Keerthana

ಮಂಗಳೂರು ಸ್ಫೋಟಕ ಪತ್ತೆ ಪ್ರಕರಣ: ಶಂಕಿತ ಆದಿತ್ಯ ರಾವ್ ಶರಣು

ಬೆಂಗಳೂರು, ಜ.22: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಿದ್ದ ಶಂಕಿತ ವ್ಯಕ್ತಿಯಾಗಿದ್ದ ಆದಿತ್ಯ ರಾವ್ ಎಂಬಾತ ಬುಧವಾರ ಮುಂಜಾನೆ ಬೆಂಗಳೂರಿನಲ್ಲಿ ಐಜಿಪಿ ನೀಲಮಣಿ ರಾಜು ಅವರ ಎದುರು ಶರಣಾಗಿದ್ದಾನೆ.   ಆದಿತ್ಯ ರಾವ್‌ನನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕರೆತಂದಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿರುವುದು ನಾನೇ ಎಂದು ಆದಿತ್ಯ ರಾವ್‌ ಒಪ್ಪಿಕೊಂಡಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸರ ತಂಡವು ಬೆಂಗಳೂರಿಗೆ ತೆರಳಿ ಆತನ ವಿಚಾರಣೆ ನಡೆಸಿ ಕ್ರಮ […]

ಮಂಗಳೂರು ಸ್ಫೋಟಕ ಪತ್ತೆ ಪ್ರಕರಣ: ಶಂಕಿತ ಆದಿತ್ಯ ರಾವ್ ಶರಣು Read More »

ಕರಾವಳಿ, ಕರ್ನಾಟಕ

ಇಂದು ಸುಪ್ರೀಂ ಕೋರ್ಟ್ ನಲ್ಲಿ ಸಿಎಎ ವಿರುದ್ಧ ಸಲ್ಲಿಸಿದ 144 ಅರ್ಜಿಗಳ ವಿಚಾರಣೆ

ಹೊಸದಿಲ್ಲಿ, ಜ.22: ಪೌರತ್ವ ತಿದ್ದುಪಡಿ ಕಾಯ್ದೆಯ(ಸಿಎಎ) ವಿರುದ್ಧ ಸಲ್ಲಿಸಲಾಗಿರುವ 144 ಅರ್ಜಿಗಳನ್ನು ಬುಧವಾರ ಸುಪ್ರೀಂ ಕೋರ್ಟ್ ವಿಚಾರಣೆಗೆ ತೆಗೆದುಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೊಬ್ಡೆ ನೇತೃತ್ವದ ಮೂರು ನ್ಯಾಯಾಧೀಶರ ಪೀಠವು ಅರ್ಜಿಗಳ ವಿಚಾರಣೆ ನಡೆಸಲಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮತ್ತು ಕಾಂಗ್ರೆಸ್ ನಾಯಕ ಜೈರಾಮ್ ಸಲ್ಲಿಸಿದ್ದ ಅರ್ಜಿಗಳು ಸೇರಿದಂತೆ 142 ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠವು ಆಲಿಸಲಿದೆ.

ಇಂದು ಸುಪ್ರೀಂ ಕೋರ್ಟ್ ನಲ್ಲಿ ಸಿಎಎ ವಿರುದ್ಧ ಸಲ್ಲಿಸಿದ 144 ಅರ್ಜಿಗಳ ವಿಚಾರಣೆ Read More »

ರಾಷ್ಟ್ರೀಯ ನ್ಯೂಸ್

ಕೋಟ ಜೋಡಿ ಕೊಲೆ ಪ್ರಕರಣ: ಆರೋಪಿ ಜಿಪಂ ಸದಸ್ಯನ ಜಾಮೀನು ವಜಾ

ಕುಂದಾಪುರ, ಜ.22: ಮಣೂರು ಗ್ರಾಮದ ಚಿಕ್ಕನಕೆರೆ ಜೋಡಿ ಕೊಲೆ ಪ್ರಕರಣದ ಆರೋಪಿ, ಉಡುಪಿ ಜಿಲ್ಲಾ ಪಂಚಾಯತ್ ಕೋಟ ಕ್ಷೇತ್ರ ಬಿಜೆಪಿ ಸದಸ್ಯ ರಾಘವೇಂದ್ರ ಕಾಂಚನ್(38)ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಜ.20ರಂದು ವಜಾಗೊಳಿಸಿದೆ. ಈ ಪ್ರಕರಣದಲ್ಲಿ ಒಳಸಂಚು ರೂಪಿಸಿದ ಆರೋಪದಡಿ ಫೆ.8ರಂದು ರಾಘವೇಂದ್ರ ಕಾಂಚನ್‌ನನ್ನು ಪೊಲೀಸರು ಬಂಧಿಸಿದ್ದರು. ಈತ ಈ ಹಿಂದೆ ಜಾಮೀನು ಕೋರಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದನು. ಆದರೆ ನ್ಯಾಯಾಲಯ ಈತನ ಜಾಮೀನು

ಕೋಟ ಜೋಡಿ ಕೊಲೆ ಪ್ರಕರಣ: ಆರೋಪಿ ಜಿಪಂ ಸದಸ್ಯನ ಜಾಮೀನು ವಜಾ Read More »

ಕರಾವಳಿ

ಕುಂದಾಪುರ: ಲಾರಿ ಢಿಕ್ಕಿ ಹೊಡೆದು ಮಹಿಳೆ ಮೃತ್ಯು

ಕುಂದಾಪುರ, ಜ.22: ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66ರಲ್ಲಿ ಶಿರೂರು ಗ್ರಾಪಂ ಎದುರುಗಡೆ ನಡೆದಿದೆ. ಮೃತರನ್ನು ವೆಂಕಮ್ಮ ಪೂಜಾರ್ತಿ(70)ಎಂದು ಗುರುತಿಸಲಾಗಿದೆ. ವಿಆರ್‌ಎಲ್ ಲಾಜಿಸ್ಟಿಕ್‌ಗೆ ಸೇರಿದ ಸರಕು ಸಾಗಾಟದ ಲಾರಿ ಮಹಿಳೆಗೆ ಢಿಕ್ಕಿ ಹೊಡೆದಿದೆನ್ನಲಾಗಿದೆ. ಲಾರಿಯ ಚಕ್ರ ವೃದ್ಧೆಯ ಮೇಲೆ ಹರಿದಿದ್ದು, ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಲಾರಿ ಢಿಕ್ಕಿ ಹೊಡೆದು ಮಹಿಳೆ ಮೃತ್ಯು Read More »

ಕರಾವಳಿ

ವಿಟ್ಲ: ಆಕಸ್ಮಿಕ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ, ಜ.22: ಸ್ನಾನಕ್ಕೆ ತೆರಳಿದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವಿಟ್ಲ ಪಡ್ನೂರು ಗ್ರಾಮದ ಪಿಲಿಂಜದಲ್ಲಿ ನಡೆದಿದೆ. ಮೃತರನ್ನು ವಿಟ್ಲ ಪಡ್ನೂರು ಪಿಲಿಂಜ ನಿವಾಸಿ ಸೋಮಪ್ಪಪೂಜಾರಿ (58) ಎಂದು ಗುರುತಿಸಲಾಗಿದೆ. ಬೆಳಗ್ಗೆ ಎಂದಿನಂತೆ ಸ್ನಾನಕ್ಕೆಂದು ತೋಟದ ಬಾವಿಯ ಸಮೀಪ ತೆರಳಿದ್ದಾರೆ. ಮತ್ತೆ ಮರಳಿ ಮನೆಗೆ ಬಾರದೆ ಇರುವುದನ್ನು ಕಂಡು ಮನೆಯವರು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಬಾವಿಗೆ ಹಾಕಿದ ಅಡಿಕೆ ಮರದ ತಡೆ ತುಂಡಾಗಿ ಬಿದ್ದಿರುವುದು ಕಂಡು ಬಂದಿದೆ. ಬಾವಿಯಲ್ಲಿ ಪರಿಶೀಲನೆ

ವಿಟ್ಲ: ಆಕಸ್ಮಿಕ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಪೋಟಕ ಪ್ರಕರಣ: ಮಣಿಪಾಲದ ಆದಿತ್ಯ ರಾವ್ ಗಾಗಿ ಪೊಲೀಸರ ಶೋಧ ?

ಮಂಗಳೂರು, ಜ.22: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮರದಲ್ಲಿ ಕಂಡುಬಂದಿದ್ದ ಶಂಕಿತ ವ್ಯಕ್ತಿಯ ಸುಳಿವು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಶಂಕಿತ ವ್ಯಕ್ತಿಯನ್ನು ಉಡುಪಿಯ ಮಣಿಪಾಲ ನಿವಾಸಿ ಆದಿತ್ಯ ರಾವ್ (40) ಎಂದು ಗುರುತಿಸಲಾಗಿದೆ. ಈತನನ್ನು ಪತ್ತೆ ಹಚ್ಚಲು ಎರಡು ತಂಡಗಳು ಬಲೆ ಬೀಸಿವೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಬಗ್ಗೆ ಪೊಲೀಸರು ಈ ವರೆಗೆ ಅಧಿಕೃತ ಪ್ರಕಟನೆ ನೀಡಿಲ್ಲ. ಶಂಕಿತ ಆದಿತ್ಯ ರಾವ್ 2018ರಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಪೋಟಕ ಪ್ರಕರಣ: ಮಣಿಪಾಲದ ಆದಿತ್ಯ ರಾವ್ ಗಾಗಿ ಪೊಲೀಸರ ಶೋಧ ? Read More »

ಕರಾವಳಿ

ಮುಸ್ಲಿಮರ ಕೇರಿಗಳನ್ನು ಅಭಿವೃದ್ಧಿ ಮಾಡಲ್ಲ: ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ

ದಾವಣಗೆರೆ, ಜ.21:  ಮುಸ್ಲಿಮರನ್ನು ಎಲ್ಲಿಡಬೇಕೋ ಅಲ್ಲಿ ಇಡುತ್ತೇನೆ, ಮುಸ್ಲಿಮರ ಕೇರಿಗಳಿಗೆ ಬಂದಿರುವ ಹಣವನ್ನು ಹಿಂದೂಗಳ ಕೇರಿಗಳ ಅಭಿವೃದ್ಧಿಗೆ ಬಳಸುತ್ತೇನೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೊನ್ನಾಳಿಯಲ್ಲಿ ಸಿಎಎ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ರೇಣುಕಾಚಾರ್ಯ, ಮುಸ್ಲಿಮರನ್ನು ಎಲ್ಲಿಡಬೇಕೋ ಅಲ್ಲಿ ಇಡುತ್ತೇನೆ, ಅವರ ಬೆಂಬಲ ನನಗೆ ಬೇಡ ಹೊನ್ನಾಳಿ, ನ್ಯಾಮತಿ ತಾಲೂಕನ್ನು ಕೇಸರಿಮಯ ಮಾಡುತ್ತೇನೆ ಎಂದು ಹೇಳಿದ್ದಾರೆ. ಭಾರತ ಏನು ಭಯೋತ್ಪಾದಕರ ಮಾವನ ಮನೆನಾ, ನಿಮಗೆ ಪಾಕಿಸ್ತಾನದಿಂದ ಹಣ ಬಂದಿದ್ದರೆ ಮೃತರ ಕುಟುಂಬಕ್ಕೆ ನೀಡಿ, ಮಂಗಳೂರು ಗೋಲಿಬಾರ್

ಮುಸ್ಲಿಮರ ಕೇರಿಗಳನ್ನು ಅಭಿವೃದ್ಧಿ ಮಾಡಲ್ಲ: ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ Read More »

ಕರ್ನಾಟಕ

ಬಾಗ್ದಾದ್: ಅಮೆರಿಕಾ ರಾಯಬಾರಿ ಕಚೇರಿ ಬಳಿ ಅಪ್ಪಳಿಸಿದ ಮೂರು ರಾಕೆಟ್

ಬಾಗ್ದಾದ್, ಜ.21: ಇರಾಕ್‌ನ ಅತೀ ಭದ್ರತೆ ಇರುವ ಹಸಿರು ವಲಯ ಬಾಗ್ದಾದ್ ನಲ್ಲಿರುವ ಅಮೆರಿಕಾ ರಾಯಭಾರ ಕಚೇರಿಯ ಸಮೀಪವೇ 3 ರಾಕೆಟ್ ಗಳು ಅಪ್ಪಳಿಸಿವೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಉನ್ನತ ಭದ್ರತಾ ಸ್ಥಳವಾದ ಇರಾಕ್ ರಾಜಧಾನಿ ಹಸಿರು ವಲಯಕ್ಕೆ ಈ ರಾಕೆಟ್ ಗಳು ಅಪ್ಪಳಿಸಿದ್ದು ಆದರೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಆ ಮೂಲಕ ಮಧ್ಯಪ್ರಾಚ್ಯದಲ್ಲಿ ಅವರಿಸಿರುವ ಯುದ್ಧ ಭೀತಿಯನ್ನು ಮತ್ತಷ್ಟು ಹೆಚ್ಚಿಸಿವೆ. ಅಮೇರಿಕಾ ರಾಯಭಾರ ಕಚೇರಿ ಸೇರಿದಂತೆ, ಹಲವು ದೇಶಗಳ ರಾಯಭಾರೀ ಕಚೇರಿಯನ್ನೊಳಗೊಂಡ ಹಸಿರುವ

ಬಾಗ್ದಾದ್: ಅಮೆರಿಕಾ ರಾಯಬಾರಿ ಕಚೇರಿ ಬಳಿ ಅಪ್ಪಳಿಸಿದ ಮೂರು ರಾಕೆಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ವೋಲ್ವೋ ಬಸ್‌ನಲ್ಲಿ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು

ಚಿತ್ರದುರ್ಗ, ಜ.21: ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಲಿಸುತ್ತಿದ್ದ ವೋಲ್ವೋ ಬಸ್ಸೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಗುಯಿಲಾಳು ಟೋಲ್ ಬಳಿಯ ಗಿಡ್ಡೋಬನಹಳ್ಳಿ ಬಳಿ ನಡೆದಿದೆ. ಮಂಗಳವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಹಿರಿಯೂರು ತಾಲೂಕಿನ ಗಿಡ್ಡೋಬನಹಳ್ಳಿ ಬಳಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ. ಬಸ್ಸು ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕೆ ಎಸ್ ಅರ್ ಟಿಸಿ ಹವಾ ನಿಯಂತ್ರಿತ ಬಸ್ ಇದಾಗಿದ್ದು, ಬಸ್ ನಲ್ಲಿ ಸುಮಾರು 30 ಜನ ಪ್ರಯಾಣಿಸುತ್ತಿದ್ದರು. ಕೂಡಲೇ ಎಚ್ಚೆತ್ತು

ಚಲಿಸುತ್ತಿದ್ದ ವೋಲ್ವೋ ಬಸ್‌ನಲ್ಲಿ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು Read More »

ಕರ್ನಾಟಕ

ಸುರತ್ಕಲ್: ಎನ್‌ಐಟಿಕೆ ಬೀಚ್‌ನಲ್ಲಿ ಮುಳುಗಿ ವಿದ್ಯಾರ್ಥಿನಿ ಮೃತ್ಯು

ಸುರತ್ಕಲ್‌, ಜ 21:ಸುರತ್ಕಲ್‌ ಎನ್‌ಐಟಿಕೆ ಬೀಚ್‌ನಲ್ಲಿ ಆಟವಾಡಲು ತೆರಳಿದ್ದ 20ರಷ್ಟು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಇನ್ನಿಬ್ಬರನ್ನು ಸ್ಥಳಿಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಮಧ್ಯಪ್ರದೇಶದ ಸಾಗರ್‌ ನಿವಾಸಿ ವಾರಂಗಲ್‌ ಎನ್‌ಐಟಿಕೆ ವಿದ್ಯಾರ್ಥಿನಿ ನಿರ್ಮಲಾ ದಂಗವಾಲ್‌ ಎಂದು ಗುರುತಿಸಲಾಗಿದೆ. ಎನ್‌ಐಟಿ ವಾರಂಗಲ್‌ನ 20ರಷ್ಟು ವಿದ್ಯಾರ್ಥಿಗಳು ಸುರತ್ಕಲ್‌ ಎನ್‌ಐಟಿಕೆಯಲ್ಲಿ ನಡೆದಿದ್ದ ಆಲ್‌ ಇಂಡಿಯಾ ಅಂತರ್‌ ಎನ್‌ಐಟಿ ಕ್ರೀಡಕೂಟದಲ್ಲಿ ಭಾಗವಹಿಸಿದ್ದು ಈ ಕ್ರೀಡಾಕೂಟ ಮುಗಿದ ಬಳಿಕ ದೈಹಿಕ ಶಿಕ್ಷಕ ರಾಜು ಒಡೆಲಾ

ಸುರತ್ಕಲ್: ಎನ್‌ಐಟಿಕೆ ಬೀಚ್‌ನಲ್ಲಿ ಮುಳುಗಿ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ
Scroll to Top