Keerthana

7, 8, 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್, ಎಸೆಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಎ.14ರ ನಂತರ ತೀರ್ಮಾನ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಎ.2 ರಾಜ್ಯದಲ್ಲಿನ 7, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಿಲ್ಲ. ಈ ವರ್ಷ ಎಲ್ಲರನ್ನೂ ಪಾಸ್ ಮಾಡಲಾಗುತ್ತದೆ. ಆದ್ರೇ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಎಪ್ರಿಲ್ 14ರ ಬಳಿಕ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಫೇಸ್ ಬುಕ್ ನಲ್ಲಿ ಲೈವ್ ಮೂಲಕ ಮಾತನಾಡಿದ ಅವರು, ಲಾಕ್ ಡೌನ್ ಹಿನ್ನೆಲೆಯಲ್ಲಿ 1ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಬಳಿಕ 7ರಿಂದ 9ನೇ ತರಗತಿಯ […]

7, 8, 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್, ಎಸೆಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಎ.14ರ ನಂತರ ತೀರ್ಮಾನ: ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

ಕೇರಳ ರಾಜ್ಯದ ರೋಗಿಗಳನ್ನು ದ.ಕ.ದ ಯಾವುದೇ ಆಸ್ಪತ್ರೆಯಲ್ಲಿ ದಾಖಲಿಸಬೇಡಿ: ಡಿಎಚ್ಒ

ಮಂಗಳೂರು, ಎ.2: ಕೇರಳ ರಾಜ್ಯದಲ್ಲಿ ಕೊರೋನ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಆ ರಾಜ್ಯದ ಯಾವುದೇ ರೋಗಿಗಳನ್ನು‌‌ ದ.ಕ.ಜಿಲ್ಲೆಯ ಆಸ್ಪತ್ರೆಗಳಲ್ಲಿ ದಾಖಲಿಸದಂತೆ‌ ದ.ಕ. ಜಿಲ್ಲಾ ಆರೋಗ್ಯ‌ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ. ಬುಧವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯ‌ ನೇತೃತ್ವದಲ್ಲಿ ‌ನಡೆದ ಸಭೆಯಲ್ಲಿ ‌ಈ ತೀರ್ಮಾನ ಕೈಕೊಳ್ಳಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕೇರಳ ರಾಜ್ಯದ ರೋಗಿಗಳನ್ನು ದ.ಕ.ದ ಯಾವುದೇ ಆಸ್ಪತ್ರೆಯಲ್ಲಿ ದಾಖಲಿಸಬೇಡಿ: ಡಿಎಚ್ಒ Read More »

ಕರಾವಳಿ

ಸೆಂಟ್ರಲ್ ಮಾರ್ಕೆಟ್‌ನ ತರಕಾರಿ, ಹಣ್ಣುಹಂಪಲು ವ್ಯಾಪಾರ ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರ

ಜಿಲ್ಲೆಯಾದ್ಯಂತ ಎಲ್ಲಾ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮಂಗಳೂರು, ಎ.2: ಸೆಂಟ್ರಲ್ ಮಾರ್ಕೆಟ್‌ನ ತರಕಾರಿ, ಹಣ್ಣು ವ್ಯಾಪಾರ ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರಿಸಿ ಹಾಗೂ ಜಿಲ್ಲೆಯಾದ್ಯಂತ ಎಲ್ಲಾ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.   ಸೆಂಟ್ರಲ್‌ ಮಾರ್ಕೆಟ್‌ಗೆ ಚಿಲ್ಲರೆ ವ್ಯಾಪಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ತರಕಾರಿ ಹಾಗೂ ಹಣ್ಣಿನ ಅಂಗಡಿಗಳಲ್ಲಿ ಖರೀದಿ ಮಾಡಬೇಕಾಗಿದೆ. ಬಂದರಿನಲ್ಲಿನ ದಿನಸಿ ವಸ್ತುಗಳ ಸಗಟು ವ್ಯಾಪಾರ ಎಂದಿನಂತೆ ಮುಂದುವರಿಯುತ್ತದೆ.

ಸೆಂಟ್ರಲ್ ಮಾರ್ಕೆಟ್‌ನ ತರಕಾರಿ, ಹಣ್ಣುಹಂಪಲು ವ್ಯಾಪಾರ ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರ Read More »

ಕರಾವಳಿ

ಲಾಕ್‌ಡೌನ್ ಉಲ್ಲಂಘನೆ: 154 ವಾಹನ ಮುಟ್ಟುಗೋಲು

ಮಂಗಳೂರು, ಎ.2: ಮಂಗಳೂರು ಕಮಿಷನರೇಟ್ ವ್ಯಾಪ್ತಿ ಲಾಕ್ ಡೌನ್ ಘೋಷಣೆಯಾಗಿದ್ದರೂ ಅನವಶ್ಯಕವಾಗಿ ರಸ್ತೆಗಳಲ್ಲಿ ಸಂಚರಿಸುತ್ತಿದ್ದ 154 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಅನವಶ್ಯಕವಾಗಿ ಸಂಚಾರ ಮಾಡಿದರೆ ವಾಹನ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಪೊಲೀಸ್ ಆಯುಕ್ತ ಹರ್ಷ ಸಾರ್ವಜನಿಕರಿಗೆ ಈ ಹಿಂದೆಯೇ ಹಲವು ಬಾರಿ ಎಚ್ಚರಿಕೆ ನೀಡಿದ್ದರು. ಆದರೂ ಬಹಳಷ್ಟು ಮಂದಿ ವಿನಾಕಾರಣ ಸಂಚರಿಸುವುದನ್ನು ಬಿಟ್ಟಿರಲಿಲ್ಲ. ಗುರುವಾರ ಅಂತಹ 154 ವಾಹನಗಳನ್ನು ಮುಟ್ಟುಗೋಲು ಹಾಕಿ ಖಡಕ್ ಸಂದೇಶ ರವಾನಿಸಲಾಗಿದೆ.

ಲಾಕ್‌ಡೌನ್ ಉಲ್ಲಂಘನೆ: 154 ವಾಹನ ಮುಟ್ಟುಗೋಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಯೆನೆಪೊಯ ಆಸ್ಪತ್ರೆಯಿಂದ ದೂರವಾಣಿ ಮೂಲಕ ವೈದ್ಯಕೀಯ ಸೇವೆ ಆರಂಭ

ಮಂಗಳೂರು, ಎ.1: ನಾಗರಿಕರು ಸುರಕ್ಷತೆ ಹಾಗೂ ಆರೋಗ್ಯ ಖಚಿತಪಡಿಸಿಕೊಳ್ಳಲು ದೂರವಾಣಿ ಮೂಲಕ ವೈದ್ಯಕೀಯ ಸೇವೆ ನೀಡಲು ದೇರಳಕಟ್ಟೆಯ ಯೆನೆಪೊಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮುಂದೆ ಬಂದಿದೆ. ಇದರಿಂದ ಆಸ್ಪತ್ರೆಗೆ ಅನಗತ್ಯವಾಗಿ ಬರುವ ರೋಗಿಗಳು ಮತ್ತು ಅವರ ಸಹಾಯಕರ ಪ್ರಯಾಣ ತಪ್ಪಿಸುವ ಉದ್ದೇಶದಿಂದಲೇ ಈ ವಿನೂತನ ಸೇವೆಯನ್ನು ಆರಂಭಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವವರಿಗೆ ದೂರವಾಣಿ ಮೂಲಕ ಆರಂಭಿಕ ಸಮಾಲೋಚನೆ ನೀಡಲು ವೈದ್ಯಕೀಯ ತಂಡ ಸಜ್ಜುಗೊಂಡಿದೆ. ಲಾಕ್‌ಡೌನ್ ಜಾರಿಗೊಳಿಸಿರುವ ಸಂದಿಗ್ಧ ಸ್ಥಿತಿಯಲ್ಲಿ ಪ್ರತಿಯೊಬ್ಬರು ಮನೆಯಲ್ಲಿ ಇರುವುದು ಸುರಕ್ಷಿತ. ರೋಗಿಗಳು ಸಲಹೆ ಪಡೆದುಕೊಳ್ಳಬೇಕು.

ಯೆನೆಪೊಯ ಆಸ್ಪತ್ರೆಯಿಂದ ದೂರವಾಣಿ ಮೂಲಕ ವೈದ್ಯಕೀಯ ಸೇವೆ ಆರಂಭ Read More »

ಕರಾವಳಿ

ಇಂದಿನಿಂದಲೇ ಎರಡು ತಿಂಗಳ ಪಡಿತರ ವಿತರಣೆ

ಬೆಂಗಳೂರು, ಎ.1: ದೇಶಾದ್ಯಂತ ಕೊರೋನ ಸೋಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ಇರುವುದರಿಂದ ಎಪ್ರಿಲ್ ಮತ್ತು ಮೇ ಎರಡೂ ತಿಂಗಳ ಪಡಿತರವನ್ನು ವಿತರಣೆಯಾಗಲಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು  ಸಚಿವ ಕೆ .ಗೋಪಾಲಯ್ಯ ಹೇಳಿದ್ದಾರೆ. ಎಪ್ರಿಲ್ ಮತ್ತು ಮೇ ತಿಂಗಳ ಪಡಿತರವನ್ನು ಎ.1ರಿಂದಲೆ ವಿತರಣೆಯಾಗಲಿದೆ. ಎಪ್ರಿಲ್ 10ರ ಒಳಗೆ ರಾಜ್ಯದ ಪಡಿತರ ವಿತರಣೆ ಪೂರ್ಣಗೊಳಿಸುವ ಗುರಿ‌ ಇದೆ ಎಂದರು. ಕಡುಬಡವರ ಅಂತ್ಯೋದಯ ಕಾರ್ಡು ದಾರರಿಗೆ ಎರಡು ತಿಂಗಳ 70 ಕೆಜಿ ಅಕ್ಕಿ ದೊರೆಯಲಿದೆ. ಬಿಪಿಎಲ್ ಕಾರ್ಡುದಾರರಿಗೆ ಪ್ರತಿ

ಇಂದಿನಿಂದಲೇ ಎರಡು ತಿಂಗಳ ಪಡಿತರ ವಿತರಣೆ Read More »

ಕರಾವಳಿ, ಕರ್ನಾಟಕ

ಅಮೆರಿಕಾದಲ್ಲಿ ಒಂದೇ ದಿನ 865ಕ್ಕೂ ಅಧಿಕ ಬಲಿ: ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ

ಅಮೆರಿಕ, ಎ.1: ಕೊರೋನ ವೈರಸ್ ಸಾಂಕ್ರಾಮಿಕ ರೋಗಕ್ಕೆ ಅಮೆರಿಕದಲ್ಲಿ ಕಳೆದ 24 ಗಂಟೆಗಳಲ್ಲಿ 865ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ. ಈ ಕುರಿತು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾನಿಲಯ ಮಾಹಿತಿ ರಿಲೀಸ್ ಮಾಡಿದ್ದು, ಸಾವಿನ ಸಂಖ್ಯೆ 3,890 ಕ್ಕೆ ಏರಿದೆ. ಕೊರೋನ ಕೇಂದ್ರ ಬಿಂದುವಾದ ಚೀನಾದಲ್ಲಿ ಈವರೆಗೆ 3,305ಮಂದಿ ಮೃತಪಟ್ಟಿದ್ದು, ಅಮೆರಿಕಾದಲ್ಲಿ ಚೀನಾಕ್ಕಿಂತಲೂ ಹೆಚ್ಚು ಸಾವು ಸಂಭವಿಸಿದೆ. ಈಗಾಗಲೇ ವಿಶ್ವದಲ್ಲೇ ಅತ್ಯಧಿಕ ಎಂದರೆ 1,88,578 ಮಂದಿಗೆ ಅಮೆರಿಕಾದಲ್ಲಿ ಸೋಂಕು ದೃಢಪಟ್ಟಿದೆ. ಇನ್ನೆರಡು ವಾರದಲ್ಲಿ ಅಮೆರಿಕಾದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗುಡಾಯಿಸಲಿದೆ ಎನ್ನಲಾಗಿದೆ.

ಅಮೆರಿಕಾದಲ್ಲಿ ಒಂದೇ ದಿನ 865ಕ್ಕೂ ಅಧಿಕ ಬಲಿ: ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿ ಬಲಿ

ಉಳ್ಳಾಲ, ಎ.1: ಡೆಂಗ್ಯು ಜ್ವರಕ್ಕೆ ತುತ್ತಾದ ಉಳ್ಳಾಲ ಉಳಿಯ ನಿವಾಸಿ ವಿದ್ಯಾರ್ಥಿನಿ ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಕಿನ್ಯಾ ಮೀನಾದಿ ಸರಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಉಳ್ಳಾಲ ಉಳಿಯ ನಿವಾಸಿ ಟೈಟಸ್ ಡಿಸೋಜ ಎಂಬವರ ಪುತ್ರಿ ಸ್ಟೆನಿಟಾ ಡಿಸೋಜ(15) ಮೃತ ವಿದ್ಯಾರ್ಥಿನಿ. ತೊಕ್ಕೊಟ್ಟು ಸಂತ ಸೆಬೆಸ್ತಿಯನ್ನರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದ ಈಕೆ ಮಾ. 16 ಕ್ಕೆ ಅಸೌಖ್ಯಕ್ಕೆ ಒಳಗಾಗಿದ್ದಳು. ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಆಕೆ ಹೆಚ್ಚಿನ

ಮಂಗಳೂರು: ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ. ಸೇರಿ ರಾಜ್ಯದ 4 ಜಿಲ್ಲೆಗಳು ಕೊರೋನ ‘ರೆಡ್ ಝೋನ್’ ಆಗಿ ಘೋಷಣೆ

ಬೆಂಗಳೂರು, ಎ.1: ಕೊರೋನ ವೈರಸ್ ನಿಂದ ತತ್ತರಿಸಿರುವ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳನ್ನು ರೆಡ್ ಝೋನ್ ಎಂದು ರಾಜ್ಯ ಸರಕಾರ ಘೋಷಣೆ ಮಾಡಿದೆ. ಅಲ್ಲದೆ ಮೈಸೂರು, ಉತ್ತರ ಕನ್ನಡ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ರಾಜ್ಯ ಸರ್ಕಾರ ರೆಡ್ ಝೋನ್ ಎಂದು ಘೋಷಣೆ ಮಾಡಿದೆ. ಕೊರೋನ ಸೋಂಕನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ರಾಜ್ಯ ಸರ್ಕಾರ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದೆ. ರೆಡ್ ಝೋನ್ ಘೋಷಣೆಯಾಗಿರುವ ನಗರ ಹಾಗೂ ಜಿಲ್ಲೆಗಳ ಮೇಲೆ ಹೆಚ್ಚಿನ

ದ.ಕ. ಸೇರಿ ರಾಜ್ಯದ 4 ಜಿಲ್ಲೆಗಳು ಕೊರೋನ ‘ರೆಡ್ ಝೋನ್’ ಆಗಿ ಘೋಷಣೆ Read More »

ಕರಾವಳಿ, ಕರ್ನಾಟಕ

ನಾಳೆಯಿಂದ ದ.ಕ. ಜಿಲ್ಲೆಯಲ್ಲಿ7ರಿಂದ 12ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ   ಅಮಂಗಳೂರು, ಮಾ. 31: ದ.ಕ. ಜಿಲ್ಲೆಯ ಜನರಿಗೆ ಎಲ್ಲ  ಅಗತ್ಯ ವಸ್ತುಗಳು ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಲಭ್ಯವಾಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.   ಎರಡು ದಿನಗಳ ಸಂಪೂರ್ಣ ಬಂದ್ ಬಳಿಕ ಮಂಗಳವಾರದಂದು ದ.ಕ. ಜಿಲ್ಲೆಯಲ್ಲಿ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಬುಧವಾರದ ಬಳಿಕ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ತನಕ ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಇನ್ನು

ನಾಳೆಯಿಂದ ದ.ಕ. ಜಿಲ್ಲೆಯಲ್ಲಿ7ರಿಂದ 12ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ Read More »

ಕರಾವಳಿ
Scroll to Top