Keerthana

ಮಂಗಳೂರಿನಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ

ಮಂಗಳೂರು, ಡಿ.25: ಯೇಸು ಕ್ರಿಸ್ತರ ಜನನದ ಹಬ್ಬದ ಮುನ್ನಾ ದಿನವಾದ ಮಂಗಳವಾರ ಕ್ರೈಸ್ತರು ಕ್ರಿಸ್ಮಸ್‌ ಜಾಗರಣೆಯ ರಾತ್ರಿಯನ್ನು ಆಚರಿಸಿದರು. ಚರ್ಚ್‌ಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು. ಚರ್ಚ್‌ ಆವರಣದಲ್ಲಿ ಮತ್ತು ಕ್ರೈಸ್ತರ ಮನೆ ಆವರಣದಲ್ಲಿ ಆಕರ್ಷಕ ನಕ್ಷತ್ರಗಳನ್ನು ಜೋಡಿಸಲಾಗಿತ್ತು. ಚರ್ಚ್‌ಗಳಲ್ಲಿ ರಾತ್ರಿ ವೇಳೆ ಜರುಗಿದ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕ್ರಿಸ್ಮಸ್‌ ಕ್ಯಾರೊಲ್‌ಗಳನ್ನು ಹಾಡಿ ಯೇಸು ಕ್ರಿಸ್ತರ ಜನನವನ್ನು ಸ್ಮರಿಸಿ ಕಂದ ಯೇಸುವಿಗೆ ನಮಿಸಿದರು. ಮಂಗಳೂರಿನ ರೊಸಾರಿಯ ಕೆಥೆಡ್ರಲ್‌ನಲ್ಲಿ ರಾತ್ರಿ ನಡೆದ ಸಂಭ್ರಮದ ಬಲಿ ಪೂಜೆಯಲ್ಲಿ […]

ಮಂಗಳೂರಿನಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ Read More »

ಕರಾವಳಿ

ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಾ.ವೀರೇಂದ್ರ ಹೆಗ್ಗಡೆ ಆಯ್ಕೆ

ಬೆಂಗಳೂರು, ಡಿ.25: ಪ್ರತಿಷ್ಠಿತ ಬೆಂಗಳೂರು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ ಯುಗದ ಸಾಧಕ ಪ್ರಶಸ್ತಿಗೆ ಪ್ರೊ.ಜಿ.ವೆಂಕಟಸುಬ್ಬಯ್ಯ, 2019 ನೇ ಸಾಲಿನ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗಳಿಗೆ ಎಂ.ಸಿದ್ದರಾಜು, ಕೆ.ಸುನೀಲ್ ಪ್ರಸಾದ್, ಕೆ.ಎಚ್.ಸಾವಿತ್ರಿ, ಬಿ.ವಿ.ನಾಗರಾಜು, ರವೀಂದ್ರ ಜಿ. ಭಟ್, ಕೆ.ಎನ್.ಚೆನ್ನೇಗೌಡ, ಬಿ.ಹರಿಶ್ಚಂದ್ರ ಭಟ್, ಎಂ.ಅಬ್ದುಲ್ ಹಮೀದ್, ಇಮ್ರಾನ್ ಖುರೇಶಿ, ಜಿ.ಕೆ.ಸತ್ಯ, ಲಕ್ಷ್ಮಣ ಕೊಡಸೆ, ಜೋಸೆಫ್ ಹೂವರ್, ಎನ್.ಎಸ್.ಶಂಕರ್, ಬಿ.ಕೆ.ರವಿ, ರು.ಬಸಪ್ಪ ಹಾಗೂ ಜಯಪ್ರಕಾಶ್ ಶೆಟ್ಟಿ ಅವರನ್ನು ಆಯ್ಕೆ

ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಾ.ವೀರೇಂದ್ರ ಹೆಗ್ಗಡೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು ಗೋಲಿಬಾರ್ ಪ್ರಕರಣ: ಕಮಿಷನರ್, ಇನ್ಸ್ ಸ್ಪೆಕ್ಟರ್ ಅಮಾನತಿಗೆ ದಿನೇಶ್ ಗುಂಡೂರಾವ್ ಆಗ್ರಹ

ಮಂಗಳೂರು, ಡಿ.24: ಪೌರತ್ವ ಕಾಯ್ದೆ ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಗೋಲಿಬಾರ್‌ಗೆ ಇಬ್ಬರ ಸಾವಿಗೆ ಕಾರಣರಾದ ಮಂಗಳೂರು ಪೊಲೀಸ್ ಆಯುಕ್ತ ಡಾ.ಹರ್ಷ ಹಾಗೂ ಇನ್ ಸ್ಪೆಕ್ಟರ್ ಶಾಂತರಾಮ ಕುಂದರ್ ಅವರನ್ನು ಅಮಾನತುಗೊಳಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಿಐಡಿ ತನಿಖೆ ಸಾಲದು. ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದರು. ಅಲ್ಲದೆ ಕಮಿಷನರ್ ಮತ್ತು ಇನ್ಸ್ ಪೆಕ್ಟರ್ ಸಹಿತ ತಪ್ಪಿತಸ್ಥ

ಮಂಗಳೂರು ಗೋಲಿಬಾರ್ ಪ್ರಕರಣ: ಕಮಿಷನರ್, ಇನ್ಸ್ ಸ್ಪೆಕ್ಟರ್ ಅಮಾನತಿಗೆ ದಿನೇಶ್ ಗುಂಡೂರಾವ್ ಆಗ್ರಹ Read More »

ಕರಾವಳಿ

ಮಂಗಳೂರಿನಲ್ಲಿ ನಿಷೇಧಾಜ್ಞೆ ಇಂದಿಗೆ ಅಂತ್ಯ

ಮಂಗಳೂರು, ಡಿ.24: ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುವ ಹಿನ್ನೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಿದ ನಿಷೇಧಾಜ್ಞೆ ಇಂದಿಗೆ ಅಂತ್ಯಗೊಂಡಿದೆ. ಡಿ.19ರಿಂದ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಆದೇಶ ಹೊರಡಿಸಿದ್ದರು.    

ಮಂಗಳೂರಿನಲ್ಲಿ ನಿಷೇಧಾಜ್ಞೆ ಇಂದಿಗೆ ಅಂತ್ಯ Read More »

ಕರಾವಳಿ

ಸಿಎಎ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ ಹಿನ್ನೆಲೆ: ಎನ್ಆರ್ ಸಿ ಜಾರಿಗೆ ಕೇಂದ್ರ ಹಿಂದೇಟು!

ಹೊಸದಿಲ್ಲಿ, ಡಿ.24: ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಎನ್ಆರ್ ಸಿ ಜಾರಿಗೆ ಹಿಂದೇಟು ಹಾಕಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ  ಅಕ್ರಮ ನುಸುಳುಕೋರರನ್ನು ಪತ್ತೆ ಹಚ್ಚಿ ಹೊರದಬ್ಬಲು 2024ರೊಳಗೆ ಕೇಂದ್ರ ಸರಕಾರ ದೇಶಾದ್ಯಂತ ಹಂತಹಂತವಾಗಿ ಎನ್‌ಆರ್‌ಸಿ ಜಾರಿಗೆ ತಂದೇ ತೀರುತ್ತದೆ ಎಂದು ಗುಡುಗಿದ್ದರು. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆ.ಪಿ. ನಡ್ಡಾ ಸಹಿತ ಬಿಜೆಪಿಯ ಘಟಾನುಘಟಿ ನಾಯಕರು ಇದೇ ರೀತಿ

ಸಿಎಎ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ ಹಿನ್ನೆಲೆ: ಎನ್ಆರ್ ಸಿ ಜಾರಿಗೆ ಕೇಂದ್ರ ಹಿಂದೇಟು! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ಗೋಲಿಬಾರ್ ಪ್ರಕರಣ: ಮ್ಯಾಜಿಸ್ಟ್ರೀಯಲ್  ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಡಿ. 24: ಪೌರತ್ವ ತಿದ್ದುಪತಿ ಕಾಯ್ದೆ  ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟ ಪ್ರಕರಣವನ್ನು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೀಯಲ್  ತನಿಖೆಗೆ ವಹಿಸಿ ಆದೇಶಿಸಿದೆ. ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ಮ್ಯಾಜಿಸ್ಟ್ರೀಯಲ್ ತನಿಖೆ ನಡೆಸುವಂತೆ ರಾಜ್ಯ ಸರಕಾರ ಆದೇಶಿಸಿದೆ.

ಮಂಗಳೂರು ಗೋಲಿಬಾರ್ ಪ್ರಕರಣ: ಮ್ಯಾಜಿಸ್ಟ್ರೀಯಲ್  ತನಿಖೆಗೆ ರಾಜ್ಯ ಸರ್ಕಾರ ಆದೇಶ Read More »

ಕರಾವಳಿ

ಪುತ್ತೂರು: ಸ್ಫೋಟಕ ತಯಾರಿಸುತ್ತಿರುವ ನಾಲ್ವರ ಬಂಧನ

  ಪುತ್ತೂರು, ಡಿ.24: ಅಕ್ರಮ ಸ್ಫೋಟಕ ತಯಾರಿಸುತ್ತಿರುವ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಮಡ್ಯಲ ಮಜಲು ಎಂಬಲ್ಲಿ ನಡೆದಿದೆ. ಬಂಧಿತರನ್ನು ನರೇಂದ್ರ ಅಲಿಯಾಸ್ ಬಾಬು, ಟಿ. ಬಾಬು, ಟಿ. ಕಾಳಿ ರಾಜ್, ಎಂ. ಕಮಲ ಕನ್ನನ್ ಎಂದು ಗುರುತಿಸಲಾಗಿದೆ. ಇವರು ಸ್ಫೋಟಕ ಸಾಮಗ್ರಿಗಳನ್ನು ಉಪಯೋಗಿಸಿ ಸಿಡಿಮದ್ದು ತಯಾರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ

ಪುತ್ತೂರು: ಸ್ಫೋಟಕ ತಯಾರಿಸುತ್ತಿರುವ ನಾಲ್ವರ ಬಂಧನ Read More »

ಕರಾವಳಿ

ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ಸಿಎಂ

ಬೆಂಗಳೂರು, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿ. ಎಸ್. ಯಡಿಯೂರಪ್ಪ, ಮಂಗಳೂರು ಗಲಭೆಯಲ್ಲಿ ನಡೆದ ಗೋಲಿಬಾರ್ ನ ಬಗ್ಗೆ ನಾವು ಸಿಐಡಿ ತನಿಖೆಗೆ ಒಪ್ಪಿಸುತ್ತಿದ್ದೇವೆ ಎಂದರು. ಪೌರತ್ವ ತಿದ್ದುಪಡಿ ಕಾಯ್ದೆ ಉದ್ದೇಶಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ತಲುಪಿತ್ತು. ಬಂದರ್ ಪೊಲೀಸ್ ಠಾಣೆಯ ಎದುರು ಹಿಂಸಾಚಾರದಲ್ಲಿ ಪೊಲೀಸರ ಗುಂಡೇಟಿಗೆ ಇಬ್ಬರು 

ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ಸಿಎಂ Read More »

ಕರಾವಳಿ, ಕರ್ನಾಟಕ

ಜಾರ್ಖಂಡ್ ಚುನಾವಣಾ ಫಲಿತಾಂಶ: ಜಿದ್ದಾಜಿದ್ದಿನ ಕಾದಾಟದಲ್ಲಿ ಜೆಎಂಎಂ-ಕಾಂಗ್ರೆಸ್, ಬಿಜೆಪಿ

ರಾಂಚಿ, ಡಿ.23: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಇನ್ನೇನು ಕೆಲವೇ ಹೊತ್ತಿನಲ್ಲಿ ಹೊರಬೀಳುವ ಸಾಧ್ಯತೆ ಇದ್ದು, ಈ ವರೆಗಿನ ವರದಿಗಳ ಅನ್ವಯ ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಎದುರಾಗಿದೆ. ಈಗ ಬಂದ ವರದಿಗಳ ಪ್ರಕಾರ ಜಾರ್ಖಂಡ್ ನ ಒಟ್ಟು 81 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಮೈತ್ರಿ ಕೂಟ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಉಳಿದಂತೆ ಅನಿರೀಕ್ಷಿತ

ಜಾರ್ಖಂಡ್ ಚುನಾವಣಾ ಫಲಿತಾಂಶ: ಜಿದ್ದಾಜಿದ್ದಿನ ಕಾದಾಟದಲ್ಲಿ ಜೆಎಂಎಂ-ಕಾಂಗ್ರೆಸ್, ಬಿಜೆಪಿ Read More »

ರಾಷ್ಟ್ರೀಯ ನ್ಯೂಸ್

ಕಾರ್ಕಳ: ಮಹಿಳೆಯನ್ನು ಅಪಹರಿಸಿ ಕೊಲೆ

ಕಾರ್ಕಳ, ಡಿ.23: ಮಹಿಳೆಯನ್ನು ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿ ಹಾಳೆಕಟ್ಟೆ ಎಂಬಲ್ಲಿ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಬಾವಿಗೆ ಎಸೆದಿರುವ ಬಗ್ಗೆ ಡಿ. 22ರಂದು ವರದಿಯಾಗಿದೆ.   ಕೊಲೆಯಾದ ಮಹಿಳೆಯನ್ನು ಬೆಳ್ಮಣ್‌ನ ಬೃಂದಾವನ ಮನೆ ನಿವಾಸಿ ದಿವಂಗತ ಹರಿದಾಸ ಉಡುಪರವರ ಪತ್ನಿ ಬಿ.ಭರತ ಲಕ್ಷ್ಮೀ ಎಂದು ಗುುರುತಿಸಲಾಗಿದೆ. ದುಷ್ಕರ್ಮಿಗಳು ಮಹಿಳೆಯನ್ನು ಕೊಲೆಗೈದು ಪ್ಲಾಸ್ಟಿಕ್ ಕವರ್‌ನಲ್ಲಿ ಪ್ಯಾಕ್ ಮಾಡಿ ಹಾಳೆಕಟ್ಟೆ ಎಂಬಲ್ಲಿ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಬಾವಿ ಎಸೆದಿದ್ದಾರೆನ್ನಲಾಗಿದೆ. ಡಿಸೆಂಬರ್ 2೦ರಂದು ಬೆಳಿಗ್ಗೆ 7ರಿಂದ ರಾತ್ರಿ 8ರ ಮಧ್ಯಾವಧಿಯಲ್ಲಿ ಇವರು

ಕಾರ್ಕಳ: ಮಹಿಳೆಯನ್ನು ಅಪಹರಿಸಿ ಕೊಲೆ Read More »

ಕರಾವಳಿ
Scroll to Top