News Kadaba Desk

ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಆ.02. ರಸ್ತೆ ದಾಟುತ್ತಿದ್ದ ಸ್ಕೂಟಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ಸಮೀಪದ ಬಜಗೋಳಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಂಜನಾಕ್ಯಾರು ನಿವಾಸಿ ಶೇಖರ್ ದೇವಾಡಿಗ ಎಂದು ಗುರುತಿಸಲಾಗಿದೆ. ಮೃತರು ತನ್ನ ಸ್ಕೂಟಿಯನ್ನು ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಶೇಖರ್ ದೇವಾಡಿಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌.   […]

ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿ.ಎ. ➤ ಇಂದು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಆ.02. ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೂಲತಃ ಕಡಬ ನಿವಾಸಿ ಪ್ರಸ್ತುತ ಉಪ್ಪಿನಂಗಡಿಯಲ್ಲಿ ವಾಸವಿರುವ ಸೈಮನ್ ಸಿ.ಎ. ಸೋಮವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ. ಕಡಬದ ಹಳೇಸ್ಟೇಷನ್ ನಿವಾಸಿಯಾಗಿದ್ದ ಇವರು ಬಳಿಕ ಉಪ್ಪಿನಂಗಡಿಯ 34 ನೇ ನೆಕ್ಕಿಲಾಡಿಯಲ್ಲಿ ವಾಸ ಮಾಡುತ್ತಿದ್ದಾರೆ. ಉಪ್ಪಿನಂಗಡಿಯಲ್ಲಿ ತನ್ನ ವ್ಯಾಸಂಗವನ್ನು ಆರಂಭಿಸಿದ ಇವರು, ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪದವಿ ಪೂರೈಸಿ ಮಂಗಳೂರಿನ ಎಸ್ಡಿಎಂ ಕಾಲೇಜಿನಲ್ಲಿ

ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿ.ಎ. ➤ ಇಂದು ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕಿಗೆ ಕಡಬದ ವ್ಯಕ್ತಿ ಮೃತ್ಯು ➤ ಕರಾವಳಿಯಲ್ಲಿ ದಾಖಲೆಯ ಪ್ರಮಾಣದಲ್ಲಿ ಕೋವಿಡ್ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಆ.02. ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೆ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಪ್ರಥಮವಾಗಿ ದಾಖಲೆಯ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕೊರೋನಾ ಸೋಂಕಿಗೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ 73 ವರ್ಷ ಪ್ರಾಯದ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಬಂದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸಿದೆ ಇಂದು ಅವರು ಮೃತಪಟ್ಟಿದ್ದಾರೆ‌.      

ಕೊರೋನಾ ಸೋಂಕಿಗೆ ಕಡಬದ ವ್ಯಕ್ತಿ ಮೃತ್ಯು ➤ ಕರಾವಳಿಯಲ್ಲಿ ದಾಖಲೆಯ ಪ್ರಮಾಣದಲ್ಲಿ ಕೋವಿಡ್ ಏರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದರೆ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಅಧಿಸೂಚನೆ ಬಿಡುಗಡೆ ಮಾಡಿರುವ ಪೊಲೀಸ್ ಇಲಾಖೆಯು, ಎಸ್ಸೆಸ್ಸೆಲ್ಸಿ ಪಾಸ್ ಆಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಜುಲೈ 30 ರಿಂದ ಆರಂಭಗೊಂಡು ಆಗಸ್ಟ್ 30 ಕೊನೆಯ

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ಫೇಸ್‌ಬುಕ್‌ ಪರಿಚಯ ಕೊಲೆಯಲ್ಲಿ ಅಂತ್ಯ ➤ ಪ್ರಿಯತಮೆಯನ್ನು ಗುಂಡಿಟ್ಟು ಕೊಂದು ಪ್ರಿಯಕರ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಣ್ಣೂರು, ಆ.01. ಬ್ರೇಕಪ್ ಆಗೋಣ ಎಂದು ಹೇಳಿದ್ದಕ್ಕೆ ತನ್ನ ಪ್ರಿಯತಮೆಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದಿಂದ ವರದಿಯಾಗಿದೆ. ಕೇರಳದ ಕಣ್ಣೂರು ನಿವಾಸಿ ಮಾನಸ(24) ಎಂಬಾಕೆಗೆ ವರ್ಷದ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ತನ್ನದೇ ಜಿಲ್ಲೆಯ ರಾಖಿಲ್(32) ಎಂಬಾತನ ಪರಿಚಯವಾಗಿತ್ತು. ಯುವತಿಯು ಕೋತಮಂಗಲಂ ಸಮೀಪದ ನೆಲ್ಲಿಕುಝಿ ಎಂಬಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು, ಈ ನಡುವೆ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಲವ್ ಬ್ರೇಕಪ್ ಮಾಡಿಕೊಳ್ಳಲು

ಫೇಸ್‌ಬುಕ್‌ ಪರಿಚಯ ಕೊಲೆಯಲ್ಲಿ ಅಂತ್ಯ ➤ ಪ್ರಿಯತಮೆಯನ್ನು ಗುಂಡಿಟ್ಟು ಕೊಂದು ಪ್ರಿಯಕರ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ BSY ಮೂಲೆಗುಂಪು..? ➤ ಪಕ್ಷದ ಬ್ಯಾನರ್ ನಲ್ಲಿ ಯಡಿಯೂರಪ್ಪ ಫೋಟೋ ನಾಪತ್ತೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ರಾಜ್ಯ ಬಿಜೆಪಿಯ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತನ್ನ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ವಾರ ಪೂರ್ತಿಯಾಗುವುದರ ಮೊದಲೇ ಬಿಜೆಪಿಯ ಬ್ಯಾನರ್‌ಗಳಿಂದಲೂ ಅವರ ಫೋಟೊ ತೆರವಾಗಿರುವುದು ಪಕ್ಷದ ಕಾರ್ಯಕರ್ತರನ್ನು ಆಕ್ರೋಶಭರಿತರನ್ನಾಗಿಸಿದೆ. ಬೆಂಗಳೂರಿನ ಯಶವಂತಪುರ ಮಂಡಲ ಮಹಿಳಾ ಮೋರ್ಚಾ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಗಳು ಶನಿವಾರದಂದು ಪ್ರತ್ಯೇಕವಾಗಿ ನಡೆದಿದ್ದು, ಎರಡೂ ಸಭೆಗಳ ವೇದಿಕೆಯಲ್ಲಿ ಅಳವಡಿಸಿದ್ದ ಬ್ಯಾನರ್‌ಗಳಲ್ಲಿ ಯಡಿಯೂರಪ್ಪ ಅವರ ಭಾವಚಿತ್ರ ನಾಪತ್ತೆಯಾಗಿತ್ತು.

ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ BSY ಮೂಲೆಗುಂಪು..? ➤ ಪಕ್ಷದ ಬ್ಯಾನರ್ ನಲ್ಲಿ ಯಡಿಯೂರಪ್ಪ ಫೋಟೋ ನಾಪತ್ತೆ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಂಜಿರ: ಆಕಸ್ಮಿಕವಾಗಿ ನೀರು ಪಾಲಾಗಿದ್ದ ಮಹಿಳೆಯ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆಯೆಂದು ಪ್ರಕಟವಾಗಿದ್ದಕ್ಕೆ ವಿಷಾದ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.01. ಸೊಪ್ಪು ತರಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರುಪಾಲಾಗಿದ್ದ ಮಹಿಳೆಯ ಮೃತದೇಹವು ಭಾನುವಾರದಂದು ಗುಂಡ್ಯ ಹೊಳೆಯ ಎಂಜಿರ ಎಂಬಲ್ಲಿ ಪತ್ತೆಯಾಗಿದೆ. ಕಡಬ ತಾಲೂಕಿನ ರೆಖ್ಯಾ ಗ್ರಾಮದ ನೇಲ್ಯಡ್ಕ‌ ಸಮೀಪದ ಉರ್ನಡ್ಕ ನಿವಾಸಿ ಸುಂದರ ಗೌಡ ಎಂಬವರ ಪತ್ನಿ ಶಕುಂತಲಾ(50) ಕಳೆದ ಹಲವು ಸಮಯಗಳಿಂದ ಪಿತ್ತ ಖಾಯಿಲೆಯಿಂದ ಬಳಲುತ್ತಿದ್ದು, ಶನಿವಾರ ಬೆಳಿಗ್ಗೆ ನಾಟಿ ಔಷಧಿ ನೆಲನೆಲ್ಲಿ ಸೊಪ್ಪು ತರಲೆಂದು ಮನೆಯಿಂದ ತೆರಳಿದ್ದವರು ಆಕಸ್ಮಿಕವಾಗಿ ತನ್ನ ಮನೆಯ ಪಕ್ಕದಲ್ಲಿ ಹರಿಯುವ ಗುಂಡ್ಯ ಹೊಳೆಯಲ್ಲಿ ನೀರುಪಾಲಾಗಿದ್ದರು.

ಎಂಜಿರ: ಆಕಸ್ಮಿಕವಾಗಿ ನೀರು ಪಾಲಾಗಿದ್ದ ಮಹಿಳೆಯ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆಯೆಂದು ಪ್ರಕಟವಾಗಿದ್ದಕ್ಕೆ ವಿಷಾದ Read More »

ಕರಾವಳಿ, ಕ್ರೈಮ್ ನ್ಯೂಸ್

BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..?

(ನ್ಯೂಸ್ ಕಡಬ) newskadaba.com ನವದೆಹಲಿ, ಆ.01. ದೇಶದಲ್ಲಿ ಕೊರೋನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವುದರ ನಡುವೆಯೇ ಇದೀಗ ಕೊರೋನಾ ಸೋಂಕಿನಲ್ಲಿ ದಿಢೀರ್ ಏರಿಕೆ ಕಂಡುಬಂದಿದ್ದು, ಮೂರನೇ ಅಲೆಯ ಆರಂಭವೇ ಎನ್ನುವ ಪ್ರಶ್ನೆ ಹುಟ್ಟಿದೆ‌. ಆಗಸ್ಟ್ ಎರಡನೇ ವಾರದಲ್ಲಿ ಕೊರೋನಾ ಮೂರನೇ ಅಲೆ ಆರಂಭಗೊಂಡು ಅಕ್ಟೋಬರ್ ವೇಳೆಗೆ ತನ್ನ ಪಾರಮ್ಯ ಮೆರೆಯಲಿದೆ ಎಂದು ಈ ಹಿಂದೆಯೇ ತಜ್ಞರು ಎಚ್ಚರಿಕೆ ನೀಡಿದ್ದರು. ಅದಕ್ಕೆ ಪುರಾವೆ ಎಂಬಂತೆ ಇದೀಗ ಕೇರಳ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ತಮಿಳುನಾಡು, ಕರ್ನಾಟಕದಲ್ಲೂ ಕೊರೋನಾ

BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರೇ ಎಚ್ಚರ ➤ ವ್ಯಾಕ್ಸಿನ್ ಹಾಕಿಸಿದ್ದರೂ ಕೊರೋನಾ ನೆಗೆಟಿವ್ ವರದಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಕೊರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವವರು ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದಿದ್ದರೂ 72 ಗಂಟೆಯೊಳಗಿನ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಆದೇಶದಂತೆ ವಿಮಾನ/ರೈಲು/ರಸ್ತೆ (ಬಸ್ ಮತ್ತಿತರ ಖಾಸಗಿ ವಾಹನಗಳ ಮೂಲಕ) ಮಾರ್ಗದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಯೊಳಗೆ ಮಾಡಿಸಿರುವ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗಟಿವ್ ವರದಿ ಹೊಂದುವುದು ಕಡ್ಡಾಯವಾಗಿದೆ. ಕೇರಳ ಮತ್ತು

ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರೇ ಎಚ್ಚರ ➤ ವ್ಯಾಕ್ಸಿನ್ ಹಾಕಿಸಿದ್ದರೂ ಕೊರೋನಾ ನೆಗೆಟಿವ್ ವರದಿ ಕಡ್ಡಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.01. ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನದ ಕರುವಿನ ಮೇಲೆ ದಾಳಿ ಮಾಡಿದ ಚಿರತೆಯೊಂದು ಕರುವನ್ನು ತಿಂದ ಘಟನೆ ಭಾನುವಾರ ಬೆಳಿಗ್ಗೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಸಮೀಪದ ಕಲ್ಮಕಾರು ಗ್ರಾಮದ ಮಾಡಬಾಕಿಲು ನಿವಾಸಿ ಲಾವಣ್ಯ ಮಹೇಶ್ ಎಂಬವರ ಹಟ್ಟಿಯಲ್ಲಿ ದನ ಕರುಗಳನ್ನು ಕಟ್ಟಿ ಹಾಕಲಾಗಿತ್ತು ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಹಟ್ಟಿಗೆ ತೆರಳಿದಾಗ ಕರುವನ್ನು ಸೀಳಿ ಅರ್ಧ ತಿಂದಿರುವುದು ಗಮನಕ್ಕೆ ಬಂದಿದೆ. ಈ ಭಾಗದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿದ್ದು, ಚಿರತೆಯೇ ಕರುವನ್ನು

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top