ಕಡಬ ಠಾಣಾ ಕಾನ್ಸ್‌ಟೇಬಲ್ ಶಿವರಾಜ್ ವಿರುದ್ಧ ಅತ್ಯಾಚಾರ ಆರೋಪ ➤ ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಎಸ್ಪಿ ಕಡಬಕ್ಕೆ ಆಗಮನ
(ನ್ಯೂಸ್ ಕಡಬ) newskadaba.com ಕಡಬ, ಸೆ.28. ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡ ಆರೋಪದಲ್ಲಿ ಕಡಬ ಠಾಣೆಯ ಪೋಲಿಸ್ ಕಾನ್ಸ್‌ಟೇಬಲ್ ಶಿವರಾಜ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳು ಕಡಬ ಠಾಣೆಗೆ ಆಗಮಿಸಿದ್ದಾರೆ. ಸಂತ್ರಸ್ತ ಯುವತಿಯ ತಂದೆಯು ಆರೋಪಿ ಶಿವರಾಜ್ ವಿರುದ್ಧ ಸೋಮವಾರದಂದು ದೂರು ನೀಡಿದ್ದು, ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು […]








