Keerthana

ಕಲಬುರಗಿ: ಮೃತಪಟ್ಟ ವೃದ್ದನ ಕುಟುಂಬದವರಿಗೆ ಕೊರೋನ ಪಾಸಿಟಿವ್

ಕಲಬುರಗಿ, ಮಾ.16: ಕೊರೋನ ವೈರಸ್‌ನಿಂದ ಮೃತಪಟ್ಟಿದ್ದ ಕಲಬುರಗಿಯ ಮುಹಮ್ಮದ್ ಹುಸೈನ್ ಸಿದ್ದೀಕಿ (76) ಅವರ ಕುಟುಂಬದ ಮತ್ತೋರ್ವ ಸದಸ್ಯನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7ಕ್ಕೆ ಏರಿದೆ. ಈ ಪೈಕಿ ಕಲಬುರಗಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಉಳಿದವರಿಗೆ ವಿಶೇಷ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನ ಸೋಂಕಿನಿಂದ ಕಲಬುರಗಿಯಲ್ಲಿ ಮೃತಪಟ್ಟ ವೃದ್ಧನ ಕುಟುಂಬ ಸದಸ್ಯರಲ್ಲಿ ವೈರಸ್ ಇರುವುದು ಈಗಷ್ಟೇ ನಮಗೂ ತಿಳಿದು ಬಂದಿದೆ ಎಂದು ಆರೋಗ್ಯ ಕುಟುಂಬ ಇಲಾಖೆಯ ನಿರ್ದೇಶಕ ಡಾ. ಓಂ […]

ಕಲಬುರಗಿ: ಮೃತಪಟ್ಟ ವೃದ್ದನ ಕುಟುಂಬದವರಿಗೆ ಕೊರೋನ ಪಾಸಿಟಿವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನಂತ್ ನಾಗ್: ಭದ್ರತೆ ಪಡೆಯ ಗುಂಡಿಗೆ ಬಲಿಯಾದ ನಾಲ್ವರು ಉಗ್ರರು

ಜಮ್ಮು, ಮಾ.15: ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾನುವಾರ ಬೆಳಿಗ್ಗೆ ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಲಷ್ಕರ್-ಎ-ತೊಯ್ಬೆ (ಎಲ್‌ಇಟಿ) ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ. ಉಗ್ರರು ಅಡಗಿರುವ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ, ಜಮ್ಮು- ಕಾಶ್ಮೀರ ಪೊಲೀಸ್, ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ) ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಇಂದು ಮುಂಜಾನೆ ಅನಂತ್‌ನಾಗ್‌ನ ವಾಟರಿಗಮ್‌ನಲ್ಲಿ ಆರಂಭಿಸಿದ್ದವು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಶೋಧ

ಅನಂತ್ ನಾಗ್: ಭದ್ರತೆ ಪಡೆಯ ಗುಂಡಿಗೆ ಬಲಿಯಾದ ನಾಲ್ವರು ಉಗ್ರರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಮ್ಮ ಆದೇಶವನ್ನು ಉಲ್ಲಂಘಿಸಿದ ಬಿಎಸ್‌ವೈ: 4-5ಸಾವಿರ ಜನರ ಸೇರಿದ ಮದುವೆಯಲ್ಲಿ ಭಾಗವಹಿಸಿದ ಸಿಎಂ

ಬೆಳಗಾವಿ, ಮಾ.15: ಮಾರಣಾಂತಿಕ ಕೊರೋನ ವೈರಸ್ ಕುರಿತು ಸರಕಾರದ ನಿರ್ದೇಶನ ಉಲ್ಲಂಘಿಸಿ ಮೇಲ್ಮನೆಯ ಸರಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಪುತ್ರಿ ವಿವಾಹ ನೆರವೇರಿದ್ದು, ಮದುವೆಯಲ್ಲಿ ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಂಡು ವದು ವರರನ್ನು ಆಶಿರ್ವದಿಸಿದ ಕುತೂಹಲಕರ ಸಂಗತಿ ಬೆಳಕಿಗೆ ಬಂದಿದೆ. ಬೆಳಗಾವಿಯ ಶಗುನ ಗಾರ್ಡನ್‌ನಲ್ಲಿ ಕವಟಗಿಮಠ ಪುತ್ರಿಯ ವಿವಾಹ ನೆರವೇರಿತು. ಯಡಿಯೂರಪ್ಪ ಮದುವೆಯಲ್ಲಿ ಪಾಲ್ಗೊಂಡರು. ಮುಖ್ಯಮಂತ್ರಿ ಹಿಂದೆ ಅವರ ಭದ್ರತೆ, ಶಿಷ್ಟಾಚಾರ ಸಿಬ್ಬಂದಿ ಸಹ ಪಾಲ್ಗೊಂಡಿತ್ತು. ಮದುವೆಯಲ್ಲಿ ಜನ ಜಂಗುಳಿಯೇ ನೆರೆದಿತ್ತು. ಸುಮಾರು

ತಮ್ಮ ಆದೇಶವನ್ನು ಉಲ್ಲಂಘಿಸಿದ ಬಿಎಸ್‌ವೈ: 4-5ಸಾವಿರ ಜನರ ಸೇರಿದ ಮದುವೆಯಲ್ಲಿ ಭಾಗವಹಿಸಿದ ಸಿಎಂ Read More »

ಕರ್ನಾಟಕ

ಕೊರೋನ ಮುನ್ನೆಚ್ಚರಿಕೆ: 7, 8, 9 ತರಗತಿಗಳ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಮಾ.15: ಕೊರೋನ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವುದಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ 7ರಿಂದ 9ನೇ ತರಗತಿಯವರೆಗಿನ ಪರೀಕ್ಷೆಯನ್ನು ಮುಂದೂಡಿದೆ. ಒಂದು ವಾರ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳು, ಸಭೆ, ಸಮಾರಂಭಗಳು, ಮಾಲ್, ಥಿಯೇಟರ್‌ಗಳಿಗೆ ಬಂದ್ ಮಾಡಿ ಆದೇಶ ಹೊರಡಿಸಿದ್ದ ರಾಜ್ಯ ಸರಕಾರ ಮುನ್ನೆಚ್ಚರಿಕೆ ಕ್ರಮವಾಗಿ 1ರಿಂದ 6ನೇ ತರಗತಿಯವರೆಗಿನ ವಾರ್ಷಿಕ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿತ್ತು. ಇದೀಗ 7ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 31ರವರೆಗೆ

ಕೊರೋನ ಮುನ್ನೆಚ್ಚರಿಕೆ: 7, 8, 9 ತರಗತಿಗಳ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ; ಓರ್ವ ಮೃತ್ಯು, ಇಬ್ಬರು ಗಂಭೀರ

ಕಾಸರಗೋಡು, ಮಾ.15: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್‌ಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಪೆರಿಯ ಮೂನಂಕಡವು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ತಮಿಳುನಾಡು ಪೊಳ್ಳಾಚ್ಚಿಯ ಮಣಿ (43) ಎಂದು ಗುರುತಿಸಲಾಗಿದೆ. ಚಾಲಕ ಶಕ್ತಿ ವೇಲು ಮತ್ತು ಕುಮಾರ್ ಎಂಬವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುಚಿ ಬಿದ್ದ ಲಾರಿಯಡಿಯಲ್ಲಿ ಸಿಲುಕಿದ್ದ ಮೂವರನ್ನು ಗಂಟೆಗಳ ಶ್ರಮದ ಬಳಿಕ ಅಗ್ನಿಶಾಮಕ ಮತ್ತು ಪೊಲೀಸರು ಹೊರತೆಗೆದರೂ ಮಣಿ

ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ; ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜೋಧ್‌ಪುರ: ಭೀಕರ ರಸ್ತೆ ಅಪಘಾತಕ್ಕೆ 11 ಮಂದಿ ಬಲಿ

ಜೋಧ್‌ಪುರ, ಮಾ.14: ಜೀಪ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿಗಳು ಸೇರಿ 11 ಮಂದಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ರಾಜಸ್ತಾನದ ಜೋಧ್ಪುರ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಮೃತರಲ್ಲಿ 6 ಮಹಿಳೆಯರು, 1 ಮಗು ಹಾಗೂ 4 ಮಂದಿ ಪುರುಷರು ಸೇರಿದ್ದು ಇದರಲ್ಲಿ ಕಳೆದ ಫೆಬ್ರವರಿ 27ರಂದು ಮದುವೆಯಾದ ನವ ಜೋಡಿಗಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಬಲೋತ್ರ ಗ್ರಾಮದ ನಿವಾಸಿಗಳು ರಾಮ ದೇವೋರ್ ಪ್ರದೇಶದಲ್ಲಿರುವ ರಾಮದೇವೋ ದೇವರಿಗೆ ಪೂಜೆ ಸಲ್ಲಿಸಲು

ಜೋಧ್‌ಪುರ: ಭೀಕರ ರಸ್ತೆ ಅಪಘಾತಕ್ಕೆ 11 ಮಂದಿ ಬಲಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ಮಾಲ್, ಸಿನಿಮಾ ಮಂದಿರಗಳು ಬಂದ್

ಮಂಗಳೂರು, ಮಾ. 14: ರಾಜ್ಯ ಸರಕಾರ ಆದೇಶದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮಾಲ್, ಸಿನಿಮಾ ಮಂದಿರಗಳನ್ನು ಶನಿವಾರದಿಂದ ಬಂದ್ ಮಾಡಲಾಗಿದೆ. ಸೂಪರ್ ಮಾರ್ಕೆಟ್, ಅತ್ತಾವರದ ಬಿಗ್ ಬಝಾರ್ ತೆರೆದಿವೆ. ಸ್ಟೇಟ್ ಬ್ಯಾಂಕ್ ಬಳಿಯ ಮೀನು ಮಾರುಕಟ್ಟೆ, ಧಕ್ಕೆಯಲ್ಲಿ ಸಾಧಾರಣ ಜನಸಂದಣಿ ಜತೆ ಮಾರಾಟ ವಹಿವಾಟು ನಡೆಯುತ್ತಿದೆ. ಕೇಂದ್ರ ಮಾರುಕಟ್ಟೆಯಲ್ಲಿ ಜನಸಂದಣಿ ಸಾಧಾರಣವಾಗಿದ್ದು, ವ್ಯಾಪಾರ ನಡೆಯುತ್ತಿದೆ. ಫಿಝಾ ಮಾಲ್,  ಸಿಟಿಸೆಂಟರ್ ಮಾಲ್ ಗಳು, ಸಿನಿಮಾ ಮಂದಿರಗಳ ಪ್ರವೇಶ ದ್ವಾರಗಳನ್ನು ಬಂದ್ ಮಾಡಲಾಗಿದೆ. ಹಾಗಿದ್ದರೂ ಹಾಸ್ಟೆಲ್ ಗಳಲ್ಲಿರುವ ಹೊರ ರಾಜ್ಯಗಳ ವಿದ್ಯಾರ್ಥಿಗಳು,

ಮಂಗಳೂರಿನಲ್ಲಿ ಮಾಲ್, ಸಿನಿಮಾ ಮಂದಿರಗಳು ಬಂದ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಮೂವರು ಶಂಕಿತರಲ್ಲೂ ಕೊರೋನ ಇಲ್ಲ

ಉಡುಪಿ, ಮಾ.14: ಶಂಕಿತ ಕೊರೋನ ವೈರಸ್ ಸೋಂಕಿಗಾಗಿ ಮಣಿಪಾಲದ ಕೆಎಂಸಿ ಹಾಗೂ ಉಡುಪಿಯ ಜಿಲ್ಲಾಸ್ಪತ್ರೆಗಳಿಗೆ ದಾಖಲಾದ ಮೂವರಲ್ಲೂ ಕೊರೋನಾ ವೈರಸ್ ಪತ್ತೆಯಾಗಿಲ್ಲ ಎಂದು ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ. ಈ ಕುರಿತು ಶುಕ್ರವಾರ ಶಿವಮೊಗ್ಗದ ಪ್ರಯೋಗಾಲಯಗಳಿಗೆ ಕಳುಹಿಸಲಾದ ಮೂವರು ಶಂಕಿತರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಗಳು ಪರೀಕ್ಷೆಯ ವೇಳೆ ವೈರಸ್‌ಗೆ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಇಂದು ತನ್ನ ಕೈಸೇರಿದ ವರದಿಗಳು ತಿಳಿಸಿವೆ ಎಂದವರು ಹೇಳಿದರು. ಮಣಿಪಾಲ ಕೆಎಂಸಿ

ಉಡುಪಿ: ಮೂವರು ಶಂಕಿತರಲ್ಲೂ ಕೊರೋನ ಇಲ್ಲ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನ: ಕೇಂದ್ರದಿಂದ ಪ್ರತ್ಯೇಕ ಬಜೆಟ್ ಮಂಡನೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಮಾ.14: ಮಾರಣಾಂತಿಕ ಕೊರೋನ ವೈರಸ್ ದೇಶದಲ್ಲಿ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪ್ರತ್ಯೇಕ ಬಜೆಟ್ ಮಂಡನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ಧಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಪ್ರತ್ಯೇಕ ಬಜೆಟ್‌ಮಂಡಿಸಬೇಕು. ಎಲ್ಲಾ ರಾಜ್ಯಗಳಿಗೆ ಅದನ್ನು ಅನುಷ್ಠಾನ ಮಾಡಬೇಕು. ಅಮೆರಿಕ ಅಧ್ಯಕ್ಷ ಪ್ರತ್ಯೇಕ ಬಜೆಟ್ ಮಂಡಿಸಿದ್ದಾರೆ. ಇಲ್ಲೂ ಅದೇ ರೀತಿಯಾಗಿ ಮಂಡಿಸಬೇಕು. ಕೊರೊನಾ ವಿಚಾರದಲ್ಲಿ ಕೇಂದ್ರ ಸರಕಾರ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಕೊರೊನಾ ನಿಯಂತ್ರಣಕ್ಕೆ ಕ್ರಮ ತೆಗೆದುಕೊಂಡಿಲ್ಲ ಎಂದರು. ಕೊರೋನ ವೈರಸ್ ರಾಜ್ಯದಲ್ಲಿ

ಕೊರೋನ: ಕೇಂದ್ರದಿಂದ ಪ್ರತ್ಯೇಕ ಬಜೆಟ್ ಮಂಡನೆಗೆ ಸಿದ್ದರಾಮಯ್ಯ ಆಗ್ರಹ Read More »

ಕರ್ನಾಟಕ

ಸರಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಸಿಂಧೂ ಸೂಚನೆ

ಮಂಗಳೂರು, ಮಾ.14: ಕರೋನ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸಾರ್ವಜನಿಕ ಸ್ಥಳಗಳಲ್ಲಿ ಕೆಲವು ನಿರ್ಬಂಧಗಳನ್ನು ಹೇರಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ನಿರ್ದೇಶಿಸಿದ್ದಾರೆ. ಮಾಲ್ ಗಳು, ಚಿತ್ರಮಂದಿರ, ನಾಟಕ, ರಂಗಮಂದಿರ, ಪಬ್, ನೈಟ್ ಕ್ಲಬ್ ಗಳು, ವಸ್ತುಪ್ರದರ್ಶನ, ಸಂಗೀತ ಕಾರ್ಯಕ್ರಮಗಳು, ಕ್ಲಬ್ ಗಳು, ಮ್ಯಾರಥಾನ್, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಭಾಗವಹಿಸುವ ಕ್ರೀಡಾಕೂಟಗಳು, ಹೆಚ್ಚು ಜನರು ಭಾಗವಹಿಸುವ ಮದುವೆಗಳನ್ನು ರಾಜ್ಯ ಸರಕಾರ ನಿರ್ಬಂಧಿಸಿದೆ. ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವಂತೆ ಆಯೋಜಕರು ಗಮನಹರಿಸಬೇಕು. ಹೆಚ್ಚು

ಸರಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಸಿಂಧೂ ಸೂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top