧನರಾದರು ಎಂದು ತಿಳಿದುಬಂದಿದೆ. ಆರಂಭದಲ್ಲಿ, ಅವರಿಗೆ ಜ್ವರ ಕಾಣಿಸಿಕೊಂಡಿತ್ತು , ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇತರೆ ಬಂಧು ಮಿತ್ರರನ್ನು ಅಗಲಿದ್ದಾರೆ.

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಥಗಿತಗೊಂಡಿದ್ದ ಮಂಗಳೂರು- ಬೆಂಗಳೂರು ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಭೂಕುಸಿತದಿಂದ ಸ್ಥಗಿತಗೊಂಡಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭಗೊಂಡಿದೆ ಎಂದು ತಿಳಿದುಬಂದಿದೆ. ದೋಣಿಗಲ್‌ ಎಂಬಲ್ಲಿ ರೈಲು ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದ್ದು, ಪರಿಣಾಮ ತತ್‌ ಕ್ಷಣದಿಂದಲೇ ಮಂಗಳೂರು- ಬೆಂಗಳೂರು ಎಲ್ಲ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಹಾಗೂ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು. ಇದೀಗ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇದೀಗ 12 ದಿನಗಳ ಬಳಿಕ ರೈಲು ಸಂಚಾರ ಮತ್ತೆ ಆರಂಭಗೊಂಡಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

ಸ್ಥಗಿತಗೊಂಡಿದ್ದ ಮಂಗಳೂರು- ಬೆಂಗಳೂರು ರೈಲು ಸಂಚಾರ ಪುನರಾರಂಭ Read More »

ಕರಾವಳಿ, ಕರ್ನಾಟಕ

ಇಂದು ಕರಾವಳಿಯಾದ್ಯಂತ ಶ್ರದ್ಧಾ ಭಕ್ತಿಯ ನಾಗರಪಂಚಮಿ ಆಚರಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತಿದ್ದು, ಪವಿತ್ರ ನಾಗಾರಾಧನಾ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ, ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ, ಉಡುಪಿಯ ಶ್ರೀಕೃಷ್ಣಮಠ, ನಾಲ್ಕು ಸ್ಕಂದಾಲಯಗಳು (ಮುಚ್ಚಲಕೋಡು, ಮಾಂಗೋಡು, ತಾಂಗೋಡು, ಅರಿತೋಡು), ಶ್ರೀವೆಂಕಟರಮಣ ದೇವಸ್ಥಾನ, ನೀಲಾವರ ಪಂಚಮಿಕಾನ, ಸಗ್ರಿ ವಾಸುಕೀ ಅನಂತಪದ್ಮನಾಭ ದೇವಸ್ಥಾನ, ಬಡಗುಪೇಟೆ ಅನಂತಪದ್ಮನಾಭ ದೇವಸ್ಥಾನ ಸಹಿತ ಕರಾವಳಿ ಭಾಗದ ವಿವಿಧ ನಾಗ ಸಾನಿಧ್ಯದ ಕ್ಷೇತ್ರಗಳಲ್ಲಿ

ಇಂದು ಕರಾವಳಿಯಾದ್ಯಂತ ಶ್ರದ್ಧಾ ಭಕ್ತಿಯ ನಾಗರಪಂಚಮಿ ಆಚರಣೆ Read More »

ಕರಾವಳಿ

ಕಾಳಿಂಗ ಸರ್ಪವನ್ನೇ ನುಂಗಲು ಯತ್ನಿಸಿದ ಹೆಬ್ಬಾವು

(ನ್ಯೂಸ್ ಕಡಬ)newskadaba.comಕುಂದಾಪುರ, ಆ.09. ಹೆಬ್ಬಾವು 12 ಅಡಿ ಉದ್ದದ ಕಾಳಿಂಗ ಸರ್ಪವನ್ನೇ ನುಂಗಲು ಯತ್ನಿಸಿದ ಘಟನೆ ಕುಂದಾಪುರದಲ್ಲಿ ವರದಿಯಾಗಿದೆ. ಕಾಳಿಂಗ ಸರ್ಪವನ್ನು ನುಂಗಲಾಗದೇ ಹೆಬ್ಬಾವು ತನ್ನ ಪ್ರಯತ್ನವನ್ನ ಕೈಬಿಟ್ಟ ನಂತರ ಸ್ನೇಕ್ ಶಂಕರ್ ಅವರು ಎರಡೂ ಹಾವುಗಳನ್ನು ಬೇರ್ಪಡಿಸಿದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಎರಡೂ ಹಾವುಗಳನ್ನು ಆನೆ ಝರಿ ಸಮೂಪದ ಕಾಡಿಗೆ ಕೊಂಡೊಯ್ದು ಬಿಟ್ಟಿದ್ದಾರೆ ಎನ್ನಲಾಗಿದೆ.    

ಕಾಳಿಂಗ ಸರ್ಪವನ್ನೇ ನುಂಗಲು ಯತ್ನಿಸಿದ ಹೆಬ್ಬಾವು Read More »

ಕರಾವಳಿ

ನಟ ದರ್ಶನ್ ಗೆ ಜೈಲೂಟವೇ ಸಾಕು, ಮನೆಯೂಟ ಬೇಡ                ಹೈಕೋರ್ಟ್ ಗೆ ವರದಿ ಸಲ್ಲಿಕೆ                  

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.08. ಜೈಲೂಟ ರುಚಿಸುತ್ತಿಲ್ಲ, ತೂಕ ಕಳೆದುಕೊಳ್ಳುತ್ತಿದ್ದೇನೆ, ಮನೆಯಿಂದ ಊಟ, ಹಾಸಿಗೆ ತರಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಮಾಡಿದ್ದ ಮನವಿಗೆ ಸಂಬಂಧಪಟ್ಟಂತೆ ಜೈಲು ಅಧಿಕಾರಿಗಳು ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದಾರೆ. ನಟ ದರ್ಶನ್ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ ಮನೆ ಊಟದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ, ಈ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಅರ್ಜಿ ಸಲ್ಲಿಸುವಂತೆಯೂ ನಟ ದರ್ಶನ್ ಪರ

ನಟ ದರ್ಶನ್ ಗೆ ಜೈಲೂಟವೇ ಸಾಕು, ಮನೆಯೂಟ ಬೇಡ                ಹೈಕೋರ್ಟ್ ಗೆ ವರದಿ ಸಲ್ಲಿಕೆ                   Read More »

ಕರ್ನಾಟಕ

ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ             ನವವಧು ಮೃತ್ಯು              

(ನ್ಯೂಸ್ ಕಡಬ)newskadaba.com ಕೋಲಾರ, ಆ.08. ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಪರಸ್ಪರ ಹೊಡೆದಾಡಿಕೊಂಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಮತ್ತು ವರನ ಸ್ಥಿತಿ ಗಂಭೀರವಾಗಿದೆ. 27 ವರ್ಷದ ನವೀನ್ ಹಾಗೂ 20 ವರ್ಷದ ಲಿಖಿತ ಅವರು ಇಂದು ಸಪ್ತಪದಿ ತುಳಿದಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ಅದೇನಾಯ್ತೋ ಏನೋ ರೂಮ್​ ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.    

ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ             ನವವಧು ಮೃತ್ಯು               Read More »

ಕರ್ನಾಟಕ

‘ಕುಸ್ತಿ ನನ್ನ ವಿರುದ್ದ ಗೆದ್ದಿದೆ’            ಕುಸ್ತಿಪಟು ವಿನೇಶ್ ಫೋಗಟ್‌

(ನ್ಯೂಸ್ ಕಡಬ)newskadaba.com ನವದೆಹಲಿ, ಆ.08. ಪ್ಯಾರಿಸ್ ಒಲಿಂಪಿಕ್ಸ್‌ ನ ಕುಸ್ತಿ ಫೈನಲ್‌ ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ. ಫೈನಲ್‌ ಪ್ರವೇಶಿಸಿ ಇತಿಹಾಸ ಬರೆಯಬೇಕಿದ್ದ ಭಾರತದ ಹೆಮ್ಮೆಯ ಪುತ್ರಿ ಕುಸ್ತಿಪಟು ವಿನೇಶ್‌ ಫೋಗಾಟ್‌ ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿತ್ತು. ವಿನೇಶ್ ಫೋಗಟ್ ಟ್ವೀಟ್ ಮಾಡಿ ನಿವೃತ್ತಿ ಘೋಷಣೆ ಮಾಡಿದ್ದಾರೆ, “ಕುಸ್ತಿ ನನ್ನ ವಿರುದ್ದ ಗೆದ್ದಿದೆ. ನಾನು ಸೋತಿದ್ದೇನೆ. ನಿಮ್ಮ ಕನಸು ಹಾಗೂ ನನ್ನ ಧೈರ್ಯ ಎಲ್ಲವೂ ನುಚ್ಚುನೂರಾಯಿತು

‘ಕುಸ್ತಿ ನನ್ನ ವಿರುದ್ದ ಗೆದ್ದಿದೆ’            ಕುಸ್ತಿಪಟು ವಿನೇಶ್ ಫೋಗಟ್‌ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top