news kadaba desk

ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಸ್ಫೋಟ ➤ ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 31. ಮನೆಯೊಂದರಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಸ್ಫೋಟಗೊಂಡ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಚೆನ್ನೈನ ನಾಮಕ್ಕಲ್ ಜಿಲ್ಲೆಯಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ತಿಲ್ಲೈ ಕುಮಾರ್, ಅವರ ತಾಯಿ ಸೆಲ್ವಿ (57) ಮತ್ತು ಪತ್ನಿ ಪ್ರಿಯಾ (27) ಎಂದು ಗುರುತಿಸಲಾಗಿದೆ. ಪರವಾನಗಿ ಹೊಂದಿರುವ ತಿಲ್ಲೈ ಕುಮಾರ್ (37) ಎಂಬಾತ ತನ್ನ ಮನೆಯಲ್ಲಿ ಪಟಾಕಿಯನ್ನು ಸಂಗ್ರಹಿಸಿಟ್ಟಿದ್ದ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳದವರು ಸುಮಾರು ಎರಡು ಗಂಟೆಗಳ ಕಾಲ ಹರಸಾಹಸ ಮಾಡಿ ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಸ್ಫೋಟ ➤ ನಾಲ್ವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಟ್ಟಣ: ಗೂಡ್ಸ್ ರೈಲಿನಿಂದ ಅನಿಲ ಸೋರಿಕೆ

(ನ್ಯೂಸ್ ಕಡಬ) newskadaba.com ನೆಟ್ಟಣ, ಡಿ. 31. ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡಿದ್ದು, ಲೋಕೋಪೈಲಟ್ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ನೆಟ್ಟಣ ರೈಲ್ವೇ ನಿಲ್ದಾಣದಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ. ಮಂಗಳೂರು,ಪುತ್ತೂರು, ಸುಳ್ಯ ಅಗ್ನಿಶಾಮಕದಳವು ರೈಲ್ವೇ ಇಲಾಖೆಯ ಸಹಾಕರದೊಂದಿಗೆ ಅನಿಲ ಸೋರಿಕೆಯನ್ನು ತಡೆಯುವ ಕಾರ್ಯಚರಣೆ ನಡೆಸಿದೆ ಎನ್ನಲಾಗಿದೆ. ಮಂಗಳೂರಿನಿಂದ ಮಹರಾಷ್ಟ್ರಕ್ಕೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ರೈಲು ನೆಟ್ಟಣ ನಿಲ್ದಾಣದಲ್ಲಿ ರೈಲನ್ನು ಕ್ರಾಸಿಂಗ್ ಗಾಗಿ ನಿಲ್ಲಿಸಿ ಪೈಲೆಟ್ ಕೆಳಗಿಳಿದಾಗ ಸುಮಾರು 43 ಗೂಡ್ಸ್

ನೆಟ್ಟಣ: ಗೂಡ್ಸ್ ರೈಲಿನಿಂದ ಅನಿಲ ಸೋರಿಕೆ Read More »

ಕರಾವಳಿ

ಮೀನುಗಾರಿಕಾ ಬೋಟ್ ಢಿಕ್ಕಿ ➤ ಅಪಾರ ನಷ್ಟ

(ನ್ಯೂಸ್  ಕಡಬ) newskadaba.com ಮಲ್ಪೆ, ಡಿ. 31.  ಚಲಿಸುತ್ತಿದ್ದ ಬೋಟಿಗೆ ಮತ್ತೊಂದು ಬೋಟ್ ಢಿಕ್ಕಿ ಹೊಡೆದು ಹಾನಿಗೊಂಡ ಘಟನೆ ಮಲ್ಪೆಯಲ್ಲಿ ವರದಿಯಾಗಿದೆ. ಗುರುದಾಸ್ ಸಾಲ್ಯಾನ್ ಅವರಿಗೆ ಸೇರಿದ ಸ್ವರ್ಣದೀಪ ಬೋಟ್ ಹಾನಿಯಾಗಿದೆ. ಮೀನುಗಾರಿಕೆಗೆ ತೆರಳುವಾಗ  ಘಟನೆ ನಡೆದಿದೆ ಎನ್ನಲಾಗಿದೆ.ಮಲ್ಪೆ ಬಂದರಿನ ಸಮೀಪ ನೇರದಲ್ಲಿ ಮತ್ತೊಂದು ಬೋಟ್ ಢಿಕ್ಕಿ ಹೊಡೆದಿದೆ. ಕತ್ತಲಾದ್ದರಿಂದ ಕಾರ್ಮಿಕರಿಗೆ ಢಿಕ್ಕಿ ಹೊಡೆದ ಬೋಟನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಬೋಟನ್ನು ನಿಧಾನವಾಗಿ ಬಂದರಿನೊಳಗೆ ತರಲಾಯಿತು. ಸುಮಾರು 40 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಮೀನುಗಾರಿಕಾ ಬೋಟ್ ಢಿಕ್ಕಿ ➤ ಅಪಾರ ನಷ್ಟ Read More »

ಕರಾವಳಿ

ಗುಡಿಸಲಿಗೆ ಬೆಂಕಿ ➤ ಓರ್ವ ಸಜೀವ ದಹನ

(ನ್ಯೂಸ್ ಕಡಬ) newskadaba.com ಬೀದರ್, ಡಿ. 31. ಪಾರ್ಟಿ ಮಾಡಿದ ನಂತರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಓರ್ವ ವ್ಯಕ್ತಿ ಸಜೀವ ದಹನಗೊಂಡ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಹರನಾಳ ಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಜಗನಾಥ ಹಲಗೆ (60) ಎಂದು ಗುರುತಿಸಲಾಗಿದೆ. ಮೃತ ಜಗನಾಥ ಹಲಗೆ ಹಾಗೂ ಮಾರುತಿ ಗೊರನೆ ಎಂಬಿಬ್ಬರು ಪಾರ್ಟಿ ಮಾಡಿ ನಿದ್ದೆಗೆ ಜಾರಿದ್ದು, ಈ ವೇಳೆ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಜಗನಾಥ ಹಲಗೆಯನ್ನು ರಕ್ಷಿಸಲು ಮುಂದಾಗಿದ್ದ ಮಾರುತಿ ಎಂಬಾತನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು

ಗುಡಿಸಲಿಗೆ ಬೆಂಕಿ ➤ ಓರ್ವ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ. 31. ಸಮುದ್ರಕ್ಕೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆಯಲ್ಲಿ ವರದಿಯಾಗಿದೆ. ಆತ್ಮಹತ್ಯೆ  ಮಾಡಿಕೊಂಡವರನ್ನು ಮಲ್ಪೆಯ ಕೊಡವೂರು ಗ್ರಾಮದ ಅಚ್ಚ್ಯುತ್ ಕಿಣಿ (69) ಎಂದು ಗುರುತಿಸಲಾಗಿದೆ. ಚರ್ಮರೋಗದಿಂದ ಬಳಲುತ್ತಿದ್ದ ಇವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಡಿ. 31. ಬಸ್ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿಯೋರ್ವರು ಕೆಳಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರದ ಆನೆಗುಡ್ಡೆ ದೇವಸ್ಥಾನದ ಬಳಿ ವರದಿಯಾಗಿದೆ. ಮೃತರನ್ನು ಬೆಂಗಳೂರು ಕುಂಬಾರಪೇಟೆಯ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರೆ ಮುಗಿಸಿ ಬಂದು ನಿಲ್ಲಿಸಿದ್ದ ಬಸ್ಸಿನ ಮೇಲೆ ಮಲಗಿದ್ದ ಶ್ರೀನಾಥ್ ಟಾಪ್ ಮೇಲಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯ್ತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ

ಬಸ್ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 31. ಹೆದ್ದಾರಿ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾವಿನಕಟ್ಟ ಕೋಕ್ತಿ ಕ್ರಾಸ್ ಬಳಿ ವರದಿಯಾಗಿದೆ. ಮೃತ ಪಾದಚಾರಿಯನ್ನು ಹೊನ್ನಪ್ಪ ತಿಮ್ಮಯ್ಯ ನಾಯ್ಕ (66) ಎಂದು ಗುರುತಿಸಲಾಗಿದೆ. ಈತ ಕೋಕ್ತಿ ಕ್ರಾಸ್ ನಿಂದ ಮಾವಿನಕಟ್ಟೆಯ ಮೀನು ಮಾರುಕಟ್ಟೆ ಕಡೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಮುರುಡೇಶ್ವರ ಕಡೆಯಿಂದ ಅತಿ ವೇಗವಾಗಿ ಬಂದ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆಪಾದಚಾರಿ

ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಂಕ್ರೀಟ್ ಮಿಕ್ಸರ್ ಲಾರಿ ಕಾಲುವೆಗೆ ಪಲ್ಟಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಚಾಲಕನ ನಿಯಂತ್ರಣ ತಪ್ಪಿ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಪಲ್ಟಿ ಹೊಡೆದು ಕಾಲುವೆಗೆ ಬಿದ್ದ ಪರಿಣಾಮ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲದ ಸೊಂಡೆಕೊಪ್ಪ ಬಳಿ ವರದಿಯಾಗಿದೆ. ಮೃತಪಟ್ಟಿರುವರನ್ನು ಬಿಜಾಪುರ ಜಿಲ್ಲೆಯ ಅಂಬಳನೂರು ಗ್ರಾಮದ ಸಿದ್ದಪ್ಪ (31) ಮತ್ತು ರಾಯಚೂರಿನ ಮಿಟೆಕೇಲೂರು ಗ್ರಾಮದ ಮುತ್ತು (25) ಎಂದು ಗುರುತಿಸಲಾಗಿದೆ. ಮಲ್ಲಾಪುರ ಗ್ರಾಮದ ಕಾಂಕ್ರೀಟ್ ಮಿಸ್ಕ್ ಪ್ಲಾಂಟ್’ನಲ್ಲಿ ಕೆಲಸ ಮಾಡುತ್ತಿದ್ದ ಇವರು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾಲುವೆಗೆ ಬಿದ್ದು

ಕಾಂಕ್ರೀಟ್ ಮಿಕ್ಸರ್ ಲಾರಿ ಕಾಲುವೆಗೆ ಪಲ್ಟಿ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯದ ಅಜಿತೇಶ್ ಭೂಸೇನೆಯ ಲೆಫ್ಟಿನೆಂಟ್ ಆಗಿ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 31. ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಅಜಿತೇಶ್ ಇವರು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪಿ.ಯು ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ, ಮಡಿಕೇರಿಯ ಪೊನ್ನಂಪೇಟೆ ಕಾಲೇಜಿನಲ್ಲಿ ಫಾರೆಸ್ಟರಿಯಲ್ಲಿ ಬಿ.ಎಸ್ ಸಿ ಪದವಿಯನ್ನು ಪಡೆದಿದ್ದಾರೆ. ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈ ಹುದ್ದೆಗೆ ಆಯ್ಕೆಯಾದ ಇವರು, ಸುಬ್ರಹ್ಮಣ್ಯ ಕುಮಾರಸ್ವಾಮಿ

ಸುಬ್ರಹ್ಮಣ್ಯದ ಅಜಿತೇಶ್ ಭೂಸೇನೆಯ ಲೆಫ್ಟಿನೆಂಟ್ ಆಗಿ ಆಯ್ಕೆ Read More »

ಕರಾವಳಿ

ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್ ➤ 9 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಗುಜರಾತ್, ಡಿ. 31. ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾದ ಪರಿಣಾಮ 9 ಮಂದಿ ದಾರುಣ ಅಂತ್ಯ ಕಂಡ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ. 28 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ 11 ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರು ಸೂರತ್ ನಲ್ಲಿನ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸ್ ಆಗುತ್ತಿದ್ದ ವೇಳೆ ಬಸ್ಸಿನ ಚಾಲಕನಿಗೆ ಹೃದಯಾಘಾತ ಸಂಭವಿಸಿ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್ ➤ 9 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top