Keerthana

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್-ಬೈಕ್ ಢಿಕ್ಕಿ; ಇಬ್ಬರು ಯುವಕರು ಮೃತ್ಯು

ಕಾಸರಗೋಡು, ಡಿ.15: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಧಾರುಣ ಘಟನೆ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಳಿ ನಡೆದಿದೆ. ಮೃತ ಯುವಕರನ್ನು ಕುಡ್ಲು ರಾಮದಾಸ್ ನಗರದ ನಿವಾಸಿಗಳಾದ ಜಗದೀಶ್(22) ಹಾಗೂ ಸುನೀಲ್ (21) ಎಂದು ಗುರುತಿಸಲಾಗಿದೆ. ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್-ಬೈಕ್ ಢಿಕ್ಕಿ; ಇಬ್ಬರು ಯುವಕರು ಮೃತ್ಯು Read More »

ಕರಾವಳಿ

ನಿರುದ್ಯೋಗಿಗಳಿಗೆ ಆಶಾ ಕಿರಣವಾಗುತ್ತಿದೆ ಶಾಸಕರ ಕಚೇರಿ ‘ಶ್ರಮಿಕ’

ಬೆಳ್ತಂಗಡಿ, ಡಿ.14: ಶಾಸಕ ಹರೀಶ್ ಪೂಂಜಾರ “ಶ್ರಮಿಕ” ಕಚೇರಿ ಈಗ ನಿರುದ್ಯೋಗಿಗಳ ಅಶಾಕಿರಣದ ಕೇಂದ್ರವಾಗಲಿದೆ. ಈಗಷ್ಟೇ ವಿಧ್ಯಾಭ್ಯಾಸ ಮುಗಿಸಿ ಉದ್ಯೋಗ ಅರಸುತ್ತಿರುವ ಉದ್ಯೋಗಾರ್ಥಿಗಳನ್ನು ಹುಡುಕುತ್ತಿರುವ ಸಂಸ್ಥೆಗಳನ್ನು ಸಂಪರ್ಕಿಸುವ, ಅವರಿಗೆ ಬೇಕಾದ ಅರ್ಹ ಅಭ್ಯರ್ಥಿಗಳನ್ನು ಹುಡುಕಿ, ಸಂದರ್ಶನ ಮಾಡಿ ಅಗತ್ಯ ತರಬೇತಿ ನೀಡಿ ನೇಮಕಾತಿಗೆ ಸಹಾಯ ಮಾಡುವ ಪ್ರಯತ್ನ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಕಚೇರಿ ’ಶ್ರಮಿಕ’ದಲ್ಲಿ ವಿನೂತನ ಯೋಜನೆಯೊಂದನ್ನು ಹಮ್ಮಿಕೊಂಡಿದೆ.   ವಿದ್ಯಾಭ್ಯಾಸವನ್ನು ಮುಗಿಸಿ, ಉದ್ಯೋಗಕ್ಕಾಗಿ ಅಲೆದಾಟ ನಡೆಸುತ್ತಿರುವ, ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಭಾಗವಹಿಸಿದರೂ ಉದ್ಯೋಗ

ನಿರುದ್ಯೋಗಿಗಳಿಗೆ ಆಶಾ ಕಿರಣವಾಗುತ್ತಿದೆ ಶಾಸಕರ ಕಚೇರಿ ‘ಶ್ರಮಿಕ’ Read More »

ಕರಾವಳಿ

ದಿಲ್ಲಿ: ಮನೆಗೆ ಬೆಂಕಿ ತಗುಲಿ ಮೂವರು ಸಜೀವ ದಹನ

ಹೊಸದಿಲ್ಲಿ, ಡಿ.15: ಮನೆಯೊಂದಕ್ಕೆ  ಬೆಂಕಿ ತಗುಲಿದ ಪರಿಣಾಮ ಮೂವರು ಮಹಿಳೆಯರು ಸಜೀವ ದಹನವಾಗಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಶಾಲಿಮಾರ್ ಭಾಗ್ ಪ್ರದೇಶದಲ್ಲಿ ಶನಿವಾರ ನಡೆದಿದೆ. ಮೃತರನ್ನು ಕಾಂತ (75), ಕಿರಣ್ ಶರ್ಮಾ (65) ಸೋಮ್ ವತಿ(42) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಲಜ್ ವಂತಿ, ಈನಾ, ಅಕ್ಷಿತ್ ಮತ್ತು ವನ್ಸಿಕಾ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ  6 ಗಂಟೆ ವೇಳೆಗೆ  ಬೆಂಕಿ ಅವಘಡವಾಗಿದ್ದು, ಕೂಡಲೇ ಸ್ಥಳಕ್ಕೆ ಬಂದ  ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮನೆಯಲ್ಲಿದ್ದ 7

ದಿಲ್ಲಿ: ಮನೆಗೆ ಬೆಂಕಿ ತಗುಲಿ ಮೂವರು ಸಜೀವ ದಹನ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿಗೆ ಹತ್ತು ವರ್ಷ ಕಠಿಣ ಸಜೆ

ಕಾಸರಗೋಡು, ಡಿ.13: ಹದಿನಾಲ್ಕರ ಹರೆಯದ ಅಪ್ರಾಪ್ತೆ ಬಾಲಕಿಗೆ ವಿವಾಹ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಪೊಕ್ಸೊ  ಕಾಯ್ದೆಯಂತೆ ಹತ್ತು ವರ್ಷ ಕಠಿಣ ಸಜೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಫು ನೀಡಿದೆ.   ಬಂದ್ಯೋಡು ಕುಬಣೂರಿನ ಯಶವಂತ ಯಾನೆ ಅಪ್ಪು (35) ಶಿಕ್ಷೆಗೊಳಗಾದ ಆರೋಪಿ. ಈತ 2014 ರ ಡಿಸಂಬರ್ ನಿಂದ 2015 ರ ಜನವರಿ 19ರ ತನಕ ಹಲವು ದಿನಗಳ

ಕಾಸರಗೋಡು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿಗೆ ಹತ್ತು ವರ್ಷ ಕಠಿಣ ಸಜೆ Read More »

ಕರಾವಳಿ

ಭೂ ಅವ್ಯವಹಾರ ಆರೋಪ: ಡಾ. ವೀರೇಂದ್ರ ಹೆಗ್ಗಡೆಗೆ ಹೈಕೋರ್ಟ್ ಕ್ಲೀನ್ ಚಿಟ್

ಬೆಂಗಳೂರು, ಡಿ.14: ಭೂ ಅವ್ಯವಹಾರ ಆರೋಪಕ್ಕೆ  ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದೆ. ಬೆಳ್ತಂಗಡಿಯ ಜೆಎಂಎಫ್ ಸಿ ನ್ಯಾಯಾಲಯದ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸುವಂತೆ ಕೋರಿ ವೀರೇಂದ್ರ ಹೆಗ್ಗಡೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ ಪ್ರಕರಣವನ್ನು ರದ್ದುಗೊಳಿಸಿದೆ.

ಭೂ ಅವ್ಯವಹಾರ ಆರೋಪ: ಡಾ. ವೀರೇಂದ್ರ ಹೆಗ್ಗಡೆಗೆ ಹೈಕೋರ್ಟ್ ಕ್ಲೀನ್ ಚಿಟ್ Read More »

ಕರ್ನಾಟಕ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಗುವಾಹಟಿಯಲ್ಲಿ ಕರ್ಫ್ಯೂ ಸಡಿಲಿಕೆ

ಗುವಾಹಟಿ, ಡಿ.14: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಅಲ್ಪ ಕಡಿಮೆಯಾಗಿದ್ದು, ಹೀಗಾಗಿ ಇಂದು ಗುವಾಹಟಿಯಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ. ಅಸ್ಸಾಂನ ಅತೀ ದೊಡ್ಡ ನಗರವಾದ ಗುವಾಹಟಿಯಲ್ಲಿ ಕಳೆದ ಕೆಲ ದಿನಗಳಿಂದ ನಿಷೇಧಾಜ್ಞೆ ಜಾರಿಯಲ್ಲಿದ್ದು, ಶನಿವಾರ ಬೆಳಿಗ್ಗೆ ಒಂಬತ್ತು ಗಂಟೆಯಿಂದ ಸಂಜೆ ನಾಲ್ಕರವರೆಗೆ ಸಡಿಲಿಸಲಾಗಿದೆ. ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಭಾರಿ ಪ್ರತಿಭಟನೆ ನಡೆದಿದ್ದವು. ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಸೇರಿ ಪ್ರತಿಭಟನೆ ನಡೆಸಿದ್ದವು. ಗುರುವಾರ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಗುವಾಹಟಿಯಲ್ಲಿ ಕರ್ಫ್ಯೂ ಸಡಿಲಿಕೆ Read More »

ರಾಷ್ಟ್ರೀಯ ನ್ಯೂಸ್

ಜಾನುವಾರು ಕಳವು ಆರೋಪ: ಇಬ್ಬರ ಬಂಧನ

ಬಂಟ್ವಾಳ, ಡಿ.14: ಜಾನುವಾರುಗಳ ಕಳವು ಪ್ರಕರಣದ ಆರೋಪದ ಮೇರೆಗೆ ಪೊಲೀಸರು ವಾಹನ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಬೋಳಂತೂರು ಗ್ರಾಮದ ನಿವಾಸಿ ನಝಾದುದ್ದೀನ್ ಹಾಗೂ ಅರ್ಕುಳ ಗ್ರಾಮದ ಅಬ್ದುಲ್ ಸಲಾಂ ಎಂದು ಗುರುತಿಸಲಾಗಿದೆ. ಅವರಿಂದ ಕಾರು, ದನವೊಂದನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನ. 28ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪನಡುವಿನಲ್ಲಿ ಸಜೀಪದಿಂದ ಕಂಚಿನಡ್ಕಕ್ಕೆ ತೆರಳುವ ರಸ್ತೆಯಲ್ಲಿ ದನಗಳ ಕಳವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಾನುವಾರು ಕಳವು ಆರೋಪ: ಇಬ್ಬರ ಬಂಧನ Read More »

ಕರಾವಳಿ

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯಿಂದ ಅತ್ಯಾಚಾರ ಪ್ರಕರಣ: ಆರೋಪ ಸಾಬೀತು, ಶಿಕ್ಷೆ ಕಾಯ್ದಿರಿಸಿದ ಕೋಟ್೯

ಮಂಗಳೂರು, ಡಿ.14: ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಮಾಡಿ ಆಕೆ ಗರ್ಭಿಣಿಯಾದ ಪ್ರಕರಣವು ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದೆ.   ಉತ್ತರ ಭಾರತ ಮೂಲದ ನಿವಾಸಿ, ಪ್ರಸ್ತುತ ನಗರದಲ್ಲಿ ವಾಸವಾಗಿರುವ ಕಿಶೋರ್‌ ಭಯ್ಯಾ (36) ತನ್ನ 13 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ. 2016ರಲ್ಲಿ ಕಿಶೋರ್‌ ಭಯ್ಯಾನ ಪತ್ನಿ ಹೆರಿಗೆಗೆಂದು ಆಸ್ಪತ್ರಗೆ ದಾಖಲಾಗಿದ್ದ ಸಂದರ್ಭದಲ್ಲಿ ಕಿಶೋರ್‌ ಭಯ್ಯಾ ತನ್ನ ಪುತ್ರಿಯನ್ನು ಅತ್ಯಚಾರ

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯಿಂದ ಅತ್ಯಾಚಾರ ಪ್ರಕರಣ: ಆರೋಪ ಸಾಬೀತು, ಶಿಕ್ಷೆ ಕಾಯ್ದಿರಿಸಿದ ಕೋಟ್೯ Read More »

ಕರಾವಳಿ

ಕಿಡ್ನಾಪ್: ಮಧ್ಯ ಪ್ರದೇಶದ ಬಾಲಕಿಯರಿಬ್ಬರು ಉಪ್ಪಿನಂಗಡಿಯಲ್ಲಿ ಪತ್ತೆ

ಉಪ್ಪಿನಂಗಡಿ, ಡಿ.13: ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಅಪಹರಣ ಮಾಡಿದ ಆರೋಪದಲ್ಲಿ ಯುವಕರಿಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಧ್ಯಪ್ರದೇಶದ ಬಸಂತ್ ಸಿರ್ಸಾಗೆ(21) ಹಾಗೂ 17 ಹರೆಯದ ಯುವಕ (ಹೆಸರು ತಿಳಿದು ಬಂದಿಲ್ಲ)ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇವರು ತಮ್ಮ ಊರಿನ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರನ್ನು ಅಪಹರಿಸಿ ಕಾರ್ಮಿಕರಾಗಿ ದುಡಿಸುತ್ತಿದ್ದರೆನ್ನಲಾಗಿದೆ. ಅಲ್ಲದೆ ತನ್ನ ಸ್ನೇಹಿತರ ಬಾಡಿಗೆ ಮನೆಯಲ್ಲಿ ಬಾಲಕಿಯರಿಗೆ ವಾಸಿಸಲು ಅವಕಾಶ ಕಲ್ಪಿಸಿದ್ದರು. ಪ್ರಕರಣದ ಜಾಡು ಹಿಡಿದಿದ್ದ ಮಧ್ಯಪ್ರದೇಶದ ಪೊಲೀಸರು ತಮಗೆ ಸಿಕ್ಕಿರುವ ಮಾಹಿತಿ

ಕಿಡ್ನಾಪ್: ಮಧ್ಯ ಪ್ರದೇಶದ ಬಾಲಕಿಯರಿಬ್ಬರು ಉಪ್ಪಿನಂಗಡಿಯಲ್ಲಿ ಪತ್ತೆ Read More »

ಕರಾವಳಿ

ಕೇರಳ, ಪಂಜಾಬ್ ಬಳಿಕ ಪಶ್ಚಿಮ ಬಂಗಾಳದಿಂದ ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ

ಕೋಲ್ಕತಾ, ಡಿ.13: ತೀವ್ರ  ಚರ್ಚೆಗೆ  ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ ಮತ್ತು ಪಂಜಾಬ್ ಸರ್ಕಾರಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಪಶ್ಚಿಮ ಬಂಗಾಳ ಸರ್ಕಾರ ಕೂಡ ತನ್ನ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದೆ. ನಿನ್ನೆಯಷ್ಟೇ ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಕೇಂದ್ರ ಸರ್ಕಾರ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಾವು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು

ಕೇರಳ, ಪಂಜಾಬ್ ಬಳಿಕ ಪಶ್ಚಿಮ ಬಂಗಾಳದಿಂದ ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ Read More »

ರಾಷ್ಟ್ರೀಯ ನ್ಯೂಸ್
Scroll to Top