Keerthana

ದಿಲ್ಲಿ ಮೆಟ್ರೋ ನಿಲ್ದಾಣದಲ್ಲಿ ‘ಗೋಲಿ ಮಾರೋ’ ಘೋಷಣೆ ಕೂಗಿದ ದುಷ್ಕರ್ಮಿಗಳು: 6 ಮಂದಿ ಪೊಲೀಸ್ ವಶಕ್ಕೆ

ಹೊಸದಿಲ್ಲಿ, ಫೆ.29: ರಾಜಧಾನಿ ದಿಲ್ಲಿಯ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಬಿಳಿ ಟಿ-ಶರ್ಟ್ ಹಾಗೂ ಕೇಸರಿ ರುಮಾಲುಗಳನ್ನು ಧರಿಸಿದ್ದ ಗುಂಪೊಂದು ‘ದೇಶ್ ಕಿ ಗದ್ದಾರೋಂ ಕೊ, ಗೋಲಿ ಮಾರೋ ಸಾ…ಕೋ” ಎಂಬ ಘೋಷಣೆಗಳನ್ನು ಕೂಗುತ್ತಾ ಅರೆಕ್ಷಣ ಅಲ್ಲಿದ್ದ ಜನರಲ್ಲಿ ಭಯ ಹುಟ್ಟಿಸಿದ ಘಟನೆ ನಡೆದಿದೆ. ಈಶಾನ್ಯ ದಿಲ್ಲಿಯ ಹಿಂಸಾಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿರುವಂತಹ ಸಂದರ್ಭದಲ್ಲಿ ಕೇಳಿ ಬಂದ ಈ ಘೋಷಣೆ ಸಾಕಷ್ಟು ಆತಂಕಕ್ಕೆಡೆ ಮಾಡಿಕೊಟ್ಟಿದೆ. ಈ ಘಟನೆ ಸ್ಥಳೀಯರೊಬ್ಬರ ಮೊಬೈಲ್ […]

ದಿಲ್ಲಿ ಮೆಟ್ರೋ ನಿಲ್ದಾಣದಲ್ಲಿ ‘ಗೋಲಿ ಮಾರೋ’ ಘೋಷಣೆ ಕೂಗಿದ ದುಷ್ಕರ್ಮಿಗಳು: 6 ಮಂದಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಕೃಷ್ಣರಾಜ್ ಸರಳಾಯ ಆತ್ಮಹತ್ಯೆ

ಉಡುಪಿ, ಫೆ.29: ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಉಡುಪಿಯ ಖ್ಯಾತ ಪಟಾಕಿ ಉದ್ಯಮಿ ಕೆ. ಕೃಷ್ಣರಾಜ್ ಸರಳಾಯ(87) ಇಂದು ಮಧ್ಯಾಹ್ನ ವೇಳೆ ಪಣಿಯಾಡಿಯಲ್ಲಿರುವ ತನ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮನೆಯಲ್ಲಿ ಒಂಟಿಯಾಗಿ ಬದುಕುತ್ತಿದ್ದ ಇವರು, ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಇವರ ಇಬ್ಬರು ಪುತ್ರಿಯರು ಮದುವೆಯಾಗಿ ಆಸ್ಟ್ರೇಲಿಯಾ ಹಾಗೂ ಬೆಂಗಳೂರಿನಲ್ಲಿ ನೆಲೆಸಿದ್ದರು. ಕಾಂಗ್ರೆಸ್ ಮುಖಂಡರಾಗಿದ್ದ ಇವರು, ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸಹಕಾರಿ ಧುರೀಣರಾಗಿದ್ದ ಇವರು, ಉಡುಪಿ ಟೌನ್  ಕೋಅಪರೇಟಿವ್ ಸೊಸೈಟಿಯ

ಉಡುಪಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಕೃಷ್ಣರಾಜ್ ಸರಳಾಯ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಚ್ಚನಾಡಿ ತ್ಯಾಜ್ಯ ಲ್ಯಾಂಡ್‌‌ಫಿಲ್‌‌‌‌ ದುರಂತ: ಪರಿಹಾರವಾಗಿ 8 ಕೋಟಿ ರೂ. ಬಿಡುಗಡೆ; ಸಚಿವ ಭೈರತಿ

ಮಂಗಳೂರು, ಫೆ.29: ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಳೆದ ಬಾರಿ ಪ್ರಾಕೃತಿಕ ವಿಕೋಪದಿಂದ ತ್ಯಾಜ್ಯ ಕುಸಿತದಿಂದ ಸಂಭವಿಸಿದ ಅನಾಹುತಗಳಿಗೆ ಸಂಬಂಧಿಸಿ ಪರಿಹಾರವಾಗಿ ಸರಕಾರ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ತಕ್ಷಣ ತುರ್ತು ಕಾಮಗಾರಿ ಹಾಗೂ ಪರಿಹಾರ ಕಾರ್ಯ ನೆರವೇರಿಸುವಂತೆ ಪಾಲಿಕೆಗೆ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ತ್ಯಾಜ್ಯ ಕುಸಿತದಿಂದ ನಿರಾಶ್ರಿತರಾದ 27 ಕುಟುಂಬಗಳಿಗೆ ಕರ್ನಾಟಕ ವಸತಿ ಮಂಡಳಿಯ ವಸತಿ ಸಮುಚ್ಚಯದಲ್ಲಿ ಸದ್ಯ ತಾತ್ಕಾಲಿಕ

ಪಚ್ಚನಾಡಿ ತ್ಯಾಜ್ಯ ಲ್ಯಾಂಡ್‌‌ಫಿಲ್‌‌‌‌ ದುರಂತ: ಪರಿಹಾರವಾಗಿ 8 ಕೋಟಿ ರೂ. ಬಿಡುಗಡೆ; ಸಚಿವ ಭೈರತಿ Read More »

ಕರಾವಳಿ

ಮಂಗಳೂರು: ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು, ಫೆ.29: ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯನ್ನು ತಲವಾರಿನಿಂದ ಕಡಿದು ಹತ್ಯೆ ಮಾಡಿದವ ಪತಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ನೀಡಿದೆ. ಶಿಕ್ಷೆಗೊಳಗಾದವರನ್ನು ಮೂಲತಃ ಬಾಗಲಕೋಟೆಯ ಕೆಲ್ಲೂರು ನಿವಾಸಿ, ದೇರೆಬೈಲ ಕೊಂಚಾಡಿ ಗ್ರಾಮದ ಬೋರುಗುಡ್ಡೆಯಲ್ಲಿ ವಾಸವಿದ್ದ ಶರಣಪ್ಪಬಾಳಪ್ಪ (48) ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಮಂಜುಳಾ (38)ರನ್ನು 2019ರ ಎ.20ರಂದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ದಂಪತಿ ನಡುವೆ ಆಗಾಗ ಗಲಾಟೆ

ಮಂಗಳೂರು: ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು ಮನಪಾ ನೂತನ ಮೇಯರ್ ಆಗಿ ದಿವಾಕರ, ಉಪಮೇಯರ್ ಆಗಿ ವೇದಾವತಿ ಆಯ್ಕೆ

ಮಂಗಳೂರು, ಫೆ.28: ಮಂಗಳೂರು ಮಹಾನಗರ ಪಾಲಿಕೆ 21ನೇ ಅವಧಿಯ ನೂತನ ಮೇಯರ್ ಆಗಿ ಬಿಜೆಪಿ ಹಿರಿಯ ಸದಸ್ಯ ಹಾಗೂ 46ನೇ ಕಂಟೋನ್ಮೆಂಟ್ ವಾರ್ಡ್‌ನ ಕಾರ್ಪೋರೇಟರ್‌ದಿವಾಕರ ಪಾಂಡೇಶ್ವರ ಆಯ್ಕೆಗೊಂಡಿದ್ದಾರೆ. ಅಲ್ಲದೆ ಉಪ ಮೇಯರ್ ಆಗಿ ಬಿಜೆಪಿಯ 9ನೇ ಕುಳಾಯಿ ವಾರ್ಡ್ ಕಾರ್ಪೋರೇಟರ್ ವೇದಾವತಿ ಆಯ್ಕೆಗೊಂಡಿದ್ದಾರೆ. ಪಾಲಿಕೆಗೆ ನೂತನವಾಗಿ ಆಯ್ಕೆಯಾಗಿರುವ 60 ಕಾರ್ಪೋರೇಟರ್‌ಗಳ ಪ್ರಮಾಣವಚನ ನೆರವೇರಿದ್ದು ಆ ಬಳಿಕ ಅಸ್ತಿತ್ವಕ್ಕೆ ಬಂದ ಪಾಲಿಕೆಯ ನೂತನ ಪರಿಷತ್‌ನಲ್ಲಿ ಮೇಯರ್ ಆಯ್ಕೆ ಚುನಾವಣೆ ನಡೆದಿತ್ತು. ಮೈಸೂರು ವಿಭಾಗೀಯ ಪ್ರಾದೇಶಿಕ ಆಯುಕ್ತರಾದ ವಿ. ಯಶವಂತ್

ಮಂಗಳೂರು ಮನಪಾ ನೂತನ ಮೇಯರ್ ಆಗಿ ದಿವಾಕರ, ಉಪಮೇಯರ್ ಆಗಿ ವೇದಾವತಿ ಆಯ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಿರ್ಭಯಾ ಅಪರಾಧಿಯಿಂದ ಗಲ್ಲು ಶಿಕ್ಷೆಯನ್ನು ಜೀವಾವಧಿಯಾಗಿ ಪರಿವರ್ತಿಸುವಂತೆ ಸುಪ್ರೀಂಗೆ ಕ್ಯುರೇಟಿವ್ ಅರ್ಜಿ

ಹೊಸದಿಲ್ಲಿ, ಫೆ.28: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪರಕರಣದ ಅಪರಾಧಿ ಪವನ್ ಕುಮಾರ್ ಗುಪ್ತಾ ತನಗೆ ನೀಡಲಾದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ. ಮೂವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಕೋರ್ಟ್ ಈಗಾಗಲೇ ತಿರಸ್ಕರಿಸಿದ್ದು, ಮಾ.3ರಂದು ಅಪರಾಧಿಗಳಿಗೆ ಗಲ್ಲುಶಿಕ್ಷೆ ನಿಗದಿಯಾಗಿದೆ. ಈಗ ಪವನ್ ಕುಮಾರ್ ಗುಪ್ತಾ ತನಗೆ ನೀಡಲಾದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕ್ಯುರೇಟಿವ್ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾನೆ. ಈಗಾಗಲೇ ಗಲ್ಲುಶಿಕ್ಷೆ ಎರಡು ಬಾರಿ

ನಿರ್ಭಯಾ ಅಪರಾಧಿಯಿಂದ ಗಲ್ಲು ಶಿಕ್ಷೆಯನ್ನು ಜೀವಾವಧಿಯಾಗಿ ಪರಿವರ್ತಿಸುವಂತೆ ಸುಪ್ರೀಂಗೆ ಕ್ಯುರೇಟಿವ್ ಅರ್ಜಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿಲ್ಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೇರಿಕೆ

ಸಹಜ ಸ್ಥಿತಿಯತ್ತ ರಾಷ್ಟ್ರ ರಾಜಧಾನಿ ಹೊಸದಿಲ್ಲಿ, ಫೆ.28: ಈಶಾನ್ಯ ದಿಲ್ಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಶುಕ್ರವಾರ 42ಕ್ಕೆ ಏರಿಕೆಯಾಗಿದ್ದು, ಗಲಭೆ ಪೀಡಿತ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ. ಈ ಕುರಿತಂತೆ ದಿಲ್ಲಿ ಆರೋಗ್ಯ ಇಲಾಖೆ ಶುಕ್ರವಾರ ಮಾಹಿತಿ ನೀಡಿದ್ದು, ಹಿಂಸಾಚಾರದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದವರ ಪೈಕಿ ಹಲವರು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆ ಮೂಲಕ ದಿಲ್ಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾದಂತಾಗಿದೆ. ಪ್ರಸ್ತುತ ದಿಲ್ಲಿ ಶಾಂತಿಯುತವಾಗಿದ್ದು, ಹಿಂಸಾಚಾರ ಪೀಡಿತ ಪ್ರದೇಶಗಳೂ ಕೂಡ ಸಹಜಸ್ಥಿತಿಯತ್ತ

ದಿಲ್ಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೇರಿಕೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ತಡೆಗೋಡೆ ಕುಸಿತ: ಇಬ್ಬರು ಕಾರ್ಮಿಕರು ಮೃತ್ಯು

ಮಂಗಳೂರು, ಫೆ.28: ಕಂಪೌಂಡ್ ಬಳಿ ಕೆಲಸ‌ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಕುಸಿದು ಇಬ್ಬರು ಮೃತಪಟ್ಟ ಘಟನೆ ನಗರದ ಬಂಟ್ಸ್ ಹಾಸ್ಟೆಲ್‌ನ ಕರಂಗಲ್ಪಾಡಿ ಜಂಕ್ಷನ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ಕಾರ್ಮಿಕರನ್ನು ಬಾಗಲ್‌ಕೋಟೆಯ ಬಿಮೇಶ್‌ ಹಾಗೂ ಬೆಂಗಾಲ ಮೂಲದ ಮುಝ್ರಿಕುಲ್‌ ಎಂದು ಗುರುತಿಸಲಾಗಿದೆ. ಕಂಪೌಂಡ್ ಕುಸಿದ ಪರಿಣಾಮ ಐವರು ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಪಾಂಡೇಶ್ವರ ಹಾಗೂ ಕದ್ರಿಯ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚಾರಣೆ ಭರದಿಂದ ಸಾಗಿದೆ.  

ಮಂಗಳೂರಿನಲ್ಲಿ ತಡೆಗೋಡೆ ಕುಸಿತ: ಇಬ್ಬರು ಕಾರ್ಮಿಕರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಪ್ರಿಲ್ 1ರಿಂದ ಆಟೋ ಪ್ರಯಾಣ ದರ ಏರಿಕೆ

ದ.ಕ. ಜಿಲ್ಲಾ ಸಾರಿಗೆ ಪ್ರಾಧಿಕಾರ ಸಮ್ಮತಿ ಮಂಗಳೂರು, ಫೆ.27: ಆಟೊ ಪ್ರಯಾಣ ದರವು ಪ್ರಸ್ತುತ ಇರುವ ಕನಿಷ್ಠ ದರ (ಮೊದಲ 1.5 ಕಿ.ಮೀ.) 25 ರೂ. ಇನ್ನು 30 ರೂ. ಗೆ ಹಾಗೂ ಪ್ರತಿ ಕಿ.ಮೀ.ಗೆ ನಿಗದಿಯಾಗಿದ್ದ 14 ರೂ. ದರ ಇನ್ನು 15ರೂ. ಗೆ ಏರಿಕೆ ಮಾಡಲು ದ.ಕ. ಜಿಲ್ಲಾ ಸಾರಿಗೆ ಪ್ರಾಧಿಕಾರವು ತೀರ್ಮಾನಿಸಿದ್ದು, ಆಟೋ ಪ್ರಯಾಣ ದರ ಎಪ್ರಿಲ್ 1ರಿಂದ ಏರಿಕೆಯಾಗಲಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಟೋ ದರ ಪರಿಷ್ಕರಣೆ ಕುರಿತು ಸಭೆ

ಎಪ್ರಿಲ್ 1ರಿಂದ ಆಟೋ ಪ್ರಯಾಣ ದರ ಏರಿಕೆ Read More »

ಕರಾವಳಿ

ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್‌ಗೆ ಜೀವ ಬೆದರಿಕೆ: ದೂರು ದಾಖಲು

ಮಂಗಳೂರು, ಫೆ.27: ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರನ್ನು ದುಷ್ಕರ್ಮಿಗಳು ಕೊಲೆಗೆಯತ್ನಿಸಿದ್ದಾರೆಂದು ಆರೋಪಿಸಿ ಖಾಝಿ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ದಾಖಲಿಸಿದ್ದಾರೆ. ಮಂಗಳೂರಿನ ನಿಕಟ ಪೂರ್ವ ಖಾಝಿಯಾಗಿದ್ದ ಚೆಂಬರಿಕ ಸಿ.ಎಂ.ಅಬ್ದುಲ್ಲಾ ಮುಸ್ಲಿಯಾರ್‌ರ ನಿಗೂಢ ಮರಣಕ್ಕೆ ಸಂಬಂಧಿಸಿ ಅಲ್ಲಲ್ಲಿ ನಡೆಯುವ ಪ್ರತಿಭಟನೆಯಲ್ಲಿ ತ್ವಾಕ ಅಹ್ಮದ್ ಮುಸ್ಲಿಯಾರ್ ಭಾಗವಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಝಿಗೆ ವಿದೇಶದಿಂದ ಕರೆಗಳು ಬಂದಿದ್ದು ಕೊಲೆ ಬೆದರಿಕೆ ಒಡ್ಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ಈ ಹಿಂದೆ ಎರಡು ಬಾರಿ ತನ್ನ ಕೊಲೆಗೆ ವಿಫಲ

ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್‌ಗೆ ಜೀವ ಬೆದರಿಕೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top