News Kadaba Desk

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.01. ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕಲ್ಪುರೆ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರ ರಾಜೇಶ್(18) ಎಂದು ಗುರುತಿಸಲಾಗಿದೆ. ಇಲಿ ಜ್ವರ ಹಾಗೂ ಜಾಂಡೀಸ್ ನಿಂದ ಬಳಲುತ್ತಿದ್ದ ರಾಜೇಶ್ ನನ್ನು ಚಿಕಿತ್ಸೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.    

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು Read More »

ಕರಾವಳಿ

ಬಂಟ್ವಾಳ: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಮೇ. 01. ಬಿ.ಸಿ.ರೋಡ್ ಅಜ್ಜಿಬೆಟ್ಟು ಎಂಬಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಬಿ.ಸಿ.ರೋಡ್ ಕೈಕಂಬ ಸಮೀಪದ ಪರ್ಲ್ಯ ನಿವಾಸಿಗಳಾದ ಇಮ್ರಾನ್ ಹಾಗೂ ಸಫ್ವಾನ್ ಎಂದು ಗುರುತಿಸಲಾಗಿದೆ. ಬ್ರಹ್ಮರಕೂಟ್ಲು ನಿವಾಸಿ ಮನೋಜ್ ಸಪಲ್ಯ ಎಂಬವರಿಗೆ ಎ. 04ರಂದು ರಾತ್ರಿ ಬಿ.ಸಿ.ರೋಡ್ ಬಳಿಯ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಸ್ಕೂಟರ್ ನಲ್ಲಿ ಬಂದ ಇಬ್ಬರು ಚೂರಿಯಿಂದ ಇರಿದು ಪರಾರಿಯಾಗಿದ್ದರು ಎಂದು ದೂರು

ಬಂಟ್ವಾಳ: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬದಲ್ಲಿ ಇಂದು 18 ಮಂದಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಮೇ.01. ಕೊರೋನಾ ಸೋಂಕು ಇಂದು ಕೂಡಾ ಗರಿಷ್ಠ ಪ್ರಮಾಣದಲ್ಲಿದ್ದು, ಆರೋಗ್ಯ ಇಲಾಖೆಯ ವರದಿಯಂತೆ ಶನಿವಾರದಂದು ಕಡಬ ತಾಲೂಕಿನ 18 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಕಡಬ ತಾಲೂಕಿನ ಮರ್ದಾಳದ 67 ವರ್ಷದ ಪುರುಷ, 55 ವರ್ಷದ ಮಹಿಳೆ, ಕಾಣಿಯೂರಿನ 31 ವರ್ಷದ ಮಹಿಳೆ, 8 ವರ್ಷದ ಬಾಲಕ, ಸವಣೂರಿನ 21 ವರ್ಷದ ಪುರುಷ, ಶಿರಾಡಿಯ 12 ವರ್ಷದ ಬಾಲಕಿ, 41 ವರ್ಷದ ಮಹಿಳೆ, 46 ವರ್ಷದ ಪುರುಷ, 56 ವರ್ಷದ ಪುರುಷ, ನೆಲ್ಯಾಡಿಯ

ಕಡಬದಲ್ಲಿ ಇಂದು 18 ಮಂದಿಗೆ ಕೊರೋನಾ ದೃಢ Read More »

ಕರಾವಳಿ

ಮಂಗಳೂರು: ನಿಸರ್ಗ ಬಾರ್ ಆ್ಯಂಡ್ ರೆಸ್ಟೋರೆಂಟ್ ಗೆ ಪೊಲೀಸ್ ದಾಳಿ ➤ 50 ಬಾಕ್ಸ್ ಮದ್ಯ ಹಾಗೂ ಆರೋಪಿ ವಶಕ್ಕೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಮೇ. 01. ಬಾರ್ ವೊಂದಕ್ಕೆ ದಾಳಿ ನಡೆಸಿದ ಪೊಲೀಸರು 1.53 ಲಕ್ಷ ರೂ. ಮೌಲ್ಯದ 52 ಬಾಕ್ಸ್‌ ಅಕ್ರಮ ಮದ್ಯ ವಶಪಡಿಸಿ, ಓರ್ವನನ್ನು ಬಂಧಿಸಿದ ಘಟನೆ ತಲಪಾಡಿ ಚೆಕ್‌ಪಾಯಿಂಟ್ ಬಳಿ ನಡೆದಿದೆ. ಬಂಧಿತನನ್ನು ಕ್ಯಾಷಿಯರ್ ಚರಣ್ (22)ಎಂದು ಗುರುತಿಸಲಾಗಿದೆ. ಈ ಕುರಿತು ಆತನಲ್ಲಿ ಪ್ರಶ್ನಿಸಿದಾಗ ಆತ ಮದ್ಯವನ್ನು ನಗರದ ಮತ್ತೊಂದು ವೈನ್ ಶಾಪ್‌ನಿಂದ ಖರೀದಿಸಿರುವುದಾಗಿ ತಿಳಿಸಿದ್ದಾನೆ. ಇದೀಗ ಚರಣ್‌ನನ್ನು ಬಂಧಿಸಿರುವ ಪೊಲೀಸರು, ಬಾರ್‌ ವ್ಯವಸ್ಥಾಪಕರಾದ ದಿವ್ಯಾ ರಾಜ್ ಮತ್ತು ರೋಹಿತ್‌ ಎಂಬವರ

ಮಂಗಳೂರು: ನಿಸರ್ಗ ಬಾರ್ ಆ್ಯಂಡ್ ರೆಸ್ಟೋರೆಂಟ್ ಗೆ ಪೊಲೀಸ್ ದಾಳಿ ➤ 50 ಬಾಕ್ಸ್ ಮದ್ಯ ಹಾಗೂ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿಂದು 48 ಸಾವಿರದ ಗಡಿ ದಾಟಿ ಕೊರೋನಾ ಸೋಂಕು➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1205 ಮಂದಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.30. ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯು ಕಾಡ್ಗಿಚ್ಚಿನಂತೆ ಹರಡುತ್ತಿದ್ದು, ಹಿಂದಿನ ದಾಖಲೆಯನ್ನು ಮುರಿದು ಹೊಸ ದಾಖಲೆ ನಿರ್ಮಾಣವಾಗಿದೆ. ಆರೋಗ್ಯ ಇಲಾಖೆಯ ವರದಿಯಂತೆ ಶುಕ್ರವಾರದಂದು ರಾಜ್ಯದಲ್ಲಿ 48296 ಮಂದಿಗೆ ಕೊರೋನಾ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 1205 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇಂದು ಸೋಂಕಿನಿಂದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.      

ರಾಜ್ಯದಲ್ಲಿಂದು 48 ಸಾವಿರದ ಗಡಿ ದಾಟಿ ಕೊರೋನಾ ಸೋಂಕು➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1205 ಮಂದಿಗೆ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ಲಾಕ್‍ಡೌನ್ ಗೆ ಕ್ಯಾರೇ ಅನ್ನದ ಮಂಗಳೂರಿನ ಪ್ರತಿಷ್ಠಿತ ಕಾಲೇಜು ➤ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.30. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಮಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರದ ಹೊರವಲಯದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ ಕೋವಿಡ್ ನಿಯಮ‌ಗಳನ್ನು ಉಲ್ಲಂಘಿಸಿ ಹಲವು ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿರಿಸಿಕೊಂಡು ಶೈಕ್ಷಣಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಆಡಳಿತ ಮಂಡಳಿಯ ವಿರುದ್ದ ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.      

ಲಾಕ್‍ಡೌನ್ ಗೆ ಕ್ಯಾರೇ ಅನ್ನದ ಮಂಗಳೂರಿನ ಪ್ರತಿಷ್ಠಿತ ಕಾಲೇಜು ➤ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು Read More »

ಕರಾವಳಿ

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ತಪ್ಪಿದ ಅನಾಹುತ, ಚಾಲಕ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.30. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ರಸ್ತೆ ಬದಿ ಮಗುಚಿ ಬಿದ್ದ ಘಟನೆ ಶುಕ್ರವಾರದಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಕೊಂಡು ಹೊರಟಿದ್ದ ಟ್ಯಾಂಕರ್ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗ್ಯಾಸ್ ಸೋರಿಕೆ ಆಗದೆ ಇದ್ದುದರಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ತಪ್ಪಿದ ಅನಾಹುತ, ಚಾಲಕ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಸ್ಕ್ ಧರಿಸಿ ಪೇಟೆಗೆ ಬಂದ ನಾಯಿ | ಮಾಸ್ಕ್ ಧರಿಸದೆ ಬರುವವರನ್ನು ಅಣಕಿಸುವ ಚಿತ್ರ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.30. ಕೊರೋನಾ ಸೋಂಕು ದೇಶದೆಲ್ಲೆಡೆ ಹಬ್ಬುತ್ತಿದ್ದರೂ, ಮಾಸ್ಕ್ ಧರಿಸದೆ ತಿರುಗಾಡುವವರನ್ನು ಅಣಕಿಸುವಂತಹ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಪ್ರವೀಣ್ ಡ್ರೈವಿಂಗ್ ಸ್ಕೂಲ್‌ನ ಮಾಲೀಕ ಪ್ರವೀಣ್ ಡಿಸೋಜಾ ಅವರು ತನ್ನ ಸಾಕು ನಾಯಿಗೆ ಮಾಸ್ಕ್ ಹಾಕಿಸಿ ಪೇಟೆಗೆ ಕರೆದುಕೊಂಡು ಬಂದಿದ್ದು, ಇದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿತ್ತು‌. ನಾಯಿಗೆ ಕೊರೋನಾ ತಗಲಬಾರದು ಎನ್ನುವ ದೃಷ್ಟಿಯಿಂದ ಮಾಸ್ಕ್ ಹಾಕಿಸಿ ಪೇಟೆಗೆ ಕರೆದುಕೊಂಡು ಬರಲಾಗಿತ್ತು. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಅಂತ ಸರ್ಕಾರದ ಕಠಿಣ ನಿಯಮವನ್ನು ಉಲ್ಲಂಘಿಸುವವರಿಗೆ

ಮಾಸ್ಕ್ ಧರಿಸಿ ಪೇಟೆಗೆ ಬಂದ ನಾಯಿ | ಮಾಸ್ಕ್ ಧರಿಸದೆ ಬರುವವರನ್ನು ಅಣಕಿಸುವ ಚಿತ್ರ Read More »

ಕರಾವಳಿ, ಲೈಫ್‍ಸ್ಟೈಲ್

ರಾಜ್ಯದಲ್ಲಿ ಮುಂದುವರಿಯುತ್ತಾ ಲಾಕ್‍ಡೌನ್..⁉️ ➤ ಸುಳಿವು ನೀಡಿದ ಆರೋಗ್ಯ ಸಚಿವ ಡಾ| ಸುಧಾಕರ್

(ನ್ಯೂಸ್ ಕಡಬ) newskadaba.com ಬೀದರ್, ಎ.30. ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ರಾಜ್ಯದಲ್ಲಿ ಲಾಕ್‍ಡೌನ್ ಮುಂದುವರಿಸುವುದು ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಅವರು ಶುಕ್ರವಾರದಂದು ಬೀದರ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ನಿಯಂತ್ರಿಸುವ ಸಲುವಾಗಿ 14 ದಿನಗಳ ಕಾಲ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಜವಾಬ್ದಾರಿಯಿಂದ ವರ್ತಿಸುವ ಮೂಲಕ ಸೋಂಕು ತಡೆಗಟ್ಟಲು ಸಹಕರಿಸಬೇಕಿದೆ. ಕೊರೋನಾ ಹೀಗೆಯೇ ಮುಂದುವರಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು

ರಾಜ್ಯದಲ್ಲಿ ಮುಂದುವರಿಯುತ್ತಾ ಲಾಕ್‍ಡೌನ್..⁉️ ➤ ಸುಳಿವು ನೀಡಿದ ಆರೋಗ್ಯ ಸಚಿವ ಡಾ| ಸುಧಾಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಕೊರೋನಾ ಅಟ್ಟಹಾಸ ➤ ಒಂದೇ ದಿನ 101 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಎ.30. ಗ್ರಾಮೀಣ ಭಾಗದಲ್ಲಿ ಕೋವಿಡ್ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದ್ದು, ಶುಕ್ರವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 101 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ 82 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 19 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮೊದಲು ಪೇಟೆಗಳಲ್ಲಿ ಮಾತ್ರ ಕಂಡುಬರುತ್ತಿದ್ದ ಕೊರೋನಾ ಸೋಂಕು ಇದೀಗ ಗ್ರಾಮೀಣ ಭಾಗದಲ್ಲೂ ಹೆಚ್ಚುತ್ತಿರುವುದು ಜನತೆಯನ್ನು ಆತಂಕಕ್ಕೀಡು ಮಾಡಿದೆ.      

ಕಡಬ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಕೊರೋನಾ ಅಟ್ಟಹಾಸ ➤ ಒಂದೇ ದಿನ 101 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top