News Kadaba Desk

ನ್ಯಾಯಾಧೀಶನಿಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ➤ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) Newskadaba.com ನವದೆಹಲಿ, ನ. 01. ಬಾಲಕನ ಮೇಲೆ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರೋರ್ವರು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ರಾಜಸ್ಥಾನದ ಭರತ್ ಪುರ ಜಿಲ್ಲೆಯಲ್ಲಿ ನಡೆದಿದೆ. ರಾಜಸ್ಥಾನದ ಜಿಲ್ಲಾ ನ್ಯಾಯಾಧೀಶ ಜಿತೇಂದ್ರ ಸಿಂಗ್ 14 ವರ್ಷದ ಬಾಲಕನೋರ್ವನನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ಆರೋಪಿ ಜಿತೇಂದ್ರ ಸಿಂಗ್ ವಿರುದ್ದ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಬೆನ್ನಲ್ಲೇ ಅವರನ್ನು ನ್ಯಾಯಮೂರ್ತಿ ಹುದ್ದೆಯಿಂದ ತೆಗೆದು […]

ನ್ಯಾಯಾಧೀಶನಿಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ➤ ಪೋಕ್ಸೋ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) Newskadaba.com ಕಡಬ, ನ. 01. ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ಕಡಬ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಪುತ್ತೂರು ತಾಲೂಕು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವರು, ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಗಾಂಧಿ ವಿಚಾರ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಟಿ.ಎಮ್ ಮ್ಯಾಥ್ಯೂ ಪ್ರಧಾನ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪಿ.ಪಿ ವರ್ಗೀಸ್,

ಕಡಬ: ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಬೈಕ್ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) Newskadaba.com ಬಂಟ್ವಾಳ, ನ. 01. ಕಂಟೈನರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.75ರ ಮೆಲ್ಕಾರಿನಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಇರಾ ಪಂಜಾಜೆ ನಿವಾಸಿ ತಿಲಕ್(29) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಿಲಕ್ ರವರು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ಬೈಕ್ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಎರಡು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ➤ ಬಳಿಕ ಉಪ್ಪುನೀರಿಗೆ ಎಸೆದ ನೀಚ

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 01. ವ್ಯಕ್ತಿಯೋರ್ವ ಎರಡು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ನೀಚಕೃತ್ಯ ಮಂಗಳೂರಿನ ಹೊಯಿಗೆ ಬಜಾರ್ ನಲ್ಲಿರುವ ಫಿಶ್ ಕಟ್ಟಿಂಗ್ ಯಾರ್ಡ್ ನಲ್ಲಿ ನಡೆದಿದೆ. ಆರೋಪಿ ಬಿಹಾರ ಮೂಲದ ಚಂದನ್(38) ಎಂದು ಗುರುತಿಸಲಾಗಿದೆ. ಹೊಯಿಗೆ ಬಜಾರ್ ನ ಫಿಶ್ ಕಟ್ಟಿಂಗ್ ಯಾರ್ಡ್ ನಲ್ಲಿ ಬಿಹಾರ ಮೂಲದ ಸುಮಾರು 30ರಿಂದ 70 ಮಂದಿ ವಾಸವಿದ್ದು, ಇವರೆಲ್ಲ ಕೆಲಸಕ್ಕೆ ಹೋಗುವ ವೇಳೆ ಮಕ್ಕಳೆಲ್ಲ ಒಂದೆಡೆ ಒಟ್ಟಿಗೆ ಇರುತ್ತಾರೆ. ಈ ಮಗುವಿನ ತಂದೆ ತಾಯಿ

ಮಂಗಳೂರು: ಎರಡು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ➤ ಬಳಿಕ ಉಪ್ಪುನೀರಿಗೆ ಎಸೆದ ನೀಚ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕತಾರ್ ಇಂಡಿಯನ್ ಸೋಷಿಯಲ್ ಫೋರಂ (QISF), ಕೇಂದ್ರ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) Newskadaba.com ದೋಹಾ, ನ. 01. ಕತಾರ್ ಇಂಡಿಯನ್ ಸೋಷಿಯಲ್ ಫೋರಮ್ ನ(QISF), ರಾಷ್ಟೀಯ ಪಧಾಧಿಕಾರಿಗಳ ಸಭೆಯಲ್ಲಿ ಮುಂದಿನ ಮೂರು ವರ್ಷದ ಅವಧಿಯ ಕೇಂದ್ರಿಯ ಸಮಿತಿಗೆ, ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯು ನಡೆಯಿತು. ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಯ್ಯೂಬ್ ಉಳ್ಳಾಲ (ಕರ್ನಾಟಕ), ಉಪಾಧ್ಯಕ್ಷರಾಗಿ ಸಲಾಮ್ ಕುನ್ನಮ್ಮಲ್ (ಕೇರಳ), ಪ್ರಧಾನ ಕಾರ್ಯದರ್ಶಿಯಾಗಿ ಸಯೀದ್ ಕೋಮಾಚಿ (ಕೇರಳ) ಚುನಾಯಿತರಾದರು. ಕಾರ್ಯದರ್ಶಿಗಳಾಗಿ ಉಸ್ಮಾನ್ ಮೊಹಮ್ಮದ್ (ತಮಿಳು ನಾಡು) ಮತ್ತು ಒಸಾಮಾ ಅಹಮದ್ (ಕೇರಳ) ಚುನಾಯಿತರಾದರು. ಕೇಂದ್ರ ಕಾರ್ಯಕಾರಿ ಸಮಿತಿಯ

ಕತಾರ್ ಇಂಡಿಯನ್ ಸೋಷಿಯಲ್ ಫೋರಂ (QISF), ಕೇಂದ್ರ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ರೂ. 266 ಹೆಚ್ಚಳ ➤ ಇಂದಿನಿಂದಲೇ ಹೊಸ ದರ ಜಾರಿಗೆ

(ನ್ಯೂಸ್ ಕಡಬ) Newskadaba.com ನವದೆಹಲಿ, ನ. 01. ಗ್ರಾಹಕರಿಗೆ ಮತ್ತೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ಬೆನ್ನಲ್ಲೇ ಸಿಲಿಂಡರ್ ದರದಲ್ಲೂ ದಾಖಲೆಯ 266 ರೂ.ವನ್ನು ಹೆಚ್ಚಿಸಲಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಂದಿನಿಂದ 266 ರೂಪಾಯಿ ಹೆಚ್ಚಳವಾಗಿದ್ದು, 19 ಕೆಜಿ ಸಿಲೆಂಡರ್ ಗೆ 2 ಸಾವಿರ ರೂಪಾಯಿ 50 ಪೈಸೆ ನೀಡಬೇಕಾಗಿದೆ. ಈ ಹಿಂದೆ ಅದರ ಬೆಲೆ 1,734 ರೂಪಾಯಿಯಾಗಿತ್ತು. ಸದ್ಯಕ್ಕೆ ಗೃಹ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾಗಿಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ರೂ. 266 ಹೆಚ್ಚಳ ➤ ಇಂದಿನಿಂದಲೇ ಹೊಸ ದರ ಜಾರಿಗೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರಂತೋಡು: ನೂತನ ಪ್ರಯಾಣಿಕರ ತಂಗುದಾಣ ಉದ್ಘಾಟನೆ

(ನ್ಯೂಸ್ ಕಡಬ) Newskadaba.com ನ. 01. ಅರಂತೋಡು ಗ್ರಾಮದ ಬಿಳಿಯಾರು ಎಂಬಲ್ಲಿ ನೂತನ ಪ್ರಯಾಣಿಕರ ತಂಗುದಾಣದ ಉದ್ಘಾಟನೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀ ಮತಿ ಹರಿಣಿ ದೇರಾಜೆಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಶಿವಾನಂದ ಕುಕ್ಕುಂಬಳ, ಗಂಗಾಧರ ಬನ, ಶ್ರೀಮತಿ ಸರಸ್ವತಿ, ಪ್ರಮುಖರಾದ ಜಯಪ್ರಕಾಶ್ ದೇರಾಜೆ, ಶಿವ ನೆಕ್ಕಿಲ, ಕೆ.ಪಿ.ಕುಸುಮಾಧರ, ಗೋಪಾಲ ಮಾಡದಕಾನ, ಅಬ್ದುಲ್ಲಾ ಮಾವಿನಕಟ್ಟೆ ಸೇರಿದಂತೆ ಹಲವರು

ಅರಂತೋಡು: ನೂತನ ಪ್ರಯಾಣಿಕರ ತಂಗುದಾಣ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಪುನೀತ್ ರಾಜ್ ಕುಮಾರ್ ಮಾಡುತ್ತಿದ್ದ 1800 ಮಕ್ಕಳ ಜವಾಬ್ದಾರಿ ಹೊತ್ತ ತಮಿಳು ನಟ

(ನ್ಯೂಸ್ ಕಡಬ) Newskadaba.com ಬೆಂಗಳೂರು, ನ. 01. ನಟ, ಗಾಯಕ, ನಿರ್ಮಾಪಕ ಹೀಗೆ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಸಾಧನೆಗೈದ ದಿ.ಪುನೀತ್ ರಾಜ್ ಕುಮಾರ್ ಸಮಾಜ ಮುಖಿ ಚಿಂತನೆಗಳನ್ನು ಒಳಗೊಂಡಿದ್ದ ಆದರ್ಶ ವ್ಯಕ್ತಿಯೂ ಅಗಿದ್ದರು. ಬಲಗೈಯಲ್ಲಿ ಕೊಟ್ಟದ್ದು ಎಡಗೈ ತಿಳಿಯಬಾರದು ಎಂಬ ಸಿದ್ದಾಂತದಂತೆ 1,800 ಬಡ ಮಕ್ಕಳನ್ನು ಓದಿಸುತಿದ್ದರು ಎಂಬುದು ಇದೀಗ ಅವರ ನಿಧನದ ನಂತರ ಬೆಳಕಿಗೆ ಬಂದಿದೆ. ಅವರ ಅಕಾಲಿಕ ನಿಧನದ ಬಳಿಕ ಆ ಮಕ್ಕಳ ಜವಾಬ್ದಾರಿಯನ್ನು ದಕ್ಷಿಣ ಭಾರತದ ಖ್ಯಾತ ಬಹುಭಾಷಾ ನಟರೊಬ್ಬರು ಹೊತ್ತುಕೊಳ್ಳುವ ಭರವಸೆಯನ್ನು

ಪುನೀತ್ ರಾಜ್ ಕುಮಾರ್ ಮಾಡುತ್ತಿದ್ದ 1800 ಮಕ್ಕಳ ಜವಾಬ್ದಾರಿ ಹೊತ್ತ ತಮಿಳು ನಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ..!

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 01. ಇಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನಡೆದಿದೆ. ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಬಳಿಕ ಅಧಿಕಾರಿಗಳು ಸರಿಪಡಿಸಿದ್ದಾರೆ.

ಮಂಗಳೂರು: ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ..! Read More »

ಕರಾವಳಿ

ಮಂಗಳೂರು: ಇತ್ತಂಡಗಳ ನಡುವೆ ಹೊಡೆದಾಟ ➤ ಏಳು ಮಂದಿಯ ಬಂಧನ

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 01. ಇತ್ತಂಡಗಳ ನಡುವೆ ನಡೆದ ಗುಂಪು ಘರ್ಷಣೆಯಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತರನ್ನು ಧೀರಜ್ ಶೆಟ್ಟಿ, ರಕ್ಷಿತ್.ಕೆ, ರೋಹಿತ್ ಶೆಟ್ಟಿ, ಹರ್ಷಿತ್, ಕೀರ್ತಿರಾಜ್, ವಿವೇಕ್ ಹಾಗೂ ರಾಹುಲ್ ಎಂದು ಗುರುತಿಸಲಾಗಿದೆ. ಸುಮಾರು 15-20 ಜನರಿದ್ದ ಯುವಕರ ತಂಡವು ಪರಸ್ಪರ ಒಬ್ಬರನ್ನೊಬ್ಬರು ಎಳೆದಾಡಿಕೊಂಡು ಮರದ ವಿಕೆಟ್, ಪೈಪ್ ಹಾಗೂ ಕಲ್ಲುಗಳನ್ನು ಹಿಡಿದು ಹಲ್ಲೆಗೈದಿದ್ದಲ್ಲದೇ ವಾಹನಗಳಿಗೂ ಹಾನಿಗೈದಿದ್ದು, ಆರು ದ್ವಿಚಕ್ರ ವಾಹನಗಳ ಜಖಂಗೊಂಡಿವೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ

ಮಂಗಳೂರು: ಇತ್ತಂಡಗಳ ನಡುವೆ ಹೊಡೆದಾಟ ➤ ಏಳು ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top