News Kadaba Desk

ಕಡಬ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಕೊರೋನಾ ಅಟ್ಟಹಾಸ ➤ ಒಂದೇ ದಿನ 245 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.06. ಗ್ರಾಮೀಣ ಭಾಗದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಶುಕ್ರವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 245 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ 167 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 78 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮೊದಲು ಪೇಟೆಗಳಲ್ಲಿ ಮಾತ್ರ ಕಂಡುಬರುತ್ತಿದ್ದ ಕೊರೋನಾ ಸೋಂಕು ಇದೀಗ ಗ್ರಾಮೀಣ ಭಾಗದಲ್ಲೂ ಹೆಚ್ಚುತ್ತಿರುವುದು ಜನತೆಯನ್ನು ಆತಂಕಕ್ಕೀಡು ಮಾಡಿದೆ.  

ಕಡಬ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಕೊರೋನಾ ಅಟ್ಟಹಾಸ ➤ ಒಂದೇ ದಿನ 245 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ರಾಜ್ಯಕ್ಕೆ 1200 ಟನ್ ಆಕ್ಸಿಜನ್ ಪೂರೈಕೆ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ➤ ಕೇಂದ್ರ ಸರಕಾರಕ್ಕೆ ತೀವ್ರ ಮುಖಭಂಗ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.07. ಕೇಂದ್ರ ಸರಕಾರವು ಕರ್ನಾಟಕಕ್ಕೆ 1200 ಮೆಟ್ರಿಕ್ ಟನ್ ಅಕ್ಸಿಜನ್ ನೀಡುವಂತೆ ಹೈಕೋರ್ಟ್ ಹೊರಡಿಸಿದ್ದ ಅದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕೇಂದ್ರ ಸರಕಾರಕ್ಕೆ ತೀವ್ರ ಮುಖಭಂಗವಾಗಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಅಕ್ಸಿಜನ್ ಕೊರತೆ ನೀಗಿಸಲು ಕೇಂದ್ರ ಸರಕಾರವು 1,200 ಟನ್‌ ಆಕ್ಸಿಜನ್ನನ್ನು ಕರ್ನಾಟಕಕ್ಕೆ ಪೂರೈಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ಅದೇಶ ನೀಡಿತ್ತು. ಈ ಆದೇಶಕ್ಕೆ ತಡೆ‌ ನೀಡಬೇಕೆಂದು ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್

ರಾಜ್ಯಕ್ಕೆ 1200 ಟನ್ ಆಕ್ಸಿಜನ್ ಪೂರೈಕೆ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ➤ ಕೇಂದ್ರ ಸರಕಾರಕ್ಕೆ ತೀವ್ರ ಮುಖಭಂಗ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆತೂರು: ರಂಝಾನ್ ಕಿಟ್ ವಿತರಣೆ

(ನ್ಯೂಸ್ ಕಡಬ) Newskadaba.com ಆತೂರು, ಮೇ. 07. ಆತೂರು ರೇಂಜ್ ಮದ್ರಸ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಇದರ ವತಿಯಿಂದ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಇದರ ವ್ಯಾಪ್ತಿಗೆ ಒಳಪಟ್ಟ ಎಲ್ಲಾ ಅಧ್ಯಾಪಕರ ವೃಂದದವರಿಗೆ ರಮಳಾನ್ ಕಿಟ್ ನೀಡಲಾಯಿತು. ಆತೂರು ಬದ್ರಿಯಾ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ರೇಂಜ್ ಮ್ಯಾನೇಜ್ ಮೆಂಟ್ ಅಧ್ಯಕ್ಷರಾದ ಬಿ.ಕೆ.ಅಬ್ದುಲ್ ರಜಾಕ್ ಅಧ್ಯಕ್ಷತೆ ವಹಿಸಿದ್ದರು. ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಕೆ.ಯಚ್.ಎಸ್.ಫಾಝಿಲ್ ಹನೀಫಿ ಪ್ರಾರ್ಥನೆಗೆ ನೇತೃತ್ವ ವಹಿಸಿದ್ದರು. ಮಜೀದ್ ದಾರಿಮಿ, ಮುನೀರ್ ಅನ್ವರಿ, ಇಬ್ರಾಹಿಂ ಕೌಸರಿ,

ಆತೂರು: ರಂಝಾನ್ ಕಿಟ್ ವಿತರಣೆ Read More »

ಕರಾವಳಿ, ಕರ್ನಾಟಕ

ಜೀವರಕ್ಷಕ ವೆಂಟಿಲೇಟರ್ ➤ ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com  ವೆಂಟಿಲೇಟರ್ ಎನ್ನುವುದು ಒಂದು ವಿಶೇಷ ರೀತಿಯ ಜೀವರಕ್ಷಕ ಯಂತ್ರವಾಗಿದ್ದು, ಶ್ವಾಸಕೋಶದ ಸೋಂಕು ಅಥವಾ ಗಾಯ ಮೆದುಳಿಗೆ ಉಂಟಾದ ಹಾನಿಯಿಂದ  ಶ್ವಾಸಕೋಶಗಳು ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗದಿದ್ದಾಗ ಶ್ವಾಸಕೋಶಗಳಿಗೆ ಸಹಾಯ ಮಾಡುತ್ತವೆ.  ಒತ್ತಡ ತಂತ್ರಜ್ಞಾನದ ಮುಖಾಂತರ ಶಿಥಿಲಗೊಂಡಿರುವ ಅಥವಾ ದುರ್ಬಲಗೊಳ್ಳುತ್ತಿರುವ ಶ್ವಾಸಕೋಶಗಳ ಒಳಗೆ ಹೆಚ್ಚುವರಿ ಶುದ್ಧ ಆಮ್ಲಜನಕವನ್ನು ಈ ಯಂತ್ರಗಳ ಮುಖಾಂತರ ಸರಬರಾಜು ಮಾಡಲಾಗುತ್ತದೆ.  ಹೀಗೆ ಮಾಡಿದಾಗ ರಕ್ತದಲ್ಲಿ ನಿಗಧಿತ ಪ್ರಮಾಣÀದಲ್ಲಿ ಆಮ್ಲಜನಕ ಇರುವಂತೆ ಕಾಯ್ದುಕೊಳ್ಳುತ್ತದೆ.  ನಮ್ಮ ದೇಹದಲ್ಲಿ ಹೃದಯದಷ್ಟೇ ಪ್ರಾಮುಖ್ಯವಾದ ಇನ್ನೊಂದು ಅಂಗವೆAದರೆ

ಜೀವರಕ್ಷಕ ವೆಂಟಿಲೇಟರ್ ➤ ಡಾ. ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ತಂತ್ರಜ್ಞಾನ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಆಸ್ಪತ್ರೆ, ಮೆಡಿಕಲ್ ಹೊರತುಪಡಿಸಿ ನಾಳೆ ಜಿಲ್ಲಾದ್ಯಂತ ಸಂಪೂರ್ಣ ಬಂದ್ ➤ ಹೊರಬಂದರೆ ಬೀಳುತ್ತೆ ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.07. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಿಳಿಸಿದ್ದಾರೆ. ಮೆಡಿಕಲ್ ಸ್ಟೋರ್ ಮತ್ತು ಆಸ್ಪತ್ರೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ರೀತಿಯ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ತುರ್ತು ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24×7 ಕಾರ್ಯಾಚರಣೆಗಳ ಅಗತ್ಯವಿರುವ ಕೈಗಾರಿಕೆಗಳು/ಕಂಪನಿಗಳು/ಸಂಸ್ಥೆಗಳಿಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಕಟ್ಟಡ ನಿರ್ಮಾಣ ಚಟುವಟಿಕೆಗಳು ನಡೆಯುವ ಸ್ಥಳದಲ್ಲೇ ಕಾರ್ಮಿಕರು ಲಭ್ಯವಿದ್ದಲ್ಲಿ ಮಾತ್ರ

ಆಸ್ಪತ್ರೆ, ಮೆಡಿಕಲ್ ಹೊರತುಪಡಿಸಿ ನಾಳೆ ಜಿಲ್ಲಾದ್ಯಂತ ಸಂಪೂರ್ಣ ಬಂದ್ ➤ ಹೊರಬಂದರೆ ಬೀಳುತ್ತೆ ದಂಡ Read More »

ಕರಾವಳಿ

ನಾಳೆಯಿಂದ ಬೆಳಿಗ್ಗೆ 9 ಗಂಟೆಯ ನಂತರ ಪೇಟೆಗೆ ಬಂದವರಿಗೆ ಕಾದಿದೆ ಆಪತ್ತು ➤ ಕೊರೋನಾ ತಡೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿದಿಂದ ಕಠಿಣ ರೂಲ್ಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.06. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ನಾಳೆಯಿಂದ (ಮೇ.07) ಜಾರಿಗೆ ಬರುವಂತೆ ಹೊಸ ಕಾನೂನನ್ನು ಹೊರತಂದಿದೆ. ನಾಳೆಯಿಂದ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, 1 0 ಗಂಟೆಯ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕಾಗಿದೆ. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೇ ಹೋಗಬೇಕಾಗಿದ್ದು, ವಾಹನಗಳಲ್ಲಿ ಬೇರೆ ಕಡೆ ಹೋದರೆ ವಾಹನಗಳನ್ನು ಸೀಜ್ ಮಾಡುವಂತೆ

ನಾಳೆಯಿಂದ ಬೆಳಿಗ್ಗೆ 9 ಗಂಟೆಯ ನಂತರ ಪೇಟೆಗೆ ಬಂದವರಿಗೆ ಕಾದಿದೆ ಆಪತ್ತು ➤ ಕೊರೋನಾ ತಡೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿದಿಂದ ಕಠಿಣ ರೂಲ್ಸ್ Read More »

ಕರಾವಳಿ, ಕರ್ನಾಟಕ

ಕಡಬ: ಅನಗತ್ಯ ತಿರುಗಾಡುವವರಿಗೆ ಪೊಲೀಸರಿಂದ ಬಿಸಿ ➤ 7 ವಾಹನಗಳು ಸೀಝ್

(ನ್ಯೂಸ್ ಕಡಬ) newskadaba.com ಕಡಬ, ಮೇ.06. ಲಾಕ್‍ಡೌನ್ ಉಲ್ಲಂಘಿಸಿ ಅನಗತ್ಯ ತಿರುಗಾಡುವವರಿಗೆ ಬಿಸಿ ಮುಟ್ಟಿಸಿರುವ ಕಡಬ ಪೊಲೀಸರು ಗುರುವಾರದಂದು 7 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಆಯಕಟ್ಟಿನ ಪ್ರದೇಶಗಳಲ್ಲಿ ನಾಕಾಬಂದಿ ಹಾಕಿರುವ ಕಡಬ ಪೊಲೀಸರು ಮಾಸ್ಕ್ ಧರಿಸದೆ ಬಂದಿದ್ದ 11 ಮಂದಿಗೆ ದಂಡ ವಿಧಿಸಿದ್ದಾರೆ. ಅಲ್ಲದೇ ತಂಡ ತಂಡವಾಗಿ ಪೊಲೀಸರು ಗಸ್ತು ತಿರುಗುತ್ತಿದ್ದು, ಸಂಜೆ ವೇಳೆಗೆ 10 ಸಾವಿರ ರೂ. ದಂಡ ವಿಧಿಸಿದ್ದಾರೆ.      

ಕಡಬ: ಅನಗತ್ಯ ತಿರುಗಾಡುವವರಿಗೆ ಪೊಲೀಸರಿಂದ ಬಿಸಿ ➤ 7 ವಾಹನಗಳು ಸೀಝ್ Read More »

ಕರಾವಳಿ

ಕಡಬ ತಾಲೂಕಿನಲ್ಲಿ ಒಂದೇ ದಿನ 101 ಮಂದಿಗೆ ಕೊರೋನಾ ಪಾಸಿಟಿವ್ ➤ ಪುತ್ತೂರು, ಸುಳ್ಯ ತಾಲೂಕುಗಳಲ್ಲಿ 188 ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.06. ಗ್ರಾಮೀಣ ಭಾಗದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಗುರುವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 289 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 101 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 134 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 54 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮೊದಲು ಪೇಟೆಗಳಲ್ಲಿ ಮಾತ್ರ ಕಂಡುಬರುತ್ತಿದ್ದ ಕೊರೋನಾ ಸೋಂಕು ಇದೀಗ ಗ್ರಾಮೀಣ ಭಾಗದಲ್ಲೂ ಹೆಚ್ಚುತ್ತಿರುವುದು ಜನತೆಯನ್ನು ಆತಂಕಕ್ಕೀಡು ಮಾಡಿದೆ.  

ಕಡಬ ತಾಲೂಕಿನಲ್ಲಿ ಒಂದೇ ದಿನ 101 ಮಂದಿಗೆ ಕೊರೋನಾ ಪಾಸಿಟಿವ್ ➤ ಪುತ್ತೂರು, ಸುಳ್ಯ ತಾಲೂಕುಗಳಲ್ಲಿ 188 ಪ್ರಕರಣ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಒಂದೇ ದಿನ 50 ಸಾವಿರ ಮಂದಿಗೆ ಕೊರೋನಾ ದೃಢ | 346 ಮಂದಿ ಮೃತ್ಯು ➤ ಮನೆಯಿಂದ ಹೊರ ಬರುವವರೇ ಎಚ್ಚರ..‼️

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.05. ರಾಜ್ಯದಲ್ಲಿ ದಾಖಲೆಯ ಪ್ರಮುಖ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕರ್ಫ್ಯೂ ಜಾರಿ ಮಾಡಿದ್ದರೂ ಸಹ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಆರೋಗ್ಯ ಇಲಾಖೆಯ ವರದಿಯಂತೆ ರಾಜ್ಯದಲ್ಲಿ ಒಂದು ದಿನದಲ್ಲಿ 50112 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ 346 ಮಂದಿ ಕೊರೋನಾ ಸೋಂಕಿನಿಂದ ಪ್ರಾಣವನ್ನು ಕಳೆದುಕೊಂಡಿದ್ದಾರೆ‌. ಕೊರೋನಾ ಎರಡನೇ ಅಲೆಯು ಭೀಕರವಾಗಿದ್ದು, ಮನೆಯಿಂದ ಹೊರಬರದೆ ಇದ್ದರೆ ಮಾತ್ರ ಸೋಂಕು ಮುಕ್ತರಾಗಿ ಇರಬಹುದಾಗಿದೆ.    

ರಾಜ್ಯದಲ್ಲಿ ಒಂದೇ ದಿನ 50 ಸಾವಿರ ಮಂದಿಗೆ ಕೊರೋನಾ ದೃಢ | 346 ಮಂದಿ ಮೃತ್ಯು ➤ ಮನೆಯಿಂದ ಹೊರ ಬರುವವರೇ ಎಚ್ಚರ..‼️ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಸದ್ದು ಮಾಡಿದ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ➤ ಸಿಡಿ ಲೇಡಿ ಹೇಳಿದ್ದಾದರೂ ಏನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮೇ.05. ಕೊರೋನಾದಿಂದಾ ತಣ್ಣಗಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವು ಇದೀಗ ಮತ್ತೆ ಸದ್ದು ಮಾಡಿದೆ. ಸಿಡಿ ಪ್ರಕರಣವನ್ನು ಹಿಂಪಡೆಯುವಂತೆ ತನ್ನ ಪರ ವಕೀಲರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಸಂತ್ರಸ್ಥ ಯುವತಿ ಆರೋಪಿಸಿದ್ದು, ಈ ಬಗ್ಗೆ ತನಿಖಾಧಿಕಾರಿಗೆ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಕೇಸ್ ಹಿಂಪಡೆದರೆ ಕೋಟ್ಯಾಂತರ ರೂ. ನೀಡುವುದಾಗಿ ಆಮಿಷ ಒಡ್ಡಿದ್ದಾರೆ ಎಂದು ಸಂತ್ರಸ್ಥ ಯುವತಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.      

ಮತ್ತೆ ಸದ್ದು ಮಾಡಿದ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ➤ ಸಿಡಿ ಲೇಡಿ ಹೇಳಿದ್ದಾದರೂ ಏನು ಗೊತ್ತೇ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top