News Kadaba Desk

ಬೆಳ್ಳಾರೆ: ಬ್ಯೂಟಿ ಪಾರ್ಲರ್ ಗೆ ತೆರಳಿದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.07. ಬ್ಯೂಟಿ ಪಾರ್ಲರ್ ಗೆಂದು ತೆರಳಿದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಬೆಳ್ಳಾರೆಯಿಂದ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೊಯಿಲ ನಿವಾಸಿ ಶ್ರೀಕಲಾ ಎಂದು ಗುರುತಿಸಲಾಗಿದೆ. ಈಕೆ ಬೆಳ್ಳಾರೆಯ ಬ್ಯೂಟಿ ಪಾರ್ಲರ್ ಗೆಂದು ತೆರಳಿದ್ದು, ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವುದಾಗಿ ಈಕೆಯ ತಂದೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.      

ಬೆಳ್ಳಾರೆ: ಬ್ಯೂಟಿ ಪಾರ್ಲರ್ ಗೆ ತೆರಳಿದ ಯುವತಿ ನಾಪತ್ತೆ Read More »

ಕರಾವಳಿ

ಕಡಬ: ಮನೆಯಲ್ಲಿ ಅಕ್ರಮ ಜಿಂಕೆ ಮಾಂಸ ಪತ್ತೆ ➤ ಓರ್ವನ ಬಂಧನ

ಕಡಬ, ಜು.06: ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಬಿಳಿನೆಲೆ ಎಂಬಲ್ಲಿ ಮನೆಯಲ್ಲಿ ಕಾಡುಪ್ರಾಣಿ ಮಾಂಸ ಇರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಅಧಿಕಾರಿಗಳು ಒರ್ವನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಬಿಳಿನೆಲೆಯ ವಾಲ್ತಾಜೆ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಮಂಗಳವಾರ ಅರಣ್ಯಾಧಿಕಾರಿಗಳಿಗೆ ಮನೆಯಲ್ಲಿ ಕಾಡುಪ್ರಾಣಿ ಮಾಂಸ ಇರುವ ಬಗ್ಗೆ ಮಾಹಿತಿ ಬಂದಿತ್ತು. ಅದರಂತೆ ಅಲ್ಲಿಗೆ ದಾಳಿ ನಡೆಸಿದ ವೇಳೆ ಮನೆಯಲ್ಲಿ ಕಾಡುಪ್ರಾಣಿ ಮಾಂಸ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ವನ್ಯಜೀವಿ ಪ್ರಕರಣ ಅಡಿಯಲ್ಲಿ

ಕಡಬ: ಮನೆಯಲ್ಲಿ ಅಕ್ರಮ ಜಿಂಕೆ ಮಾಂಸ ಪತ್ತೆ ➤ ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ – ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಓರ್ವ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು.06. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಅಪಘಾತದಲ್ಲಿ ಕುಂಬಳೆ ನಿವಾಸಿಯೋರ್ವರು ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕುಂಬಳೆ ಸಮೀಪದ ಅರಿಕ್ಕಾಡಿ ನಿವಾಸಿ ಅಲಿ (32) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೀಲೇಶ್ವರದಿಂದ ಕಾಞಂಗಾಡ್ ಗೆ ತೆರಳುತ್ತಿದ್ದ ಬಸ್ ಮತ್ತು ಕುಂಬಳೆಯಿಂದ ಕಣ್ಣೂರಿಗೆ ತೆರಳುತ್ತಿದ್ದ ಕಾರು ನಡುವೆ ಕಾಞಂಗಾಡ್ ಸಮೀಪ

ಕೆಎಸ್ಸಾರ್ಟಿಸಿ ಬಸ್ – ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಕರಾವಳಿ

ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) Newskadaba.com ಕಾಞಂಗಾಡು, ಜು. 06. ಕೆಎಸ್ಸಾರ್ಟಿಸಿ ಬಸ್ ಹಾಗೂ ಇನೋವಾ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅಲಿ (30) ಎಂದು ಗುರುತಿಸಲಾಗಿದೆ. ಇವರ ಸಂಬಂಧಿ ಕೊಡ್ಯಮೆಯ ಸಿದ್ದೀಕ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕಾಞಂಗಾಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಣ್ಣೂರಿನಲ್ಲಿರುವ ಅಲಿಯ ಸಹೋದರಿಯ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು,

ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ➤ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಿರಾಡಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.05. ಶಿರಾಡಿಯ ಕೆಂಪುಹೊಳೆ ಎಂಬಲ್ಲಿ ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಸೋಮವಾರದಂದು ಪತ್ತೆಯಾಗಿದೆ. ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪದ ಕಾಡಿನಲ್ಲಿ ಸುಮಾರು 50 ವರ್ಷ ಪ್ರಾಯದ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇರುವುದನ್ನು ಸ್ಥಳೀಯ ವ್ಯಕ್ತಿಯೋರ್ವರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಸಕಲೇಶಪುರ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.      

ಶಿರಾಡಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ Read More »

ಕರಾವಳಿ

ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್. ದೇವರಾಜ್ ನಿಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.03. ಹಿರಿಯ ಕಾಂಗ್ರೆಸ್ ಮುಖಂಡ, ಜಿ.ಪಂ.ಮಾಜಿ ಸದಸ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್. ದೇವರಾಜ್(55) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪ್ರಭಾವಿ ರಾಜಕೀಯ, ಸಾಮಾಜಿಕ, ಸಹಕಾರಿ ಮುಖಂಡರಾಗಿದ್ದ ಅವರು‌ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಏನೆಕಲ್ ಸೊಸೈಟಿ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಕೆಲವು ದಿನಗಳಿಂದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.      

ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್. ದೇವರಾಜ್ ನಿಧನ Read More »

ಕರಾವಳಿ

ವೀಕೆಂಡ್ ಕರ್ಫ್ಯೂ ರದ್ದು..‼️ ➤ ಸೋಮವಾರದಿಂದ ಅನ್ ಲಾಕ್

(ನ್ಯೂಸ್ ಕಡಬ) Newskadaba.com ಬೆಂಗಳೂರು, ಜು. 03. ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಜುಲೈ 5 ರಿಂದ 19ರ ವರೆಗೆ ಅನ್ ಲಾಕ್ 3.0 ಅನ್ವಯಿಸಲಿದ್ದು, ರಾತ್ರಿ 9 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿರುವ ಕಾರಣ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಸಲಾಗಿದ್ದು, ಸೋಮವಾರದಿಂದ ಜನ ಜೀವನ ಸಹಜ ಸ್ಥಿತಿಗೆ

ವೀಕೆಂಡ್ ಕರ್ಫ್ಯೂ ರದ್ದು..‼️ ➤ ಸೋಮವಾರದಿಂದ ಅನ್ ಲಾಕ್ Read More »

ಕರ್ನಾಟಕ

ಆತೂರು: ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜು.03. ಇತ್ತೀಚೆಗೆ ಆತೂರು ಚೆಕ್ ಪೋಸ್ಟ್ ಧ್ವಂಸ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಡಬ ಪೋಲಿಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ರಾಮಕುಂಜ ಗ್ರಾಮದ ಹಲ್ಲಿ ಅರಮನೆ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಆಫೀಸ್ (28) ಹಾಗೂ ಕೊಯಿಲ ಗ್ರಾಮದ ಎಂತಾರು ಇಬ್ರಾಹಿಂ ಎಂಬವರ ಪುತ್ರ ಮೊಹಮ್ಮದ್ ನವಾಜ್ (27) ಎಂಬವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ಷರತ್ತು ಬದ್ಧ

ಆತೂರು: ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಅವಿವಾಹಿತ ಮಹಿಳೆ ನಾಪತ್ತೆ

(ನ್ಯೂಸ್ ಕಡಬ) Newskadaba.com ಕಡಬ, ಜು. 02. ಮಹಿಳೆಯೋರ್ವರು ನಾಪತ್ತೆಯಾದ ಘಟನೆ ತಾಲೂಕಿನ ದೋಳ್ಪಾಡಿಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಳು ಪಚ್ಚೋಳಿ ಎಂಬವರ ಪುತ್ರಿ ಲಲಿತಾ(30 ಎಂದು ಗುರುತಿಸಲಾಗಿದೆ. ಇವರು ತನ್ನ ಸಹೋದರನೊಂದಿಗೆ ವಾಸಿಸುತ್ತಿದ್ದರೆನ್ನಲಾಗಿದೆ. ಜೂನ್ 29ರಂದು ಸಹೋದರ ಹಾಗೂ ಆತನ ಪತ್ನಿ ಕೆಲಸಕ್ಕೆ ಹೋಗಿದ್ದು, ಸಂಜೆ ಮನೆಗೆ ಮರಳಿದಾಗ ಮನೆಗೆ ಬೀಗ ಹಾಕಿದ್ದು, ಬೀಗದ ಕೀ ಸ್ಥಳದಲ್ಲೇ ಬಿದ್ದಿತ್ತು. ಲಲಿತಾ ಅವರನ್ನು ಎಲ್ಲೆಡೆ ಹುಡುಕಾಡಿದರೂ ಅವರು ಪತ್ತೆಯಾಗದ ಕಾರಣ ಲಲಿತಾ ಅವರ

ಕಡಬ: ಅವಿವಾಹಿತ ಮಹಿಳೆ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ಚರ್ಚ್ ಬಿಲ್ಡಿಂಗ್ ನಲ್ಲಿ ‘ಬರ್ಲಿನ್’ ಪುರುಷರ ಉಡುಪುಗಳ ಮಳಿಗೆ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜು. 02. ಇಲ್ಲಿನ ಸೈಂಟ್ ಜೋಕಿಮ್ಸ್ ಚರ್ಚ್ ಬಿಲ್ಡಿಂಗ್‌ನಲ್ಲಿ ಬರ್ಲಿನ್ ಪುರುಷರ ಮದುವೆ ಉಡುಪುಗಳ ಮಳಿಗೆ ಜು. 01 ರಂದು ಶುಭಾರಂಭಗೊಂಡಿತು. ಕಡಬ ಠಾಣಾ ಪೋಲಿಸ್ ಉಪನಿರೀಕ್ಷಕ ರುಕ್ಮ ನಾಯ್ಕ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಡಬ ಸೈಂಟ್ ಜೋಕಿಮ್ಸ್ ಚರ್ಚ್‌ನ ಧರ್ಮಗುರು ಫಾ/ ರೊನಾಲ್ಡ್ ಲೋಬೋ ಮಾತನಾಡಿ, ವ್ಯವಹಾರದಲ್ಲಿ ಸತ್ಯ, ನಿಷ್ಠೆ ಪ್ರಾಮಾಣಿಕತೆ ಇದ್ದರೆ ಯಶಸ್ಸು ಖಂಡಿತ ಸಾಧಿಸಬಹುದು, ಇದರಿಂದ ಗುಣಮಟ್ಟದ ವಸ್ತುಗಳನ್ನು ಮಾರಾಟ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಬೇಕು

ಕಡಬ: ಸೈಂಟ್ ಜೋಕಿಮ್ಸ್ ಚರ್ಚ್ ಬಿಲ್ಡಿಂಗ್ ನಲ್ಲಿ ‘ಬರ್ಲಿನ್’ ಪುರುಷರ ಉಡುಪುಗಳ ಮಳಿಗೆ ಶುಭಾರಂಭ Read More »

ಕರಾವಳಿ, ಕರ್ನಾಟಕ
Scroll to Top