Keerthana

ವೆನ್ಲಾಕ್‌ನಿಂದ ಪರಾರಿಯಾದ ವ್ಯಕ್ತಿಯಲ್ಲಿ ಕೊರೋನ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಸಿಂಧೂ

ಮಂಗಳೂರು, ಮಾ.11: ದುಬೈನಿಂದ ಬಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಪರಾರಿಯಾಗಿದ್ದ ವ್ಯಕ್ತಿಯ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಆತನಲ್ಲಿ ಕೊರೋನ ವೈರಸ್ ದೃಢಪಟ್ಟಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದ್ಧಾರೆ. ಆತ ಪರಾರಿಯಾದ ನಂತರ ಅವರ ಕುಟುಂಬದವರಿಗೆ ಸೂಕ್ತ ತಿಳುವಳಿಕೆ ನೀಡಿ ಚಿಕಿತ್ಸೆ ನೀಡಲಾಗಿತ್ತು ಎಂದು ಅವರು ಹೇಳಿದ್ಧಾರೆ. ದಕ್ಷಿಣ ಕನ್ನಡದಲ್ಲಿ ಯಾವುದೇ ಕೊರೋನ ಪಾಸಿಟಿವ್ ಕಂಡು ಬಂದಿಲ್ಲ. ವಿಮಾನ ನಿಲ್ದಾಣ, ಎನ್‌ಎಂಪಿಟಿಯಲ್ಲಿ ವಿದೇಶಿ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. […]

ವೆನ್ಲಾಕ್‌ನಿಂದ ಪರಾರಿಯಾದ ವ್ಯಕ್ತಿಯಲ್ಲಿ ಕೊರೋನ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಸಿಂಧೂ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಧ್ಯೆಪ್ರದೇಶ ರಾಜಕೀಯ ಹೈಡ್ರಾಮಾ: ಸಿಂಧಿಯಾ ಗುಂಪಿನಲ್ಲಿ ಬಿರುಕು

ಭೋಪಾಲ್, ಮಾ.11: ಜ್ಯೋತಿರಾಧಿತ್ಯ ಸಿಂಧಿಯಾ ರಾಜೀನಾಮೆಯಿಂದಾಗಿ ಕಮಲ್‌ನಾಥ್ ಸರಕಾರ ಅಲ್ಪಮತಕ್ಕೆ ಕುಸಿದಿದ್ದು ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮಾ ನಡೆದಿತ್ತು. ಆದರೆ ಸಿಂಧಿಯಾ ಬಿಜೆಪಿ ಸೇರ್ಪಡೆಗೆ ಅವರ ಗುಂಪಿನಲ್ಲೇ ಅಪಸ್ವರ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ನ 19ಕ್ಕೂ ಹೆಚ್ಚು ಶಾಸಕರು ಮಧ್ಯಪ್ರದೇಶದಿಂದ ಬೆಂಗಳೂರಿಗೆ ಬಂದು ವಾಸ್ತವ್ಯ ಹೂಡಿದ್ದಾರೆ. ನಿನ್ನೆ ಸಿಂಧಿಯಾ ಅವರು ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ವಿಚಾರ ಇದೀಗ ಸಿಂಧಿಯಾ ಕ್ಯಾಂಪ್ ನಲ್ಲಿ ಬಿರುಕಿಗೆ ಕಾರಣವಾಗಿದೆ ಎನ್ನಲಾಗಿದೆ. ಮಧ್ಯಪ್ರದೇಶ ಕಾಂಗ್ರೆಸ್‌ನ ಪ್ರಮುಖ ಮೂಲಗಳ ಪ್ರಕಾರ,

ಮಧ್ಯೆಪ್ರದೇಶ ರಾಜಕೀಯ ಹೈಡ್ರಾಮಾ: ಸಿಂಧಿಯಾ ಗುಂಪಿನಲ್ಲಿ ಬಿರುಕು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಕೊರೋನ ಪೀಡಿತರ 62ಕ್ಕೆ ಏರಿಕೆ

ಹೊಸದಿಲ್ಲಿ, ಮಾ.11: ಭಾರತದಲ್ಲಿ ದಿನೇ ದಿನೇ ಕೊರೋನ ಭೀತಿ ಹೆಚ್ಚಾಗುತ್ತಲೇ ಇದ್ದು, ಮತ್ತೆ 14 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ 8 ಪ್ರಕರಣಗಳು ಕೇರಳದಲ್ಲಿ, ಕರ್ನಾಟಕದಲ್ಲಿ 3 ಹಾಗೂ ಮಹಾರಾಷ್ಟ್ರದ ಪುಣೆಯಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೊರೋನ ಪೀಡಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗಿರುವುದು ಸಹಜವಾಗಿಯೇ ದೇಶದಾದ್ಯಂತ, ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಆತಂಕವನ್ನು ಹುಟ್ಟುಹಾಕಿದೆ. ಮಂಗಳವಾರ 8 ಹೊಸ

ಭಾರತದಲ್ಲಿ ಕೊರೋನ ಪೀಡಿತರ 62ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೌರತ್ವ ಕಾಯ್ದೆ ವಿರೋಧಿಸಿ ನಾಳೆಯಿಂದ ರಾಜ್ಯಾದ್ಯಂತ ಉಪವಾಸ ಸತ್ಯಗ್ರಹ: ಸೆಂಥಿಲ್

ಬೆಂಗಳೂರು, ಮಾ.11: ದೇಶದ ಜನರನ್ನು ಸಂದೇಹಾಸ್ಪದ ನಾಗರಿಕರನ್ನಾಗಿ ಮಾಡಲು ಹೊರಟಿರುವ ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಕಾಯ್ದೆಗಳನ್ನು ವಿರೋಧಿಸಿ ವಿವಿಧ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಮಾ.12ರಂದು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದೆ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಕೇಂದ್ರ ಸರ್ಕಾರದ ನೀತಿಗಳು ಕಷ್ಟಕ್ಕೆ ದೂಡಿದೆ. ಎನ್‌ಆರ್‌ಸಿಗೆ ಎನ್‌ಪಿಆರ್‌ ಕಾಯ್ದೆಯು ಪೂರಕವಾಗಿದೆ. ಎ.15 ರಿಂದ ಜನರ ಗಣತಿ ಆರಂಭಿಸುತ್ತಾರೆ. ಹುಟ್ಟಿದ

ಪೌರತ್ವ ಕಾಯ್ದೆ ವಿರೋಧಿಸಿ ನಾಳೆಯಿಂದ ರಾಜ್ಯಾದ್ಯಂತ ಉಪವಾಸ ಸತ್ಯಗ್ರಹ: ಸೆಂಥಿಲ್ Read More »

ಕರ್ನಾಟಕ

ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಭಾರೀ ಇಳಿಕೆ

ಹೊಸದಿಲ್ಲಿ, ಮಾ.11: ವಿಶ್ವಾದ್ಯಂತ ಕೊರೊನಾ ವೈರಸ್ ಪ್ರಭಾವ, ಸೌದಿ-ರಷ್ಯಾ ತೈಲ ದರ ಸಮರದ ಕಾರಣದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ಭಾರೀ ಕುಸಿತದ ಪರಿಣಾಮದಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳಲ್ಲಿ ಭಾರೀ ಇಳಿಕೆ ಉಂಟಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರದಲ್ಲಿ 2.69 ರೂಪಾಯಿಗಳಷ್ಟು ಇಳಿಕೆಯಾಗಿದ್ದು ಡಿಸೇಲ್ ದರ 2.33 ರೂಪಾಯಿಗಳಷ್ಟು ಇಳಿದಿದೆ. ಬುಧವಾರದಂದು ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 70.29 ಇದ್ದರೆ ಡಿಸೇಲ್ ದರ ಪ್ರತೀ ಲೀಟರ್ ಗೆ 63.01 ರೂಪಾಯಿಗಳಾಗಿತ್ತು.

ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಭಾರೀ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ನಾಲ್ವರಿಗೆ ಕೊರೋನ ದೃಢ

ಬೆಂಗಳೂರು, ಮಾ.10: ಮಹಾಮಾರಿ ಕೊರೋನ ವೈರಸ್‌ಗೆ ರಾಜ್ಯದಲ್ಲಿ ನಾಲ್ಕು ಮಂದಿ ಒಳಗಾಗಿರುವುದಾಗಿ ದೃಢಪಟ್ಟಿದೆ. ಸೋಮವಾರ ಸಂಜೆ ಬೆಂಗಳೂರಿನಲ್ಲಿ ಒಂದು ಪ್ರಕರಣ ಖಚಿತವಾಗಿತ್ತು. ಇದೀಗ ಮತ್ತೆ ಮೂವರಿಗೆ ಈ ಮಾರಣಾಂತಿಕ ಕೊರೋನ ವೈರಸ್ ಖಚಿತವಾಗಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೇರಿದೆ. ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ

ರಾಜ್ಯದಲ್ಲಿ ನಾಲ್ವರಿಗೆ ಕೊರೋನ ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Breaking news ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ಗೆ ಗುಡ್ ಬೈ

ಹೊಸದಿಲ್ಲಿ, ಮಾ.10: ಮಧ್ಯಪ್ರದೇಶ ಕಾಂಗ್ರೆಸ್‌ನ ಪ್ರಭಾವಿ ಯುವ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ಪಕ್ಷದಲ್ಲಿನ ತನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿಂಧಿಯಾ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂ‍ಧಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ. ಹೊಸದಿಲ್ಲಿಯಲ್ಲಿ ಇಂದು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಈ ಅಚ್ಚರಿಯ ಬೆಳವಣಿಗೆ ನಡೆದಿದೆ. ಜ್ಯೋತಿರಾದಿತ್ಯ ಸಿಂಧಿಯಾ ಅವರ

Breaking news ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ಗೆ ಗುಡ್ ಬೈ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ಗೋಲಿಬಾರ್ ಪ್ರಕರಣ: ಹಿಂಸಾಚಾರದಲ್ಲಿ 78 ಪೊಲೀಸರಿಗೆ ಗಾಯ; ಡಿಸಿಪಿ ಅರುಣಾಂಶುಗಿರಿ

ಮಂಗಳೂರು, ಮಾ.9: ಡಿ.19ರಂದು ಮಂಗಳೂರಿನಲ್ಲಿ ನಡೆದ ಗಲಭೆ ಹಾಗೂ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮ್ಯಾಜಿಸ್ಟೀರಿಯಲ್ ವಿಚಾರಣೆಗೆ ಹಾಜರಾದ ನಗರದ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅರುಣಾಂಶುಗಿರಿ ಘಟನೆಯಲ್ಲಿ 78 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಾಯಗಳಾಗಿವೆ ಎಂದು ಹೇಳಿಕೆ ನೀಡಿದ್ದಾರೆ. ವಿಚಾರಣೆಯು ಹಂಪನಕಟ್ಟೆಯ್ಲಲಿರುವ ಮಿನಿ ವಿಧಾನಸೌಧದ ಉಪ ವಿಭಾಗಾಧಿಕಾರಿ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಿತು. ಐಪಿಎಸ್ ಅಧಿಕಾರಿ ಅರುಣಾಂಶುಗಿರಿ ವಿಚಾರಣಾಧಿಕಾರಿ ಎದುರು ಹಾಜರಾಗಿದ್ದು, ಲಿಖಿತ ಹೇಳಿಕೆ ಹಾಗೂ ದಾಖಲೆಗಳನ್ನು ಸಲ್ಲಿಸಿದರು. ನಾನು ಡಿ.19ರಂದು ಪೊಲೀಸ್ ಸಿಬ್ಬಂದಿಯೊಂದಿಗೆ ಕರ್ತವ್ಯದಲ್ಲಿದ್ದೆ.

ಮಂಗಳೂರು ಗೋಲಿಬಾರ್ ಪ್ರಕರಣ: ಹಿಂಸಾಚಾರದಲ್ಲಿ 78 ಪೊಲೀಸರಿಗೆ ಗಾಯ; ಡಿಸಿಪಿ ಅರುಣಾಂಶುಗಿರಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ.ಕ.ದಲ್ಲಿ ಯಾವುದೇ ಕೊರೋನ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಸಿಂಧೂ

ಭಯ ಪಡುವ ಅಗತ್ಯವಿಲ್ಲ ಮಂಗಳೂರು, ಮಾ.9: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿಲ್ಲ. ಜನರು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದರ ಅವರು ಹೊರ ದೇಶದಿಂದ ಆಗಮಿಸಿದ ಪ್ರಯಾಣಿಕನೊಬ್ಬನಲ್ಲಿ ಜ್ವರದ ಲಕ್ಷಣ ಕಂಡುಬಂತು. ಹಾಗಾಗಿ ಸಾರ್ವಜನಿಕ ಆರೋಗ್ಯದ ಹಿತ ದೃಷ್ಠಿಯಿಂದ ಆತನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವು. ಆದರೆ ಆತ ಚಿಕಿತ್ಸೆಗೆ ಯಾವುದೇ ಸಹಕರ ನೀಡಲಿಲ್ಲ. ಇದರ ಬಗ್ಗೆ

ದ.ಕ.ದಲ್ಲಿ ಯಾವುದೇ ಕೊರೋನ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಸಿಂಧೂ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಶಂಕಿತ ಕೊರೊನ ವ್ಯಕ್ತಿ ವೆನ್ಲಾಕ್‌ನಿಂದ ಪರಾರಿ!

ಮಂಗಳೂರು, ಮಾ.9: ಶಂಕಿತ ಕೊರೊನ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ದುಬೈನಿಂದ ಆಗಮಿಸಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ಸೋಮವಾರ ಮಂಗಳೂೂರಿನಲ್ಲಿ ನಡೆದಿದೆ. ದುಬೈನಿಂದ ಬಂದಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ವೇಳೆ ವ್ಯಕ್ತಿಯಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ರವಿವಾರ ರಾತ್ರಿ ನಗರದ ವೆನ್ಲ್ಯಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವಿಶೇಷ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸದ್ಯ ಆತ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಈತ ಉಳ್ಳಾಲದ ವ್ಯಕ್ತಿಯೆಂದು ವರದಿಯಾಗಿದೆ. ಮಂಗಳೂರು ಉತ್ತರ ಪೊಲೀಸ್

ಮಂಗಳೂರು: ಶಂಕಿತ ಕೊರೊನ ವ್ಯಕ್ತಿ ವೆನ್ಲಾಕ್‌ನಿಂದ ಪರಾರಿ! Read More »

ಕರಾವಳಿ
Scroll to Top