Keerthana

ಕಾಶ್ಮೀರ: ಕಳೆದ ಐದು ದಿನಗಳಿಂದ ಹಿಮದಲ್ಲಿ ಸಿಲುಕಿ ಯೋಧ  ನಾಪತ್ತೆ

ಹೊಸದಿಲ್ಲಿ, ಜ.14: ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆಯ ಬಳಿ ದೈನಂದಿನ ಗಸ್ತು ತಿರುಗುತ್ತಿದ್ದ ವೇಳೆ ಹಿಮದಲ್ಲಿ ಸಿಲುಕಿದ ಗರ್ವಾಲ್ ರೈಫಲ್ಸ್ ರೆಜಿಮೆಂಟ್ ಗೆ ಸೇರಿದ ಯೋಧನೊಬ್ಬ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದರೆ. ಹವಾಲ್ದಾರ್ ರಾಜೇಂದ್ರ ಸಿಂಗ್ ನೇಗಿ  ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆಯ ಬಳಿ  ಹಿಮದಲ್ಲಿ ಸಿಲುಕಿದ್ದಾರೆ. ಕಾಣೆಯಾದ ಸೈನಿಕನನ್ನು ಪತ್ತೆಹಚ್ಚಲು ಭಾರತೀಯ ಸೇನೆ  ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. 2002 ರಿಂದ ಭಾರತೀಯ ಸೇನೆಯ 11ನೇ […]

ಕಾಶ್ಮೀರ: ಕಳೆದ ಐದು ದಿನಗಳಿಂದ ಹಿಮದಲ್ಲಿ ಸಿಲುಕಿ ಯೋಧ  ನಾಪತ್ತೆ Read More »

ರಾಷ್ಟ್ರೀಯ ನ್ಯೂಸ್

ಪೌರತ್ವ ಕಾಯ್ದೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಕೇರಳ

ಸಿಎಎ ವಿರುದ್ಧ ಕೋಟ್೯ ಮೆಟ್ಟಿಲೇರಿದ ಮೊದಲ ರಾಜ್ಯ ಹೊಸದಿಲ್ಲಿ, ಜ.14: ಪಿಣರಾಯಿ ವಿಜಯನ್‌ ನೇತೃತ್ವದ ಕೇರಳ ಸರಕಾರವು ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ  ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಮೂಲಕ ಸಿಎಎ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಮೊದಲ ರಾಜ್ಯ ಎನಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆಯು ಸಂವಿಧಾನದ ನೀಡಲಾಗಿರುವ ಮೂಲಭೂತ ಹಕ್ಕುಗಳಲ್ಲಿ ಒಂದಾದ ಸಮಾನತೆಯ ಹಕ್ಕಿಗೆ ವಿರುದ್ಧವಾಗಿದೆ ಎಂದು ಎಂದು ಅರ್ಜಿಯಲ್ಲಿ ತಿಳಿಸಿದೆ. ಅಲ್ಲದೆ ಶಾಸಕಾಂಗ ಸಭೆದಯಲ್ಲಿ ಪೌರತ್ವ ಕಾಯಿದೆ ವಿರುದ್ಧ

ಪೌರತ್ವ ಕಾಯ್ದೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಕೇರಳ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಎಸ್‌ಡಿಪಿಐ-ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ; ಇಬ್ಬರಿಗೆ ಇರಿತ

ಕಾಸರಗೋಡು, ಜ.14: ಎಸ್‌ಡಿಪಿಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದು, ಇಬ್ಬರು ಇರಿತಕ್ಕೊಳಗಾದ ಘಟನೆ ಜ.13 ಮಂಗಳವಾರ ರಾತ್ರಿ ಎಡನೀರನಲ್ಲಿ ನಡೆದಿದೆ. ಇರಿತದಿಂದ ಗಂಭೀರ ಗಾಯಗೊಂಡವರನ್ನು ಆಶಿಫ್ (25) ಮತ್ತು ರಶೀದ್ (28) ಎಂದು ಗುರುತಿಸಲಾಗಿದ್ದು, ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೋಸ್ಟರ್ ಲಗತ್ತಿಸುವ ಕುರಿತ ವಿಚಾರ ಘಟನೆಗೆ ಕಾರಣ ಎನ್ನಲಾಗಿದೆ. ಲಗತ್ತಿಸಿದ ಪೋಸ್ಟರ್‌ ಹರಿದ ಕಾರಣ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಘರ್ಷಣೆಗೆ ತಿರುಗಿದೆ ಎನ್ನಲಾಗಿದೆ. ಈ ಸಂದರ್ಭ

ಕಾಸರಗೋಡು: ಎಸ್‌ಡಿಪಿಐ-ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ; ಇಬ್ಬರಿಗೆ ಇರಿತ Read More »

ಕರಾವಳಿ

ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಏಳು ಮಂದಿಗೆ ಗಾಯ

ಆಂಧ್ರಪ್ರದೇಶ, ಜ.14: ಆಟೊ ರಿಕ್ಷಾ ಮತ್ತು ಟಾಟಾ ಮ್ಯಾಜಿಕ್ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆ ಮೃತಪಟ್ಟು, ಏಳು ಮಂದಿ ಗಾಯಗೊಂಡ ಘಟನೆ ಶ್ರೀಕಾಕುಲಮ್ ಜಿಲ್ಲೆಯ ಮಡ್ಡಿ ರಾಮುಡು ಪೇಟಾ ಗ್ರಾಮದಲ್ಲಿ ನಡೆದಿದೆ. ಅಪಘಾತಕ್ಕೆ ಬಲಿಯಾದ ಮಹಿಳೆಯನ್ನು ಜಡ್ಡು ಕೃಷ್ಣವೇಣಿ(46) ಎಂದು  ಗುರುತಿಸಲಾಗಿದೆ. ಈಕೆ ತನ್ನ ತವರು ಮನೆಯಾದ ಪಾಲಕೊಂಡಾ ಮಂಡಲ್ ಬಳಿಯಿರುವ ಎನ್ ಕೆ ರಾಜಾಪುರನ್ ಗ್ರಾಮಕ್ಕೆ ತೆರಳುತ್ತಿದ್ದಳು ಎಂದು ತಿಳಿದುಬಂದಿದೆ. ಟಾಟಾ ಮ್ಯಾಜಿಕ್ ವಾಹನದಲ್ಲಿ ವಿಜಯವಾಡದಿಂದ ತನ್ನ ತವರು ಗ್ರಾಮಕ್ಕೆ ಕೃಷ್ಣವೇಣಿ ಪ್ರಯಾಣ ಬೆಳೆಸಿದ್ದರು. ಎಂ

ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಏಳು ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಬಳ್ಳಾರಿ: ಧರಣಿಗೆ ಆಗಮಿಸಿದ ಝಮೀರ್ ಅಹ್ಮದ್ ಬಂಧನ

ಬಳ್ಳಾರಿ, ಜ.13: ಶಾಸಕ ಸೋಮಶೇಖರ ರೆಡ್ಡಿ ಮನೆ ಎದುರು ಧರಣಿ ನಡೆಸಲು ಬಂದಿದ್ದ ಬೆಂಗಳೂರಿನ ಶಾಸಕ ಝಮೀರ್ ಅಹ್ಮದ್ ರನ್ನು ಬಳ್ಳಾರಿ ಹೊರವಲಯದ ಬೈಪಾಸ್ ರಸ್ತೆ ಬಳಿ ಪೊಲೀಸರು ಬಂಧಿಸಿದರು. ಶಾಸಕ ಸೋಮಶೇಖರ ರೆಡ್ಡಿ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಝಮೀರ್ ಅಹ್ಮದ್ ಅವರು ಶಾಸಕ ಸೊಮಶೇಖರ ರೆಡ್ಡಿಯವರು ಕ್ಷಮೆ ಯಾಚಿಸಬೇಕು. ಅವರನ್ನು ಪೊಲೀಸರು ಬಂಧಿಸಬೇಕು ಎಂದು ಕಳೆದ ವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿ ಒಂದು ವಾರಗಳ ಕಾಲ ಗಡುವು ನೀಡಿದ್ದರು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಝಮೀರ್

ಬಳ್ಳಾರಿ: ಧರಣಿಗೆ ಆಗಮಿಸಿದ ಝಮೀರ್ ಅಹ್ಮದ್ ಬಂಧನ Read More »

ಕರ್ನಾಟಕ

ಮೂಡುಬಿದಿರೆ: ಬಸ್ ಢಿಕ್ಕಿ ಹೊಡೆದು ಯುವ ವೈದ್ಯ ಮೃತ್ಯು

ಮೂಡಬಿದಿರೆ, ಜ.13: ಬೈಕ್‌‌‌‌‌ಗೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ಕೆಸರ್‌ಗದ್ದೆ ಬಳಿ ನಡೆದಿದೆ. ಮೃತಪಟ್ಟವರನ್ನು ಕೇರಳದ ಕೊಲ್ಲಂ ಮೂಲದ ಡಾ.ಕೃಷ್ಣಾನಂದ(24) ಎಂದು ಗುರುತಿಸಲಾಗಿದೆ. ಆಳ್ವಾಸ್‌ ಆಯುರ್ವೇದ ಮೆಡಿಕಲ್‌ ಕಾಲೇಜಿನಲ್ಲಿ ಇಂಟರ್ನ್‌ಶಿಪ್‌ ನಡೆಸುತ್ತಿದ್ದ ಕೃಷ್ಣಾನಂದ ಅವರು ಭಾನುವಾರ ಬೆಳಗ್ಗೆ ಕಾರ್ಕಳದಲ್ಲಿ ವೈದ್ಯಕೀಯ ಶಿಬಿರದಲ್ಲಿ ಪಾಲ್ಗೊಳ್ಳಲು ಮೂಡಬಿದಿರೆಯಿಂದ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಕೆಸರ್‌ಗದ್ದೆ ಬಳಿ ಖಾಸಗಿ ಎಕ್ಸ್‌ಪ್ರೆಸ್‌ ಬಸ್ ಓವರ್‌ ಟೇಕ್‌ ಮಾಡುವ ಸಂದರ್ಭ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ

ಮೂಡುಬಿದಿರೆ: ಬಸ್ ಢಿಕ್ಕಿ ಹೊಡೆದು ಯುವ ವೈದ್ಯ ಮೃತ್ಯು Read More »

ಕರಾವಳಿ

ದೇರಳಕಟ್ಟೆ: ಪ್ರತಿಭಟನೆಗೆ ಬಳಸಿದ ಕುರ್ಚಿ ತುಂಬಿದ ಲಾರಿಗೆ ಬೆಂಕಿ ಹಚ್ಚಿದ ಕೀಡಿಗೇಡಿಗಳು?

ಸೂಕ್ತ ತನಿಖೆಗೆ ಸ್ಥಳೀಯರ ಆಗ್ರಹ ಮಂಗಳೂರು‌, ಜ.13: ದೇರಳಕಟ್ಟೆಯಲ್ಲಿ ರವಿವಾರ ನಡೆದ ಸಿಎಎ, ಎನ್ಆರ್‌ಸಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಬಳಸಲಾಗಿದ್ದ  2,500 ಕುರ್ಚಿಗಳನ್ನು ತುಂಬಿದ್ದ ಈಚರ್‌ ವಾಹನವು ರಾತ್ರಿ ಸುಮಾರು 2:30 ಗಂಟೆಗೆ ಬೆಂಕಿಗಾಹುತಿಯಾಗಿದ್ದು, ಯಾರೂ ಕೀಡಿಗೇಡಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪೌರತ್ವ ಸಂರಕ್ಷಣಾ ಸಮಿತಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ರ್‍ಯಾಲಿ ಮುಗಿದ ಬಳಿಕ ಕುರ್ಚಿಗಳನ್ನು ಈಚರ್‌ ವಾಹನಕ್ಕೆ ಲೋಡ್‌ ಮಾಡಲಾಗಿದ್ದು, ಕುರ್ಚಿಗಳನ್ನು ತುಂಬಿದ್ದ ವಾಹನಕ್ಕೆ ಅಪರಿಚಿತರು ಬೆಂಕಿ ಹಚ್ಚಿದ್ದಾರೋ ಅಥವಾ ಆಕಸ್ಮಕವಾಗಿ ಬೆಂಕಿ ಹತ್ತಿಕೊಂಡಿದೆಯೋ

ದೇರಳಕಟ್ಟೆ: ಪ್ರತಿಭಟನೆಗೆ ಬಳಸಿದ ಕುರ್ಚಿ ತುಂಬಿದ ಲಾರಿಗೆ ಬೆಂಕಿ ಹಚ್ಚಿದ ಕೀಡಿಗೇಡಿಗಳು? Read More »

ಕರಾವಳಿ

ಮಂಗಳೂರು: ಸ್ಕೂಟರ್ ಸ್ಕಿಡ್; ವಿದ್ಯಾರ್ಥಿ ಮೃತ್ಯು

ಮಂಗಳೂರು, ಜ.13: ಸ್ಕೂಟರ್ ಸ್ಕಿಡ್ ಆದ ಪರಿಣಾಮ ಸವಾರ ವಿದ್ಯಾರ್ಥಿ ಮೃತಪಟ್ಟ ಘಟನೆ ನಗರದ ಹಂಪನಕಟ್ಟೆ ಬಳಿ ರವಿವಾರ ರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿ ಮುಹಮ್ಮದ್ ಉಮರ್(18 )ಎಂದು ಗುರುತಿಸಲಾಗಿದೆ. ವಾಮಂಜೂರಿನ‌ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾನೆ. ಉಮರ್ ರವಿವಾರ ರಾತ್ರಿ ಹಂಪನಕಟ್ಟೆ ಬಳಿ ದ್ವಿಚಕ್ರದಲ್ಲಿ ಸಾಗುತ್ತಿರುವಾಗ ತನ್ನ ವಾಹನ ಸ್ಕಿಡ್ ಆದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿತ್ತು. ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ‌ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ

ಮಂಗಳೂರು: ಸ್ಕೂಟರ್ ಸ್ಕಿಡ್; ವಿದ್ಯಾರ್ಥಿ ಮೃತ್ಯು Read More »

ಕರಾವಳಿ

ಮುಂಬೈ: ರಾಸಾಯನಿಕ ಉತ್ಪಾದನ ಘಟಕದಲ್ಲಿ ಸ್ಫೋಟ;  6 ಮಂದಿ ಸಾವು

ಮುಂಬೈ, ಜ.12: ಮುಂಬೈನಿಂದ 100 ಕಿ.ಮೀ ದೂರದಲ್ಲಿರುವ ಪಾಲ್ಗಾರ್ ಜಿಲ್ಲೆಯ ತಾರಾಪುರದ ನೈಟ್ರೇಟ್ ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಸ್ಫೋಟ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾರಾ ಘಟಕದಲ್ಲಿದ್ದ ರಿಯಾಕ್ಟರ್ ಸ್ಫೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟಕದಲ್ಲಿ ಇನ್ನು ಹಲವು ಸಿಲುಕಿಕೊಂಡಿದ್ದು ಅವರ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಮುಂಬೈ: ರಾಸಾಯನಿಕ ಉತ್ಪಾದನ ಘಟಕದಲ್ಲಿ ಸ್ಫೋಟ;  6 ಮಂದಿ ಸಾವು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ದಾಖಲೆ ಇಲ್ಲದ ವಿದೇಶಿ ಕರೆನ್ಸಿ ವಶ

ಮಂಗಳೂರು, ಜ.11: ದಾಖಲೆ ಇಲ್ಲದ ಸುಮಾರು 5,48,000 ರೂಪಾಯಿಯ ವಿದೇಶಿ ಕರೆನ್ಸಿಗಳನ್ನು ಹೊಂದಿದ್ದ ದುಬೈಗೆ ಸಂಚರಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಎಫ್‌ಎಸ್‌ಎಫ್ ಅಧಿಕಾರಿಗಳು ಶನಿವಾರ ಮುಂಜಾನೆ 6.30 ಗಂಟೆಗೆ ಪ್ರಯಾಣಿಕರ ಬ್ಯಾಗೇಜುಗಳ ತಪಾಸಣೆ ಮಾಡುತ್ತಿದ್ದ ವೇಳೆ ದುಬೈಗೆ ಸ್ಪಯ್ಸ್ ಜೆಟ್ ವಿಮಾನದ ಮೂಲಕ ತೆರಳಲಿದ್ದ ಪ್ರಯಾಣಿಕ ಶಾಹುಲ್ ಹಮೀದ್‌ ಎಂಬವರ ಕೈ ಚೀಲದಲ್ಲಿ ಅನುಮಾನಾಸ್ಪದ ಚಿತ್ರವನ್ನು ಗಮನಿಸಿದ್ದು ಪರಿಶೀಲನೆ ನಡೆಸಿ ವಿದೇಶಿ ಕರೆನ್ಸಿಗಳನ್ನು ಪತ್ತೆ ಹಚ್ಚಿದ್ದಾರೆ. ಪ್ರಯಾಣಿಕನಿಂದ ಯುಎಸ್

ಮಂಗಳೂರು: ದಾಖಲೆ ಇಲ್ಲದ ವಿದೇಶಿ ಕರೆನ್ಸಿ ವಶ Read More »

ಕರಾವಳಿ
Scroll to Top