Keerthana

ಶಂಕಿತ ಕೊರೋನ ಪುತ್ತೂರಿನ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಗೆ

ಮಂಗಳೂರು, ಮಾ.18: ಪುತ್ತೂರಿನ ವ್ಯಕ್ತಿಯೋರ್ವನಲ್ಲಿ ಕೊರೋನ ವೈರಸ್ ಇರುವ ಶಂಕೆ ಉಂಟಾಗಿದ್ದು ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಶಂಕಿತ ವ್ಯಕ್ತಿಯ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಮಂಗಳವಾರ ರಾತ್ರಿಯವರೆಗೆ 456 ಜನರ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗಿದ್ದು, 7 ಜನರ ಮೇಲೆ ನಿಗಾ ವಹಿಸಲಾಗಿದೆ. 241 ಜನರಿಗೆ ಮನೆಯಲ್ಲಿ ನಿಗಾ ಇರಿಸಲಾಗಿದೆ. ಒಟ್ಟು 14 ಜನರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 10 ಜನರ ವರದಿ ಬಂದಿದ್ದು, ಯಾರಲ್ಲೂ ಕೊರೋನ ದೃಢಪಟ್ಟಿಲ್ಲ.

ಶಂಕಿತ ಕೊರೋನ ಪುತ್ತೂರಿನ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಕೊರೋನ ಸೋಂಕು ಪತ್ತೆಯಾದ ಯುವಕನ ರೋಟ್ ಮ್ಯಾಪ್ ಬಿಡುಗಡೆ

ಕಾಸರಗೋಡು, ಮಾ.17: ನಿನ್ನೆ ಕಾಸರಗೋಡಿನಲ್ಲಿ ಕೊರೋನ ಸೋಂಕು ಪಾಸಿಟಿವ್ ಆದ ಯುವಕನ ಓಡಾಡಿದ ಸ್ಥಳದ ಬಗ್ಗೆ ಜಿಲ್ಲಾಡಳಿತ ರೂಟ್ ಮ್ಯಾಪ್ ತಯಾರಿಸಿದ್ದು, ಯುವಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಳಿದು ಮನೆ ತನಕ ಬಂದಿರುವ ಮಾಹಿತಿಯನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿದೆ. ಮಾರ್ಚ್ 14ರಂದು ಮುಂಜಾನೆ 5:20ಕ್ಕೆ ಸೋಂಕಿತ ಯುವಕ ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದು, ಅಲ್ಲಿಂದ 7 ಗಂಟೆ ಸುಮಾರಿಗೆ ಯುವಕನನ್ನು ಕರೆದೊಯ್ಯಲೂ ಕಾಸರಗೋಡಿನಿಂದ ತೆರಳಿದ ಸಂಬಂಧಿಕರು ನಿಲ್ದಾಣಕ್ಕೆ ತಲುಪಿದ್ದಾರೆ. ಬಳಿಕ ಖಾಸಗಿ ಕಾರಿನಲ್ಲಿ ಅಲ್ಲಿಂದ

ಕಾಸರಗೋಡು: ಕೊರೋನ ಸೋಂಕು ಪತ್ತೆಯಾದ ಯುವಕನ ರೋಟ್ ಮ್ಯಾಪ್ ಬಿಡುಗಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನ ಶಂಕೆ: ಮನೆಯಿಂದ ಹೊರಬಾರದ ಕೇಂದ್ರ ಸಚಿವ ವಿ.ಮುರಳೀಧರನ್

ಹೊಸದಿಲ್ಲಿ, ಮಾ.17: ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ.ಮುರಳೀಧರನ್ ತಮಗೂ ಕೊರೋನ ವೈರಸ್ ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದಿಲ್ಲಿಯ ತಮ್ಮ ಅಧಿಕೃತ ನಿವಾಸದಲ್ಲಿಯೇ ಸ್ವಯಂ ನಿರ್ಬಂಧ ವಿಧಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಸಚಿವ ಸಭೆಯಲ್ಲಿ ಭಾಗವಹಿಸಿದ್ದ ವೈದ್ಯರೊಬ್ಬರಿಗೆ ಕೊರೋನ ವೈರಸ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಚಿವರಿಗೂ ಕೊರೋನ ವೈರಸ್ ಭೀತಿ ಉಂಟಾಗಿದ್ದು, ಸ್ವಯಂ ಪ್ರೇರಿತವಾಗಿ ದಿಗ್ಬಂಧನ ವಿಧಿಸಿಕೊಂಡಿದ್ದಾರೆ. ಮುರಳೀಧರನ್ ಅವರು ಮಾರ್ಚ್ 14ರಂದು ಕೇರಳದ ತಿರುವನಂತಪುರಂನಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸೋಂಕು

ಕೊರೋನ ಶಂಕೆ: ಮನೆಯಿಂದ ಹೊರಬಾರದ ಕೇಂದ್ರ ಸಚಿವ ವಿ.ಮುರಳೀಧರನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿಯಿಂದ ಅವಿಶ್ವಾಸ ನಿರ್ಣಯ ಹಿನ್ನೆಲೆ: ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಕೃಷ್ಣ ರೆಡ್ಡಿ ರಾಜೀನಾಮೆ

ಬೆಂಗಳೂರು, ಮಾ.17: ವಿಧಾನಸಭೆ ಉಪಾಧ್ಯಕ್ಷ ಕೃಷ್ಣಾ ರೆಡ್ಡಿಯವರ ವಿರುದ್ಧ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಳ್ಳಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಜುಗರಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಲಲು ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‌ನ ಕೆ.ಆರ್.ರಮೇಶ್ ಕುಮಾರ್ ವಿಧಾನಸಭೆ ಸಭಾಧ್ಯಕ್ಷರಾಗಿ ಜೆಡಿಎಸ್‌ನ ಕೃಷ್ಣಾ ರೆಡ್ಡಿ ಉಪಾಧ್ಯಕ್ಷರಾಗಿಯೂ ನೇಮಕವಾಗಿದ್ದರು. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತವೂ ಉಪಾಧ್ಯಕ್ಷ ಸ್ಥಾನದಲ್ಲಿ ಬದಲಾವಣೆಯಾಗಿರಲಿಲ್ಲ. ಕೃಷ್ಣಾ ರೆಡ್ಡಿ ತಾವೇ ಉಪಾಧ್ಯಕ್ಷರಾಗಿ ಮುಂದುವರಿದಿದ್ದರು. ಕೃಷ್ಣಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ವಿಚಾರವನ್ನು

ಬಿಜೆಪಿಯಿಂದ ಅವಿಶ್ವಾಸ ನಿರ್ಣಯ ಹಿನ್ನೆಲೆ: ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಕೃಷ್ಣ ರೆಡ್ಡಿ ರಾಜೀನಾಮೆ Read More »

ಕರ್ನಾಟಕ

ಮಂಗಳೂರಿನಲ್ಲಿ ಶೀಘ್ರ ಟೆಸ್ಟಿಂಗ್ ಲ್ಯಾಬ್: ಸಚಿವ ಶ್ರೀರಾಮುಲು

ಮಂಗಳೂರು, ಮಾ.17: ಕೊರೋನ ವೈರಸ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗಂಟಲಿನ ದ್ರವದ ಮಾದರಿ ಪರೀಕ್ಷೆಗಾಗಿ ಟೆಸ್ಟಿಂಗ್ ಲ್ಯಾಬ್ ತೆರೆಯಲು ಇಲಾಖೆ ನಿರ್ಧರಿಸಿದ್ದು, ಮಂಗಳೂರಿನಲ್ಲಿ ಶೀಘ್ರದಲ್ಲಿ ಲ್ಯಾಬ್ ತೆರೆಯಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರಿನಲ್ಲಿ ಕೊರೋನ ಶಂಕಿತರ ಗಂಟಲು ದ್ರವ ಪರೀಕ್ಷಾ ಲ್ಯಾಬ್ ತೆರೆಯಲು ಸರಕಾರ ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಒಂದು

ಮಂಗಳೂರಿನಲ್ಲಿ ಶೀಘ್ರ ಟೆಸ್ಟಿಂಗ್ ಲ್ಯಾಬ್: ಸಚಿವ ಶ್ರೀರಾಮುಲು Read More »

ಕರಾವಳಿ

ಹಿರಿಯ ಸಾಹಿತಿ, ಶತಾಯುಷಿ ಡಾ.ಪಾಟೀಲ ಪುಟ್ಟಪ್ಪ ನಿಧನ

ಹುಬ್ಬಳ್ಳಿ, ಮಾ.16: ಕನ್ನಡ ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ‘ಪಾಪು’ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಶತಾಯುಷಿ ಡಾ. ಪಾಟೀಲ ಪುಟ್ಟಪ್ಪ(101) ಸೋಮವಾರ ರಾತ್ರಿ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಪಾಟೀಲ ಪುಟ್ಟಪ್ಪ ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕರ್ನಾಟಕದ ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡದ ಅಸ್ಮಿತೆಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪಾಪು ಹಲವಾರು ಕನ್ನಡ ಪರ ಹೋರಾಟಗಳ ನೇತೃತ್ವವನ್ನು ವಹಿಸಿ ಈ ಭಾಗದಲ್ಲಿ ಕನ್ನಡದ ಸಾಕ್ಷಿ ಪ್ರಜ್ಞೆಯಾಗಿ ಎಲ್ಲರಿಗೂ ಮಾದರಿಯಾಗಿದ್ದರು. ಕನ್ನಡಿಗರು

ಹಿರಿಯ ಸಾಹಿತಿ, ಶತಾಯುಷಿ ಡಾ.ಪಾಟೀಲ ಪುಟ್ಟಪ್ಪ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 8ಕ್ಕೇರಿಕೆ

ಬೆಂಗಳೂರು, ಮಾ.16: ವಿಶ್ವದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ ಏರುತ್ತಿರುವ ನಡುವೆಯೇ ರಾಜ್ಯದಲ್ಲಿಯೂ ಇದೀಗ ಕೊರೋನ ಸೋಂಕಿತರ ಸಂಖ್ಯೆ 8ಕ್ಕೇರಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಇಂದು ಕೂಡಾ ಒಂದು ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ 8ಕ್ಕೆ ಏರಿದಂತಾಗಿದೆ. ಕಲಬುರಗಿಯಲ್ಲಿ ಶನಿವಾರ ಮತ್ತೊಂದು ಪ್ರಕರಣ ಪತ್ತೆಯಾಗುವ ಮೂಲಕ ಕೊರೋನ ಸೋಂಕಿತರ ಸಂಖ್ಯೆ 7ಕ್ಕೆ ಏರಿತ್ತು. ಇದೀಗ 8ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ

ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 8ಕ್ಕೇರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಮೆಟ್ಟಿಲೇರಿದ ಬಿಜೆಪಿ

ಹೊಸದಿಲ್ಲಿ, ಮಾ.16: ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್ ಎನ್.ಪಿ. ಪ್ರಜಾಪತಿ ಸೋಮವಾರ ಬಜೆಟ್ ಅಧಿವೇಶನದ ಕಲಾಪವನ್ನು ಮಾರ್ಚ್ 26ರವರೆಗೆ ಮುಂದೂಡಿದ್ದು, ಮುಖ್ಯಮಂತ್ರಿ ಕಮಲ್ ನಾಥ್ ಬಹುಮತ ಸಾಬೀತು ಪರೀಕ್ಷೆಯಿಂದ ತಾತ್ಕಾಲಿಕವಾಗಿ ನಿರಾಳತೆ ಪಡೆದಂತಾಗಿತ್ತು. ಈ ಮಧ್ಯೆ ಬಿಜೆಪಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ ಎರಡು ದಿನದೊಳಗೆ ಮುಖ್ಯಮಂತ್ರಿ ಕಮಲ್ ನಾಥ್ ಬಹುಮತ ಸಾಬೀತುಪಡಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಬಿಜೆಪಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಮಂಗಳವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ. ರಾಜ್ಯಪಾಲರ ಆದೇಶ ಧಿಕ್ಕರಿಸಿ ಬಹುಮತ ಸಾಬೀತಿಗೆ ಅವಕಾಶ

ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಮೆಟ್ಟಿಲೇರಿದ ಬಿಜೆಪಿ Read More »

ರಾಷ್ಟ್ರೀಯ ನ್ಯೂಸ್

ಕೊರೋನ ಭೀತಿ: ಕಲಬುರಗಿ ಜಿಲ್ಲೆಯಲ್ಲಿ 1 ತಿಂಗಳು ಅಘೋಷಿತ ಬಂದ್

ಕಲಬುರಗಿ, ಮಾ.16: ಮಾರಣಾಂತಿಕ ಕೊರೋನ ಸೋಂಕು ನಿಯಂತ್ರಣಕ್ಕೆ ಕಲಬುರಗಿ ಜಿಲ್ಲೆಯಲ್ಲಿ ಒಂದು ತಿಂಗಳು ಕಾಲ ಅಘೋಷಿತ ಬಂದ್ ಮಾಡುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಹೇಳಿದ್ದಾರೆ. ಕೊರೋನ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ನೇರ ಸಂಪರ್ಕದಲ್ಲಿದ್ದ ನಾಲ್ವರಲ್ಲಿ ಸೋಂಕು ಲಕ್ಷಣಗಳು ಕಾಣಿಸಿಕೊಂಡಿದ್ದು, ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ನಾಳೆ ವರದಿ ಬರುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾತ್ರ ಹೊರಗಡೆ ಬರುವಂತೆ ಮಾಡಿರುವ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದಾರೆ. ಇದೇ ರೀತಿ

ಕೊರೋನ ಭೀತಿ: ಕಲಬುರಗಿ ಜಿಲ್ಲೆಯಲ್ಲಿ 1 ತಿಂಗಳು ಅಘೋಷಿತ ಬಂದ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿರ್ಭಯಾ ಅಪರಾಧಿಗಳಿಗೆ ಮಾ.20ರಂದು ಗಲ್ಲು ಖಚಿತಗೊಳಿಸಿದ ಸುಪ್ರೀಂ

ಹೊಸದಿಲ್ಲಿ, ಮಾ.16: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಯಿಂದ ಪಾರಾಗಲು ಹುಡುಕುತ್ತಿರುವ ಎಲ್ಲಾ ದಾರಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ಬಂದ್ ಮಾಡಿದ್ದು, ಅಪರಾಧಿಗಳಿಗೆ ಮಾರ್ಚ್ 20ಕ್ಕೆ ನೇಣಿಗೇರುವುದು ಬಹುತೇಕ ಖಚಿತವಾಗಿದೆ. ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬರಾದ ಮುಕೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಅಲ್ಲದೆ ಅಪರಾಧಿಗಳ ಎಲ್ಲಾ ಕಾನೂನು ಅವಕಾಶಗಳು ಮುಗಿದಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ನಿರ್ಭಯಾ ಅಪರಾಧಿಗಳಿಗೆ ಮಾ.20ರಂದು ಗಲ್ಲು ಖಚಿತಗೊಳಿಸಿದ ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top