Keerthana

ದ.ಕ. ಜಿಲ್ಲೆಯಲ್ಲಿ ತಂಬಾಕು ಪದಾರ್ಥ ಮಾರಾಟ, ಸೇವನೆ ನಿಷೇಧ

ಮಂಗಳೂರು, ಎ.29: ಕೊರೋನ ಸೋಂಕು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಪಾನ್ ಮಸಾಲ, ಜರ್ದಾ, ಚೈನಿ ಖೈನಿ ಇತ್ಯಾದಿ ಜಗಿಯುವ ತಂಬಾಕು ಪದಾರ್ಥಗಳನ್ನು ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೊರೋನ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಯ ಮೂಲಕ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ […]

ದ.ಕ. ಜಿಲ್ಲೆಯಲ್ಲಿ ತಂಬಾಕು ಪದಾರ್ಥ ಮಾರಾಟ, ಸೇವನೆ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ಪತ್ತೆ: 532ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ಬೆಂಗಳೂರು, ಎ.29: ರಾಜ್ಯದಲ್ಲಿ ಬುಧವಾರ 9 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕಲಬುರಗಿಯಲ್ಲಿ 8, ಬೆಳಗಾವಿಯ ಹುಕ್ಕೇರಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಈ ನಡುವೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗಿದ್ದು, 245 ಮಂದಿ ಗುಣಮುಖರಾಗಿದ್ದಾರೆ ಮತ್ತು ಇಲ್ಲಿಯವರೆಗೆ 21 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ಪತ್ತೆ: 532ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ Read More »

ಕರ್ನಾಟಕ

ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ

ಮುಂಬೈ, ಎ.29: ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ (53) ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ದೊಡ್ಡ ಕರುಳು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಇರ್ಫಾನ್ ಖಾನ್‌ರನ್ನು ಮಂಗಳವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ನಟ ಇರ್ಫಾನ್ ಖಾನ್ ನ್ಯೂರೋಎಂಡೋಕ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕಾಗಿ ತಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು 2018ರಲ್ಲಿ ಘೋಷಿಸಿದ್ದರು. ಇದಕ್ಕಾಗಿ ಅವರು ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದರು. ಬಾಲಿವುಡ್‌ನ ವಾರಿಯರ್, ಮಕ್ಬೂಲ್, ಹಾಸಿಲ್, ಪಾನ್

ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ Read More »

ರಾಷ್ಟ್ರೀಯ ನ್ಯೂಸ್

ಹಸಿರು ವಲಯಗಳಲ್ಲಿ ಲಾಕ್‌ಡೌನ್ ಸಡಿಲಿಕೆ: ಷರತ್ತು ಬದ್ಧ ಆರ್ಥಿಕ ಚಟುವಟಿಕೆ ಅವಕಾಶ

ಬೆಂಗಳೂರು, ಎ.28: ರಾಜ್ಯದಲ್ಲಿ ಒಂದೂ ಕೊರೋನ ವೈರಸ್ ಪ್ರಕರಣಗಳಿಲ್ಲದ ಹಸಿರುವ ವಲಯದ ಜಿಲ್ಲೆಗಳಲ್ಲಿ ಷರತ್ತು ಬದ್ಧ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಚಾಮರಾಜನಗರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ರಾಮನಗರ, ಹಾಸನ, ಶಿವಮೊಗ್ಗ, ಹಾವೇರಿ, ಯಾದಗಿರಿ, ಕೋಲಾರ, ದಾವಣಗೆರೆ, ಉಡುಪಿ ಮತ್ತು ಕೊಡಗು ಜಿಲ್ಲೆಗಳು ಹಸಿರು ವಲಯದ ವ್ಯಾಪ್ತಿಗೆ ಬರುತ್ತವೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಸಿರು ವಲಯದ ಜಿಲ್ಲೆಗಳಲ್ಲಿ ಅಂಗಡಿಗಳು, ಪುರಸಭೆಯ ಮಿತಿಯಲ್ಲಿರುವ ವಸತಿ

ಹಸಿರು ವಲಯಗಳಲ್ಲಿ ಲಾಕ್‌ಡೌನ್ ಸಡಿಲಿಕೆ: ಷರತ್ತು ಬದ್ಧ ಆರ್ಥಿಕ ಚಟುವಟಿಕೆ ಅವಕಾಶ Read More »

ಕರ್ನಾಟಕ

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋ ಸೋಂಕು ದೃಢ: ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಬೆಂಗಳೂರು, ಎ.27: ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರು ನಗರ 1, ಮಂಡ್ಯ 2, ದ.ಕ. 2, ವಿಜಯಪುರ 2 ಮತ್ತು ಬಾಗಲಕೋಟೆಯಲ್ಲಿ ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋ ಸೋಂಕು ದೃಢ: ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ Read More »

ಕರ್ನಾಟಕ

ದ.ಕ. ಜಿಲ್ಲೆಗೆ ಹೊರ ರಾಜ್ಯದ ಮೀನು ಸಾಗಾಟ ವಾಹನ ಪ್ರವೇಶ ತಕ್ಷಣ ನಿಷೇಧ: ಸಚಿವ ಕೋಟ

ಮಂಗಳೂರು, ಎ.27: ದ.ಕ. ಜಿಲ್ಲೆಗೆ ಹೊರ ರಾಜ್ಯದ ಮೀನು ವಾಹನ ಪ್ರವೇಶ ತಕ್ಷಣದಿಂದ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರಿನ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರದ ಸಮಸ್ಯೆ ಇರುವುದರಿಂದ ಮತ್ತು ಜಿಲ್ಲೆಯಲ್ಲಿ ಕೊರೋನ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಜಿಲ್ಲಾಡಳಿತ

ದ.ಕ. ಜಿಲ್ಲೆಗೆ ಹೊರ ರಾಜ್ಯದ ಮೀನು ಸಾಗಾಟ ವಾಹನ ಪ್ರವೇಶ ತಕ್ಷಣ ನಿಷೇಧ: ಸಚಿವ ಕೋಟ Read More »

ಕರಾವಳಿ

Breaking news ದ.ಕ.ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೋನ ಪಾಸಿಟಿವ್

ಮಂಗಳೂರು, ಎ.27: ದ.ಕ.ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 21 ಪ್ರಕರಣ ಪತ್ತೆಯಾದಂತಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿತೆಯ ಸಂಪರ್ಕದಿಂದ 45 ವರ್ಷ ಪ್ರಾಯದ ಪುರುಷ ಮತ್ತು ಆತನ ತಾಯಿ 80 ವರ್ಷದ ಪ್ರಾಯದ ವೃದ್ಧೆಗೆ ಸೋಂಕು ತಗುಲಿರುವುದು ದೃಢಗೊಂಡಿದೆ.

Breaking news ದ.ಕ.ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೋನ ಪಾಸಿಟಿವ್ Read More »

ಕರಾವಳಿ

ದೇಶದಲ್ಲಿ ಒಂದೇ ದಿನ ಕೊರೋನ ಸೋಂಕಿಗೆ 48 ಮಂದಿ ಸಾವು: 1,396 ಹೊಸ ಪ್ರಕರಣ ಪತ್ತೆ

ಹೊಸದಿಲ್ಲಿ, ಎ.27: ಭಾರತದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1,396 ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ. 48 ಮಂದಿ ಕೊರೋನಗೆ ಬಲಿಯಾಗಿದ್ದಾರೆ. ಭಾರತದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 27,892 ಕ್ಕೆ ಏರಿಕೆಯಾಗಿದ್ದು, ಈವರೆಗೆ 872 ಮಂದಿ ಸಾವನ್ನಪ್ಪಿದ್ದಾರೆ. 6,185 ಜನರು ಗುಣಮುಖರಾಗಿದ್ದು, 20,835 ಜನರು ವಿವಿಧ ರಾಜ್ಯಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 8,068 ಜನರಿಗೆ ಸೋಂಕು ತಗುಲಿದ್ದು, 342 ಜನರು ಮೃತಪಟ್ಟಿದ್ದಾರೆ. ಗುಜರಾತ್ ನಲ್ಲಿ

ದೇಶದಲ್ಲಿ ಒಂದೇ ದಿನ ಕೊರೋನ ಸೋಂಕಿಗೆ 48 ಮಂದಿ ಸಾವು: 1,396 ಹೊಸ ಪ್ರಕರಣ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಚ್ಚುತ್ತಿರುವ ಕೊರೋನ ಹಿನ್ನೆಲೆ: ಕಠಿಣ ಕ್ರಮಕ್ಕೆ ಸಚಿವ ಕೋಟ ಸೂಚನೆ

ಮಂಗಳೂರು, ಎ.26: ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಂಟ್ವಾಳದಲ್ಲಿ ಕೊರೋನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಪ್ರವಾಸಿ ಮಂದಿರದಲ್ಲಿ ರವಿವಾರ ಸಚಿವರು ಹಾಗೂ ಸಂಸದರು ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಬಂಟ್ವಾಳದಲ್ಲಿ ಮೇ 3ರವರೆಗೆ ಲಾಕ್‌ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ. ಕಸಬಾ ಹೋಬಳಿಯ 92 ಮನೆಗಳು ಹಾಗೂ ನರಿಕೊಂಬು ಗ್ರಾಮಪಂಚಾಯತ್

ಹೆಚ್ಚುತ್ತಿರುವ ಕೊರೋನ ಹಿನ್ನೆಲೆ: ಕಠಿಣ ಕ್ರಮಕ್ಕೆ ಸಚಿವ ಕೋಟ ಸೂಚನೆ Read More »

ಕರಾವಳಿ

ರಾಜ್ಯದಲ್ಲಿ ಇಂದು ಮೂವರಿಗೆ ಕೊರೋನ ಸೋಂಕು ದೃಢ

ಬೆಂಗಳೂರು, ಎ.26: ರಾಜ್ಯದಲ್ಲಿ ರವಿವಾರ ಹೊಸದಾಗಿ ಮೂವರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಕೊರೋನ ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದ.ಕ. ಜಿಲ್ಲೆಯಲ್ಲಿ ಓರ್ವ ಮಹಿಳೆ ಹಾಗೂ ಕಲಬುರಗಿಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ. 182 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಮೂವರಿಗೆ ಕೊರೋನ ಸೋಂಕು ದೃಢ Read More »

ಕರ್ನಾಟಕ
Scroll to Top