Keerthana

ಉಪಚುನಾವಣೆ: 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

ಬೆಳ್ತಂಗಡಿ, ಡಿ.8: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ. ಇದೇ ಸಂದರ್ಭ ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದು ಸ್ಥಾನವನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲು ಧರ್ಮಸ್ಥಳಕ್ಕೆ ಆಗಮಿಸಿ ಮಾಧ್ಯಮದೊಂದಿಗೆ ಮಾತನಾಡುತ್ತಿದ್ದರು. ಉಪಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳಿಗೆ ನಾನು ಮತ್ತು ನಮ್ಮ ಸಚಿವರು ಎರಡು ಬಾರಿ ಭೇಟಿ ನೀಡಿ ಪ್ರಚಾರ ನಡೆಸಿದ್ದೇವೆ. ಇನ್ನೂ ಮೂರುವರೆ ವರ್ಷ ಬಿಜೆಪಿ ಸ್ಥಿರ […]

ಉಪಚುನಾವಣೆ: 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ Read More »

ಕರಾವಳಿ

ಸ್ಕೂಟರ್‌ಗೆ ಬಸ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ಅಡ್ಯಾರ್ ನಲ್ಲಿ  ರವಿವಾರ ನಡೆದಿದೆ. ಮೃತರನ್ನು  ಅಡ್ಡೂರು ನಿವಾಸಿ ಹಮೀದ್  ಎಂದು ಗುರುತಿಸಲಾಗಿದೆ. ಅರ್ಕುಳದ ಹಾಲ್‌ವೊಂದರಲ್ಲಿ ರವಿವಾರ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳಿ ಹಮೀದ್  ವಾಪಸಾಗುತ್ತಿದ್ದ ಸಂದರ್ಭ ಈ ಅವಘಡ ನಡೆದಿದೆ. ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮುಂದೆ ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್‌ನೊಂದಿಗೆ ರಸ್ತೆಗೆಸೆಯಲ್ಪಟ್ಟ ಸವಾರ

ಸ್ಕೂಟರ್‌ಗೆ ಬಸ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು Read More »

ಕರಾವಳಿ

ಹೊಸದಿಲ್ಲಿ ಭೀಕರ ಅಗ್ನಿ ದುರಂತ: 43 ರಕ್ಕೇರಿದ ಸಾವಿನ ಸಂಖ್ಯೆ

ಹೊಸದಿಲ್ಲಿ, ಡಿ.8: ದಿಲ್ಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಕಾರ್ಖಾನೆಯಲ್ಲಿ ನಡೆದ ಭೀಕರ ಅಗ್ನಿ ದುರಂತದ ಸಾವಿನ ಸಂಖ್ಯೆ 43 ರಕ್ಕೇರಿದೆ. ಅಲ್ಲದೆ ಹಲವು ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಈಗಾಗಲೇ 50 ಅಗ್ನಿಶಾಮಕ ದಳ ವಾಹನಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಘಟನೆ ಮುಂಜಾನೆ ನಡೆದಿರುವುದರಿಂದ ಎಲ್ಲ ಕಾರ್ಮಿಕರು ನಿದ್ರೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಕಟ್ಟಡದೊಳಗೆ ಸುಮಾರು 60-70 ಕಾರ್ಮಿಕರಿದ್ದರು.ಘ ಟನೆಯಿಂದ ಮೃತಪಟ್ಟ ಕಾರ್ಮಿಕರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ದಿಲ್ಲಿಯಲ್ಲಿ ಉಂಟಾದ ಅಗ್ನಿ ದುರಂತ ಭಯಾನಕ 

ಹೊಸದಿಲ್ಲಿ ಭೀಕರ ಅಗ್ನಿ ದುರಂತ: 43 ರಕ್ಕೇರಿದ ಸಾವಿನ ಸಂಖ್ಯೆ Read More »

ರಾಷ್ಟ್ರೀಯ ನ್ಯೂಸ್

ಇಂದು ಬೆಳ್ತಂಗಡಿಗೆ ಮುಖ್ಯಮಂತ್ರಿ: ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಳ್ತಂಗಡಿ, ಡಿ.8: ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಡಿ.8ರಂದು ಮುಖ್ಯಮಂತ್ರಿ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ  ವಿವಿಧ ಡಿಪೊದ 250 ಕೆಎಸ್ಸಾರ್ಟಿಸಿ ಬಸ್‌ಗಳನ್ನು ನಿಯೋಜಿಸಲಾಗಿದ್ದು, ಇದರಿಂದ ಬಂಟ್ವಾಳ, ಪುತ್ತೂರು, ಕಡಬ, ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಬಸ್ ಸಂಖ್ಯೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಇಂದು ಬೆಳ್ತಂಗಡಿಗೆ ಮುಖ್ಯಮಂತ್ರಿ: ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ

BIG BREAKING NEWS ಹೊಸದಿಲ್ಲಿಯಲ್ಲಿ ಬೀಕರ ಅಗ್ನಿ ದುರಂತ: 30ಕ್ಕೂ ಅಧಿಕ ಕಾರ್ಮಿಕರು ಸಾವು

ಹೊಸದಿಲ್ಲಿ, ಡಿ.8: ಭಾರೀ ಅಗ್ನಿ ಅವಘಡ ಉಂಟಾಗಿ 30ಕ್ಕೂ ಅಧಿಕ ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಇಲ್ಲಿ ನ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಕಾರ್ಖಾನೆಯಲ್ಲಿ ನಡೆದಿದೆ. 15 ಅಧಿಕ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಕಟ್ಟಡದ ಒಳಗಡೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಈ  ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಗ್ನಿಶಾಮಕ ದಳದ ಉಪ ಮುಖ್ಯಾಧಿಕಾರಿ ಸುನಿಲ್ ಚೌಧರಿ, ನಾವು ಇದುವರೆಗೆ ಹಲವು ಮಂದಿಯನ್ನು ಕಟ್ಟಡ ಒಳಗಿನಿಂದ ಕಾಪಾಡಿ ಆಸ್ಪತ್ರೆಗೆ

BIG BREAKING NEWS ಹೊಸದಿಲ್ಲಿಯಲ್ಲಿ ಬೀಕರ ಅಗ್ನಿ ದುರಂತ: 30ಕ್ಕೂ ಅಧಿಕ ಕಾರ್ಮಿಕರು ಸಾವು Read More »

ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಶಂಕಿತ ಇಲಿ ಜ್ವರಕ್ಕೆ ಯುವಕ ಬಲಿ

ಉಳ್ಳಾಲ, ಡಿ.8: ಶಂಕಿತ ಇಲಿ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉಳ್ಳಾಲದ ಕುತ್ತಾರಿನ ತೇವುಲ ನಿವಾಸಿ ಮನೋಜ್ ಕುಮಾರ್(28) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಮನೋಜ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜ್ವರ ಗುಣವಾಗದ ಹಿನ್ನೆಲೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ, ಅಲ್ಲೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಳ್ಳಾಲ: ಶಂಕಿತ ಇಲಿ ಜ್ವರಕ್ಕೆ ಯುವಕ ಬಲಿ Read More »

ಕರಾವಳಿ

ಕಾಸರಗೋಡು: ಟೆಂಪೊ-ಬೈಕ್ ಢಿಕ್ಕಿ; ಯುವಕ ಮೃತ್ಯು

ಕಾಸರಗೋಡು, ಡಿ.7: ಟೆಂಪೊ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರ ಮೃತಪಟ್ಟ ಘಟನೆ ಶನಿವಾರ ಸಂಜೆ ನಗರದ ಹೊರವಲಯದ ನಾಯಮ್ಮರ್ ಮೂಲೆಯಲ್ಲಿ ನಡೆದಿದೆ. ಮೃತರನ್ನು ಚೆರ್ಕಳದ ಬೇರ್ಕದ ನಿವಾಸಿ ಶಮ್ಮಾಸ್ (20) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಶಮ್ಮಾಸ್‌ನನ್ನು ಕೂಡಲೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು: ಟೆಂಪೊ-ಬೈಕ್ ಢಿಕ್ಕಿ; ಯುವಕ ಮೃತ್ಯು Read More »

ಕರಾವಳಿ

ಶಿವಮೊಗ್ಗ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವು

ಶಿವಮೊಗ್ಗ, ಡಿ.7: ಇಲ್ಲಿನ ಇಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿನಿ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಬೀರನಕೆರೆ ಬಳಿ ನಡೆದಿದೆ. ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಪ್ರಣಿತಾ (20) ಎಂದು ಗುರುತಿಸಲಾಗಿದೆ.ಅವರು ಸರ್ವೆ ಕಾರ್ಯಕ್ಕೆ ಸಂಬಂಧಿಸಿದ ಕ್ಯಾಂಪ್ ಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಬೀರನಕೆರೆಯಲ್ಲಿ ಕ್ಯಾಂಪ್ ನಡೆಯುತ್ತಿದೆ. ಶನಿವಾರ ಬೆಳಿಗ್ಗೆ ವಾಕಿಂಗ್ ತೆರಳಿದ್ದ ವೇಳೆ ಪ್ರಣಿತ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ವಾಕಿಂಗ್ ತೆರಳಿದ್ದ ವೇಳೆ ಅಪರಿಚಿತ ವಾಹನ ಗುದ್ದಿ ಸಾವು ಸಂಭವಿಸಿದೆ ಎಂದು ಕಾಲೇಜ್ ಆಡಳಿತ ಮಂಡಳಿಯ

ಶಿವಮೊಗ್ಗ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವು Read More »

ಕರ್ನಾಟಕ

ಹೈದರಾಬಾದ್ ಎನ್ ಕೌಂಟರ್ ಸ್ಥಳಕ್ಕೆ ಎನ್ಎಚ್ಆರ್ ಸಿ ತಂಡ ಭೇಟಿ

ಹೈದರಾಬಾದ್, ಡಿ.7: ಪಶುವೈದ್ಯ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಶುಕ್ರವಾರ ಮುಂಜಾನೆ ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿರುವ ಘಟನೆ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸತ್ಯ ಶೋಧನಾ ತಂಡ ಶನಿವಾರ ಬೆಳಗ್ಗೆ ಹೈದರಾಬಾದ್  ಘಟನಾ ಸ್ಥಳಕ್ಕೆ ಆಗಮಿಸಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸತ್ಯ ಶೋಧನಾ ತಂಡ ಎನ್ ಕೌಂಟರ್ ನಡೆದ ಸ್ಥಳದಲ್ಲಿ ತನಿಖೆ ನಡೆಸಿ, ಮಾಹಿತಿಯನ್ನು ಕಲೆ ಹಾಕಲಿದೆ. ನಂತರ ತಂಡ ಮೆಹಬೂಬನಗರದಲ್ಲಿರುವ

ಹೈದರಾಬಾದ್ ಎನ್ ಕೌಂಟರ್ ಸ್ಥಳಕ್ಕೆ ಎನ್ಎಚ್ಆರ್ ಸಿ ತಂಡ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಸಾವು

ಪುತ್ತೂರು, ಡಿ.7: ಬೈಕ್‌  ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಇಲ್ಲಿನ ಮುಕ್ರಂಪಾಡಿಯ ಕಮ್ಮಾಡಿ ಮಿಲ್ ಬಳಿ ನಡೆದಿದೆ. ಮೃತ ವ್ಯಕ್ತಿ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ ಲೋರೆನ್ಸ್ ಡಿ ಸೋಜಾ (69 ವರ್ಷ) ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಮಾದೆ ದೇವುಸ್ ಚರ್ಚ್‌ನಲ್ಲಿ ವಾಚ್‌ಮ್ಯಾನ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಿಥುನ್ ಎಂಬಾತ ತನ್ನ ಬೈಕ್ ನ್ನು ಅಜಾಗರೂಕತೆಯಿಂದ ಚಲಾಯಿಸಿದ್ದೆ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಈತ ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದು ಶುಕ್ರವಾರ ರಾತ್ರಿ 9.45 ಗಂಟೆ ಸುಮಾರಿಗೆ ಮಾಣಿ- ಮೈಸೂರು

ಪುತ್ತೂರು: ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಸಾವು Read More »

ಕರಾವಳಿ
Scroll to Top