Keerthana

ವಿಶ್ವದಾದ್ಯಂತ ಕೊರೋನಗೆ 3,282 ಮಂದಿ ಬಲಿ

ಮಾಸ್ಕೋ, ಮಾ.7: ಡೆಡ್ಲಿ ಕೊರೋನ ವೈರಸ್‌ಗೆ ಜಗತ್ತಿನಾದ್ಯಂತ ಬಲಿಯಾದವರ ಸಂಖ್ಯೆ 3,282ಕ್ಕೆ ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,241 ಹೊಸ ಸೋಂಕಿತರು ಪತ್ತೆಯಾಗಿದ್ದು, 84 ಜನರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಸಾವನ್ನಪ್ಪಿದವರು ಮಾತ್ರವಲ್ಲದೇ ವಿಶ್ವದಾದ್ಯಂತ ಸೋಂಕು ಪೀಡಿತರ ಸಂಖ್ಯೆ 95,333ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 80,565 ಜನರು ಚೀನಾ ಪ್ರಜೆಗಳು ಎಂದು ವಿಶ್ವ ಸಂಸ್ಥೆ ತಿಳಿಸಿದೆ. ಚೀನಾದ ವುಹಾನ್ ಪ್ರಾಂತ್ಯದಲ್ಲಿ 2019ರ ಡಿಸೆಂಬರ್‌ನಲ್ಲಿ ಕಂಡುಬಂದಿದ್ದ ಕೊರೋನ […]

ವಿಶ್ವದಾದ್ಯಂತ ಕೊರೋನಗೆ 3,282 ಮಂದಿ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಿಲ್ಲಿ ಹಿಂಸಾಚಾರ ವರದಿ ಮಾಡಿದ ಮಲಯಾಳಂನ ‘ಮೀಡಿಯಾ ಒನ್’, ‘ಏಷ್ಯಾನೆಟ್’ ಚಾನೆಲ್‌ಗೆ 48 ಗಂಟೆ ನಿಷೇಧ ಹೇರಿದ ಕೇಂದ್ರ ಸರಕಾರ

ಹೊಸದಿಲ್ಲಿ, ಮಾ.7: ಈಶಾನ್ಯ ದಿಲ್ಲಿಯ ಕೋಮುಗಲಭೆಯ ವರದಿ ಪ್ರಸಾರ ಮಾಡಿದ ಆರೋಪದ ಮೇಲೆ ಮಲಯಾಳಂ ಸುದ್ದಿ ವಾಹಿನಿಗಳಾದ ಮೀಡಿಯಾ ಒನ್ ಹಾಗೂ ಏಷ್ಯಾನೆಟ್‌ಗೆ ಎರಡು ದಿನ ಪ್ರಸಾರ ನಿರ್ಬಂಧ ವಿಧಿಸಲಾಗಿದೆ. ಮುಂದಿನ 48 ಗಂಟೆಗಳ ಕಾಲ ಯಾವುದೇ ಪ್ರಸಾರ ಮಾಡದಂತೆ ಮಲಯಾಳಂನ ಈ ಎರಡು ಸುದ್ದಿ ವಾಹಿನಿಗಳ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಬಂಧ ವಿಧಿಸಿದೆ. ಈಶಾನ್ಯ ದಿಲ್ಲಿಯ ಹಿಂಸಾಚಾರವನ್ನು ತಪ್ಪಾಗಿ ವರದಿ ಮಾಡಿದೆ ಎಂಬ ಆರೋಪದ ಮೇಲೆ ಮಲಯಾಳಂ ಸುದ್ದಿ ವಾಹಿನಿಗಳಾದ ಏಷ್ಯಾನೆಟ್

ದಿಲ್ಲಿ ಹಿಂಸಾಚಾರ ವರದಿ ಮಾಡಿದ ಮಲಯಾಳಂನ ‘ಮೀಡಿಯಾ ಒನ್’, ‘ಏಷ್ಯಾನೆಟ್’ ಚಾನೆಲ್‌ಗೆ 48 ಗಂಟೆ ನಿಷೇಧ ಹೇರಿದ ಕೇಂದ್ರ ಸರಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತುಮಕೂರು: ಭೀಕರ ಅಪಘಾತ; 12 ಮಂದಿ ಮೃತ್ಯು

ತುಮಕೂರು, ಮಾ.6: ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಇಲ್ಲಿನ ಕುಣಿಗಲ್ ಸಮೀಪ ನಡೆದಿದೆ. ಮೃತರನ್ನು ಮಂಜುನಾಥ್ (35), ತನುಜ (25), ಗೌರಮ್ಮ (60), ರತ್ನಮ್ಮ (52), ಸುಂದರರಾಜ್ (48), ರಾಜೇಂದ್ರ (27), ಸರಳ (32), ಪ್ರಶನ್ಯಾ (14), ಬೆಂಗಳೂರಿನ ದೊಡ್ಡ ಆಲದಮರ ಮೂಲದ ಲಕ್ಷ್ಮೀಕಾಂತ್ (24), ಸಂದೀಪ (36), ಮಧು (28) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೂ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತುಮಕೂರು: ಭೀಕರ ಅಪಘಾತ; 12 ಮಂದಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು ಹಿಂಸಾಚಾರ, ಗೋಲಿಬಾರ್ ಪ್ರಕರಣ: 21 ಮಂದಿಯ ಜಾಮೀನು ರದ್ದುಗೊಳಿಸಿದ ಸುಪ್ರೀಂ

ಮಂಗಳೂರು, ಮಾ.6: ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ, ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ. ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಪುರಾವೆ ಇದೆ ಎಂದು ರಾಜ್ಯದ ಪರ ವಾದ ಮಂಡಿಸುವ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. ಹೀಗೆ ವಾದ ಮಂಡಿಸುತ್ತಿದ್ದಂತೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾ.ಗವಾಯಿ, ನ್ಯಾ.ಸೂರ್ಯಕಾಂತ್ ಹೈ ಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದರು.

ಮಂಗಳೂರು ಹಿಂಸಾಚಾರ, ಗೋಲಿಬಾರ್ ಪ್ರಕರಣ: 21 ಮಂದಿಯ ಜಾಮೀನು ರದ್ದುಗೊಳಿಸಿದ ಸುಪ್ರೀಂ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೈಂದೂರು: ಬೈಕುಗಳ ಢಿಕ್ಕಿ; ಓರ್ವ ಮೃತ್ಯು

ಕುಂದಾಪುರ, ಮಾ.6: ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟು, ಇನ್ನೊಬ್ಬ ಸವಾರ ಮತ್ತು ಇಬ್ಬರು ಸಹಸವಾರರು ಗಂಭೀರ ಗಾಯಗೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಕೊಲ್ಲೂರು ರಸ್ತೆಯ ಗೋಳಿಹೊಳೆ ಮಸೀದಿ ಸಮೀಪ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಬೈಕ್ ಸವಾರನನ್ನು ಸಾರ್ಕಲ್ಲು ತೊಂಡ್ಳೆ ನಿವಾಸಿ ಸುಧೀರ್ ಗೌಡ(25) ಎಂದು ಗುರುತಿಸಲಾಗಿದೆ. ಸುಧೀರ್ ಗೌಡ ಹಾಗೂ ಆತನ ಸ್ನೇಹಿತ ಸುರೇಂದ್ರ ಗೌಡ ಇಬ್ಬರು ತೊಂಡ್ಳೆಯಿಂದ ಗೋಳಿಹೊಳೆ ಮೂರುಕೈಗೆ ಬೈಕಿನಲ್ಲಿ ಹೋಗಿದ್ದರೆನ್ನಲಾಗಿದೆ. ಇದೇ

ಬೈಂದೂರು: ಬೈಕುಗಳ ಢಿಕ್ಕಿ; ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ: ನದಿಯಲ್ಲಿ ಮುಳುಗಿ ಕಾರ್ಮಿಕ ಮೃತ್ಯು

ಬೆಳ್ತಂಗಡಿ, ಮಾ.6: ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಸುಹಾಸ್ ಎಂದು ಗುರುತಿಸಲಾಗಿದೆ. ಧರ್ಮಸ್ಥಳದ ಶಿಶಿಲ ಸಮೀಪ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯಲು ತೆರಳಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಸಂದೀಪ್ ಗೌಡ ಎಂಬವರಿಗೆ ಸೇರಿದ ಟಿಪ್ಪರ್‌ನಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸಲಾಗುತ್ತಿತ್ತು ಎನ್ನಲಾಗಿದ್ದು, ಟಿಪ್ಪರ್‌ನಲ್ಲಿ ತುಂಬಿಸಲೆಂದು ನದಿಯಿಂದ ಮರಳು ತೆಗೆಯುತ್ತಿದ್ದ ಸಂದರ್ಭ ಸುಹಾಸ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ

ಧರ್ಮಸ್ಥಳ: ನದಿಯಲ್ಲಿ ಮುಳುಗಿ ಕಾರ್ಮಿಕ ಮೃತ್ಯು Read More »

ಕರಾವಳಿ

ಬಂಟ್ವಾಳ: ಪಿಕಪ್-ರಿಕ್ಷಾ ಢಿಕ್ಕಿ ಹೊಡೆದು ಐವರಿಗೆ ಗಾಯ

ಬಂಟ್ವಾಳ, ಮಾ.5: ಪಿಕಪ್ ವಾಹನ ಮತ್ತು ರಿಕ್ಷಾ ಮುಖಾಮುಖಿ ಢಿಕ್ಕಿಯಾದ ಪರಿಣಾಮ ರಿಕ್ಷಾ ಚಾಲಕ, ಪಿಕಪ್ ಚಾಲಕ ಸೇರಿದಂತೆ ಐವರಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಗುರುವಾರ ಸಂಜೆ ಬಂಟ್ವಾಳ ಕೆಳಗಿನ ಪೇಟೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಪರ್ಲ ನಿವಾಸಿ ಜೆರಾಲ್ಡ್ ಸಾಂಕ್ತಿಸ್, ಪಿಕಪ್ ಚಾಲಕ ಗೌತಮ್ ಹಾಗೂ ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬಂಟ್ವಾಳ: ಪಿಕಪ್-ರಿಕ್ಷಾ ಢಿಕ್ಕಿ ಹೊಡೆದು ಐವರಿಗೆ ಗಾಯ Read More »

ಕರಾವಳಿ

ಬಜೆಟ್: ಇಲಾಖಾವಾರು ಅನುದಾನ ಮಾಹಿತಿ

ಬೆಂಗಳೂರು, ಮಾ.6: ಸಿಎಂ ಬಿಎಸ್ ಯಡಿಯೂರಪ್ಪ ಅವರು 2,37,893 ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದು, ಪ್ರತೀ ಇಲಾಖೆಗೆ ಸಿಕ್ಕ ಅನುದಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಬಜೆಟ್ ನ ಒಟ್ಟು ಗಾತ್ರ 2,37,893 ಕೋಟಿ ರೂ ಆಗಿದ್ದು, 2020–21ನೇ ಸಾಲಿನಲ್ಲಿ ಒಟ್ಟು ₹ 2,33,134 ಕೋಟಿ ಜಮೆಗಳನ್ನು ನಿರೀಕ್ಷಿಸಲಾಗಿದೆ. ಅಂತೆಯೇ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದ್ದು, ಆದಾಯಕ್ಕೂ ವೆಚ್ಚಕ್ಕೂ 4759 ಅಂತರವಿದೆ. ಇಲಾಖಾವಾರು ಅನುದಾನ ಮಾಹಿತಿ 1.ಶಿಕ್ಷಣ ಇಲಾಖೆ- 29,768 ಕೋಟಿ – ಶೇ. 11 2.ನಗರಾಭಿವೃದ್ಧಿ

ಬಜೆಟ್: ಇಲಾಖಾವಾರು ಅನುದಾನ ಮಾಹಿತಿ Read More »

ಕರ್ನಾಟಕ

ಎಎಪಿ ಕೌನ್ಸಿಲರ್ ತಾಹಿರ್ ಹುಸೈನ್ ನ್ಯಾಯಾಲಯಕ್ಕೆ ಶರಣು

ಹೊಸದಿಲ್ಲಿ, ಮಾ.6: ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ದಿಲ್ಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ(ಐಬಿ)ಯ ಅಧಿಕಾರಿಯನ್ನು ಹತ್ಯೆಗೈದ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೈನ್ ನ್ಯಾಯಾಲಯಕ್ಕೆ ಶರಣಾದರು. ಈಶಾನ್ಯ ದಿಲ್ಲಿಯಲ್ಲಿ ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆಗೀಡಾಗಿದ್ದರು. ಈ ಆರೋಪದ ಮೇಲೆ ತಾಹಿರ್ ಹುಸೈನ್ ವಿರುದ್ಧ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಾಗಿತ್ತು. ಅಂಕಿತ್ ಶರ್ಮಾ ಹತ್ಯೆ ಹಿಂದೆ ತಾಹಿರ್ ಕೈವಾಡ ಇದೆ ಎಂದು ತಂದೆ ರವೀಂದ್ರ ಶರ್ಮಾ ಆರೋಪಿಸಿದ್ದರು.

ಎಎಪಿ ಕೌನ್ಸಿಲರ್ ತಾಹಿರ್ ಹುಸೈನ್ ನ್ಯಾಯಾಲಯಕ್ಕೆ ಶರಣು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾ.20ರಂದು ನಿರ್ಭಯಾ ಅಪರಾಧಿಗಳಿಗೆ ಗಲ್ಲು

ಹೊಸದಿಲ್ಲಿ, ಮಾ.6: ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿಗಳಿಗೆ ಮಾ.20ರಂದು ಗಲ್ಲು ನೀಡಲು ದಿಲ್ಲಿಯ ಪಟಿಯಾಲ ಕೋರ್ಟ್ ಹೊಸ ಡೆತ್ ವಾರೆಂಟ್ ಜಾರಿಮಾಡಲಾಗಿದೆ. ಮಾರ್ಚ್ 20ರಂದು ಬೆಳಗ್ಗೆ 6 ಗಂಟೆಗೆ ನಾಲ್ವರು ಅಪರಾಧಿಗಳನ್ನೂ ನೇಣಿಗೇರಿಸಲು ನ್ಯಾಯಾಲಯ ಆದೇಶಿಸಿದೆ. ನಿರ್ಭಯಾ ಅತ್ಯಾಚಾರಿ ಆರೋಪಿ ಪವನ್ ಸಲ್ಲಿಸಿದ್ದ ಕ್ಷಮಾಧಾನ ಅರ್ಜಿಯನ್ನು ಕಳೆದ ನಿನ್ನೆಯಷ್ಟೇ ರಾಷ್ಟ್ರಪತಿಗಳು ತಿರಸ್ಕರಿಸಿದ್ದರು. ಇದಕ್ಕೂ ಪೂರ್ವದಲ್ಲಿ ಆರೋಪಿಗಳು ಸಲ್ಲಿಸಿದ್ದ ಕ್ಷಮಾಧಾನ ಕೋರಿದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಪಾಟಿಯಾಲ ಕೋರ್ಟ್, ಗಲ್ಲು ಶಿಕ್ಷೆಯನ್ನು ಮುಂದೂಡಿತ್ತು. ಈಗಾಗಲೇ

ಮಾ.20ರಂದು ನಿರ್ಭಯಾ ಅಪರಾಧಿಗಳಿಗೆ ಗಲ್ಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top