Keerthana

ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್‌ಗೆ ಕೊರೋನ ಪಾಸಿಟಿವ್

ಮುಂಬೈ, ಮಾ.20: ಬಾಲಿವುಡ್‌ನ ಪ್ರಸಿದ್ದ ಗಾಯಕಿ ಕನ್ನಿಕಾ ಕಪೂರ್ ಇತ್ತೀಚೆಗೆ ಇಂಗ್ಲೆಂಡಿನಿಂದ ಮರಳಿದ್ದು, ಅವರಿಗೆ ಕೊರೋನ ಸೋಂಕು ದೃಢಪಟ್ಟಿರುವ ಬಗ್ಗೆ ವರದಿಯಾಗಿದೆ. ಸದ್ಯ ಗಾಯಕಿ ಕನ್ನಿಕಾರನ್ನು ಲಕ್ನೋದ ಕಿಂಗ್ ಜಾರ್ಜ್ ಮೆಡಿಕಲ್ ವಿಶ್ವವಿದ್ಯಾನಿಲಯದ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಿಕಾ ಅವರು ಮ.15ರಂದು ಲಂಡನ್‌ನಿಂದ ಲಕ್ನೋಗೆ ಮರಳಿದ್ದರು ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನದವರೆಗಿನ ಮಾಹಿತಿ ಪ್ರಕಾರ, ಭಾರತದಲ್ಲಿ 194 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ 20 ಜನರು ಗುಣಮುಖರಾಗಿದ್ದು, 170 ಜನರು ಚಿಕಿತ್ಸೆ ಪಡೆಯುತ್ತಿದ್ಧಾರೆ. ನಾಲ್ವರು […]

ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್‌ಗೆ ಕೊರೋನ ಪಾಸಿಟಿವ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನ ಭೀತಿ ಹಿನ್ನೆಲೆ: ಮನಪಾ ವ್ಯಾಪ್ತಿಯ ಎಲ್ಲ ಸೆಲೂನ್, ಬ್ಯೂಟಿ ಪಾರ್ಲರ್ ನಾಳೆಯಿಂದ ಬಂದ್

ಮಂಗಳೂರು, ಮಾ.20: ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಮಾರಣಾಂತಿಕ ಸೋಂಕು ವೈರಾಣು ರಾಜ್ಯದಲ್ಲಿಯೂ ಕಾಣಿಸಿಕೊಂಡಿರುವುದರಿಂದ ಈ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯೊಳಗೆ ಕಾರ್ಯಚರಿಸುವ ಎಲ್ಲಾ ಸೆಲೂನ್, ಬ್ಯೂಟಿ ಪಾರ್ಲರ್‌ಗಳನ್ನು ಮಾ.21ರಿಂದ ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ಮುಚ್ಚುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ತಿಳಿಸಿದ್ದಾರೆ. ಈ ಕುರಿತು ಎಲ್ಲಾ ಸೆಲೂನ್, ಬ್ಯೂಟಿ ಪಾರ್ಲರ್ ಅಸೋಸಿಯೇಷನ್‌ಗಳು ಗಮನಹರಿಸಿ ಮಾ.21ರಿಂದ ಸೆಲೂನ್, ಬ್ಯೂಟಿ ಪಾರ್ಲರ್‌ಗಳನ್ನು ಮುಚ್ಚಿ ಪಾಲಿಕೆಯೊಂದಿಗೆ ಸಹಕರಿಸಬೇಕೆಂದು

ಕೊರೋನ ಭೀತಿ ಹಿನ್ನೆಲೆ: ಮನಪಾ ವ್ಯಾಪ್ತಿಯ ಎಲ್ಲ ಸೆಲೂನ್, ಬ್ಯೂಟಿ ಪಾರ್ಲರ್ ನಾಳೆಯಿಂದ ಬಂದ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿಯಲ್ಲಿ 50 ಅಡಿ ಕಂದಕಕ್ಕೆ ಬಿದ್ದ ಕಾರು: ಅಪಾಯದಿಂದ ಪಾರು

ಉಪ್ಪಿನಂಗಡಿ, ಮಾ.20: ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದ ಘಟನೆ ಇಲ್ಲಿಗೆ ಸಮೀಪ ಪಂಜಾಳದಲ್ಲಿ ಶುಕ್ರವಾರ ನಡೆದಿದೆ. ಬೆಂಗಳೂರಿನಿಂದ ಉಡುಪಿ ಬರುತ್ತಿದ್ದ ಕಾರು ಉಪ್ಪಿನಂಗಡಿಯ ಪಂಜಾಳ ಸಮೀಪ ತಲುಪುತ್ತಿದ್ದಂತೆ 50 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಉಡುಪಿಯ ಶಿರ್ವ ಮೂಲದ ನವೀನ್ ಮತ್ತವರ ಕುಟುಂಬ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದರು. ನವೀನ್, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಕಾರಿನಲ್ಲಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇವರನ್ನು

ಉಪ್ಪಿನಂಗಡಿಯಲ್ಲಿ 50 ಅಡಿ ಕಂದಕಕ್ಕೆ ಬಿದ್ದ ಕಾರು: ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಧ್ಯಪ್ರದೇಶ ಮುಖ್ಯಮಂತ್ರಿ ಕಾಮಲ್ ನಾಥ್ ರಾಜೀನಾಮೆ

ಹೊಸದಿಲ್ಲಿ, ಮಾ.20: ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವ ಮುನ್ನವೇ ಮಧ್ಯಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಕಾಮಲ್ ನಾಥ್ ಶುಕ್ರವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರಿಂದ 15ತಿಂಗಳ ಕಾಂಗ್ರೆಸ್ ನೇತೃತ್ವದ ಸರಕಾರ ಪತನದ ಅಂಚಿನಲ್ಲಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಮಲ್ ನಾಥ್ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಬಂಡಾಯ ಎದ್ದು 22 ಶಾಸಕರು ರಾಜೀನಾಮೆ ನೀಡಿದ್ದರಿಂದ ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಏತನ್ಮಧ್ಯೆ ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ ಕಮಲ್ ನಾಥ್ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ ಬಜೆಟ್

ಮಧ್ಯಪ್ರದೇಶ ಮುಖ್ಯಮಂತ್ರಿ ಕಾಮಲ್ ನಾಥ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊನೆಗು ನೇಣುಕಂಬವೇರಿದ ನಿರ್ಭಯಾ ಅಪರಾಧಿಗಳು

ಹೊಸದಿಲ್ಲಿ, ಮಾ.20: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳನ್ನು ಇಂದು ಮುಂಜಾವ ಗಲ್ಲಿಗೇರಿಸಲಾಯಿತು. ಅಕ್ಷಯ್ ಠಾಕೂರ್ (31), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಮುಖೇಶ್ ಸಿಂಗ್ (32) ಮರಣದಂಡನೆಗೆ ಕೊರಳೊಡ್ಡುವವರೆಗೂ ಕಾನೂನು ಹೋರಾಟ ನಡೆಸಿ ವಿಫಲರಾಗಿದ್ದರು. ಗಲ್ಲುಶಿಕ್ಷೆಗೆ ಎರಡು ಗಂಟೆ ಬಾಕಿ ಇರುವಾಗ ಸುಪ್ರೀಂಕೋರ್ಟ್ ಕದತಟ್ಟಿದ್ದು, ಅರ್ಜಿಯನ್ನು ವಜಾಗೊಳಿಸಿತ್ತು. ನಾಲ್ವರು ದೋಷಿಗಳು ಕೊನೆಯ ಯಾವ ಆಸೆಯನ್ನೂ ವ್ಯಕ್ತಪಡಿಸಿಲ್ಲವಾಗಿತ್ತು ಎಂದು ಜೈಲು ಅಧಿಕಾರಿ ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ನಸುಕಿನಲ್ಲಿ ಅರ್ಜಿ ವಜಾಗೊಳಿಸಿದ ನಂತರ

ಕೊನೆಗು ನೇಣುಕಂಬವೇರಿದ ನಿರ್ಭಯಾ ಅಪರಾಧಿಗಳು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನ ವೈರಸ್ ಹಿನ್ನೆಲೆ ಮಸೀದಿಗಳಲ್ಲಿ ಶುಕ್ರವಾರದ ನಮಾಝ್ ಸಮಯ ಮಾರ್ಪಾಡು

ಮಂಗಳೂರು, ಮಾ.20: ಕೊರೋನ ವೈರಸ್ ಭೀತಿಯಿಂದ ಸರಕಾರವು ನಿರ್ಬಂಧಕಾಜ್ಞೆ ವಿಧಿಸಿದ ಹಿನ್ನೆಲೆಯಲ್ಲಿ ಕರಾವಳಿಯ ಮಸೀದಿಗಳಲ್ಲಿ ಶುಕ್ರವಾರದ ನಮಾಝ್‌ನ ಸಮಯದಲ್ಲಿ ಮಾರ್ಪಾಡು ಮಾಡಲಾಗಿದೆ. ಆರೋಗ್ಯ ಸುರಕ್ಷತೆಯ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ಹೊರವಲಯದ ಕೆಲವು ಮಸೀದಿಗಳಲ್ಲಿ ಶುಕ್ರವಾರದ ಜುಮಾ ನಮಾಝ್‌ನ ಸಮಯದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಶುಕ್ರವಾರ ನಡೆಯುವ ನಮಾಜಝ್ 15 ನಿಮಿಷದಲ್ಲಿ ಮುಗಿಸಲು ಉಭಯ ಜಿಲ್ಲೆಯ ಖಾಝಿಗಳು ಈಗಾಗಲೆ ಮನವಿ ಮಾಡಿದ್ದಾರೆ. ಮಂಗಳೂರಿನ ಮಸೀದಿಗಳಲ್ಲಿ ಲುಹರ್ ಅಝಾನ್ ಮುಳಗಿದ ತಕ್ಷಣವೇ ಖುತುಬಾ 12:55ಕ್ಕೆ

ಕೊರೋನ ವೈರಸ್ ಹಿನ್ನೆಲೆ ಮಸೀದಿಗಳಲ್ಲಿ ಶುಕ್ರವಾರದ ನಮಾಝ್ ಸಮಯ ಮಾರ್ಪಾಡು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನ ಸೋಂಕಿಗೆ ಮತ್ತೊಂದು ಬಲಿ: ದೇಶದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಜೈಪುರ, ಮಾ.20: ಕೊರೋನ ವೈರಸ್‌ ಸೋಂಕಿಗೆ ದೇಶದಲ್ಲಿ ಮತ್ತೊಂದು ಬಲಿಯಾಗಿದೆ. ಆ ಮೂಲಕ ಕೋವಿಡ್‌–19ಗೆ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 5 ಕ್ಕೆ ಏರಿದೆ. ಭಾರತದ ಪ್ರವಾಸಕ್ಕೆ ಬಂದಿದ್ದ ಇಟಲಿಯ 69 ವರ್ಷದ ವ್ಯಕ್ತಿ ಕೊರೋನ ಸೋಂಕಿನಿಂದ ಮೃತಪಟ್ಟಿರುವುದು ದೃಢವಾಗಿದೆ. ರಾಜಸ್ತಾನದ ಜೈಪುರದಲ್ಲಿ ಕೊರೋನ ಸೋಂಕಿತ ಇಟಲಿಯ ನಾಗರಿಕ ಸಾವನ್ನಪ್ಪಿದ್ದಾನೆ.

ಕೊರೋನ ಸೋಂಕಿಗೆ ಮತ್ತೊಂದು ಬಲಿ: ದೇಶದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 13ಕ್ಕೇರಿಕೆ

ಬೆಂಗಳೂರು, ಮಾ.18: ಅಮೆರಿಕ ಮತ್ತು ಸ್ಪೇನ್ ಪ್ರವಾಸ ಮಾಡಿದ್ದ ಇಬ್ಬರು ಬೆಂಗಳೂರು ಮೂಲದವರಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತನ್ನ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ’ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಒಬ್ಬರು 56 ವಯಸ್ಸು, ಅಮೆರಿಕ ಪ್ರವಾಸದಿಂದ ಮಾರ್ಚ್ 6ರಂದು ಹಿಂದಿರುಗಿದ್ದರು. ಇನ್ನೊಬ್ಬರು 25 ವರ್ಷದ ಮಹಿಳೆಯು, ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದು, ಇಬ್ಬರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಹಾಗೂ ಇವರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಲಾಗಿದ್ದು, ಅವರೆಲ್ಲರನ್ನೂ ಕಡ್ಡಾಯವಾಗಿ

ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 13ಕ್ಕೇರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮಾ.31ರವರೆಗೆ ಲಾಕ್‌ಡೌನ್

ಬೆಂಗಳೂರು, ಮಾ.18: ರಾಜ್ಯದಲ್ಲಿ ಕೋವಿಡ್-19 ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಕರ್ನಾಟಕ ಲಾಕ್ ಡೌನ್ ಮುಂದುವರಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಮಾರ್ಚ್ 14ರಿಂದ ಶಾಲಾ ಕಾಲೇಜು, ಮಾಲ್‌ಗಳು, ಚಿತ್ರಮಂದಿರ ಹೀಗೆ ಜನಸಂದಣಿ ಸೇರುವ ಸಮಾರಂಭಗಳನ್ನು ನಿರ್ಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಆದೇಶವನ್ನು ಮಾರ್ಚ್ 31ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ ಎಂದು ವರದಿಯಾಗಿದೆ. ಇದರೊಂದಿಗೆ ಸೋಂಕು ತಡೆಗೆ

ರಾಜ್ಯದಲ್ಲಿ ಮಾ.31ರವರೆಗೆ ಲಾಕ್‌ಡೌನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುಬೈಯಿಂದ ಮಂಗಳೂರಿಗೆ ಬರುವ ಪ್ರಯಾಣಿಕರಿಗೆ ಮೂರು ವಿಧದ ತಪಾಸಣೆ: ಅಪರ ಜಿಲ್ಲಾಧಿಕಾರಿ

ಮಂಗಳೂರು, ಮಾ.18: ದುಬೈನಿಂದ ಮಂಗಳೂರಿಗೆ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ 3 ವಿಧದಲ್ಲಿ ತಪಾಸಣೆಗೊಳಪಡಿಸಲು ತೀರ್ಮಾನಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ. ಸೋಂಕು ಲಕ್ಷಣಗಳು ಹೊಂದಿರುವ 60 ವರ್ಷದೊಳಗಿನವರು ‘ಎ’ ಕೆಟಗರಿಯಾಗಿದ್ದು, ಅವರನ್ನು ವಿಮಾನ ನಿಲ್ದಾಣದಲ್ಲಿ ನಿಗದಿ ಮಾಡಲಾಗಿರುವ ಆ್ಯಂಬುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಗೆ ಕರೆ ತಂದು ಆಸ್ಪತ್ರೆಗೆ ದಾಖಲಿಸಿ ತಪಾಸಣೆ ಮಾಡಲಾಗುತ್ತದೆ. 60 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ಸೋಂಕು ಲಕ್ಷಣ ಹೊಂದಿರುವವರನ್ನು ‘ಬಿ’ ಕೆಟಗರಿಗೊಳಪಡುತ್ತಾರೆ. ಇಎಸ್‌ಐ ಆಸ್ಪತ್ರೆಯಲ್ಲಿ ಕೊರೋನ ಸೋಂಕಿತರ ನಿಗಾ ವಹಿಸಲು 80

ದುಬೈಯಿಂದ ಮಂಗಳೂರಿಗೆ ಬರುವ ಪ್ರಯಾಣಿಕರಿಗೆ ಮೂರು ವಿಧದ ತಪಾಸಣೆ: ಅಪರ ಜಿಲ್ಲಾಧಿಕಾರಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top