Keerthana

ದಿಲ್ಲಿ: ಮಂಜು ಆವರಿಸಿ ರಸ್ತೆ ಕಾಣದೆ ಕಣಿವೆಗೆ ಬಿದ್ದ ಕಾರು; ಆರು ಮಂದಿ ಮೃತ್ಯು

ಹೊಸದಿಲ್ಲಿ, ಡಿ.30: ರಸ್ತೆಯಲ್ಲಿ ಸಂಪೂರ್ಣ ಮಂಜು ಆವರಿಸಿದ ಪರಿಣಾಮ ರಸ್ತೆ ಕಾಣದೆ ಕಾರೊಂದು ಕಣಿವೆಗೆ ಉರುಳಿ ಆರು ಮಂದಿ ಮೃತಪಟ್ಟ ಘಟನೆ ದಿಲ್ಲಿಯ ಹೊರವಲಯದಲ್ಲಿರುವ ಗ್ರೀಟರ್‌ ನೋಯ್ಡಾದಲ್ಲಿ ನಡೆದಿದೆ.   ಮೃತರನ್ನು ಮಹೇಶ್ ( 35), ಕಿಶನ್ ಲಾಲ್ (50), ನೀರೆಶ್ (17), ರಾಮ್ ಖಿಲಾಡಿ (75), ಮಲ್ಲು (12) ಮತ್ತು ನೇತ್ರಪಾಲ್ (40) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಒಟ್ಟು ಹನ್ನೊಂದು ಮಂದಿ ಪ್ರಯಾಣ ಮಾಡಿದ್ದು,  ಮಕ್ಕಳು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ಐವರಿಗೆ ಗಾಯವಾಗಿದ್ದು ಅವರನ್ನು […]

ದಿಲ್ಲಿ: ಮಂಜು ಆವರಿಸಿ ರಸ್ತೆ ಕಾಣದೆ ಕಣಿವೆಗೆ ಬಿದ್ದ ಕಾರು; ಆರು ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪೇಜಾವರ ಶ್ರೀ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ, ಡಿ.29: ಇಂದು ನಿಧನರಾದ ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯ ಅಗಲುವಿಕೆಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಕಾರ್ಯಾಲಯದಲ್ಲಿ ತಾವು ಶ್ರೀಗಳನ್ನು ಭೇಟಿ ಮಾಡಿದ ಸಂದರ್ಭದ ಎರಡು ಫೊಟೊಗಳನ್ನು ಹಾಕಿಕೊಂಡು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ಪೇಜಾವರ ಶ್ರೀ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಪೇಜಾವರ ಶ್ರೀ ನಿಧನ: ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ

ಉಡುಪಿ, ಡಿ.29: ಇಂದು ನಿಧನರಾದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯ ಅಂತಿಮ ಸಾರ್ವಜನಿಕ ದರ್ಶನಕ್ಕೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ. ಮಧ್ಯಾಹ್ನದ ಬಳಿಕ ಶ್ರೀಗಳ ಪಾರ್ಥೀವ ಶರೀರವನ್ನು ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ತೆಗೆದುಕೊಂಡು ಹೋಗಲಾಗುವುದು. ಅಲ್ಲಿ ನ್ಯಾಷನಲ್ ಕಾಲೇಜ್ ಗ್ರೌಂಡ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಆ ಬಳಿಕ ಶ್ರೀನಗರದ ಸಮೀಪ ಇರುವ ವಿದ್ಯಾಪೀಠದಲ್ಲಿ ಶ್ರೀಗಳನ್ನು ಬೃಂದಾವರಸ್ಥರನ್ನಾಗಿಸಲಾಗುವುದು ಎಂದು ಪೇಜಾವರ ಮಠದ ಮೂಲಗಳು ತಿಳಿಸಿವೆ.

ಪೇಜಾವರ ಶ್ರೀ ನಿಧನ: ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ Read More »

ಕರಾವಳಿ

Big Breaking News ಪೇಜಾವರ ಶ್ರೀ ನಿಧನ

ಉಡುಪಿ, ಡಿ.29: ಇಲ್ಲಿನ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ ಮುಖ್ಯಸ್ಥರಾದ ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿ (89) ನಿಧನರಾಗಿದ್ದಾರೆ. ಡಿ.20ರಂದು ಮುಂಜಾನೆ 3 ಗಂಟೆ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು ಉಸಿರಾಟದ ತೊಂದರೆಯುಂಟಾಗಿತ್ತು. ಕೂಡಲೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ನಂತರ ಅಂದೇ ಮುಂಜಾನೆ 5 ಸುಮಾರಿಗೆ ಪೇಜಾವರ ಶ್ರೀ ಅವರನ್ನು ಮಣಿಪಾಲ ಕೆಎಂಸಿಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಸತತ ಎಂಟು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಸುಬ್ರಹ್ಮಣ್ಯದ ಸಮೀಪದ ಹಳ್ಳಿಯಾದ

Big Breaking News ಪೇಜಾವರ ಶ್ರೀ ನಿಧನ Read More »

ಕರಾವಳಿ

Big Breaking news ಪೇಜಾವರ ಶ್ರೀ ಮಠಕ್ಕೆ ಸ್ಥಳಾಂತರ: ಭಾರೀ ಪೊಲೀಸ್ ಭದ್ರತೆ

ಉಡುಪಿ, ಡಿ.29: ಕಳೆದ ಎಂಟು ದಿನಗಳಿಂದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯನ್ನು ರವಿವಾರ ಬೆಳಗ್ಗೆ ಮಠಕ್ಕೆ ಕರೆತರಲಾಗಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರಿದಿದೆ. ಮಠ ಹಾಗೂ ಉಡುಪಿಯಲ್ಲಿ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸುಮಾರು 700 ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ. ಪಲಿಮಾರು ಶ್ರೀ, ಕಿರಿಯ ಶ್ರೀ, ರಾಮಚಂದ್ರ ಮಠದ ರಾಫವೇಂದ್ರ ಶ್ರೀ, ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ, ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ

Big Breaking news ಪೇಜಾವರ ಶ್ರೀ ಮಠಕ್ಕೆ ಸ್ಥಳಾಂತರ: ಭಾರೀ ಪೊಲೀಸ್ ಭದ್ರತೆ Read More »

ಕರಾವಳಿ

Big Breaking News ಪೇಜಾವರ ಆರೋಗ್ಯ ವಿಚಾರಿಸಲು ಸಿಎಂ ಯಡಿಯೂರಪ್ಪ ದೌಡು: ಕ್ಷಣ ಕ್ಷಣವೂ ಆತಂಕ

ಉಡುಪಿ, ಡಿ.28: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರಗೆ ದೌಡಯಿಸಿದ್ದಾರೆ. ಸ್ವಾಮೀಜಿ ಆರೋಗ್ಯ ಸ್ಥಿತಿಗತಿಯ ಮಾಹಿತಿ ನೀಡುವ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಕೆಎಂಸಿ ವೈದ್ಯರ ತಂಡ, ಸ್ವಾಮೀಜಿಯ ಆರೋಗ್ಯ ಸ್ಥಿತಿ ಸುಧಾರಿಸುವ ಲಕ್ಷಣಗಳು ತೋರುತ್ತಿಲ್ಲ. ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು,

Big Breaking News ಪೇಜಾವರ ಆರೋಗ್ಯ ವಿಚಾರಿಸಲು ಸಿಎಂ ಯಡಿಯೂರಪ್ಪ ದೌಡು: ಕ್ಷಣ ಕ್ಷಣವೂ ಆತಂಕ Read More »

ಕರಾವಳಿ

Big breaking news ಪೇಜಾವರ ಆರೋಗ್ಯ ಸ್ಥಿತಿ ತೀರಾ ಗಂಭೀರ: ಮೆದುಳು ನಿಷ್ಕ್ರಿಯ; ಕೆಎಂಸಿ ವೈದ್ಯರ ಹೇಳಿಕೆ

ಉಡುಪಿ, ಡಿ.28: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಮೆದುಳು ನಿಷ್ಕ್ರಿಯವಾಗಿದ್ದು, ಪರಿಸ್ಥಿತಿ ತೀರಾ ಗಂಭೀರವಾಗಿದೆ’ ಎಂದು ಮಣಿಪಾಲದ ವೈದ್ಯರು ತಿಳಿಸಿದ್ದಾರೆ. ಸ್ವಾಮೀಜಿ ಆರೋಗ್ಯ ಸ್ಥಿತಿಗತಿಯ ಮಾಹಿತಿ ನೀಡುವ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಸ್ವಾಮೀಜಿಯ ಆರೋಗ್ಯ ಸ್ಥಿತಿ ಸುಧಾರಿಸುವ ಲಕ್ಷಣಗಳು ತೋರುತ್ತಿಲ್ಲ. ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಮತ್ತಷ್ಟು ಕ್ಷೀಣಿಸಿದೆ. ಇನ್ನೂ

Big breaking news ಪೇಜಾವರ ಆರೋಗ್ಯ ಸ್ಥಿತಿ ತೀರಾ ಗಂಭೀರ: ಮೆದುಳು ನಿಷ್ಕ್ರಿಯ; ಕೆಎಂಸಿ ವೈದ್ಯರ ಹೇಳಿಕೆ Read More »

ಕರಾವಳಿ

ಮಂಗಳೂರು: ಬಸ್ ಢಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಮೃತ್ಯು

ಮಂಗಳೂರು, ಡಿ.28: ಚಾಲಕ ನಿಯಂತ್ರಣ ತಪ್ಪಿದ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ರಾ.ಹೆ.ಯಲ್ಲಿ ಕೆತ್ತಿಕಲ್‌ನಲ್ಲಿ ಇಂದು ನಡೆದಿದೆ. ಮೃತಪಟ್ಟ ಚಾಲಕನ ಮಾಹಿತಿ ತಿಳಿದು ಬಂದಿಲ್ಲ. ಶ್ರೀರಾಮ್ ಟ್ರಾವೆಲ್ಸ್‌ಗೆ ಸೇರಿದ ಬಸ್ ಇದಾಗಿದ್ದು, ಮೂಡಬಿದಿರೆ ಕಡೆಯಿಂದ ಮಂಗಳೂರು ಪ್ರಯಾಣಿಸುತ್ತಿತ್ತು ಎಂದು ತಿಳಿದುಬಂದಿದೆ. ಅತಿವೇಗದಿಂದ ಬರುತ್ತಿದ್ದ ಬಸ್ ಕೆತ್ತಿಕಲ್ ಬಳಿಯ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ಬಸ್ ಢಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರಿಗೆ ಬಂದಿಳಿದ ಪ.ಬಂಗಾಳ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರ ತಂಡ

ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬಕ್ಕೆ ಸಾಂತ್ವನ ಮಂಗಳೂರು, ಡಿ.28: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಮುಖ ನಾಯಕರ ತಂಡ ಶನಿವಾರ ಮಂಗಳೂರಿಗೆ ಆಗಮಿಸಿದೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನಿರ್ದೇಶನದಂತೆ, ರಾಜ್ಯಸಭಾ ಸದಸ್ಯ ನದೀಮುಲ್ ಹಖ್ ಮತ್ತು ಕೇಂದ್ರ ರೈಲ್ವೇ ಖಾತೆ ಮಾಜಿ ಸಚಿವ ದಿನೇಶ್ ತ್ರಿವೇದಿ ಡಿ.19ರಂದು ಗೋಲಿಬಾರ್‌ನಲ್ಲಿ ಮೃತಪಟ್ಟಿರುವ ಅಬ್ದುಲ್ ಜಲೀಲ್ ಕಂದುಕ ಮತ್ತು ನೌಶೀರ್ ಕುದ್ರೋಳಿ ಅವರ ಮನೆಗೆ ಭೇಟಿ ನೀಡಿದರು. ಮೃತರ ಕುಟುಂಬದ ಜತೆ ಮಾಹಿತಿ ಪಡೆದು, ಇಲ್ಲಿಯ

ಮಂಗಳೂರಿಗೆ ಬಂದಿಳಿದ ಪ.ಬಂಗಾಳ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರ ತಂಡ Read More »

ಕರಾವಳಿ

ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆ ಆರಂಭ

ಮಂಗಳೂರು, ಡಿ.28: ಪೌರತ್ವ ತಿದ್ದುಪಡಿ ಕಾಯ್ದೆ  ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ಹಾಗೂ ಗೋಲಿಬಾರ್ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖಾ ತಂಡ ಶುಕ್ರವಾರ ತನಿಖೆ ಆರಂಭಿಸಿದೆ. ಸಿಐಡಿ ಎಸ್ಪಿ ರಾಹುಲ್ ಶಹಾಪೂರ್ ನೇತೃತ್ವದಲ್ಲಿ 5 ಮಂದಿ ಅಧಿಕಾರಿಗಳ ತಂಡ ತನಿಖೆ ಕೈಗೆತ್ತಿಕೊಂಡಿದೆ. ಸಿಐಡಿ ತಂಡಕ್ಕೆ ತನಿಖೆ ನಡೆಸಿ ಪೂರ್ಣಗೊಳಿಸಿ ವರದಿ ಸಲ್ಲಿಸಲು ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ. ಶುಕ್ರವಾರ ಬೆಳಗ್ಗೆ ಕಮಿಷನರ್ ಕಚೇರಿಗೆ ಆಗಮಿಸಿದ ಸಿಐಡಿ ಎಸ್ಪಿ ರಾಹುಲ್ ಶಹಾಪೂರ್ ನೇತೃತ್ವದ ತನಿಖಾ

ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆ ಆರಂಭ Read More »

ಕರಾವಳಿ
Scroll to Top