Keerthana

ದಿಲ್ಲಿಯಲ್ಲಿ ಮತ್ತೆ ಅಗ್ನಿ ದುರಂತ: ಓರ್ವ ಸಾವು, ಹಲವು ಮಂದಿಗೆ ಗಾಯ

ಹೊಸದಿಲ್ಲಿ, ಜ.9:ಇಲ್ಲಿನ ಕೈಗಾರಿಕ ಪ್ರದೇಶವೊಂದರಲ್ಲಿ ಇಂದು ಮುಂಜಾನೆ ಬೆಂಕಿ ದುರಂತ ಸಂಭವಿಸಿದ್ದು, ಓರ್ವ ವ್ಯಕ್ತಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಪೂರ್ವ ದಿಲ್ಲಿ ಯ ಪತ್ ಪರ್ ಗಂಜ್‌ನಲ್ಲಿ ನಡೆದಿದೆ. ಸ್ಥಳಕ್ಕೆ 32 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು,  ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಪತ್ ಪರ್ ಗಂಜ್ ಕೈಗಾರಿಕಾ ಪ್ರದೇಶದ ಪೇಪರ್ ಪ್ರಿಂಟಿಗ್ ಪ್ರೆಸ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಾರದ ಹಿಂದೆ ದಿಲ್ಲಿ ಪಿರಾಗ್ರಹಿ ಇನ್ ವರ್ಟರ್ ಬ್ಯಾಟರಿ […]

ದಿಲ್ಲಿಯಲ್ಲಿ ಮತ್ತೆ ಅಗ್ನಿ ದುರಂತ: ಓರ್ವ ಸಾವು, ಹಲವು ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

Breaking news: ಬೆಂಗಳೂರು: ಭೀಕರ ರಸ್ತೆ ಅಪಘಾತ; ಹೊಸಂಗಡಿಯ ಮೂವರು ಮೃತ್ಯು, ಆರು ಮಂದಿ ಗಂಭೀರ

ರಾಮನಗರ, ಜ.9: ಇಲ್ಲಿನ ಗುಡೇಮಾರನಹಳ್ಳಿ ಬಳಿ ಭೀಕರ ಅಪಘಾತ ಉಂಟಾಗಿದ್ದು, ಪರಿಣಾಮ ಮೂವರು ಮೃತಪಟ್ಟು, ಆರು ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಮೃತಪಟ್ಟವರು ಕಾಸರಗೋಡು ಜಿಲ್ಲೆಯ ಹೊಸಂಗಡಿಯವರೆಂದು ತಿಳಿದು ಬಂದಿದೆ. ಇವರು ತಿರುಪತಿ ದೇವಸ್ಥಾನದಿಂದ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

Breaking news: ಬೆಂಗಳೂರು: ಭೀಕರ ರಸ್ತೆ ಅಪಘಾತ; ಹೊಸಂಗಡಿಯ ಮೂವರು ಮೃತ್ಯು, ಆರು ಮಂದಿ ಗಂಭೀರ Read More »

ಕರಾವಳಿ, ಕರ್ನಾಟಕ

ನಿವೃತ್ತ ರೋಟರಿ ಗವರ್ನರ್ ಸೂರ್ಯಪ್ರಕಾಶ್ ಭಟ್ ನಿಧನ

ಮಂಗಳೂರು, ಜ.9: ನಿವೃತ್ತ ರೋಟರಿ ಡಿಸ್ಟಿಕ್ ಗವರ್ನರ್ ಸೂರ್ಯಪ್ರಕಾಶ್ ಭಟ್ (62) ಅಲ್ಪಕಾಲದ ಅನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಎರಡು ವಾರಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸೂರ್ಯಪ್ರಕಾಶ್ ಭಟ್ ಅವರು ಕೋಮಾ ಸ್ಥಿತಿದೆ ತಲುಪ್ಪಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ 9:20ಕ್ಕೆ ಅಸುನೀಗಿದ್ದಾರೆ. ಸೂರ್ಯಪ್ರಕಾಶ್ ಅವರು ನಗರದ ಮಿಲಾಗ್ರಿಸ್ ಪ್ರೌಢಶಾಲೆಯಲ್ಲಿ ತಮ್ಮ ಪ್ರೌಢ ಶಾಲಾ ಶಿಕ್ಷಣ ಪಡೆದಿದ್ದು ಬಳಿಕ ಸಂತ ಅಲೋಶಿಯಸ್ ಕಾಲೇಜಿನಲ್ಲಿ

ನಿವೃತ್ತ ರೋಟರಿ ಗವರ್ನರ್ ಸೂರ್ಯಪ್ರಕಾಶ್ ಭಟ್ ನಿಧನ Read More »

ಕರಾವಳಿ

180 ಪ್ರಯಾಣಿಕರಿದ್ದ ಉಕ್ರೇನಿನ ವಿಮಾನ ಟೆಹ್ರಾನ್‌ನಲ್ಲಿ ಪತನ

ಟೆಹ್ರಾನ್, ಜ.8: ಸುಮಾರು 180 ಪ್ರಯಾಣಿಕರು ಸೇರಿದಂತೆ ಸಿಬ್ಬಂದಿಯನ್ನು ಹೊತ್ತು ಸಾಗಿದ್ದ ಉಕ್ರೇನಿನ ವಿಮಾನವೊಂದು ಇರಾನ್ ನ ಟೆಹ್ರಾನ್ ನಲ್ಲಿ ಪತನವಾಗಿದೆ ಎಂದು ವರದಿಯಾಗಿದೆ. ಇರಾನ್ ನ ರಾಜಧಾನಿ ಟೆಹ್ರಾನ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದ್ದ ಬೋಯಿಂಗ್ 737 ವಿಮಾನ ಪತನವಾಗಿದೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ದೋಷದಿಂದ ವಿಮಾನ ಪತನವಾಗಿದೆ ಎಂದು ಹೇಳಲಾಗಿದೆ. ಯಾವುದೇ ಸಾವುನೋವಿನ ಬಗ್ಗೆ ಇದುವರೆಗೆ ವರದಿಯಾಗಿಲ್ಲ.  

180 ಪ್ರಯಾಣಿಕರಿದ್ದ ಉಕ್ರೇನಿನ ವಿಮಾನ ಟೆಹ್ರಾನ್‌ನಲ್ಲಿ ಪತನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತ ಬಂದ್: ಮಂಗಳೂರು ಯಥಾಸ್ಥಿತಿ

ಮಂಗಳೂರು, ಜ.8: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ಕರೆ ಕೊಟ್ಟಿದ ಭಾರತ ಬಂದ್‌ಗೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಮತ್ತು ಸರಕಾರಿ ಬಸ್ ಗಳು, ಆಟೋಗಳು ಎಂದಿನಂತೆ ಓಡಾಡುತ್ತಿವೆ. ಜನಜೀವನದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಕೇರಳದಲ್ಲಿ ಬಂದ್ ಗೆ ಬೆಂಬಲ ನೀಡಿರುವ ಕಾರಣ ಕಾಸರಗೋಡಿಗೆ ಹೋಗುವ ಬಸ್ ಗಳು ಮಂಗಳೂರಿನಲ್ಲಿಯೇ ಮೊಕ್ಕಾಂ ಹೂಡಿವೆ. ಯಾವುದೇ ಬಸ್ ಗಳು ಕೇರಳ ರಾಜ್ಯಕ್ಕೆ ಸಂಚರಿಸುತ್ತಿಲ್ಲ.

ಭಾರತ ಬಂದ್: ಮಂಗಳೂರು ಯಥಾಸ್ಥಿತಿ Read More »

ಕರಾವಳಿ

ಹಿರಿಯ ಪತ್ರಕರ್ತ ರವಿರಾಜ್ ವಳಳಾಂಬೆ ನಿಧನ

ಉಡುಪಿ, ಜ.8 : ಹಿರಿಯ ಪತ್ರಕರ್ತ ರವಿರಾಜ್ ವಳಳಾಂಬೆ ಅವರು ಮಂಗಳವಾರ ತಡ ರಾತ್ರಿ ಉಡುಪಿಯ‌ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಹೃದಯಘಾತದಿಂದ ನಿಧನ‌ ಹೊಂದಿದ್ದಾರೆ. ಎದೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅಸುನೀಗಿದ್ದಾರೆ. ಉಡುಪಿಯಲ್ಲಿ ಈ‌ಟಿವಿ ವರದಿಗಾರನಾಗಿ ಹಲವು ವರ್ಷಗಳ‌ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ವರದಿಗಾರನಾಗಿ‌ ಕೆಲಸ ಮಾಡಿ ಬಳಿಕ‌ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು‌ಮಿತ್ರರನ್ನು ಅಗಲಿದ್ದಾರೆ.  

ಹಿರಿಯ ಪತ್ರಕರ್ತ ರವಿರಾಜ್ ವಳಳಾಂಬೆ ನಿಧನ Read More »

ಕರಾವಳಿ

Breaking News ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜ.22ರಂದು ಗಲ್ಲು: ದಿಲ್ಲಿ ಕೋರ್ಟ್ ಆದೇಶ

ಹೊಸದಿಲ್ಲಿ, ಜ.7: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಜನವರಿ 22ರಂದು ಬೆಳಗ್ಗೆ 7ಗಂಟೆಗೆ ಗಲ್ಲಿಗೇರಿಸುವಂತೆ ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯ ಆರೋಪಿಯ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ಒಂದು ತಿಂಗಳ ನಂತರ ನಾಲ್ವರು ಆರೋಪಿಗಳಿಗೆ ಶೀಘ್ರ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಮಂಗಳವಾರ ಡೆತ್ ವಾರಂಟ್ ಜಾರಿ

Breaking News ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜ.22ರಂದು ಗಲ್ಲು: ದಿಲ್ಲಿ ಕೋರ್ಟ್ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆ ಭಾರತ ಬಂದ್: ತುರ್ತು ಸೇವೆಗಳು ಲಭ್ಯ

ಬೆಂಗಳೂರು, ಜ.7. ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಲವು ಕಾರ್ಮಿಕ ಸಂಘಟನೆಗಳು ಮತ್ತು ಎಡಪಕ್ಷಗಳು ಜ.8 ರಂದು ಭಾರತ ಬಂದ್​ಗೆ ಕರೆ ನೀಡಿವೆ. ಭಾರತ ಬಂದ್​ ಗೆ ಹಲವು ಸಂಘ-ಸಂಸ್ಥೆಗಳು, ಸರ್ಕಾರಿ ಹಾಗೂ ಖಾಸಗಿ ನೌಕರರು ಬೆಂಬಲ ನೀಡಿದ್ದಾರೆ. ಆ ದಿನದ ಪರಿಸ್ಥಿತಿ ಅವಲೋಕಿಸಿ, ಶಾಲಾ-ಕಾಲೇಜಿಗೆ ರಜೆ ನೀಡಲು ಆಯಾ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗೆಳಿಗೆ ಸೂಚನೆ ನೀಡಲಾಗಿದೆ. ಕರ್ನಾಟಕ ಸರ್ಕಾರ ಕೂಡ ಆ ದಿನ ಶಾಲಾ-ಕಾಲೇಜುಗಳಿಗೆ, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

ನಾಳೆ ಭಾರತ ಬಂದ್: ತುರ್ತು ಸೇವೆಗಳು ಲಭ್ಯ Read More »

ಕರಾವಳಿ, ಕರ್ನಾಟಕ

ಉಡುಪಿ: ಜೈಲಿನಿಂದ ಬಿಡುಗಡೆಗೊಂಡ ಯುವಕ ನೇಣು ಬಿಗಿದು ಆತ್ಮಹತ್ಯೆ

ಉಡುಪಿ, ಜ.7: ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂರು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಯಾಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಕೋಟೆ ಗ್ರಾಮದ ಸಾಕಂಬಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪೀಟರ್‌ ಡಿಸಿಲ್ವಾ ಎಂಬವರ ಪುತ್ರ ಆತೀಶ್‌ ಡಿಸಿಲ್ವಾ (23) ಎಂದು ಗುರುತಿಸಲಾಗಿದೆ. ಯುವಕನು ವೃತ್ತಿಯಲ್ಲಿ ಪೈಂಟರ್‌ ಆಗಿದ್ದು ಸುಮಾರು 5 ತಿಂಗಳ ಹಿಂದೆ ಮಣಿಪಾಲದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದು ಮೂರು ತಿಂಗಳ ಕಾಲ ಜೈಲು ಶಿಕ್ಷೆ

ಉಡುಪಿ: ಜೈಲಿನಿಂದ ಬಿಡುಗಡೆಗೊಂಡ ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

ಜೆಎನ್‌ಯು ಹಿಂಸಾಚಾರ: ಆರೋಪಿಗಳ ಸುಳಿವು ಲಭ್ಯ

ಹೊಸದಿಲ್ಲಿ, ಜ.7: ಇಲ್ಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಮೇಲೆ ಮುಸುಕುಧಾರಿ ಗೂಂಡಾಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಳಿಕೋರರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ವರೆಗೆ ಯಾರೂ ಬಂಧನಕ್ಕೊಳಗಾಗಿಲ್ಲ. ಆದರೆ, ಪ್ರಕರಣ ಸಂಬಂಧ ಪೊಲೀಸರಿಗೆ ಮಹತ್ವದ ಸುಳಿವುಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಪ್ರಕರಣದ ತನಿಖೆ ದೆಹಲಿ ಕ್ರೈಮ್ ಬ್ರಾಂಚ್’ಗೆ ಹಸ್ತಾಂತರಿಸಲಾಗಿದೆ. ಇನ್ನೊಂದೆಡೆ ಜೆಎನ್’ಯು ಹಿಂಸಾಚಾರದ ವಿರುದ್ಧ ದೇಶದಾದ್ಯಂತ ಆಕ್ರೋಷ ವ್ಯಕ್ತವಾಗಿದ್ದು, ರಾಜಕೀಯಕ ಪಕ್ಷಗಳು, ಜನತೆ ಹಾಗೂ ವಿದ್ಯಾರ್ಥಿಗಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಜೆಎನ್‌ಯು ಹಿಂಸಾಚಾರ: ಆರೋಪಿಗಳ ಸುಳಿವು ಲಭ್ಯ Read More »

ರಾಷ್ಟ್ರೀಯ ನ್ಯೂಸ್
Scroll to Top