Keerthana

2002ರ ಗುಜರಾತ್ ಗಲಭೆ ಪ್ರಕರಣ:  ಮೋದಿ ಸರಕಾರಕ್ಕೆ ಕ್ಲೀನ್ ಚಿಟ್

ಗುಜರಾತ್, ಡಿ.11: 2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಕ್ಕೆ ಸಂಬಂಧಿಸಿದಂತೆ ಗುಜರಾತ್ ರಾಜ್ಯದ ಅಂದಿನ ನರೇಂದ್ರ ಮೋದಿ ಸರ್ಕಾರಕ್ಕೆ ನಾನಾವತಿ ಆಯೋಗ ಕ್ಲೀನ್’ಚಿಟ್ ನೀಡಿದೆ. ಗಲಭೆ ಪ್ರಕರಣ ಕುರಿತು ನಾನಾವತಿ ಆಯೋಗ ಸಿದ್ಧಪಡಿಸಿರುವ ವರದಿಯನ್ನು ಗುಜರಾತ್ ರಾಜ್ಯದ ಗೃಹ ಸಚಿವ ಪ್ರದೀಪ್ ಸಿನ್ಹಾ ಜಡೇಜಾ ಅವರು ರಾಜ್ಯ ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದಾರೆ. ದಂಗೆ ಪ್ರಕರಣದಲ್ಲಿ ಸರ್ಕಾರದ ಪಾತ್ರವಿಲ್ಲ. ದಂಗೆ ಕುರಿತು ಸಂಜೀವ್ ಭಟ್ ಸುಳ್ಳು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಗಲಭೆಯಲ್ಲ. ದಂಗೆಯನ್ನು ನಿಯಂತ್ರಿಸಲು ಮೋದಿಯವರು ಯತ್ನ ನಡೆಸಿದ್ದರು […]

2002ರ ಗುಜರಾತ್ ಗಲಭೆ ಪ್ರಕರಣ:  ಮೋದಿ ಸರಕಾರಕ್ಕೆ ಕ್ಲೀನ್ ಚಿಟ್ Read More »

ರಾಷ್ಟ್ರೀಯ ನ್ಯೂಸ್

ತರಗತಿಯಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿ: ಕೊಠಡಿಗೆ  ಬೀಗ ಹಾಕಿದ ಶಿಕ್ಷಕಿ

ಪಾಲಾಕಾಡ್‌, ಡಿ.11: ತರಗತಿಯಲ್ಲಿ ನಿದ್ದೆ ಮಾಡುತ್ತಿದ್ದ ವಿದ್ಯಾರ್ಥಿಯನ್ನು ನೋಡದೆ ಕೊಠಡಿಗೆ ಬೀಗ ಹಾಕಿದ ಪರಿಣಾಮ ಶಾಲೆ ಬಿಟ್ಟು ಒಂದು ಗಂಟೆ ತರಗತಿಯೊಳಗೆ ಉಳಿದ ಘಟನೆ ಇಲ್ಲಿನ ಒಟ್ಟಪಾಲಂನಲ್ಲಿ ನಡೆದಿದೆ. ಸೋಮವಾರ ಸಂಜೆ ತರಗತಿಯಲ್ಲೇ  ವಿದ್ಯಾರ್ಥಿನಿ ನಿದ್ದೆಗೆ ಜಾರಿದ್ದು ತರಗತಿಗೆ ಬೀಗ ಹಾಕಲು ಬಂದ ಶಿಕ್ಷಕಿ ತರಗತಿಯಲ್ಲಿ ವಿದ್ಯಾರ್ಥಿಗಳಿದ್ದಾರೆಯೇ ಎಂದು ಪರಿಶೀಲನೆ ನಡೆಸದೆ ಬೀಗ ಹಾಕಿದ್ದಾರೆ ಎಂದು ತಿಿಳಿದು ಬಂದಿದೆ. ಶಾಲಾ ಅವಧಿ ಮುಗಿದು ಒಂದು ಗಂಟೆ ಕಳೆದರು ವಿದ್ಯಾರ್ಥಿನಿ ಮನೆಗೆ ಹಿಂದಿರುಗದ ಕಾರಣದಿಂದಾಗಿ ವಿದ್ಯಾರ್ಥಿನಿಯನ್ನು ಹುಡುಕಾಡಿದ್ದು ಶಾಲೆಗೆ

ತರಗತಿಯಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿ: ಕೊಠಡಿಗೆ  ಬೀಗ ಹಾಕಿದ ಶಿಕ್ಷಕಿ Read More »

ರಾಷ್ಟ್ರೀಯ ನ್ಯೂಸ್

ಆರೋಗ್ಯದಲ್ಲಿ ಏರುಪೇರು: ಗಾಳಿ ಸುದ್ದಿಗಳಿಗೆ ಕಿವಿಕೊಡದಂತೆ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು, ಡಿ.11:   ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಬೆಳಗ್ಗೆ  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಯಾವುದೇ ಗಾಳಿ ಸುದ್ದಿಗೆ ಕಿವಿಕೊಡಬೇಡಿ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಈ  ವದಂತಿಯ ಕುರಿತು ಟ್ವೀಟ್‌ ಮಾಡಿರುವ ಅವರು, “ನಾನು ಆರೋಗ್ಯವಾಗಿದ್ದೇನೆ, ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿಸುದ್ದಿಗಳನ್ನು ನಂಬಿ ಆತಂಕ ಪಡುವ ಅಗತ್ಯ ಇಲ್ಲ” ಎಂದು ಹೇಳಿದ್ದಾರೆ. ಸಿದ್ಧರಾಮಯ್ಯ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದು ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡ ಏರಿಕೆಯಾಗಿ, ಎದೆನೋವು ಕಾಣಿಸಿಕೊಂಡಿದೆ ಎಂದು ಸುದ್ದಿಯಾಗಿತ್ತು.

ಆರೋಗ್ಯದಲ್ಲಿ ಏರುಪೇರು: ಗಾಳಿ ಸುದ್ದಿಗಳಿಗೆ ಕಿವಿಕೊಡದಂತೆ ಸಿದ್ದರಾಮಯ್ಯ ಟ್ವೀಟ್ Read More »

ಕರ್ನಾಟಕ

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

ಬೆಂಗಳೂರು, ಡಿ.11: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬಸವೇಶ್ವರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತೀಚಿಗೆ ಉಪಚುನಾವಣೆಯಲ್ಲಿ ಸಕ್ರಿಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರು. ಈ ಕಾರಣಕ್ಕೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಅವರ ಕುಟುಂಬ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಕಾರ್ಕಳ: ತಂದೆಯಿಂದಲೇ ಮಗನ ಹತ್ಯೆ

ಕಾರ್ಕಳ, ಡಿ.11: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ತಂದೆ ಹಾಗೂ ಮಗನ ಮಧ್ಯೆ ಜಗಳ ನಡೆದು ತಂದೆ, ಮಗನನ್ನು ಕೊಲೆ ಮಾಡಿದ ಘಟನೆ ಕಾರ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದವರನ್ನು  ತಾಲೂಕಿನ ಕಸಬಾ ವ್ಯಾಪ್ತಿಯ ಮಂಗಳಪಾದೆ ನಿವಾಸಿ ವಿವಿಯನ್ ಡಿಸೋಜಾ(24) ಎಂದು ಗುರುತಿಸಲಾಗಿದೆ. ಈತನ ತಂದೆ ವಿಕ್ಟರ್ ಡಿಸೋಜಾ ಹತ್ಯೆಗೈದ ಆರೋಪಿಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಈ ದುರ್ಘಟನೆ ನಡೆದಿದೆ. ವಿಕ್ಟರ್ ಡಿಸೋಜಾ ತನ್ನ ಮಗನನ್ನು ಚೂರಿಯಿಂದ ಇರಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ವಿವಿಯನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು

ಕಾರ್ಕಳ: ತಂದೆಯಿಂದಲೇ ಮಗನ ಹತ್ಯೆ Read More »

ಕರಾವಳಿ

ಪೌರತ್ವ ಮಸೂದೆ ಅಂಗೀಕಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ: ಎಎಸ್ ಯು

ಹೊಸದಿಲ್ಲಿ, ಡಿ.11: ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೆ ಇದನ್ನು ಪ್ರಶ್ನಿಸಿ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ಸಂಘಟನೆಯ ಮುಖ್ಯ ಸಲಹೆಗಾರ ಸಮುಜ್ಜಲ್ ಭಟ್ಟಾಚಾರ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕಟುವಾಗಿ ವಿರೋಧಿಸಿದ್ದು, ಯಾವುದೇ ಪರಿಸ್ಥಿತಿಯಲ್ಲಿಯೂ ಮಸೂದೆಯನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಮಸೂದೆ ನಮ್ಮ ಹಕ್ಕುಗಳನ್ನು ಕಸಿಯುತ್ತದೆ. ಇದರ ವಿರುದ್ಧ ಪ್ರತಿಭಟನೆ ನಡೆಸಬೇಕು. ವಿಭಜನಕಾರಿ ಬಿಜೆಪಿ ಈಶಾನ್ಯ ಪ್ರದೇಶದಲ್ಲಿ ಧ್ರುವೀಕರಣಕ್ಕೆ ಯತ್ನಿಸುತ್ತಿದೆ. ಸಿಎಬಿ ವಿರುದ್ಧ ಕಾನೂನಿನ ಮೊರೆ ಹೋಗುತ್ತೇವೆ, ಸುಪ್ರೀಂ ಕೋರ್ಟ್

ಪೌರತ್ವ ಮಸೂದೆ ಅಂಗೀಕಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ: ಎಎಸ್ ಯು Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಬಿಜೆಪಿ ಹಿರಿಯ ಮುಖಂಡ ಆನಂದ ನಿಧನ

ಬಂಟ್ವಾಳ, ಡಿ.10: ಬಿಜೆಪಿ ಬಂಟ್ವಾಳ ತಾಲೂಕಿನ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಕಾರ್ಯಕರ್ತ ಜಿ.ಆನಂದ ಅನಾರೋಗ್ಯ ದಿಂದ ಇಂದು ಮುಂಜಾನೆ ನಿಧನರಾದರು. ಅವರು 2 ಬಾರಿ ಬಂಟ್ವಾಳ ಪುರಸಭಾ ಸದಸ್ಯ ರಾಗಿ, 2 ಬಾರಿ ಬಂಟ್ವಾಳ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ 3 ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸಂಸದ ರಾಜ್ಯಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌, ಡಾ. ಪ್ರಭಾಕರ್ ಭಟ್, ಬಿಜೆಪಿ ಅಧ್ಯಕ್ಷ

ಬಂಟ್ವಾಳ: ಬಿಜೆಪಿ ಹಿರಿಯ ಮುಖಂಡ ಆನಂದ ನಿಧನ Read More »

ಕರಾವಳಿ

ಮೆರವಣಿಗೆ ನಿರತ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ಲಾಠಿ ಜಾಚ್೯

ಹೊಸದಿಲ್ಲಿ, ಡಿ.10: ಹಾಸ್ಟೆಲ್  ಶುಲ್ಕ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಸಾಗಲು ಯತ್ನಿಸಿದ್ದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ. ವಿಶ್ವವಿದ್ಯಾಲಯ ಕ್ಯಾಂಪಸ್ ನ ಬಲಭಾಗದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮತ್ತು ಬ್ಯಾರಿಕೇಡ್ ಹಾಕಲಾಗಿತ್ತು. ಇದನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು ರಾಷ್ಟ್ರಪತಿ ಭವನಕ್ಕೆ ನಿನ್ನೆ ಮೆರವಣಿಗೆ ಹೊರಟಾಗ ಪೊಲೀಸರು ವಿದ್ಯಾರ್ಥಿಗಳನ್ನು ಬಿಕಜಿ ಕಾಮಾ ಪ್ಲೇಸ್ ಮೆಟ್ರೊ ನಿಲ್ದಾಣದಲ್ಲಿ ತಡೆದು ನಿಲ್ಲಿಸಿದರು. ಪೊಲೀಸರ ಸರ್ಪಗಾವಲು ಇದ್ದ

ಮೆರವಣಿಗೆ ನಿರತ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ಲಾಠಿ ಜಾಚ್೯ Read More »

ರಾಷ್ಟ್ರೀಯ ನ್ಯೂಸ್

ತೀವ್ರ ವಿರೋಧದ ಮಧ್ಯೆ ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಹೊಸದಿಲ್ಲಿ, ಡಿ.10: ಭಾರೀ ವಿರೋಧದ ಮಧ್ಯೆಯೂ   ಪೌರತ್ವ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ.   ಗೃಹ ಸಚಿವ ಅಮಿತ್ ಶಾ ಸಂಸತ್ ನಲ್ಲಿ ಡಿ.9 ರಂದು ಬೆಳಗ್ಗೆ ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿದ್ದರು. ಗೃಹ ಸಚಿವರು ಮಸೂದೆ ಮಂಡನೆ ಮಾಡುತ್ತಿದ್ದಂತೆಯೇ ಸದನದಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು. ಈ ಸುದೀರ್ಘ ಚರ್ಚೆಯ ಬಳಿಕ ಮಧ್ಯರಾತ್ರಿಯಲ್ಲಿ ಮಸೂದೆ ಅಂಗೀಕಾರವಾಗಿದೆ. ಸದನದಲ್ಲಿದ್ದ ಹಾಜರಿದ್ದ 391 ಸದಸ್ಯರ ಪೈಕಿ 311 ಸದಸ್ಯರು ಮಸೂದೆಯ ಪರವಾಗಿ ಹಾಗೂ 80 ಸದಸ್ಯರು ವಿರುದ್ಧವಾಗಿ ಮತಚಲಾವಣೆ ಮಾಡಿದರು.

ತೀವ್ರ ವಿರೋಧದ ಮಧ್ಯೆ ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ Read More »

ರಾಷ್ಟ್ರೀಯ ನ್ಯೂಸ್

ಉಪಚುನಾವಣೆ: ಯಲ್ಲಾಪುರದಲ್ಲಿ ಹೆಬ್ಬಾರ್ ಗೆಲವು, ಅಧಿಕೃತ ಘೋಷಣೆಯೊಂದೇ ಬಾಕಿ

ಉತ್ತರಕನ್ನಡ, ಡಿ.9: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ  ಉತ್ತರಕನ್ನಡದ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಗೆಲುವಿನ ನಗು ಬೀರಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಯಲ್ಲಾಪುರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತಎಣಿಕೆಯ 14 ಸುತ್ತಿನಲ್ಲಿಯೂ ಮುನ್ನಡೆ ಕಾಯ್ದುಕೊಂಡಿದ್ದ ಶಿವರಾಮ್ ಹೆಬ್ಬಾರ್ 27 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡು, ಮೂರನೇ ಸುತ್ತಿನ ಮತಎಣಿಕೆಯಷ್ಟೇ ಬಾಕಿ ಉಳಿದಿದೆ. ಕಾಂಗ್ರೆಸ್ ನ ಭೀಮಣ್ಣ ನಾಯ್ಕ್ ಪರಾಜಯಗೊಂಡಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಶಿವರಾಮ್ ಹೆಬ್ಬಾರ್ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದರು.

ಉಪಚುನಾವಣೆ: ಯಲ್ಲಾಪುರದಲ್ಲಿ ಹೆಬ್ಬಾರ್ ಗೆಲವು, ಅಧಿಕೃತ ಘೋಷಣೆಯೊಂದೇ ಬಾಕಿ Read More »

ಕರ್ನಾಟಕ
Scroll to Top