Keerthana

ನಾಳೆ ಯುಎಇಯಿಂದ 177 ಪ್ರಯಾಣಿಕರು ಮಂಗಳೂರಿಗೆ

ಮಂಗಳೂರು, ಮೇ 11: ಯುಎಇಯಿಂದ ಅನಿವಾಸಿ ಕನ್ನಡಿಗರನ್ನು ಮಂಗಳೂರಿಗೆ ಕರೆತರಲು ಮೊದಲ ವಿಮಾನ ಮೇ 12 ರಂದು ರಾತ್ರಿ 10ರ ಸುಮಾರಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ ಎಂದು ಐಎಎಸ್ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ. ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ಈ ಕುರಿತು ನಡೆದ ಸಭೆಯಲ್ಲಿ ಮಾತನಾಡುತ್ತಾ, ವಿದೇಶದಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದರು. ಯುಎಇನಿಂದ ಮಂಗಳೂರಿಗೆ […]

ನಾಳೆ ಯುಎಇಯಿಂದ 177 ಪ್ರಯಾಣಿಕರು ಮಂಗಳೂರಿಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಸ್ಕ್, ಸುರಕ್ಷತೆ ಅಂತರ ಪಾಲಿಸದಿದ್ದರೆ ದಂಡ: ಉಡುಪಿ ಡಿಸಿ ಜಗದೀಶ್

ಉಡುಪಿ, ಮೇ 10: ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮುಂಜಾಗೃತ ಕ್ರಮಗಳನ್ನು ಪಾಲಿಸಬೇಕು. ತಪ್ಪಿದಲ್ಲಿ ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆ್ಯಕ್ಟ್ 2005 ಮತ್ತು ಎಪಿಡೆಮಿಕ್ ಡಿಸೀಸ್ ರೆಗ್ಯುಲೇಶನ್ ಆ್ಯಕ್ಟ್‌ನಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶದಲ್ಲಿ ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ, ಮಾಸ್ಕ್ ಅಥವಾ ಫೇಸ್ ಕವರ್‌ಗಳನ್ನು ಧರಿಸಬೇಕು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ, ಅಂಗಡಿಗಳಲ್ಲಿ ಖರೀದಿ ಮಾಡುವ ಸಮಯದಲ್ಲಿ ಮತ್ತು

ಮಾಸ್ಕ್, ಸುರಕ್ಷತೆ ಅಂತರ ಪಾಲಿಸದಿದ್ದರೆ ದಂಡ: ಉಡುಪಿ ಡಿಸಿ ಜಗದೀಶ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು ದಾಖಲೆಯ 54 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆ

ಬೆಂಗಳೂರು, ಮೇ 10: ರಾಜ್ಯದಲ್ಲಿ ಇಂದು ಬರೋಬ್ಬರಿ 54 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರವಿವಾರ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 54 ಕೊರೋನ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ಕೊರೋನ ಸೋಂಕು ಪತ್ತೆಯಾದ ನಂತರ ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಬೆಂಗಳೂರು ನಗರ 3, ಬೆಳಗಾವಿ 22, ಉತ್ತರ ಕನ್ನಡ 7, ಚಿಕ್ಕಬಳ್ಳಾಪುರ, ದಾವಣಗೆರೆ

ರಾಜ್ಯದಲ್ಲಿ ಇಂದು ದಾಖಲೆಯ 54 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆ Read More »

ಕರ್ನಾಟಕ

ರಾಜ್ಯದಲ್ಲಿ ಇಂದು 41 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 794 ಕ್ಕೆ ಏರಿಕೆ

ಬೆಂಗಳೂರು, ಮೇ 9: ರಾಜ್ಯದಲ್ಲಿ ಇಂದು ಒಂದೇ ದಿನ 41 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದಾವಣಗೆರೆ 6, ಬೆಂಗಳೂರು 12, ತುಮಕೂರು 4, ವಿಜಯಪುರ 1, ಬೀದರ್ 3, ದಕ್ಷಿಣ ಕನ್ನಡ 3, ಉತ್ತರ ಕನ್ನಡ 8, ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ ಮತ್ತು ಚಿತ್ರದುರ್ಗ ಮೂವರಿಗೆ ಕೊರೋನ ಸೋಂಕು ಪತ್ತೆಯಾಗಿದೆ. ಈ ಪೈಕಿ ಭಟ್ಕಳದ 1.5 ವರ್ಷದ ಗಂಡು ಮಗು, 2

ರಾಜ್ಯದಲ್ಲಿ ಇಂದು 41 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 794 ಕ್ಕೆ ಏರಿಕೆ Read More »

ಕರ್ನಾಟಕ

ಮೇ 12ರಂದು ದುಬೈಯಿಂದ ಮಂಗಳೂರಿಗೆ ಪ್ರಥಮ ವಿಮಾನ

ಮಂಗಳೂರು, ಮೇ 8: ಕೊರೋನ ಹಿನ್ನೆಲೆಯಲ್ಲಿ ದುಬೈಯಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಕರಾವಳಿ ಭಾಗದ ಜನರನ್ನು ಹೊತ್ತ ಮೊದಲ ವಿಮಾನವು ಮೇ 12ರಂದು ಮಂಗಳೂರಿಗೆ ಆಗಮಿಸಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ಕೇರಳ ಮತ್ತಿತರ ಭಾಗಗಳ ಜನರನ್ನು ಕರೆ ತರಲು ವಿಮಾನ ವ್ಯವಸ್ಥೆ ಮಾಡಿರುವಾಗ ಕರ್ನಾಟಕ ಕರಾವಳಿಯ ಜನರನ್ನು ಕರೆತರಲು ವ್ಯವಸ್ಥೆ ಮಾಡಿಲ್ಲವೇಕೆ ಎಂದು ಹಲವಾರು ಮಂದಿ ಪ್ರಶ್ನಿಸಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ವಿಮಾನಯಾನ ಸಚಿವರ ಜೊತೆ ಮಾತನಾಡಿ ದುಬೈಯಿಂದ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು

ಮೇ 12ರಂದು ದುಬೈಯಿಂದ ಮಂಗಳೂರಿಗೆ ಪ್ರಥಮ ವಿಮಾನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಜುಲೈಯಲ್ಲಿ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ

ಹೊಸದಿಲ್ಲಿ ಮೇ 8: ಸಿಬಿಎಸ್‌ಇಯ 10 ಮತ್ತು 12ನೇ ತರಗತಿಗಳ ಬಾಕಿ ಉಳಿಸಿರುವ 29 ವಿಷಯಗಳ ಪರೀಕ್ಷೆಯನ್ನು ಜುಲೈ ತಿಂಗಳಲ್ಲಿ ನಡೆಸಲು ನಿರ್ಧರಿಸಿರುವುದಾಗಿ ಶುಕ್ರವಾರ ಪ್ರಕಟಿಸಲಾಗಿದೆ. ಹತ್ತು ಮತ್ತು 12ನೇ ತರಗತಿಗಳ 29 ವಿಷಯಗಳ ಪರೀಕ್ಷೆಯನ್ನು ಕೊರೋನ 9 ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದು, ಜುಲೈ 1ರಿಂದ ಜುಲೈ 15ರ ವರೆಗೂ ಪರೀಕ್ಷೆ ನಡೆಸುವುದಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಾಂಕ್ ಪ್ರಕಟಿಸಿದ್ದಾರೆ. ಜೆಇಇ (ಮೇನ್ಸ್) ಪರೀಕ್ಷೆ ಜುಲೈ 18ರಿಂದ 23ರ ವರೆಗೂ ನಡೆಸುವುದಾಗಿ ಮಾನವ ಸಂಪನ್ಮೂಲ

ಜುಲೈಯಲ್ಲಿ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಇಂದು 48 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆ

ಬೆಂಗಳೂರು, ಮೇ 8: ರಾಜ್ಯದಲ್ಲಿ ಇಂದು ಹೊಸದಾಗಿ 48 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 753ಕ್ಕೇರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಳಗಾವಿಯ 11 ಮಂದಿ, ದಾವಣೆಗೆರೆಯ 14 ಮಂದಿ, ಬೆಂಗಳೂರಿನ 7 ಮಂದಿ ಚಿತ್ರದುರ್ಗ 3 ಮಂದಿ, ಉತ್ತರ ಕನ್ನಡ 12 ಮಂದಿ ಹಾಗೂ ಬಳ್ಳಾರಿಯಲ್ಲಿ ಓರ್ವನಿಗೆ ಕೊರೋನ ಸೋಂಕು ದೃಢಪಟ್ಟಿದೆ. 753 ಮಂದಿ ಸೋಂಕಿತರ ಪೈಕಿ 376 ಮಂದಿ ಸೋಂಕಿನಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ

ರಾಜ್ಯದಲ್ಲಿ ಇಂದು 48 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆ Read More »

ಕರ್ನಾಟಕ

ಮಂಗಳೂರು: ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ 700ಕ್ಕೂ ಅಧಿಕ ವಲಸೆ ಕಾರ್ಮಿಕರು

ಮಂಗಳೂರು, ಮೇ 8: ಉತ್ತರ ಭಾರತದ ಸುಮಾರು 700ಕ್ಕೂ ಅಧಿಕ ವಲಸೆ ಕಾರ್ಮಿಕರು ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಜಮಾಯಿಸಿದ್ದು, ಇವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡುವಂತಾಗಿದೆ. ಕಾರ್ಮಿಕರನ್ನು ಉಚಿತವಾಗಿ ರೈಲಿನ ಮೂಲಕ ಕಳುಹಿಸಲಾಗುತ್ತಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪರಿಣಾಮ ಸುಳ್ಳು ಸುದ್ದಿ ನಂಬಿಯನ್ನು ಕೂಳೂರು, ಸುರತ್ಕಲ್, ಬೈಕಂಪಾಡಿಯಿಂದ ಬಂದಿರುವ ಸುಮಾರು 700ಕ್ಕೂ ಹೆಚ್ಚು ಕಾರ್ಮಿಕರು ಕಾಲ್ನಾಡಿಗೆ ಮೂಲಕ ರೈಲು ನಿಲ್ದಾಣಕ್ಕೆ ಆಗಮಿಸಿ ತಮ್ಮೂರಾದ ರಾಜಸ್ಥಾನ, ಬಿಹಾರ, ಅಸ್ಸಾಂ, ಉತ್ತರಪ್ರದೇಶಗಳಿಗೆ ಕಳುಹಿಸುವಂತೆ

ಮಂಗಳೂರು: ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ 700ಕ್ಕೂ ಅಧಿಕ ವಲಸೆ ಕಾರ್ಮಿಕರು Read More »

ಕರಾವಳಿ

ಇಂದು ರಾಜ್ಯದಲ್ಲಿ 12 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ

ಬೆಂಗಳೂರು, ಎ.7: ರಾಜ್ಯದಲ್ಲಿ ಇಂದು ಹೊಸದಾಗಿ 12 ಕೊರೋನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ಈ ನಡುವೆ ದಾವಣಗೆರೆಯ 55 ವರ್ಷದ ಮಹಿಳೆಯೋರ್ವರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯ ಸರಕಾರ ಹೊರಡಿಸಿದ ಬುಲೆಟಿನ್ ನಲ್ಲಿರುವಂತೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದ್ದು, ಈ ಪೈಕಿ 30 ಮಂದಿ ಸಾವನ್ನಪ್ಪಿದ್ದರೆ, 366 ಮಂದಿ ಗುಣಮುಖರಾಗಿದ್ದಾರೆ. ಬೆಳಗ್ಗೆ 8 ಪ್ರಕರಣಗಳು ಪತ್ತೆಯಾಗಿದ್ದವು. ದಾವಣಗೆರೆಯಲ್ಲಿ ಇಂದು ಮೃತಪಟ್ಟ 55 ವರ್ಷದ ಮಹಿಳೆ, ಜ್ವರದ ಲಕ್ಷಣಗಳನ್ನು ಹೊಂದಿದ್ದ 53

ಇಂದು ರಾಜ್ಯದಲ್ಲಿ 12 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಜ್ಪೆಯಲ್ಲಿ ಬೈಕಿಗೆ ಟಿಪ್ಪರ್ ಢಿಕ್ಕಿ: ಮಹಿಳೆ ಮೃತ್ಯು

ಮಂಗಳೂರು, ಮೇ 7: ಬೈಕಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮಹಿಳೆ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಬಜ್ಪೆಯ ಪಾಪಿಲಾನ್ ಬಾರ್ ಸಮೀಪ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಜೋಕಟ್ಟೆ ನಿವಾಸಿ ಶಶಿಕಲಾ(45) ಎಂದು ಗುರುತಿಸಲಾಗಿದೆ. ಇವರು ತನ್ನ ಪತಿಯೊಂದಿಗೆ ತೆರಳುತ್ತಿದ್ದರು. ಬೈಕ್ ಚಲಾಯಿಸುತ್ತಿದ್ದ ಶಶಿಕಲಾ ಅವರ ಪತಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಅಪಘಾತಕ್ಕೆ ಕಾರಣವಾದ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ ಎಂದ ತಿಳಿದು ಬಂದಿದೆ.

ಬಜ್ಪೆಯಲ್ಲಿ ಬೈಕಿಗೆ ಟಿಪ್ಪರ್ ಢಿಕ್ಕಿ: ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top