Keerthana

ಸುಟ್ಟಗಾಯಗಳೊಂದಿಗೆ ಬಂದ ಬಾಲಕನಿದ್ದ ಕೇರಳದ ಆ್ಯಂಬುಲೆನ್ಸ್ ವಾಪಸ್

ಮಂಗಳೂರು, ಎ.8: ಕೇರಳದ ಕಣ್ಣೂರಿನಿಂದ ಸುಟ್ಟಗಾಯಗಳೊಂದಿಗೆ ಬಂದಿದ್ದ ಆ್ಯಂಬುಲೆನ್ಸ್ ಅನ್ನು ಕರ್ನಾಟಕ ಪೊಲೀಸರು ಕೇರಳ-ಕರ್ನಾಟಕ ಗಡಿಭಾಗ ತಲಪಾಡಿಯಲ್ಲಿ ವಾಪಸ್ ಕಳುಹಿಸಿದ್ದಾರೆ. ಕಣ್ಣೂರು ನಿವಾಸಿ ಆದಿತ್ಯ (11) ಎಂಬಾತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆ ತರುವ ಸಂದರ್ಭ ಆ್ಯಂಬುಲೆನ್ಸ್ ಅನ್ನು ತಡೆದು ವಾಸಸು ಕಳುಹಿಸಲಾಗಿದೆ. ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಮಾತುಕತೆ ನಡೆಸಿದ್ದು, ಇದರಿಂದಾಗಿ ತುರ್ತು ಚಿಕಿತ್ಸೆಗೆ ಆ್ಯಂಬುಲೆನ್ಸ್ ಗಡಿ ಪ್ರವೇಶ ಮಾಡಬಹುದು ಎಂದು ತಿಳಿಸಿದ್ದರು. ಅದಕ್ಕಾಗಿ ಕಾಸರಗೋಡು ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳ […]

ಸುಟ್ಟಗಾಯಗಳೊಂದಿಗೆ ಬಂದ ಬಾಲಕನಿದ್ದ ಕೇರಳದ ಆ್ಯಂಬುಲೆನ್ಸ್ ವಾಪಸ್ Read More »

ಕರಾವಳಿ

ಕಲಬುರಗಿಯಲ್ಲಿ ಕೊರೋನಗೆ ಮತ್ತೋರ್ವ ಬಲಿ

ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗೆ ಜಿಲ್ಲಾಡಳಿತದಿಂದ ಬೀಗ ಕಲಬುರಗಿ, ಎ.8: ರಾಜ್ಯದಲ್ಲಿ ಕೋವಿಡ್-19 ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಕಲಬುರಗಿಯ 65 ವರ್ಷದ ಸೋಂಕಿತ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಈ ಮೂಲಕ ಕಲಬುರಗಿಯಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದೆ. ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ. ರಾಜ್ಯದಲ್ಲಿ ಮತ್ತೆ 6 ಕೊರೋನ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಮಾರಕ ಸೋಂಕು ತಗುಲಿದವರ ಸಂಖ್ಯೆ 181ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಭೀತಿ ತಂದೊಡ್ಡಿದೆ. ಕಲಬುರಗಿ ಮೂಲದ 65 ವರ್ಷದ ವೃದ್ಧರೊಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕಿಗೆ

ಕಲಬುರಗಿಯಲ್ಲಿ ಕೊರೋನಗೆ ಮತ್ತೋರ್ವ ಬಲಿ Read More »

ಕರ್ನಾಟಕ

ಕರಾವಳಿ ಕಾವಲು ಪಡೆಯಿಂದ ಕಡಲ ದಾರಿಯಾಗಿ ನುಸುಳುವಿಕೆಗೆ ಕಟ್ಟೆಚ್ಚರ

ಮಂಗಳೂರು, ಎ.8: ಕಾಸರಗೋಡು- ಕರ್ನಾಟಕ ಸಂಪರ್ಕಿಸುವ ರಸ್ತೆ ಬಂದ್ ಮಾಡಿದ ಕಾರಣದಿಂದ, ಕೆಲವರು ಕಡಲ ಕಿನಾರೆಯ ಮೂಲಕ ಅಕ್ರಮವಾಗಿ ದ.ಕ. ಜಿಲ್ಲೆ ಪ್ರವೇಶಿಸಲು ಪ್ರಯತ್ನ ನಡೆಸುತ್ತಿರುವ ಸಂಗತಿ ಬೆಳಕಿಗೆ ಬಂದಿದ್ದು, ಈಗ ಕರಾವಳಿ ಕಾವಲು ಪೊಲೀಸ್ ಪಡೆ ಕಡಲ ಕಿನಾರೆಯಲ್ಲಿ ಹದ್ದಿನ ಕಣ್ಣಿರಿಸಿದೆ. ಕಾಸರಗೋಡಿನ ಕೋವಿಡ್ 19 ಸೋಂಕಿತರ ಸಂಪರ್ಕದಲ್ಲಿರುವ ಬಹುತೇಕ ಮಂದಿ ಗಡಿ ಭಾಗದಲ್ಲಿಯೇ ಇರುವ ಕಾರಣದಿಂದ ಅವರು ಕಡಲ ಕಿನಾರೆಯ ಮೂಲಕವೂ ದ.ಕ. ಜಿಲ್ಲೆ ಪ್ರವೇಶಿಸುವ ಸಾಧ್ಯತೆಯಿದೆ ಎಂಬ ಸುಳಿವಿನ ಆಧಾರದಲ್ಲಿ ಪೊಲೀಸ್ ಕಣ್ಗಾವಲು

ಕರಾವಳಿ ಕಾವಲು ಪಡೆಯಿಂದ ಕಡಲ ದಾರಿಯಾಗಿ ನುಸುಳುವಿಕೆಗೆ ಕಟ್ಟೆಚ್ಚರ Read More »

ಕರಾವಳಿ

ವೆನ್ಲಾಕ್‌ನಲ್ಲಿ ಕೊರೋನ ಪರೀಕ್ಷೆ ಪ್ರಯೋಗಾಲಯ ಅಧಿಕೃತ ಆರಂಭ

ಇನ್ಮುಂದೆ ಕೆಲವೇ ಗಂಟೆಗಳಲ್ಲಿ ವರದಿ ಲಭ್ಯ ಮಂಗಳೂರು, ಎ.7: ಇಲ್ಲಿನ ಜಿಲ್ಲಾಸ್ಪತ್ರೆ ವೆನ್ಲಾಕ್‌ನಲ್ಲಿ ಕೊರೋನ ಪರೀಕ್ಷಾ ಪ್ರಯೋಗಾಲಯ ಅಧಿಕೃತವಾಗಿ ಆರಂಭಗೊಂಡಿದೆ. ವೆನ್ಲಾಕ್‌ನಲ್ಲಿ ಆರಂಭಿಸಲಾಗಿರುವ ವೈರಾಣು ಸಂಶೋಧನಾ ಮತ್ತು ರೋಗ ಪರೀಕ್ಷಾ ಪ್ರಯೋಗಾಲಯವು ಸರಕಾರದಿಂದ ಎಲ್ಲ ರೀತಿಯ ಪರಿಶೀಲನೆಗೆ ಒಳಪಟ್ಟು ಸುಸೂತ್ರ ಕಾರ್ಯಾರಂಭಕ್ಕೆ ಅನುಮತಿ ದೊರಕಿದೆ. ಹೀಗಾಗಿ ಮಹಾಮಾರಿ ಕೊರೋನ ಸೊಂಕಿನ ಪರೀಕ್ಷಾ ವರದಿ ಬೆಂಗಳೂರು, ಶಿವಮೊಗ್ಗದಿಂದ ಬರುವಿಕೆಗಾಗಿ ಕಾಯುವುದಕ್ಕೆ ಇನ್ಮುಂದೆ ಬ್ರೇಕ್ ಬೀಳಲಿದ್ದು, ತತ್‌ಕ್ಷಣವೇ ವರದಿ ಲಭ್ಯವಾಗಲಿದೆ. ಮಂಗಳೂರಿನಲ್ಲಿ ಕೊರೋನ ಸಹಿತ ವೈರಾಣು ಪತ್ತೆ ಪ್ರಯೋಗಾಲಯ ಆರಂಭಕ್ಕೆ

ವೆನ್ಲಾಕ್‌ನಲ್ಲಿ ಕೊರೋನ ಪರೀಕ್ಷೆ ಪ್ರಯೋಗಾಲಯ ಅಧಿಕೃತ ಆರಂಭ Read More »

ಬ್ರೇಕಿಂಗ್ ನ್ಯೂಸ್

ಮಲಯಾಳಂ ಹಾಸ್ಯ ನಟ ಶಶಿ ಕಳಿಂಗ ನಿಧನ

ಕೋಝಿಕ್ಕೋಡ್, ಎ.7: ರಂಗಭೂಮಿಯ ಜನಪ್ರಿಯ ನಟ, ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯ ನಟ ಶಶಿ ಕಳಿಂಗ ಅಲಿಯಾಸ್ ವಿ. ಚಂದ್ರಕುಮಾರ್ (59) ಮಂಗಳವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. 2009ರಲ್ಲಿ ಬಿಡುಗಡೆಯಾದ ಕೇರಳ ಕೆಫೆ ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ್ದರು. ಈ ವರೆಗೆ ಸುಮಾರು 30 ಮಲಯಾಳಂ ಸಿನಿಮಾದಲ್ಲಿ ನಟಿಸಿದ್ದರು. 2010ರಲ್ಲಿ ಬಿಡುಗಡೆಯಾಗಿದ್ದ ‘‘ಪ್ರಾಂಚಿಯೆಟ್ಟನ್ ಆ್ಯಂಡ್ ದ ಸೈಂಟ್’’ ಸಿನಿಮಾದಲ್ಲಿ ಕಾಳಿಂಗ ನಟನೆ ಅತ್ಯುತ್ತಮವಾಗಿತ್ತು. ಈ ಸಿನಿಮಾದಲ್ಲಿ ಸೂಪರ್

ಮಲಯಾಳಂ ಹಾಸ್ಯ ನಟ ಶಶಿ ಕಳಿಂಗ ನಿಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

breaking news ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ

ಬೆಂಗಳೂರು, ಎ.6: ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು. ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂಧಿಸದೆ ಅವರು ಸೋಮವಾರ ಸಂಜೆ ನಿಧರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬುಲೆಟ್ ಪ್ರಕಾಶ್ ಅವರು ಬಳಲುತ್ತಿದ್ದರು. ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಬುಲೆಟ್ ಪ್ರಕಾಶ್ ನಟಿಸಿದ್ದಾರೆ. ಸ್ವಲ್ಪ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ಅವರು

breaking news ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೋಮವಾರ 12 ಮಂದಿಗೆ ಕೊರೋನ ಸೋಂಕು ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೇರಿಕೆ

ಮೈಸೂರು, ಎ.6: ರಾಜ್ಯದಲ್ಲಿ ಸೋಮವಾರ ಹೊಸದಾಗಿ 12 ಮಂದಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 163ಕ್ಕೇರಿದೆ. ಈ ಪೈಕಿ ಮೈಸೂರು ಜಿಲ್ಲೆಯಲ್ಲಿ 7 ಸೋಂಕಿತರು ಪತ್ತೆಯಾಗಿದ್ದರೆ, ಬಾಗಲಕೋಟೆಯಲ್ಲಿ ಇಬ್ಬರಿಗೆ ಕೊರೋನ ಪಾಸಿಟಿವ್ ಆಗಿದೆ. ಹಾಗೆಯೇ ಬೆಂಗಳೂರು ನಗರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆಯ ಹಾಗೂ ಕೇರಳ ಮೂಲದ ತಲಾ ಒಬ್ಬರಲ್ಲಿ ಕೊರೋನ ಸೋಂಕು ಹರಡಿರುವುದು ದೃಢಪಟ್ಟಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ163ಕ್ಕೆ ಏರಿದೆ.

ಸೋಮವಾರ 12 ಮಂದಿಗೆ ಕೊರೋನ ಸೋಂಕು ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೇರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು, ಎ.6: ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ನಗರದ ಪೋರ್ಟಿಸ್ ಆಸ್ಪತ್ರೆಯ ಮೂಲಗಳು ತಿಳಿಸಿದೆ. ಕಳೆದ ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬುಲೆಟ್ ಪ್ರಕಾಶ್ ಅವರು ಬಳಲುತ್ತಿದ್ದಾರೆ. ಸದ್ಯ ಅವರು ಕಿಡ್ನಿ ವೈಫಲ್ಯ ಮತ್ತು ಸೋಂಕಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಬುಲೆಟ್ ಪ್ರಕಾಶ್ ಅವರು ನಿಧನ ಹೊಂದಿದ್ದಾರೆ ಎಂದು ವದಂತಿ ಹರಡಿದ ಬೆನ್ನಲ್ಲೇ ಆಸ್ಪತ್ರೆ ಹೆಲ್ತ್ ಬುಲೆಟಿನ್

ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರ Read More »

ಕರ್ನಾಟಕ

ಕೊರೋನ ಹೆಸರಲ್ಲಿ ಪ್ರಚೋದನಕಾರಿ, ಸುಳ್ಳು ಸುದ್ದಿ ಹರಡಿದಲ್ಲಿ ಕಠಿಣ ಕ್ರಮ: ಎಸ್ಪಿ ಎಚ್ಚರಿಕೆ

ಮಂಗಳೂರು, ಎ.6: ಇತ್ತೀಚಿನ ದಿನಗಳಲ್ಲಿ ದ.ಕ. ಜಿಲ್ಲೆಯಾದ್ಯಂತ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಮತ್ತು ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಈಗಾಗಲೇ ಕೋಮು ಭಾವನೆ ಕೆರಳಿಸುವ ಮೂಲಕ ಒಂದು ಕೋಮಿನ ವಿರುದ್ಧ ಅಪಪ್ರಚಾರ ಮತ್ತು ಸುಳ್ಳು ಸುದ್ದಿಗಳನ್ನು ಹರಿದಾಡುತ್ತಿರುವ ಆರೋಪದ ಮೇಲೆ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ

ಕೊರೋನ ಹೆಸರಲ್ಲಿ ಪ್ರಚೋದನಕಾರಿ, ಸುಳ್ಳು ಸುದ್ದಿ ಹರಡಿದಲ್ಲಿ ಕಠಿಣ ಕ್ರಮ: ಎಸ್ಪಿ ಎಚ್ಚರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ.ಕ. ಮೊದಲ ಕೊರೋನ ಸೋಂಕಿತ ಗುಣಮುಖ: ನಾಳೆ ಆಸ್ಪತ್ರೆಯಿಂದ ಬಿಡುಗಡೆ

ಮಂಗಳೂರು, ಎ.5: ದ.ಕ. ಜಿಲ್ಲೆಯಲ್ಲಿ ದಾಖಲಾಗಿದ್ದ ಮೊದಲ ಕೊರೋನ ಸೋಂಕಿತ ಗುಣಮುಖವಾಗಿದ್ದು, ಎ.6ರಂದು ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ. ಈ ಮೂಲಕ ಜಿಲ್ಲೆಯ ಜನತೆಯಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ. ದುಬೈನಿಂದ ಬಂದಿದ್ದ 22 ವರ್ಷದ ಭಟ್ಕಳ ಮೂಲದ ವ್ಯಕ್ತಿಯಲ್ಲಿ ಕೊರೋನ ಸೋಂಕು ದೃಢಪಟ್ಟಿತ್ತು. ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆ ವ್ಯಕ್ತಿ ಮಂಗಳೂರಿಗೆ ಆಗಮಿಸಿದ್ದ. ಮಾರ್ಚ್ 19ರಂದು ಭಟ್ಕಳ ಮೂಲದ ವ್ಯಕ್ತಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭ ಆತನಲ್ಲಿ ಕೊರೋನ ಸೋಂಕು

ದ.ಕ. ಮೊದಲ ಕೊರೋನ ಸೋಂಕಿತ ಗುಣಮುಖ: ನಾಳೆ ಆಸ್ಪತ್ರೆಯಿಂದ ಬಿಡುಗಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top