Keerthana

ದ.ಕ.ದಲ್ಲಿ ಮತ್ತೊಂದು ಕೊರೋನ ಪಾಸಿಟಿವ್: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ

ಮಂಗಳೂರು, ಮಾ 31: ದ.ಕ. ಜಿಲ್ಲೆಯಲ್ಲಿ ಮತ್ತೊಂದು  ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8ಕ್ಕೇರಿದೆ. ದುಬೈನಿಂದ ಮಾ.18 ರಂದು ಭಾರತಕ್ಕೆ ಹಿಂತಿರುಗಿದ್ದ ಸುಳ್ಯ ಮೂಲದ 34 ವರ್ಷದ ವ್ಯಕ್ತಿಯಲ್ಲಿ ಕೊರೋನ ಸೋಂಕು ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಐಸೊಲೇಶನ್ ವಾರ್ಡ್ ನಲ್ಲಿ ಇರಿಸಲಾಗಿತ್ತು. ಈತನ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದ್ದು ಮಂಗಳವಾರ ಬೆಳಗ್ಗೆ ಕೊರೋನ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಆತನನ್ನು ಇಂದು ಮಂಗಳೂರಿನ ವೆನ್ಲಾಕ್ […]

ದ.ಕ.ದಲ್ಲಿ ಮತ್ತೊಂದು ಕೊರೋನ ಪಾಸಿಟಿವ್: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್

ಆರೋಗ್ಯವಂತರೆಲ್ಲಾ ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ: ರಾಜ್ಯ ಆರೋಗ್ಯ ಇಲಾಖೆ ಸಲಹೆ

ಬೆಂಗಳೂರು, ಮಾ.31: ಕೊರೋನ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಮಾಸ್ಕ್ ಧರಿಸುವಂತೆ ಅನೇಕರು ಸಾರ್ವಜನಿಕರಿಗೆ ಒತ್ತಾಯ ಹೇರಲಾಗುತ್ತಿದೆ. ಆದರೆ ಎಲ್ಲರೂ ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ. ಯಾರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಅವರಷ್ಟೇ ಮಾಸ್ಕ್ ಧರಿಸಿದರೆ ಸಾಕು ಎಂಬುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಈ ಕುರಿತಂತೆ ಸೂಚನೆ ಹೊರಡಿಸಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ರಾಜ್ಯದ ಅನೇಕ ಅಂಗಡಿ, ಶಾಪ್ ಸೇರಿದಂತೆ ಇತರೆಡೆ ಮಾಸ್ಕ್ ಧರಿಸುವಂತೆ ಜನರಿಗೆ ಒತ್ತಡ

ಆರೋಗ್ಯವಂತರೆಲ್ಲಾ ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ: ರಾಜ್ಯ ಆರೋಗ್ಯ ಇಲಾಖೆ ಸಲಹೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೆಸಿಸಿ ಟ್ರಸ್ಟ್‌ನಿಂದ ವಾಟ್ಸ್‌ಆ್ಯಪ್ ಮೂಲಕ ಟೆಲಿ ಮೆಡಿಸಿನ್ ಸೇವೆ

ಮಂಗಳೂರು, ಮಾ.28: ವ್ಯಾಪಕವಾಗಿ ಹರಡುವ COVID-19 ಸೋಂಕು ಮೂರನೇ ಹಂತಕ್ಕೆ ತಲುಪುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾಗಿರುವುದರಿಂದ ಜನರಿಗೆ ಎಂದಿನಂತೆ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಲು ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಕೆಸಿಸಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆನ್ಲೈನ್ ಚಿಕಿತ್ಸಾ ಸೇವೆ ಆರಂಭಿಸಿದೆ. ಕನ್ನಡ, ಹಿಂದಿ, ಇಂಗ್ಲಿಷ್, ಮಲಯಾಳಂ, ಗುಜರಾತಿ ಸಹಿತ ಎಲ್ಲಾ ಸ್ಥಳೀಯ ಭಾಷೆಯ ಜನರಿಗೆ ಈ ಸೇವೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು, ಟ್ರಸ್ಟ್‌ನ ಸುಮಾರು 14 ವಿಭಾಗಗಳ ವೈದ್ಯರುಗಳು ಈ ಸೇವೆಯಲ್ಲಿ ಲಭ್ಯವಿರಲಿದ್ದಾರೆ ಎಂದು

ಮಂಗಳೂರು: ಕೆಸಿಸಿ ಟ್ರಸ್ಟ್‌ನಿಂದ ವಾಟ್ಸ್‌ಆ್ಯಪ್ ಮೂಲಕ ಟೆಲಿ ಮೆಡಿಸಿನ್ ಸೇವೆ Read More »

ಕರಾವಳಿ, ಕರ್ನಾಟಕ

Breaking News ಕಾಸರಗೋಡು: ಶುಕ್ರವಾರ ಒಂದೇ ದಿನ 34 ಮಂದಿಗೆ ಕೊರೋನ ಸೋಂಕು ದೃಢ

ಕಾಸರಗೋಡು, ಮಾ.27: ಕೊರೋನ ವೈರಸ್ ಕೇರಳದ್ಯಾದಂತ ಭಾರೀ ಆತಂಕ ಸೃಷ್ಟಿಸುತ್ತಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ 34 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಕಾಸರಗೋಡು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 81ಕ್ಕೇರಿದೆ. ಕೇರಳದಲ್ಲಿ ಇಂದು ಒಟ್ಟು 39 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರಲ್ಲಿ 34 ಮಂದಿಯೂ ಕಾಸರಗೋಡು ಜಿಲ್ಲೆಯವರಾಗಿದ್ದಾರೆ. ಇದರಿಂದ ಜಿಲ್ಲೆಯ ಜನರು ಭಾರೀ ಆತಂಕಗೊಳಗಾಗಿದ್ದಾರೆ.

Breaking News ಕಾಸರಗೋಡು: ಶುಕ್ರವಾರ ಒಂದೇ ದಿನ 34 ಮಂದಿಗೆ ಕೊರೋನ ಸೋಂಕು ದೃಢ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಕೊರೋನ ಸೋಂಕು ದೃಢ

ಲಂಡನ್, ಮಾ.27: ಕೊರೋನ ವೈರಸ್ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ. ಕಳೆದ 24 ಗಂಟೆಗಳಿಂದ ನಾನು ಕೊರೋನ ರೋಗಲಕ್ಷಣಗಳನ್ನು ಎದುರಿಸುತ್ತಿದ್ದೆ. ಈಗ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೋನ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ನಾನು ಸ್ವಯಂ ನಿಯಂತ್ರಣ ವಿಧಿಸಿಕೊಳ್ಳುತ್ತಿದ್ದೇನೆ. ಆದರೆ ಸರಕಾರದ ಕೆಲಸಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ. ಮಾ.25ರಂದು ಬ್ರಿಟನ್‌ನ ರಾಜವಂಶಸ್ಥ ಪ್ರಿನ್ಸ್ ಚಾರ್ಲ್ಸ್‌ಗೂ ಕೊರೋನ

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಕೊರೋನ ಸೋಂಕು ದೃಢ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಾವಣಗೆರೆಯ ಯುವಕನಲ್ಲಿ ಕೊರೋನ ಸೋಂಕು ದೃಢ

ರಾಜ್ಯದಲ್ಲಿ 63ಕ್ಕೇರಿದ ಸೋಂಕಿತರ ಸಂಖ್ಯೆ ದಾವಣಗೆರೆ, ಮಾ.27: ಜಿಲ್ಲೆಯ ವ್ಯಕ್ತಿಯೋರ್ವನಿಗೆ ಕೊರೋನ ಸೋಂಕು ತಗಲಿರುವುದು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದ್ದಾರೆ. ಇದರೊಂದಿಗೆ ಇಂದು ರಾಜ್ಯದಲ್ಲಿ ಎಂಟನೇ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63ಕ್ಕೇರಿದೆ. ಫ್ರಾನ್ಸ್‌ನಿಂದ ಮಾ. 17ರಿಂದ ಹೊರಟು ಅಬುಧಾಬಿ ಮೂಲಕ ಬೆಂಗಳೂರಿಗೆ ಬಂದಿದ್ದ 24 ಯುವಕ ಮಾರ್ಚ್ 18 ರಂದು ದಾವಣಗೆರೆಗೆ ಆಗಮಿಸಿದ್ದರು. ಮಾರ್ಚ್ 25ರಂದು ಕೆಮ್ಮು, ಜ್ವರದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈತನ ಪರೀಕ್ಷಾ

ದಾವಣಗೆರೆಯ ಯುವಕನಲ್ಲಿ ಕೊರೋನ ಸೋಂಕು ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ; ಕೊರೋನ ಹರಡುವ ಭೀತಿ: ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ, ಮಾ.27: ಕೊರೋನ ವೈರಸ್ ಆತಂಕದಿಂದ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಬೆಟ್ಟಿನಲ್ಲಿ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸ್ಥಳೀಯ ನಿವಾಸಿ ಸದಾಶಿವ ಶೆಟ್ಟಿ (55)ಎಂದು ಗುರುತಿಸಲಾಗಿದೆ. ಕೊರೋನ ವೈರಸ್ ಹರಡುತ್ತಿರುವ ಬಗ್ಗೆ ಚಿಂತೆಗೀಡಾಗಿದ್ದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಮಾ.26ರ ರಾತ್ರಿ ಮನೆಯ ಗೋಡೆ ಮೇಲೆ ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೆಟ್ರೋಲ್ ಬಂಕೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಕಳೆದ ಎರಡು ದಿನಗಳ ಹಿಂದೆಯೂ

ಬಂಟ್ವಾಳ; ಕೊರೋನ ಹರಡುವ ಭೀತಿ: ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಬಂಟ್ವಾಳದ 10 ತಿಂಗಳ ಮಗುವಿಗೆ ಕೊರೋನ ಸೋಂಕು ದೃಢ

ಬಂಟ್ವಾಳ, ಮಾ 27: ಇಲ್ಲಿನ ಸಜಿಪನಡು ಗ್ರಾಮದ 10 ತಿಂಗಳ ಮಗುವಿನಲ್ಲಿ ಕೊರೋನ ಸೋಂಕು ಪತ್ತೆಯಾಗಿದ್ದು, ಸ್ಥಳೀಯರು ಆತಂಕಿತರಾಗಿದ್ದಾರೆ. ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಗುವನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಮಗುವಿನಲ್ಲಿ ಶಂಕಿತ ಕೊರೋನ ಸೋಂಕು ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಮಗುವಿನ ಗಂಟಲು ದ್ರವವನ್ನು ಬುಧವಾರ ಪರೀಕ್ಷೆ ರವಾನಿಸಲಾಗಿತ್ತು. ಗುರುವಾರ ಬಂದ ವರದಿಯಲ್ಲಿ ಕೊರೋನ ಪಾಸಿಟಿವ್ ಬಂದಿತ್ತು. ಆದರೆ ಈ ಮಗುವಿನ ಕುಟುಂಬ ಕೊರೋನ ಪೀಡಿತ ದೇಶಗಳಿಗೆ ಪ್ರಯಾಣ ಬೆಳೆಸಿರಲಿಲ್ಲ. ಮಗುವನ್ನು

ಬಂಟ್ವಾಳದ 10 ತಿಂಗಳ ಮಗುವಿಗೆ ಕೊರೋನ ಸೋಂಕು ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಸ್ನಾನಕ್ಕೆಂದು ಹೋದ ಯುವಕ ನೀರುಪಾಲು

ಬಂಟ್ವಾಳ, ಮಾ.27: ಸ್ನಾನ ಮಾಡಲೆಂದು ಸ್ನೇಹಿತರೊಂದಿಗೆ ಹೋಗಿದ್ದ ಯುವಕ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಮಾಣಿಯಲ್ಲಿ ನಡೆದಿದೆ. ಮೃತ ಯುವಕನನ್ನು ಪಾಲ್ಕೆ ನಿವಾಸಿ ರಹೀಂ (29) ಎಂದು ಗುರುತಿಸಲಾಗಿದೆ. ನೇತ್ರಾವತಿ ನದಿಯ ದಡಕ್ಕೆ ಸ್ನಾನ ಮಾಡಲೆಂದು ಸ್ನೇಹಿತರೊಂದಿಗೆ ರಹೀಂ ತೆರಳಿದ್ದು ಮೂವರು ಸ್ನೇಹಿತರು ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ರಹೀಂ ಕೂಡಾ ನೀರಿಗೆ ಇಳಿದಿದ್ದು ನೀರಿನಲ್ಲಿ ಮುಳುಗಿ ಕಾಪಾಡುವಂತೆ ಕೂಗಿದ್ದಾರೆ. ಆದರೆ ಉಳಿದ ಸ್ನೇಹಿತರು ಯಾರಿಗೂ ಆಳವಾದ ನೀರಿನ ಈಜಲು ತಿಳಿಯದ ಕಾರಣದಿಂದಾಗಿ ಅವರನ್ನು ಉಳಿಸಲಾಗಲಿಲ್ಲ.

ಬಂಟ್ವಾಳ: ಸ್ನಾನಕ್ಕೆಂದು ಹೋದ ಯುವಕ ನೀರುಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಮುದಾಯ ಹಂತಕ್ಕೆ ಕಾಲಿಟ್ಟಿತೇ ಕೊರೋನ ವೈರಸ್: ಅನುಮಾನ ಮೂಡಿಸುತ್ತಿದೆ ಮೈಸೂರು, ಬೆಂಗಳೂರು ಪ್ರಕರಣ

ಬೆಂಗಳೂರು, ಮಾ.27: ರಾಜ್ಯದಲ್ಲಿ ಕೊರೋನ ವೈರಸ್ 3ನೇ ಹಂತಕ್ಕೆ ಕಾಲಿಟ್ಟಿದೆಯೇ ಎಂಬ ಅನುಮಾನ ಕಾಡತೊಡಗಿದೆ. ಯಾವುದೇ ವಿದೇಶ ಪ್ರಯಾಣದ ಇತಿಹಾಸವಿಲ್ಲದ ಹಾಗೂ ವಿದೇಶದಿಂದ ಬಂದವರ ಸಂಪರ್ಕ ಸಾಧಿಸದ ಇಬ್ಬರು ವ್ಯಕ್ತಿಗಳಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು ಹೀಗಾಗಿ ಕರ್ನಾಟಕದಲ್ಲಿ ಸಮುದಾಯಕ್ಕೆ ಹಂತಕ್ಕೆ ತಲುಪಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಮಾ.26ರಂದು ಒಂದೇ ದಿನ ರಾಜ್ಯದಲ್ಲಿ 4 ಪ್ರಕರಣಗಳು ಪತ್ತೆಯಾಗಿದೆ. ಆದರೆ ಇದಕ್ಕಿಂತಲೂ ಅತಂಕಕಾರಿ ಸಂಗತಿ ಇಬ್ಬರಿಗೂ ಟ್ರಾವೆಲ್ ಹಿಸ್ಟರಿ ಹಾಗೂ ಟ್ರಾವೆಲ್ ಹಿಸ್ಟರಿ ಉಳ್ಳವರ ಸಂಪರ್ಕವಿಲ್ಲದೆ ಕೊರೋನಾ ಸೋಂಕು

ಸಮುದಾಯ ಹಂತಕ್ಕೆ ಕಾಲಿಟ್ಟಿತೇ ಕೊರೋನ ವೈರಸ್: ಅನುಮಾನ ಮೂಡಿಸುತ್ತಿದೆ ಮೈಸೂರು, ಬೆಂಗಳೂರು ಪ್ರಕರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top