ವಳಕಡಮ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಘಾಟನೆ ➤ಹೈನುಗಾರಿಕೆಯಿಂದ ಮಹಿಳೆಯರೂ ಅರ್ಥಿಕವಾಗಿ ಸಬಲೀಕರಣ-ರವಿರಾಜ್ ಹೆಗ್ಡೆ
(ನ್ಯೂಸ್ ಕಡಬ) newskadaba.com ಕಡಬ, ನ.20 ಆಧುನಿಕ ಕಾಲದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಹೈನುಗಾರಿಕೆಯು ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳಲು ಸಹಾಯವಾಗುತ್ತದೆ ಎಂದು ದ.ಕ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಹೇಳಿದರು. ಕೊೈಲ ಗ್ರಾಮದ ವಳಕಡಮದಲ್ಲಿ ನೂತನವಾಗಿ ಆರಂಭಗೊಂಡಿರುವ ವಳಕಡಮ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ ಸುಳ್ಯ ಶಾಸಕ ಎಸ್.ಅಂಗಾರರವರು ಮಾತನಾಡಿ, ನಮ್ಮ ಬದುಕು ಯಾವಾಗಲೂ ಶ್ರಮದ ಬದುಕು ಆಗಬೇಕು, ಹೈನುಗಾರಿಕೆಯು ಒಂದು […]






