news kadaba desk

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 02. ಶಾಲಾ ಮಕ್ಕಳ ಪ್ರವಾಸದ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ವರದಿಯಾಗಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಮಕ್ಕಳು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ ➤ ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

15 ನೇ ವಯಸ್ಸಿಗೆ ಮನೆ ಖರೀದಿಸಿದ ಬಾಲನಟಿ ರುಹಾನಿಕಾ ಧಮನ್…!

(ನ್ಯೂಸ್ ಕಡಬ) newskadaba.com ಮುಂಬೈ, ಜ.02.  ಹಿಂದಿ ಧಾರವಾಹಿಗಳಲ್ಲಿ ಬಾಲನಟಿಯಾಗಿ ಗುರುತಿಸಿಕೊಂಡಿರುವ ಬಾಲಕಿಯೋರ್ವಳು ತನ್ನ 15ನೇ ವಯಸ್ಸಿಗೆ ಸ್ವತಃ ಮನೆಯೊಂದನ್ನು ಖರೀದಿ ಮಾಡಿ ಎಲ್ಲರನ್ನು ಹುಬ್ಬೇರುವಂತೆ ಮಾಡಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಬಾಲನಟಿಯಾಗಿ ಸ್ಟಾರ್ ಪ್ಲಸ್ ನ ಶೋ ‘ಯೇ ಹೈ ಮೊಹಬ್ಬತೇನ್’ ಮೂಲಕ ಖ್ಯಾತಿ ಗಳಿಸಿಕೊಂಡಿದ್ದ ರುಹಾನಿಕಾ ಧಮನ್, ತಮ್ಮ ಇನ್ ಸ್ಟಾ ಪೋಸ್ಟ್ ನಲ್ಲಿ ಸದಾ ಪ್ರೋತ್ಸಾಹ ನೀಡಿದ ತನ್ನ ಪೋಷಕರಿಗೆ ಧನ್ಯವಾದ ಹೇಳಿದ್ದಾರೆ. ‘ಇದು ಆರಂಭವಷ್ಟೇ, ನಾನು ಇನ್ನೂ ದೊಡ್ಡ ಕನಸು ಕಾಣುತ್ತಿದ್ದೇನೆ.

15 ನೇ ವಯಸ್ಸಿಗೆ ಮನೆ ಖರೀದಿಸಿದ ಬಾಲನಟಿ ರುಹಾನಿಕಾ ಧಮನ್…! Read More »

ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಪಂಚಾಯತ್ ಪಿಡಿಒ ಕರ್ತವ್ಯ ನಿರ್ವಹಣೆಗೆ ಅಡ್ಡಿ- ಆರೋಪ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 02. ಇಲ್ಲಿನ ಪಂಚಾಯತ್ ಪಿಡಿಒ ಅವರ ಕರ್ತವ್ಯ ನಿರ್ವಹಣೆಗೆ ಗ್ರಾಮ ಪಂಚಾಯತ್ ಸದಸ್ಯರೋರ್ವರು ತಡೆಯೊಡ್ಡಿ, ಬಳಿಕ ಹಲ್ಲೆಗೆ ಯತ್ನಿಸಿದ ಬಗ್ಗೆ ಪಿಡಿಒ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ಪೆರಿಯಡ್ಕ ನೆಡ್ಚಿಲ್ ಎಂಬಲ್ಲಿ ನಡೆಯಲಿರುವ ಪಂದ್ಯಾಟಕ್ಕೆ ಸಂಬಂಧಿಸಿದಂತೆ ಬ್ಯಾನರ್ ಒಂದನ್ನು ಅನುಮತಿಯಿಲ್ಲದೇ ಹಾಕಿದ ಹಿನ್ನೆಲೆ ಪಿಡಿಒ ಸೂಚನೆಯಂತೆ ತೆರವು ಮಾಡಲು ಮುಂದಾಗಿದ್ದು ಈ ವೇಳೆ ಸ್ಥಳೀಯರು ಪ್ರತಿಭಟಿಸಿದ್ದಾರೆ. ಈ ಕುರಿತು ಪಂಚಾಯತ್ ಸಿಬ್ಬಂದಿ ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಪಿಡಿಒ

ಉಪ್ಪಿನಂಗಡಿ: ಪಂಚಾಯತ್ ಪಿಡಿಒ ಕರ್ತವ್ಯ ನಿರ್ವಹಣೆಗೆ ಅಡ್ಡಿ- ಆರೋಪ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರನ್ ವೇ ರಿ-ಕಾರ್ಪೆಟಿಂಗ್ ➤ ಜ. 27ರಿಂದ ಮೇ. 31ರ ವರೆಗೆ ವಿಮಾನ ಹಾರಾಟದ ವೇಳಾಪಟ್ಟಿಯಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಇಲ್ಲಿನ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಮರುಕಾರ್ಪೆಟಿಂಗ್ ಮಾಡುವ ಕಾರಣದಿಂದ ನಾಲ್ಕು ತಿಂಗಳುಗಳ ಕಾಲ (ರವಿವಾರ ಮತ್ತು ರಾಷ್ಟ್ರೀಯ ರಜಾ ದಿನಗಳನ್ನುಹೊರತುಪಡಿಸಿ) ಏರ್ ಲೈನ್ ಗಳು ಬೆಳಗ್ಗೆ 6 ಗಂಟೆಯ ಮೊದಲು ಮತ್ತು ಸಂಜೆ 6 ಗಂಟೆಯ ನಂತರ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟನೆ ತಿಳಿಸಿದೆ. ಬೆಳ್ಳಿಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ವಿಮಾಣ ನಿಲ್ದಾಣದ ರನ್ ವೇ ಮುಚ್ಚಲಿದೆ. 2,450 ಮೀ ಉದ್ದ ಮತ್ತು 45 ಮೀಟರ್

ಮಂಗಳೂರು: ರನ್ ವೇ ರಿ-ಕಾರ್ಪೆಟಿಂಗ್ ➤ ಜ. 27ರಿಂದ ಮೇ. 31ರ ವರೆಗೆ ವಿಮಾನ ಹಾರಾಟದ ವೇಳಾಪಟ್ಟಿಯಲ್ಲಿ ಬದಲಾವಣೆ Read More »

ಕರ್ನಾಟಕ

ಮಂಗಳೂರು: ಯಶಸ್ವಿಯಾಗಿ ನಡೆದ ಬ್ರಿಕ್ ಬಿಡಿಎಮ್ ಆಸರೆ ಕಾರ್ಯಕ್ರಮ ➤ ಸಮಾಜದ ಅಭಿವೃದ್ಧಿಯು ಸಾಮಾಜಿಕ ಕಳಕಳಿಯ ಚಿಂತನೆಗಳಿಂದ ಸಾಧ್ಯ- ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಬ್ರಿಕ್ ಸ್ಟೋನ್ ಕಂಪೆನಿ ಸೌದಿ ಅರೇಬಿಯಾ ಪ್ರಾಯೋಜಕತ್ವದಲ್ಲಿ, ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಹಕಾರದೊಂದಿಗೆ ಬ್ರಿಕ್-ಬಿಡಿಎಮ್ ಆಸರೆ ಎಂಬ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬೃಹತ್ ರಕ್ತದಾನ‌ ಶಿಬಿರ, ಸಾಧಕರಿಗೆ ಸನ್ಮಾನ, ದಿವ್ಯಾಂಗರಿಗೆ ಸವಲತ್ತು ವಿತರಣೆ, ಮಹಿಳೆಯರಿಗೆ ಹೊಲಿಗೆಯಂತ್ರ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ, ಯುವಜನತೆ ಸಾಮಾಜಿಕ ಕಳಕಳಿಯೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಸಮಾಜದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ

ಮಂಗಳೂರು: ಯಶಸ್ವಿಯಾಗಿ ನಡೆದ ಬ್ರಿಕ್ ಬಿಡಿಎಮ್ ಆಸರೆ ಕಾರ್ಯಕ್ರಮ ➤ ಸಮಾಜದ ಅಭಿವೃದ್ಧಿಯು ಸಾಮಾಜಿಕ ಕಳಕಳಿಯ ಚಿಂತನೆಗಳಿಂದ ಸಾಧ್ಯ- ಯು.ಟಿ ಖಾದರ್ Read More »

ಕರಾವಳಿ

ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ ➤ ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಜ. 02. ಬಾಂದ್ರಾದಲ್ಲಿನ ಮೌಂಟ್ ಮೇರಿ ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ವರದಿಯಾಗಿದೆ. ಚರ್ಚ್ ಸ್ಫೋಟಿಸುವುದಾಗಿ ಇ- ಮೇಲ್ ಕಳುಹಿಸಿದ ನಂತರ ಕೊಲ್ಕತ್ತಾದಲ್ಲಿ ಆರೋಪಿಯನ್ನು ಐಪಿ ವಿಳಾಸದ ಮೂಲಕ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇ-ಮೇಲ್ ಯಾರು ಕಳುಹಿಸಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಎಲ್ಲವೂ ವಿಚಾರಣೆ ನಂತರ ತಿಳಿದುಬರಲಿದೆ ಎಂದು ಅವರು ಹೇಳಿದ್ದಾರೆ.

ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ ➤ ವ್ಯಕ್ತಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರುವಿನ ಮೇಲೆ ಅತ್ಯಾಚಾರ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ರಾಯಚೂರು, ಜ. 02. ಕರುವಿನ ಮೇಲೆ ಯುವನೋರ್ವ ಅತ್ಯಾಚಾರ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕಸಬಾಲಿಂಗಸುಗೂರು ಅಮೀನ ದರ್ಗಾ ಬಳಿ ವರದಿಯಾಗಿದೆ. ಆರೋಪಿಯನ್ನು ಇಮ್ತಿಯಾಜ್ ಹುಸೇನಮಿಯಾ ಎಂದು ಗುರುತಿಸಲಾಗಿದೆ. ಈತ ಹೊಲದಲ್ಲಿ ಆಕಳು ಕರುವಿನ ಕಾಲು ಕಟ್ಟಿ ನೆಲಕ್ಕೆ ಹಾಕಿ ಹಿಂಸೆ ನೀಡುವ ಮೂಲಕ ಅತ್ಯಾಚಾರ ನಡೆಸಿದ್ದಾನೆ ಎಂದು ಅಮರೇಶ ಬಸಣ್ಣ ಮಡಿವಾಳ ದೂರು ನೀಡಿದ್ದಾರೆ. ಈ ಬಗ್ಗೆ ಪಿಎಸ್ಐ ಹನುಮಂತಪ್ಪ ಪ್ರಕರಣ ದಾಖಲಿಸಿದ್ದಾರೆ.

ಕರುವಿನ ಮೇಲೆ ಅತ್ಯಾಚಾರ ➤ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿರಾಡಿ: ಆನೆ ದಾಳಿಗೆ ಮೃತಪಟ್ಟ ವ್ಯಕ್ತಿ ಮನೆಗೆ ಸಚಿವ ಅಂಗಾರ ಭೇಟಿ ➤ ಗಾಯಾಳುವಿನ ಚಿಕಿತ್ಸೆ ವೆಚ್ಚ ಭರಿಸುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಗುಂಡ್ಯ, ಜ. 02. ಶಿರಾಡಿಯಲ್ಲಿ ಆನೆ ದಾಳಿಗೆ ಒಳಗಾದ ವ್ಯಕ್ತಿಗಳ ಮನೆಗೆ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಘಟನೆ ಕುರಿತು ಅರಣ್ಯ ಇಲಾಖೆಯ ಡಿಸಿಎಫ್ ಅವರನ್ನು ಸಂಪರ್ಕಿಸಿ ಇಲಾಖಾ ವತಿಯಿಂದ ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಸೂಚಿಸಿದರು. ರಸ್ತೆಯಲ್ಲಿ ಹೋಗುತ್ತಿದ್ದ ತಂದೆ ಮಗನ ಮೇಲೆ ಒಂಟಿ ಸಲಗ  ಡಿ. 31 ರಂದು  ದಾಳಿ ಮಾಡಿತ್ತು. ಈ ಘಟನೆಯಲ್ಲಿ ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿಗಳಾದ ತಿಮ್ಮಪ್ಪ ಮತ್ತು ಅವರ

ಶಿರಾಡಿ: ಆನೆ ದಾಳಿಗೆ ಮೃತಪಟ್ಟ ವ್ಯಕ್ತಿ ಮನೆಗೆ ಸಚಿವ ಅಂಗಾರ ಭೇಟಿ ➤ ಗಾಯಾಳುವಿನ ಚಿಕಿತ್ಸೆ ವೆಚ್ಚ ಭರಿಸುವಂತೆ ಸೂಚನೆ Read More »

ಕರಾವಳಿ

ಅಮೂಲ್ ಜೊತೆ ನಂದಿನಿ ವಿಲೀನ ಇಲ್ಲ ➤ ಸಿಎಂ ಬೊಮ್ಮಾಯಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಕೆಎಂಎಫ್ ಉತ್ಪನ್ನ ನಂದಿನಿಯನ್ನು ಗುಜರಾತ್ ನ ಅಮೂಲ್ ಜೊತೆಗೆ ವಿಲೀನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಂದಿನಿ ವಿಲೀನವಾಗಲಿದೆ ಎಂದು ಯಾರೂ ಟೀಕೆ ಮಾಡಬಾರದು. ನಂದಿನಿ ತನ್ನ ಸ್ವಂತ ಅಸ್ಥಿತ್ವ ಉಳಿಸಿಕೊಳ್ಳಲಿದೆ. ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ನಂದಿನಿ ಮತ್ತು ಅಮುಲ್ ಮಾರುಕಟ್ಟೆಯಲ್ಲಿ ಸಹಕಾರ

ಅಮೂಲ್ ಜೊತೆ ನಂದಿನಿ ವಿಲೀನ ಇಲ್ಲ ➤ ಸಿಎಂ ಬೊಮ್ಮಾಯಿ ಸ್ಪಷ್ಟನೆ Read More »

ಕರ್ನಾಟಕ

ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 02.  ಚಲಿಸುತ್ತಿದ್ದ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕಾರು ಸಂಪೂರ್ಣವಾಗಿ ಭಸ್ಮವಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನ ಹಳ್ಳಿ- ಗೋಪಾಲಪುರ ಮಾರ್ಗದ ರಸ್ತೆಯೊಂದರಲ್ಲಿ ವರದಿಯಾಗಿದೆ. ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಕೇರಳ ಮೂಲದ ವ್ಯಕ್ತಿಗಳು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹಾಕಿದ್ದ ಹುರುಳಿ ಒಣ ಸೊಪ್ಪು ಕಾರಿನ ಇಂಜಿನ್ ಗೆ ತಾಗಿ ಬಿಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ

ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top