Keerthana

ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಿ: ಗಡ್ಕರಿಗೆ ಪತ್ರ ಬರೆದ ಸವದಿ

ಬೆಂಗಳೂರು, ಮೇ 17: ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್‌ನೊಳಗೆ ಪ್ರಯಾಣ ಮಾಡಲು ಸಾಧ್ಯವಿಲ್ಲ. ಹಾಗಾಗಿ ಪೂರ್ಣ ಪ್ರಮಾಣದಲ್ಲಿ ಪ್ರಯಾಣಿಕರಿಗೆ ಸಂಚಾರ ಮಾಡಲು ಅವಕಾಶ ನೀಡಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿನ ನಿತಿನ್ ಗಡ್ಕರಿ ಅವರಿಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪತ್ರ ಬರೆದಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಬೇಕಾದರೆ ಸೀಟುಗಳ ಸಂಖ್ಯೆ ಕಡಿಮೆ ಮಾಡಬೇಕು. ಪ್ರಯಾಣಿಕರು ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಾರೆ. ಹೆಚ್ಚುವರಿ ಬಸ್‌ಗಳೂ ನಮ್ಮ ಬಳಿಯಿಲ್ಲ ಎಂದು ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಬಸ್ಸುಗಳ […]

ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಿ: ಗಡ್ಕರಿಗೆ ಪತ್ರ ಬರೆದ ಸವದಿ Read More »

ಕರ್ನಾಟಕ

ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು, ಮೇ 17: ಲಾಕ್‌ಡೌನ್ ಮೂರನೇ ಹಂತದ ಮುಕ್ತಾಯದ ಹಂತದಲ್ಲಿ ಆದಷ್ಟು ಬೇಗ ಶಾಲೆಗಳು ಪುನರಾರಂಭ ಆಗಬಹುದೆಂಬ ವದಂತಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇತಿಶ್ರೀ ಹಾಡಿದ್ದಾರೆ. ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ. ಈ ವಿಷಯದಲ್ಲಿ ಸರಕಾರ ಯಾವುದೇ ತರಾತುರಿಯಲ್ಲಿ ಇಲ್ಲ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸುರೇಶ್ ಹೇಳಿದ್ದಾರೆ. ಇಲಾಖಾ ಮಟ್ಟದಲ್ಲಿ ತಯಾರಾದ

ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಕೊರೋನ ಸೋಂಕು ದೃಢ

ಉಡುಪಿ, ಮೇ 16: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೇ 14ರಂದು ಮೃತಪಟ್ಟ ವ್ಯಕ್ತಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಶನಿವಾರ ಬಂದ ಮೃತ ವ್ಯಕ್ತಿಯ ಪರೀಕ್ಷಾ ವರದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಮೃತ 54 ವರ್ಷದ ವ್ಯಕ್ತಿ ಕುಂದಾಪುರ ತಾಲೂಕಿನವರಾಗಿದ್ದು, ಈಚೆಗೆ ಮಹಾರಾಷ್ಟ್ರದಿಂದ ಬಂದಿದ್ದರು. ಮೇ 13ರಂದು ಸಂಜೆ ಅವರಿಗೆ ಹೃದಯಾಘಾತವಾಗಿದ್ದು, ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಐಸೋಲೇಶನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಕೊರೋನ ಸೋಂಕು ದೃಢ Read More »

ಕರಾವಳಿ

ರಾಜ್ಯದಲ್ಲಿ ಇಂದು 39 ಹೊಸ ಕೋವಿಡ್ ಪ್ರಕರಣ ಪತ್ತೆ

ಬೆಂಗಳೂರು, ಮೇ 16: ರಾಜ್ಯದಲ್ಲಿ ಶುಕ್ರವಾರ ಸಂಜೆ 5ರಿಂದ ಶನಿವಾರ ಸಂಜೆ 5ರವರೆಗೆ 36 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ವರೆಗೆ ಒಟ್ಟು 496 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಇನ್ನು 559 ಪ್ರಕರಣಗಳು ಸಕ್ರಿಯವಾಗಿವೆ. ಬೆಂಗಳೂರಿನಲ್ಲಿ 14, ಕಲಬುರಗಿ 8, ಹಾಸನ 4, ಶಿವಮೊಗ್ಗ 3, ಮಂಡ್ಯ,

ರಾಜ್ಯದಲ್ಲಿ ಇಂದು 39 ಹೊಸ ಕೋವಿಡ್ ಪ್ರಕರಣ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಕ್ವಾರೆಂಟೈನ್‌ನಲ್ಲಿದ್ದ ವ್ಯಕ್ತಿ ಸಾವು, ಕೊರೋನ ಶಂಕೆ

ಉಡುಪಿ, ಮೇ 16: ಮಹಾರಾಷ್ಟ್ರದಿಂದ ಮೇ 5ರ ಬಳಿಕ ತನ್ನ ಹುಟ್ಟೂರಾದ ಕುಂದಾಪುರ ತಾಲೂಕಿಗೆ ಆಗಮಿಸಿದ ಕ್ವಾರಂಟೈನ್‌ನಲ್ಲಿದ್ದ 53 ವರ್ಷದ ವ್ಯಕ್ತಿಯೊಬ್ಬರು ಹೃದಯ ಸಂಬಂಧಿ ಅಸ್ವಸ್ಥತೆಗಾಗಿ ಕುಂದಾಪುರದ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಎರಡು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತಪಟ್ಟರಿಗೆ ಕೊರೋನ ಸೋಂಕು ತಗುಲಿರಬಹುದು ಎಂಬ ಸಂಶಯದ ಹಿನ್ನೆಲೆಯಲ್ಲಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅದರ ವರದಿಗಾಗಿ ಕಾಯಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ನರ್ಸ್ ಹಾಗೂ ಆಸ್ಪತ್ರೆಯ ಸ್ವಚ್ಚತಾ

ಉಡುಪಿ: ಕ್ವಾರೆಂಟೈನ್‌ನಲ್ಲಿದ್ದ ವ್ಯಕ್ತಿ ಸಾವು, ಕೊರೋನ ಶಂಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕೊರೋನ ಟೆಸ್ಟ್ ಲ್ಯಾಬ್‌ಗೆ ಅನುಮತಿ

ಉಡುಪಿ, ಮೇ 16: ಕೊರೋನ ಸೋಂಕು ಶಂಕಿತ ವ್ಯಕ್ತಿಗಳ ಗಂಟಲು ದ್ರವದ ಮಾದರಿಗಳ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಪ್ರಯೋಗಾಲಯದ ಆರಂಭಕ್ಕೆ ಕೇಂದ್ರ ಸರಕಾರ ಕೊನೆಗೂ ಗ್ರೀನ್‌ಸಿಗ್ನಲ್ ನೀಡಿದೆ. ಈಗಾಗಲೇ ಕೆಎಂಸಿಯಲ್ಲಿ ಸುಸಜ್ಜಿತವಾದ, ಅತ್ಯಂತ ಆಧುನಿಕವಾದ ವೈರಾಲಜಿ ಪರೀಕ್ಷಾ ಪ್ರಯೋಗಾಲಯವಿದ್ದು, ಇದರಲ್ಲಿ ಕೊರೋನ ವೈರಸ್‌ನ ಪರೀಕ್ಷೆ ಮಾಡಲು ಇದೀಗ ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ ಅನುಮತಿ ನೀಡಿದೆ. ಐಸಿಎಂಆರ್‌ನಿಂದ ಕಳೆದ ಗುರುವಾರ ಅಧಿಕೃತವಾದ ಪರವಾನಿಗೆ ಪತ್ರ ಬಂದಿದೆ ಎಂದು ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ

ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕೊರೋನ ಟೆಸ್ಟ್ ಲ್ಯಾಬ್‌ಗೆ ಅನುಮತಿ Read More »

ಕರಾವಳಿ

breaking news ರಾಜ್ಯದಲ್ಲಿ ಇಂದು 69 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆ

ಬೀದರ್‌ನಲ್ಲಿ ಓರ್ವ ಸಾವು ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಬೆಂಗಳೂರು, ಮೇ 15: ರಾಜ್ಯದಲ್ಲಿ ಇಂದು ಒಂದೇ ದಿನ 69 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1,056ಕ್ಕೆ ಏರಿಕೆಯಾಗಿದೆ. ಅಲ್ಲದೆ ಬೀದರ್‌ನಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ 16, ಮಂಡ್ಯ 13, ಬೆಂಗಳೂರು ನಗರ 13, ಹಾಸನ 7, ಬೀದರ್ 7, ಉಡುಪಿ 5, ಕಲಬುರಗಿ 3, ಚಿತ್ರದುರ್ಗ 2, ಶಿವಮೊಗ್ಗ ಹಾಗೂ ಕೋಲಾರದಲ್ಲಿ

breaking news ರಾಜ್ಯದಲ್ಲಿ ಇಂದು 69 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆ Read More »

ಕರ್ನಾಟಕ

ಮೇ 18ರಂದು ಯುಎಇಯಿಂದ 2ನೇ ವಿಮಾನ ಮಂಗಳೂರಿಗೆ

ಮಂಗಳೂರು, ಮೇ 15: ದುಬೈನಿಂದ ಅನಿವಾಸಿ ಕನ್ನಡಿಗರನ್ನು ಹೊತ್ತ ವಿಮಾನವು ಮೇ 18ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಜಿಲ್ಲಾಧಿಕಾರಿ ಪ್ರಾಥಮಿಕ ವರದಿಯ ಪ್ರಕಾರ 171 ಮಂದಿ ಪ್ರಯಾಣಿಕರು ಈ ವಿಮಾನದಲ್ಲಿ ಆಗಮಿಸಲಿದ್ದು, ಅವರೆಲ್ಲ ಯಾವ ಜಿಲ್ಲೆಗೆ ಸೇರಿದ್ದಾರೆಂದು ತಿಳಿದಿಲ್ಲ. ಆದರೆ ಕೇಂದ್ರ ಹಾಗೂ ರಾಜ್ಯ ಆರೋಗ್ಯ ಇಲಾಖೆಯ ನಿಯಮದ ಪ್ರಕಾರ ತಮ್ಮದೆ ಸ್ವಂತ ಖರ್ಚಿನಲ್ಲಿ ಕ್ವಾರಂಟೈನ್‌ಗೊಳಪಡುವ ಷರತ್ತಿಗೆ ಒಪ್ಪಿಕೊಂಡೇ ಆಗಮಿಸುತ್ತಿದ್ದಾರೆ ಎಂದು

ಮೇ 18ರಂದು ಯುಎಇಯಿಂದ 2ನೇ ವಿಮಾನ ಮಂಗಳೂರಿಗೆ Read More »

ಕರಾವಳಿ

Breaking news ದುಬೈಯಿಂದ ಉಡುಪಿಗೆ ಬಂದ 6 ಮಂದಿಗೆ ಕೊರೋನ ಸೋಂಕು ದೃಢ: ಡಿಎಚ್ಒ

ಉಡುಪಿ, ಮೇ 15: ದುಬೈಯಿಂದ ಮೇ 12 ರಂದು ಉಡುಪಿಗೆ ಆಗಮಿಸಿದ 49 ಮಂದಿಯ ಪೈಕಿ ಆರು ಮಂದಿಗೆ ಕೊರೋನ ಸೋಂಕು ದೃಢಪಟ್ಟಿರುವುದಾಗಿ ಉಡುಪಿ ಡಿಎಚ್ಒ ಡಾ.ಸುದೀರ್ ಚಂದ್ರ ಚೂಡ ತಿಳಿಸಿದ್ದಾರೆ. ಕೊರೋನ-ಲಾಕ್‌ಡೌನ್‌ನಲ್ಲಿ ಅತಂತ್ರರಾದ ಹಿನ್ನೆಲೆಯಲ್ಲಿ ದುಬೈಯಿಂದ 176 ಮಂದಿ ಅನಿವಾಸಿ ಕನ್ನಡಿಗರನ್ನು  ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಕರೆತರಲಾಗಿತ್ತು. ಈ ಪೈಕಿ ಉಡುಪಿಯ 49 ಮಂದಿ ಇದ್ದರು. ಇವರನ್ನು ಉಡುಪಿಯ ಹೊಟೇಲ್ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಆರು ಮಂದಿಯ ವರದಿ ಪಾಸಿಟಿವ್ ಬಂದಿರುವುದರಿಂದ ಉಡುಪಿಯ ಟಿಎಂಪೈ ಕೋವಿಡ್

Breaking news ದುಬೈಯಿಂದ ಉಡುಪಿಗೆ ಬಂದ 6 ಮಂದಿಗೆ ಕೊರೋನ ಸೋಂಕು ದೃಢ: ಡಿಎಚ್ಒ Read More »

ಕರಾವಳಿ

9, 11ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ: ಸಿಬಿಎಸ್‌ಇ

ಹೊಸದಿಲ್ಲಿ, ಮೇ 14: ಕೊರೋನ ಹಿನ್ನೆಲೆಯಲ್ಲಿ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳು ಫೇಲಾದರೆ ಅವರಿಗೆ ಮತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಸಿಬಿಎಸ್‌ಇ ಹೇಳಿದೆ. 9 ಮತ್ತು 11ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಆಯಾ ಶಾಲೆಗಳೇ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪರೀಕ್ಷೆ ನಡೆಸಬೇಕು. ಕೋವಿಡ್-19 ಬಿಕ್ಕಟ್ಟು ಇರುವ ಕಾರಣ ಮಾತ್ರ ಈ ವರ್ಷ ಈ ರೀತಿಯ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಸಿಬಿಎಸ್‌ಇ ಕಂಟ್ರೋಲರ್ ಸನ್ಯಮ್ ಭಾರಧ್ವಜ್ ಹೇಳಿದ್ದಾರೆ.

9, 11ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ: ಸಿಬಿಎಸ್‌ಇ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top