Swathi

ರಾಜ್ಯ ಸರ್ಕಾರದ  ಸಾಧನೆ; ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ನೂರು ದಿನ ಪೂರೈಸಿ ಮುನ್ನಡೆದಿದ್ದು, ಈ ಅವಧಿಯಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ನೆರೆ, ಪ್ರವಾಹದ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಮಿನಿ ವಿಧಾನಸೌಧದಲ್ಲಿ ಮೂರು ದಿನಗಳ ಕಾಲ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಸಿ. ಅವರು ಬುಧವಾರ ಪ್ರದರ್ಶನಕ್ಕೆ ಚಾಲನೆ ನೀಡಿದರು.  ಬಳಿಕ ಮಾತನಾಡಿದ […]

ರಾಜ್ಯ ಸರ್ಕಾರದ  ಸಾಧನೆ; ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ Read More »

ಕರಾವಳಿ

ನಿಖರ ಮಾಹಿತಿ ನೀಡಿ ಆರ್ಥಿಕ ಗಣತಿ ಯಶಸ್ವಿಗೊಳಿಸಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಜಿಲ್ಲೆಯಲ್ಲಿ ಇಂದಿನಿಂದ 7 ನೇ ಆರ್ಥಿಕ ಗಣತಿ ಆರಂಭವಾಗಿದ್ದು, ಮೂರು ತಿಂಗಳುಗಳ ಕಾಲ ಜಿಲ್ಲೆಯಾದ್ಯಂತ ನಡೆಯಲಿರುವ ಗಣತಿಯಲ್ಲಿ ಸಂಘಟಿತ ಹಾಗೂ ಅಸಂಘಟಿತ ಆರ್ಥಿಕ ವಲಯಗಳ ಬಗ್ಗೆ ಮಾಹಿತಿಯನ್ನು ಗಣತಿದಾರರು ಸಂಗ್ರಹಿಸಲಿದ್ದಾರೆ. ಸಾರ್ವಜನಿಕರು ಗಣತಿದಾರರಿಗೆ ನಿಖರವಾದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ತಿಳಿಸಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರ್ಥಿಕ ಗಣತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತೀ 5 ವರ್ಷಕೊಮ್ಮೆ ಈ ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು,

ನಿಖರ ಮಾಹಿತಿ ನೀಡಿ ಆರ್ಥಿಕ ಗಣತಿ ಯಶಸ್ವಿಗೊಳಿಸಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ Read More »

ಕರಾವಳಿ

ಗುಲ್ಗೋಡಿಯಲ್ಲಿ ಅಯ್ಯಪ್ಪ ದೀಪೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಜ.1  ಕಡಬ ತಾಲೂಕಿನ ಕೊೈಲ ಗ್ರಾಮದ ಗುಲ್ಗೋಡಿಯಲ್ಲಿ ಇಲ್ಲಿನ ಅಯ್ಯಪ್ಪ ಭಕ್ತವೃಂದ ಆಶ್ರಯದಲ್ಲಿ ಎರಡನೇ ವರ್ಷದ ಅಯ್ಯಪ್ಪ ದೀಪೋತ್ಸವ ಹಾಗೂ ಅಪ್ಪ ಸೇವೆ ಸೋಮವಾರ ರಾತ್ರಿ ನಡೆಯಿತು. ಬಾಬು ಗುರುಸ್ವಾಮಿ ನೇತೃತ್ವದಲ್ಲಿ ಅಯ್ಯಪ್ಪ ವೃತದಾರಿಗಳಿಗೆ ಅಪ್ಪ ಸೇವೆ ನಡೆಯಿತು. ಕುದಿಯುವ ಎಣ್ಣೆಯಿಂದ ಅಪ್ಪ ತೆಗೆಯುವ ಸೇವೆಯನ್ನು ಸುಮಾರು 25 ಕ್ಕೂ ಹೆಚ್ಚು ಮಾಲಾಧಾರಿಗಳು ನೇರವೇರಿಸಿದರು. ಇದೇ ವೇಳೆ ಪುತ್ತೂರು ಚಂದ್ರಶೇಖರ ಹೆಗ್ಡೆ ನಿರ್ದೆಶನದ ಪುನೀತ್ ಆರ್ಕೆಸ್ಟ್ರಾ ಅವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ

ಗುಲ್ಗೋಡಿಯಲ್ಲಿ ಅಯ್ಯಪ್ಪ ದೀಪೋತ್ಸವ Read More »

ಕರಾವಳಿ

ವಿವಿ ಕಾಲೇಜಿಗೆ 150 :  ಮುಕ್ತ ಛಾಯಾಗ್ರಹಣ ಸ್ಪರ್ಧೆ

  (ನ್ಯೂಸ್ ಕಡಬ) newskadaba.com, ಮಂಗಳೂರು, ಜ.1     ವಿಶ್ವವಿದ್ಯಾನಿಲಯ ಕಾಲೇಜಿಗೆ 150ರ ಸಂಭ್ರಮಾಚರಣೆಯ ಅಂಗವಾಗಿ  ಜನವರಿ 3 ರಂದು 4 ರಂದು ಮುಕ್ತ ಛಾಯಾಗ್ರಹಣ ಸ್ಪರ್ಧೆಯನ್ನು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ  ಹಮ್ಮಿಕೊಳ್ಳಲಾಗಿದೆ. ಛಾಯಾಗ್ರಹಣ ಸ್ಪರ್ಧೆಯ ವಿಷಯ : 150ರ ಸಂಭ್ರಮದಲ್ಲಿ ವಿವಿ ಕಾಲೇಜು (ಕಾಲೇಜಿನ ಆವರಣ).  ಛಾಯಾಚಿತ್ರ ಸಲ್ಲಿಸಲು ಕೊನೆಯ ದಿನ ಜನವರಿ 8 ರಂದು ಸಾಪ್ಟ್ ಕಾಪಿ ಮತ್ತು ಹಾರ್ಡ್ ಕಾಪಿ (8×12), ಚಿತ್ರದ ಕುರಿತಾಗಿ 50 ಪದಗಳು ಮೀರದಂತೆ

ವಿವಿ ಕಾಲೇಜಿಗೆ 150 :  ಮುಕ್ತ ಛಾಯಾಗ್ರಹಣ ಸ್ಪರ್ಧೆ Read More »

ಕರಾವಳಿ

ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1   ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಇವರ ಸಹಯೋಗದಲ್ಲಿ  80ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ 2020 ಜನವರಿ 2 ರಿಂದ 6 ರವರೆಗೆ ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ.

ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ Read More »

ಕರಾವಳಿ

ಸೇವಾ ನಿವೃತ್ತಿ : ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಕಚೇರಿಯ ಡಿ ಗ್ರೂಪ್ ಸಿಬ್ಬಂದಿ ವಿಶ್ವನಾಥ ಡಿ ಅವರು ಇಂದು ಸೇವಾ ನಿವೃತ್ತಿಯಾದ ಪ್ರಯುಕ್ತ ಅವರನ್ನು ಬೀಳ್ಕೊಡಲಾಯಿತು. ಅನಾರೋಗ್ಯ ನಿಮಿತ್ತ ಅವರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಷಾ ಹಾಗೂ ಕಚೇರಿಯ ಸಿಬ್ಬಂದಿಗಳು,  ಯಕ್ಷಗಾನ ಕಲಾವಿದ ಗಿರೀಶ್ ನಾವಡ ಹಾಗೂ ವಿಶ್ವನಾಥ ಡಿ ಇವರ ಕುಟುಂಬಸ್ಥರು ಉಪಸ್ಥಿತರಿದ್ದರು.

ಸೇವಾ ನಿವೃತ್ತಿ : ಬೀಳ್ಕೊಡುಗೆ Read More »

ಕರಾವಳಿ

ಜಿಲ್ಲೆಯ ಸೌಹಾರ್ದತೆ ಪರಂಪರೆ ಎತ್ತಿಹಿಡಿಯಿರಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1   ದಕ್ಷಿಣ ಕನ್ನಡ ಜಿಲ್ಲೆಯನ್ನು ಹಲವಾರು ಹಿರಿಯರು ಕಟ್ಟಿ ಬೆಳೆಸಿ ಇಲ್ಲಿನ ಆರ್ಥಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಕಾರಣರಾಗಿದ್ದು, ಈ ಪರಂಪರೆಯನ್ನು ಎತ್ತಿಹಿಡಿದು ಜನತೆ ಶಾಂತಿ ನೆಮ್ಮದಿಯನ್ನು ಮುಂದುವರಿಸಲು ಸಹಕರಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ದ.ಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಯೋಜಿಸಿದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು. ಸೌಹಾರ್ದತೆ ಸೌಜನ್ಯದಿಂದ ಬದುಕು ರೂಪಿಸಿಕೊಳ್ಳಬೇಕು. ಗಲಭೆ ಗಲಾಟೆಗಳನ್ನು

ಜಿಲ್ಲೆಯ ಸೌಹಾರ್ದತೆ ಪರಂಪರೆ ಎತ್ತಿಹಿಡಿಯಿರಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ Read More »

ಕರಾವಳಿ

ಜ.19 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1  ಜಿಲ್ಲೆಯಲ್ಲಿ ಜನವರಿ 19 ರಿಂದ 22 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು 2020-21 ನೇ ಸಾಲಿನ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ 1,49,713 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ

ಜ.19 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ Read More »

ಕರಾವಳಿ

ಕಾರು ಮತ್ತು ಸ್ಕೂಟರ್ ಢಿಕ್ಕಿ ➤ ಗಾಯಗೊಂಡ ಸಹಸವಾರಿ

(ನ್ಯೂಸ್ ಕಡಬ) newskadaba.com, ಪುತ್ತೂರು, ಡಿ.31   ಸ್ಕೂಟರ್ ಮತ್ತು ಕಾರು ನಡುವೆ ಅಪಘಾತವಾಗಿ ಸಹಸವಾರಿಗೆ ಗಾಯವಾದ ಘಟನೆ ಪುತ್ತೂರು ತಾಲೂಕು ಕಸ್ಬಾ ಗ್ರಾಮದ ಮಂಜಲ್ಪಡ್ಪು ಎಂಬಲ್ಲಿ ನಿನ್ನೆ ನಡೆದಿದೆ. ಸಹಸವಾರಿ ಬಿಂದಿಯಾ ಅವರಿಗೆ ಬಲ ಕೋಲು ಕಾಲಿಗೆ ಗಾಯವಾಗಿ ಪುತ್ತೂರು ಹಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿರುತ್ತದೆ. ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಮತ್ತು ಸ್ಕೂಟರ್ ಢಿಕ್ಕಿ ➤ ಗಾಯಗೊಂಡ ಸಹಸವಾರಿ Read More »

ಕರಾವಳಿ

ಅಂಗಡಿ ಜಗಲಿಯಲ್ಲಿ ಆರಂಭವಾದ ಪ್ರಾಥಮಿಕ ಶಾಲೆಗೆ ಇದೀಗ ಬೆಳ್ಳಿ ಹಬ್ಬ ✍ಸದಾನಂದ ಆಲಂಕಾರು

(ನ್ಯೂಸ್ ಕಡಬ) newskadaba.com, ಕಡಬ, ಡಿ.31    ಸಮಾಜಕ್ಕೆ ಒಳಿತಾಗುವ ಕಾರ್ಯಕ್ಕೆ ಹತ್ತು ಹಲವು ವಿಘ್ನಗಳು ಎದುರಾಗುವುದು ಸಹಜ. ಅಂತಹ ಪರಿಸ್ಥಿತಿಯಲ್ಲಿ ಎದೆಗುಂದದೆ ಮುನ್ನುಗ್ಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುವುದನ್ನು ಆಲಂಕಾರು ಶ್ರೀಭಾರತಿ ಹಿರಿಯ ಪ್ರಾಥಮಿಕ ಶಾಲಾ ಆಡಳಿತ ಮಂಡಳಿ ಸಾಧಿಸಿ ತೋರಿಸಿಕೊಟ್ಟಿದೆ. ಒಂದು ಕಾಲದಲ್ಲಿ ಅಂಗೈಯಗಲ ಜಾಗವಿಲ್ಲದೆ ಅಂಗಡಿ ಜಗಲಿಯಲ್ಲಿ ಆರಂಭವಾದ ಪ್ರಾಥಮಿಕ ಶಾಲೆ ಯಾವಾಗ ಮುಚ್ಚಿ ಬಿಡುತ್ತದೋ ಎಂದು ಛೇಡಿಸುತ್ತಿದ್ದವರಿಗೆ ಇಂದು ಬೆಳ್ಳಿ ಹಬ್ಬವನ್ನು ಆಚರಿಸಿಕೊಳ್ಳುವುದರ ಮೂಲಕ ಸಮರ್ಪಕವಾಗಿ ಉತ್ತರ ನೀಡಿದೆ. ಇದೀಗ ಬರೋಬ್ಬರಿ

ಅಂಗಡಿ ಜಗಲಿಯಲ್ಲಿ ಆರಂಭವಾದ ಪ್ರಾಥಮಿಕ ಶಾಲೆಗೆ ಇದೀಗ ಬೆಳ್ಳಿ ಹಬ್ಬ ✍ಸದಾನಂದ ಆಲಂಕಾರು Read More »

ವಿಶೇಷ ಲೇಖನಗಳು
Scroll to Top