News Kadaba Desk

ಸುಬ್ರಹ್ಮಣ್ಯ: ಅಕ್ರಮ ಬಂದೂಕು ತಯಾರಿಸಿ ಮಾರಾಟ ➤ ನೆಟ್ಟಣ ನಿವಾಸಿ ಸೇರಿದಂತೆ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.11. ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಸುಬ್ರಹ್ಮಣ್ಯ ಪೊಲೀಸರು ನಾಲ್ಕು ಬಂದೂಕುಗಳು ಹಾಗೂ ಸಜೀವ ಗುಂಡೊಂದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಸುಳ್ಯ ತಾಲೂಕಿನ ಛತ್ರಪ್ಪಾಡಿ ದಿವಾಕರ ಆಚಾರಿ (52), ಕಡಬ ತಾಲೂಕಿನ ನೂಚಿಲ ನಿವಾಸಿ ಕಾರ್ತಿಕ್ (25), ಕಡಬದ ನೆಟ್ಟಣ ಸಮೀಪದ ಚಿದ್ಗಲ್ ನಿವಾಸಿ ಅಶೋಕ್ (35), ಹಾಸನ ಜಿಲ್ಲೆಯ ಹನುಮಂತಪುರದ ಚಂದನ್ (32) ಎಂದು ಗುರುತಿಸಲಾಗಿದೆ. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಛತ್ರಪ್ಪಾಡಿ ಎಂಬಲ್ಲಿ […]

ಸುಬ್ರಹ್ಮಣ್ಯ: ಅಕ್ರಮ ಬಂದೂಕು ತಯಾರಿಸಿ ಮಾರಾಟ ➤ ನೆಟ್ಟಣ ನಿವಾಸಿ ಸೇರಿದಂತೆ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಇಳಿಕೆ ➤ 24 ಗಂಟೆಗಳಲ್ಲಿ 103 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.11. ಗ್ರಾಮೀಣ ಭಾಗದಲ್ಲಿ ಸೋಮವಾರದಂದು ಕೊಂಚ ಏರಿಕೆ ಕಂಡಿದ್ದ ಕೋವಿಡ್ ಪ್ರಕರಣ, ಇಂದು ಮತ್ತೆ ಇಳಿಕೆಯಾಗಿದೆ. ಮಂಗಳವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 103 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 11 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 31 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 61 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.      

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಇಳಿಕೆ ➤ 24 ಗಂಟೆಗಳಲ್ಲಿ 103 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಕಡಬ ತಾಲೂಕಿನಲ್ಲಿ ಕೊರೋನಾ ಸೋಂಕಿಗೆ ನಾಲ್ಕನೆಯ ಜೀವ ಬಲಿ ➤ ಮರ್ಧಾಳದ 67 ವರ್ಷದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಕೊರೋನಾ ಎರಡನೇ ಅಲೆಗೆ ಕಡಬ ತಾಲೂಕಿನಲ್ಲಿ ಸೋಮವಾರ ರಾತ್ರಿ ನಾಲ್ಕನೇ ಜೀವ ಬಲಿಯಾಗಿದೆ. ಕಡಬ ತಾಲೂಕಿನ ಮರ್ಧಾಳ ಸಮೀಪದ 102 ನೆಕ್ಕಿಲಾಡಿ ಗ್ರಾಮದ ಕುಂಜತ್ತೋಡಿ ನಿವಾಸಿ 67 ವರ್ಷದ ವ್ಯಕ್ತಿಯೋರ್ವರು ಸೋಮವಾರದಂದು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕಡಬದ ಮಿಲ್ ಒಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಮಂಗಳೂರಿನ ವೆನ್ಲಾಕ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ‌. ಕೊರೋನಾ ಎರಡನೇ

ಕಡಬ ತಾಲೂಕಿನಲ್ಲಿ ಕೊರೋನಾ ಸೋಂಕಿಗೆ ನಾಲ್ಕನೆಯ ಜೀವ ಬಲಿ ➤ ಮರ್ಧಾಳದ 67 ವರ್ಷದ ವ್ಯಕ್ತಿ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲಾಕ್‍ಡೌನ್ ವಿಚಾರದಲ್ಲಿ ರಾಜ್ಯದ ಮಾರ್ಗಸೂಚಿ ಪಾಲಿಸಿ | ಜಿಲ್ಲೆಗೆ ಪ್ರತ್ಯೇಕ ಮಾರ್ಗಸೂಚಿ ಬೇಡ ➤ ಜಿಲ್ಲಾಡಳಿತಕ್ಕೆ ಮಾಜಿ ಸಚಿವ ರಮಾನಾಥ ರೈ ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.10. ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ರಾಜ್ಯ ಸರಕಾರದ ಮಾರ್ಗಸೂಚಿಯನ್ನು ಜಾರಿ ಮಾಡಬೇಕೆ ಹೊರತು ಪ್ರತ್ಯೇಕ ನಿಯಮಗಳನ್ನು ತಂದು ಜನರನ್ನು ಗೊಂದಲಕ್ಕೆ ದೂಡಬೇಡಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಜಿಲ್ಲಾಡಳಿತಕ್ಕೆ ಸಲಹೆ ಮಾಡಿದ್ದಾರೆ. ಕೊರೋನಾ ಜನರ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಜನರು ಈಗಾಗಲೇ ಮಾನಸಿಕ ತುಮುಲದಲ್ಲಿ ಇದ್ದಾರೆ. ನಮ್ಮ ಜಿಲ್ಲೆಗೆ ಪ್ರತ್ಯೇಕ ನಿಯಮಗಳನ್ನು ಮಾಡುವುದರಿಂದ ಜನರಿಗೆ ಇನ್ನಷ್ಟು ತೊಂದರೆ ಆಗುತ್ತದೆ.

ಲಾಕ್‍ಡೌನ್ ವಿಚಾರದಲ್ಲಿ ರಾಜ್ಯದ ಮಾರ್ಗಸೂಚಿ ಪಾಲಿಸಿ | ಜಿಲ್ಲೆಗೆ ಪ್ರತ್ಯೇಕ ಮಾರ್ಗಸೂಚಿ ಬೇಡ ➤ ಜಿಲ್ಲಾಡಳಿತಕ್ಕೆ ಮಾಜಿ ಸಚಿವ ರಮಾನಾಥ ರೈ ಸಲಹೆ Read More »

ಕರಾವಳಿ

ಕಡಬ: ಅಧಿಕಾರಿ, ಜನಪ್ರತಿನಿಧಿಗಳ ಕೋವಿಡ್-19 ಮುಂಜಾಗ್ರತಾ ಸಭೆ ➤ ಹೊರ ಜಿಲ್ಲೆಯಿಂದ ಬಂದವರನ್ನು ಗುರುತಿಸಿ ಕ್ವಾರಂಟೈನ್ ಮಾಡಿ: ಸಚಿವ ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಹೊರ ರಾಜ್ಯ ಮತ್ತು ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯಿಂದ ಬಂದವರನ್ನು ಗುರುತಿಸಿ ಅಂತಹವರನ್ನು ಕಡ್ಡಾಯವಾಗಿ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿ, ಇದಕ್ಕೆ ಸ್ಪಂದಿಸದೆ, ಉಡಾಫೆಯಿಂದ ವರ್ತಿಸಿದರೆ ಅಂತಹವರ ವಿರುದ್ಧ ಯಾವುದೇ ವಿನಾಯಿತಿ ತೋರದೆ ಕಾನೂನು ಕ್ರಮ ಜರಗಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವ ಎಸ್. ಅಂಗಾರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸೋಮವಾರದಂದು ಕೊಯಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಅಧಿಕಾರಿ, ಜನಪ್ರತಿನಿಧಿಗಳ ಕೋವಿಡ್-19 ಮುಂಜಾಗ್ರತಾ ಸಭೆಯ ಅಧ್ಯಕ್ಷತೆ

ಕಡಬ: ಅಧಿಕಾರಿ, ಜನಪ್ರತಿನಿಧಿಗಳ ಕೋವಿಡ್-19 ಮುಂಜಾಗ್ರತಾ ಸಭೆ ➤ ಹೊರ ಜಿಲ್ಲೆಯಿಂದ ಬಂದವರನ್ನು ಗುರುತಿಸಿ ಕ್ವಾರಂಟೈನ್ ಮಾಡಿ: ಸಚಿವ ಅಂಗಾರ Read More »

ಕರಾವಳಿ

ಕಡಬದಲ್ಲಿ ಲಾಕ್‍ಡೌನ್ ಎಫೆಕ್ಟ್ ಹೇಗಿತ್ತು ಗೊತ್ತೇ..⁉️ ➤ ಅನಗತ್ಯ ತಿರುಗಾಡುವವರಿಗೆ ಪೊಲೀಸರಿಂದ ಬ್ರೇಕ್

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಕೊರೋನ ತಡೆಗಟ್ಟುವಿಕೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜಾರಿಯಾಗಿರುವ ವಾರಾಂತ್ಯದ ಕರ್ಪ್ಯೂಗೆ ಕಡಬ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೋಮವಾರ ಬೆಳಿಗ್ಗೆಯಿಂದಲೇ ಪೇಟೆಯಲ್ಲಿ ಕಿಕ್ಕಿರಿದ ಜನಸಂದಣಿಯಿಂದ ಕೂಡಿತ್ತು. ಕರ್ಫ್ಯೂಗೆ ಹೆದರಿ ಜನತೆ ಬೆಳಿಗ್ಗೆ ತಮ್ಮ ಅಗತ್ಯ ವಸ್ತುಗಳನ್ನು ಮುಗಿ ಬಿದ್ದು ಖರೀದಿಸಿದರು. ಮೆಡಿಕಲ್ ಶಾಪ್‌ಗಳು ಜನಸಂದಣಿಯಿಂದ ಕೂಡಿತ್ತು. ಬೆಳಿಗ್ಗೆಯಿಂದ ಪೇಟೆಯಲ್ಲಿ ಜನರ ಓಡಾಟ ಹೆಚ್ಚಾಗಿದ್ದ ಕಾರಣ ಕಡಬ ಪೇಟೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯು ತಲೆದೂರಿತ್ತು. ಕಡಬ ಪೇಟೆಯ ಅಂಗಡಿ ಮುಂಗಟ್ಟುಗಳಲ್ಲಿ ಬೆಳಗ್ಗಿನ ಸಮಯದಲ್ಲಿ

ಕಡಬದಲ್ಲಿ ಲಾಕ್‍ಡೌನ್ ಎಫೆಕ್ಟ್ ಹೇಗಿತ್ತು ಗೊತ್ತೇ..⁉️ ➤ ಅನಗತ್ಯ ತಿರುಗಾಡುವವರಿಗೆ ಪೊಲೀಸರಿಂದ ಬ್ರೇಕ್ Read More »

ಕರಾವಳಿ

ರಾಜ್ಯದಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ ➤ ಕುವೈತ್ ನಿಂದ ಹಡಗಿನಲ್ಲಿ ಮಂಗಳೂರಿಗೆ ಬಂತು ಮೆಡಿಕಲ್ ಕಿಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.10. ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವುದರ ನಡುವೆ ವಿದೇಶಗಳಿಂದ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಸೋಮವಾರದಂದು ಕುವೈಟ್ ನಿಂದ ಎರಡು ಕಂಟೈನರ್ ಗಳಲ್ಲಿ ಮೆಡಿಕಲ್, ಆಕ್ಸಿಜನ್, ಟ್ಯಾಂಕ್ಸ್, ಆಕ್ಸಿಜನ್ ಕಾನ್ಸೆನ್’ಟ್ರೇಟರ್ ತುಂಬಿದ ಒಂದು ಹಡಗು ನವಮಂಗಳೂರು ಬಂದರಿಗೆ ಆಗಮಿಸಿತು. ಕುವೈತ್ ನಿಂದ ಆಗಮಿಸಿದ ಮೆಡಿಕಲ್ ಕಿಟ್ ಹೊಂದಿದ ಹಡಗನ್ನು ಶಾಸಕ ಡಾ.ವೈ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹಾಗೂ ಪ್ರಮುಖರು ಬರಮಾಡಿಕೊಂಡರು. ಮಂಗಳವಾರದಂದು ಎರಡು ಹಡಗುಗಳ ಮೂಲಕ ಇನ್ನೂ ಹೆಚ್ಚಿನ

ರಾಜ್ಯದಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ ➤ ಕುವೈತ್ ನಿಂದ ಹಡಗಿನಲ್ಲಿ ಮಂಗಳೂರಿಗೆ ಬಂತು ಮೆಡಿಕಲ್ ಕಿಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಮತ್ತೆ ಕೊರೋನಾ ಹೆಚ್ಚಳ ➤ 24 ಗಂಟೆಗಳಲ್ಲಿ 240 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಗ್ರಾಮೀಣ ಭಾಗದಲ್ಲಿ ಭಾನುವಾರದಂದು ಕೊಂಚ ಇಳಿಕೆ ಕಂಡಿದ್ದ ಕೋವಿಡ್ ಪ್ರಕರಣ, ಇಂದು ಮತ್ತೆ ಏರಿಕೆಯಾಗಿದೆ. ಸೋಮವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 240 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 92 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 89 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 59 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.    

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಮತ್ತೆ ಕೊರೋನಾ ಹೆಚ್ಚಳ ➤ 24 ಗಂಟೆಗಳಲ್ಲಿ 240 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಪುತ್ತೂರು: ಅವಳಿ ಮಕ್ಕಳಿಗೆ ಜನ್ಮ ನೀಡಿ ಬಾಣಂತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.10. ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿಯೋರ್ವರು ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ ಮನೋಜ್‌ ಎಂಬವರ ಪತ್ನಿ ಪೂಜಿತಾ ಎಂದು ಗುರುತಿಸಲಾಗಿದೆ. ಹೆರಿಗೆಗೆಂದು ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದ ಪೂಜಿತಾರವರು ಭಾನುವಾರದಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಮಧ್ಯಾಹ್ನ ವೇಳೆಗೆ ತೀವ್ರ ರಕ್ತಸ್ರಾವ ಉಂಟಾದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಡರಾತ್ರಿ

ಪುತ್ತೂರು: ಅವಳಿ ಮಕ್ಕಳಿಗೆ ಜನ್ಮ ನೀಡಿ ಬಾಣಂತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದಲ್ಲಿ ಖಾಕಿ ಸರ್ಪಗಾವಲು ➤ 15 ವಾಹನಗಳು ಸೀಝ್, ದಂಡ ವಿಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಅನಗತ್ಯವಾಗಿ ಪೇಟೆಗೆ ಬಂದ ವಾಹನ ಚಾಲಕರಿಗೆ ಬಿಸಿ ಮುಟ್ಟಿಸಿರುವ ಕಡಬ ಪೊಲೀಸರು ವಾಹನಗಳನ್ನು ಸೀಝ್ ಮಾಡಿದ್ದಾರೆ. ಠಾಣಾ ಮುಂಭಾಗದಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದ್ದು, ಪೇಟೆಗೆ ಬಂದ ಹೆಚ್ಚಿನ ಎಲ್ಲಾ ವಾಹನಗಳಿಗೆ ದಂಡ ವಿಧಿಸಿರುವ ಪೊಲೀಸರು 15 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ‌.    

ಕಡಬದಲ್ಲಿ ಖಾಕಿ ಸರ್ಪಗಾವಲು ➤ 15 ವಾಹನಗಳು ಸೀಝ್, ದಂಡ ವಿಧಿಸಿದ ಪೊಲೀಸರು Read More »

ಕರಾವಳಿ
Scroll to Top