News Kadaba Desk

ಖಾಸಗಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) Newskadaba.com ಬಂಟ್ವಾಳ,‌ ಅ. 29. ಖಾಸಗಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ಚಾಲಕ ಹಾಗೂ ಸಹಪ್ರಯಾಣಿಕ ಗಾಯಗೊಂಡ ಘಟನೆ ಬಿ ಸಿ ರೋಡು ಸಮೀಪದ ಪೊಳಲಿ ರಸ್ತೆಯ ಕಲ್ಪನೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ನೇರಳಕಟ್ಟೆ ನಿವಾಸಿ ಮುಹಮ್ಮದ್ ನಿಹಾಲ್ ಹಾಗೂ ಸಹ ಪ್ರಯಾಣಿಕ ಮುಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ. ಪೊಳಲಿಯಿಂದ ಬಿ ಸಿ ರೋಡ್ ಕಡೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬಿ.ಸಿ.ರೋಡಿನಿಂದ ಅಡ್ಡೂರು ಕಡೆ ತೆರಳುತ್ತಿದ್ದ […]

ಖಾಸಗಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪಬ್ ಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆ ➤ ನಗರದ ಪಬ್ ಗಳ ಮೇಲೆ ದಿಢೀರ್ ಪೊಲೀಸ್ ದಾಳಿ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 29. ಪಬ್ ಗಳು ಕೋವಿಡ್ ನಿಯಮಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪದ ಹಿನ್ನೆಲೆ ನಗರದಲ್ಲಿರುವ ಪಬ್‌ಗಳಿಗೆ ಗುರುವಾರ ರಾತ್ರಿ ವೇಳೆ ಪೊಲೀಸರು ಹಠಾತ್ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಪಬ್‌ಗಳು ಕೋವಿಡ್ ನಿಯಮವನ್ನು ಪಾಲನೆ ಮಾಡುತ್ತಿಲ್ಲ, ಪಬ್‌ನೊಳಗೆ ಬಲ್ಬ್ ವ್ಯವಸ್ಥೆ ಸೇರಿದಂತೆ ಕೆಲವೊಂದು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಕೇಳಿ ಬಂದ ಆರೋಪದ ಮೇರೆಗೆ ಪೊಲೀಸರು ದಿಢೀರ್ ದಾಳಿ ಮಾಡಿ ತಪಾಸಣೆ ನಡೆಸಿದ್ದು, ಪಬ್ ಮೇಲ್ವಿಚಾರಕ ಹಾಗೂ ಸಿಬ್ಬಂದಿಗಳಿಗೆ

ಮಂಗಳೂರು: ಪಬ್ ಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆ ➤ ನಗರದ ಪಬ್ ಗಳ ಮೇಲೆ ದಿಢೀರ್ ಪೊಲೀಸ್ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಸಂವಿಧಾನಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಮಾರ್ಚ್

(ನ್ಯೂಸ್ ಕಡಬ) Newskadaba.com ಉಡುಪಿ, ಅ. 29. ಅಸಂವಿಧಾನಿಕವಾಗಿ ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳಿಗೆ ಒಪ್ಪಲು ಸಾಧ್ಯವಿಲ್ಲ, ಶೀಘ್ರವೇ ಈ ನೀತಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಬಿಗ್ ಬಝಾರ್ ಬಳಿಯಿಂದ ಕ್ಲಾಕ್ ಟವರ್ ವರೆಗೆ ವಿದ್ಯಾರ್ಥಿಗಳು ಮಾರ್ಚ್ ನಡೆಸಿ ಪ್ರತಿಭಟಿಸಿದರು. ಮೂರು ದಶಕಗಳ ನಂತರ ಜಾರಿಗೊಳಿಸಲು ಉದ್ದೇಶಿಸಿರುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಹೊಸ

ಅಸಂವಿಧಾನಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಮಾರ್ಚ್ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿದಕ್ಕೆ ವಿದ್ಯಾರ್ಥಿ ಡಿಬಾರ್ ➤ ಕ್ಯಾಂಪಸ್ ಫ್ರಂಟ್ ಹೋರಾಟದ ಎಚ್ಚರಿಕೆ

(ನ್ಯೂಸ್ ಕಡಬ) Newskadaba.com ಬೆಳ್ತಂಗಡಿ, ಅ. 29. ತಾಲೂಕಿನ ಸ್ವಾಯತ್ತ ಕಾಲೇಜು ವಿದ್ಯಾರ್ಥಿ ಶಹದ್ ಎಂಬವನನ್ನು ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿದ ಕಾರಣಕ್ಕೆ ಡಿಬಾರ್ ಮಾಡಿರೋದು ಖಂಡನೀಯವಾಗಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬನಿಗೂ ಕೂಡ ಯಾವುದೇ ಸಂಘ- ಸಂಸ್ಥೆಯಲ್ಲಿ ಸೇರುವ ಎಲ್ಲಾ ಅವಕಾಶಗಳನ್ನು ಸಂವಿಧಾನ ನೀಡಿದೆ. ಆದರೆ ವಾಣಿ ವಿದ್ಯಾಸಂಸ್ಥೆಯು ವಿದ್ಯಾರ್ಥಿಯನ್ನು ವೈಯಕ್ತಿಕವಾಗಿ ಗುರಿಪಡಿಸಿಕೊಂಡು ಕಾಲೇಜಿನಿಂದ ಡಿಬಾರ್ ಮಾಡಿದ್ದಾರೆ. ಈ ಕುರಿತು ವಿದ್ಯಾರ್ಥಿಯು ಪಿಯು ಬೋರ್ಡ್‌ನ ಉಪ ನಿರ್ದೇಶಕರನ್ನು ಭೇಟಿಯಾಗಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಇದನ್ನು ವಿರೋಧಿಸಿ ಆ ವಿದ್ಯಾರ್ಥಿಯು ಕಾಲೇಜಿನ

ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿದಕ್ಕೆ ವಿದ್ಯಾರ್ಥಿ ಡಿಬಾರ್ ➤ ಕ್ಯಾಂಪಸ್ ಫ್ರಂಟ್ ಹೋರಾಟದ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಮರ್ಧಾಳ: ಇಂದು ‘ಕೊಹಿನೂರ್ ಮೆಡಿಕಲ್ಸ್ ಶುಭಾರಂಭ ➤ ಶುಭಾರಂಭದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಅ.29. ಇಲ್ಲಿಗೆ ಸಮೀಪದ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ವಾಣಿಜ್ಯ ಸಂಕೀರ್ಣದಲ್ಲಿ ಕೊಹಿನೂರ್ ಮೆಡಿಕಲ್ಸ್ ಶುಭಾರಂಭ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವು ಇಂದು ನಡೆಯಲಿದೆ. ಅಸ್ಸಯ್ಯದ್ ಶಾಹುಲ್ ಹಮೀದ್ ತಂಙಳ್ ಮರ್ಧಾಳ, ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಮರ್ಧಾಳ ಸೈಂಟ್ ಮೇರೀಸ್ ಚರ್ಚಿನ ಧರ್ಮಗುರು ಫಾದರ್ ಮ್ಯಾಥ್ಯೂ ಜಾನ್ ಗೌರವ ಉಪಸ್ಥಿತಿಯಲ್ಲಿ ಇಂದು (ಅಕ್ಟೋಬರ್ 29) 10.30 ಗಂಟೆಗೆ

ಮರ್ಧಾಳ: ಇಂದು ‘ಕೊಹಿನೂರ್ ಮೆಡಿಕಲ್ಸ್ ಶುಭಾರಂಭ ➤ ಶುಭಾರಂಭದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಆಯತಪ್ಪಿ ಕೆಸರು ತುಂಬಿದ್ದ ನೀರಿಗೆ ಬಿದ್ದ ವಿದ್ಯಾರ್ಥಿ- ಸ್ಥಿತಿ ಗಂಭೀರ

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 28. ಮದರಸ ವಿದ್ಯಾರ್ಥಿಯೋರ್ವ ಕೆಸರು ತುಂಬಿದ ನೀರಿಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಮಾಡನ್ನೂರಿನಲ್ಲಿ ನಡೆದಿದೆ. ವಿದ್ಯಾರ್ಥಿಗಳೆಲ್ಲ ಕೊಳದ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಓರ್ವ ಬಾಲಕ ಆಯತಪ್ಪಿ ಕೆಸರು ತುಂಬಿದ ನೀರಿಗೆ ಬಿದ್ದಿದ್ದು, ತುಂಬಾ ಹೊತ್ತಾದರೂ ಹೊರಬರಲಾರದೆ ಕೆಸರು ನೀರಿನಲ್ಲಿ ಬಾಕಿಯಾಗಿದ್ದ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡ ವಿಧ್ಯಾರ್ಥಿಯನ್ನು ಪುತ್ತೂರಿನಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ.

ಆಯತಪ್ಪಿ ಕೆಸರು ತುಂಬಿದ್ದ ನೀರಿಗೆ ಬಿದ್ದ ವಿದ್ಯಾರ್ಥಿ- ಸ್ಥಿತಿ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುತ್ತಿಗಾರು: ಅಡಿಕೆ ಕದ್ದರೆಂದು ದೇವಸ್ಥಾನಕ್ಕೆ ತೆರಳಿ ಹರಕೆ ಸಲ್ಲಿಸಿದ ಕುಟುಂಬ

(ನ್ಯೂಸ್ ಕಡಬ) Newskadaba.com ಗುತ್ತಿಗಾರು, ಅ. 28. ತೋಟದಿಂದ ಹಣ್ಣಡಿಕೆ ಕದ್ದರೆಂದು ದೇವಸ್ಥಾನಕ್ಕೆ ತೆರಳಿ ಹರಕೆ ಸಲ್ಲಿಸಿದ ಘಟನೆ ಗುತ್ತಿಗಾರು ಗ್ರಾಮದ ಪುರ್ಲುಮಕ್ಕಿ ಎಂಬಲ್ಲಿ ನಡೆದಿದೆ. ಗುತ್ತಿಗಾರಿನ ಪುರ್ಲುಮಕ್ಕಿಯ ಎನ್.ಎಲ್.ಈಶ್ವರ ಎಂಬವರ ಮನೆಯಿಂದ ಕೊಂಚ ದೂರದಲ್ಲಿರುವ ತೋಟಕ್ಕೆ ನುಗ್ಗಿದ ಕಳ್ಳರು ಅಡಿಕೆ ಗೊಂಚಲು ತೆಗೆದು ಅದರಿಂದ ಅಡಿಕೆ ತೆಗೆದು ಖಾಲಿ ಗೊಂಚಲನ್ನು ತೋಟದಲ್ಲೇ ಬಿಸಾಡಿರುವುದು ಕಂಡು ಬಂದಿದೆ. ಈ ಕುರಿತು ಮನೆಯವರು ವಳಲಂಬೆ ಶ್ರೀ ಶಂಖಪಾಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.

ಗುತ್ತಿಗಾರು: ಅಡಿಕೆ ಕದ್ದರೆಂದು ದೇವಸ್ಥಾನಕ್ಕೆ ತೆರಳಿ ಹರಕೆ ಸಲ್ಲಿಸಿದ ಕುಟುಂಬ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಅ.28. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ರತ್ನಶ್ರೀ ಸೌಹಾರ್ದ ಸಹಕಾರಿ (ನಿ.) ಅಕೌಂಟೆಂಟ್ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಟ್ಯಾಲಿ ತಿಳಿದಿರಬಲ್ಲ, ಸಹಕಾರಿ ಸಂಘದಲ್ಲಿ ಕೆಲಸ ನಿರ್ವಹಿಸಿದವರಿಗೆ ಮೊದಲ ಆದ್ಯತೆ ಕಲ್ಪಿಸಲಾಗಿದೆ. ಬಿ.ಕಾಂ. ವಿದ್ಯಾರ್ಹತೆ ಹೊಂದಿದವರೂ ಅರ್ಜಿ ಸಲ್ಲಿಸಬಹುದಾಗಿದ್ದು,

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ಭಾಷಣದಲ್ಲಿ ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಕೀಳು ಮಾತು | ಚೈತ್ರಾ ಕುಂದಾಪುರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಆಕ್ರೋಶ

ಕಡಬ, ಅ.27. ಸುರತ್ಕಲ್‍ನಲ್ಲಿ ಜರಗಿದ ಹಿಂದೂ ಸಮಾವೇಶದಲ್ಲಿ ಭಾಷಣ ಮಾಡಿದ ಚೈತ್ರಾ ಕುಂದಾಪುರ ಅವರು ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಮಾನಹಾನಿಕರ ಕೀಳು ಮಾತುಗಳನ್ನಾಡಿರುವುದು ಖಂಡನೀಯ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಬುಧವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಹಿಂದೂ ಸಮಾವೇಶದಲ್ಲಿ ಭಾಷಣ ಮಾಡುವವರಿಗೆ ಮದುವೆಯ ಪ್ರಾಯ ಕಳೆದ ಬಂಟ ಸಮುದಾಯದ ಹೆಣ್ಣಿನ ವಿಚಾರ ಯಾಕೆ ಬೇಕಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ನಿಂದಿಸುವ ಅಗತ್ಯವಿದೆಯೇ. ಸಭೆಯ

ಭಾಷಣದಲ್ಲಿ ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಕೀಳು ಮಾತು | ಚೈತ್ರಾ ಕುಂದಾಪುರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಆಕ್ರೋಶ Read More »

ಕರಾವಳಿ

ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಬೈಕ್ ಅಪಘಾತ ➤ 20 ಅಡಿ ಆಳದ ರಸ್ತೆಗೆ ಬಿದ್ದು ಸವಾರ ದಾರುಣ ಮೃತ್ಯು

(ನ್ಯೂಸ್ ಕಡಬ) Newskadaba.com ಉಳ್ಳಾಲ, ಅ.27. ಬೈಕ್ ಅಪಘಾತದಲ್ಲಿ ರಸ್ತೆಗೆಸೆಯಲ್ಪಟ್ಟು, ಬೈಕ್ ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರದಂದು ಸಂಜೆ ತೊಕ್ಕೊಟ್ಟು ಫ್ಲೈ ಓವರ್ ನಲ್ಲಿ ನಡೆದಿದೆ.   ಮೃತಪಟ್ಟವರನ್ನು ಕುಂಪಲ ಸರಳಾಯ ಕಾಲನಿ ನಿವಾಸಿ ಸುಬ್ರಹ್ಮಣ್ಯ ರಾವ್ ಸಿಂಧ್ಯ(45) ಎಂದು ಗುರುತಿಸಲಾಗಿದೆ. ಇಂದು ಸಂಜೆ ಸುಬ್ರಹ್ಮಣ್ಯ ಅವರು ಮಂಗಳೂರಿನಿಂದ ಕುಂಪಲ ಕಡೆಗೆ ತೊಕ್ಕೊಟ್ಟು ಫ್ಲೈಓವರ್ ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೇಲ್ಸೇತುವೆಯಿಂದ 20 ಅಡಿ ಆಳದ ಸರ್ವಿಸ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಪರಿಣಾಮ ತಲೆಗೆ ಗಂಭೀರ

ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಬೈಕ್ ಅಪಘಾತ ➤ 20 ಅಡಿ ಆಳದ ರಸ್ತೆಗೆ ಬಿದ್ದು ಸವಾರ ದಾರುಣ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top