News Kadaba Desk

ಮರ್ಧಾಳ: ದುರ್ವರ್ತನೆ ತೋರಿದ ನಾಲ್ವರು ಯುವಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ. 27. ಮರ್ದಾಳದಲ್ಲಿ ಪೊಲಿಸರೊಂದಿಗೆ ದುರ್ವರ್ತನೆ ತೋರಿದ ನಾಲ್ವರು ಯುವಕರನ್ನು ಕಡಬ ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ಮರ್ದಾಳ ಪೇಟೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ನಾಲ್ವರು ಯುವಕರು ಬೈಕಿನಲ್ಲಿ ಬಂದಿದ್ದು, ಈ ವೇಳೆ ಹೆಲ್ಮೆಟ್ ಹಾಗೂ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ಪ್ರಶ್ನಿಸಿದ ಪೊಲೀಸರೊಂದಿಗೆ ಮಾತಿಗಿಳಿದ ಯುವಕರು ಎಸ್.ಐ. ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದಿದ್ದರು. ಬಳಿಕ ಎಸ್.ಐ ರುಕ್ಮ ನಾಯ್ಕ್ ಸ್ಥಳಕ್ಕೆ ತೆರಳಿ ಯುವಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮರ್ಧಾಳ: ದುರ್ವರ್ತನೆ ತೋರಿದ ನಾಲ್ವರು ಯುವಕರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

Breaking news ➤ ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 26. ರಾಜ್ಯದಲ್ಲಿ ಮಿತಿ ಮೀರಿ ಹರಡುತ್ತಿರುವ ಕೋವಿಡ್ ನ್ನು ನಿಯಂತ್ರಿಸುವ ಸಲುವಾಗಿ ರಾಜ್ಯದಲ್ಲಿ 14 ದಿನಗಳ ಲಾಕ್ ಡೌನ್ ಅನ್ನು ಜಾರಿ ಮಾಡಿ ರಾಜ್ಯ ಸರಕಾರ ಮಹತ್ವದ ಆದೇಶ ಪ್ರಕಟಿಸಿದೆ. ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಆದೇಶವನ್ನು ನಿರ್ಧರಿಸಲಾಗಿದ್ದು, 14 ದಿನಗಳಲ್ಲಿ ಕೊರೋನಾ ಹತೋಟಿಗೆ ಬರದಿದ್ದರೆ ಮತ್ತೆ ಒಂದು ವಾರ ಲಾಕ್ ಡೌನ್ ಮುಂದುವರೆಸಲಾಗುತ್ತದೆ ಎಂದು ತಿಳಿಸಲಾಗಿದೆ.

Breaking news ➤ ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್..! Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ➤ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಎ. 26. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಮಗು ಸೇರಿದಂತೆ ಮೂರು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಚಿತ್ರದುರ್ಗದ ಹಿರಿಯೂರು ಪಟ್ಟಣದ ಹೊರ ವಲಯದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ಹಿರಿಯೂರು ನಿವಾಸಿಗಳಾದ ಸೆಲ್ವಿ (35), ದೀಪಿಕಾ (06) ಹಾಗೂ ನೀಲಮ್ಮ (29) ಎಂದು ಗುರುತಿಸಲಾಗಿದೆ. ಟೆಂಪೋದಲ್ಲಿ ಕಾಂಕ್ರೀಟ್ ಕೆಲಸದ ಕೂಲಿ ಕಾರ್ಮಿಕರನ್ನು ಹಿರಿಯೂರಿನಿಂದ ಚಳ್ಳಕೆರೆಗೆ ಸಾಗಿಸುತ್ತಿದ್ದ ವೇಳೆ ಹಿರಿಯೂರು ಪಟ್ಟಣದ ಹೊರ ವಲಯದಲ್ಲಿ ಈ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ➤ ಮೂವರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಹಿನ್ನೆಲೆ ➤ ಎ. 28ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 26. ತೀವ್ರಗತಿಯಲ್ಲಿ ಸಾಗುತ್ತಿರುವ ಕೊರೋನಾ ಹಿನ್ನೆಲೆ ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಭಾನುವಾರದಂದು ಸುತ್ತೋಲೆ ಹೊರಡಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ದಿನಾಂಕ ಎ. 28ರಿಂದ ಮೇ. 18ರವರೆಗೆ ನಡೆಸಲು ತೀರ್ಮಾನಿಸಿತ್ತು. ಇಲಾಖೆಯು ಪ್ರಾಯೋಗಿಕ ಪರೀಕ್ಷೆಯನ್ನು ಆಯಾ ಕಾಲೇಜುಗಳ ಹಂತದಲ್ಲಿಯೇ ನಡೆಸಲು ಈ ಹಿಂದೆ ಸೂಚಿಸಿತ್ತು. ಆದರೆ

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಹಿನ್ನೆಲೆ ➤ ಎ. 28ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ Read More »

ಕರಾವಳಿ

ಅಂತ್ಯಕ್ರಿಯೆಯಲ್ಲಿ ಕೇವಲ 5 ಮಂದಿ ಮಾತ್ರ ಭಾಗವಹಿಸಬೇಕು ➤ ಸರಕಾರದಿಂದ ಮಹತ್ವದ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 26. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರವು ಜನರು ಗುಂಪು ಸೇರುವುದನ್ನು ನಿರ್ಬಂಧಿಸಿದೆ. ಇದೀಗ ಅಂತ್ಯಕ್ರಿಯೆಯಲ್ಲಿ 5 ಮಂದಿ ಮಾತ್ರವೇ ಭಾಗವಹಿಸಬೇಕು ಎಂಬ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತರು, ಪೊಲೀಸ್‌ ಆಯುಕ್ತರು, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಇತರ ಇಲಾಖೆಯ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ

ಅಂತ್ಯಕ್ರಿಯೆಯಲ್ಲಿ ಕೇವಲ 5 ಮಂದಿ ಮಾತ್ರ ಭಾಗವಹಿಸಬೇಕು ➤ ಸರಕಾರದಿಂದ ಮಹತ್ವದ ಆದೇಶ Read More »

ಕರಾವಳಿ

ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ ➤ ಸ್ಥಳೀಯರಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಎ. 24. ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನನ್ನು ಗೂಡಿನಬಳಿ ನಿವಾಸಿ ಜೀವರಕ್ಷಕರಾದ ಸತ್ತಾರ್ ಗೂಡಿನಬಳಿ ಹಾಗೂ ಸ್ವಾದಿಕ್ ಎಂ ಕೆ ಎಂಬವರು ನದಿಗೆ ಧುಮುಕಿ ರಕ್ಷಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಶ್ರವಣಬೆಳಗೊಳ ಮೂಲದವನು ಎನ್ನಲಾಗಿದೆ. ಯುವಕ ಶುಕ್ರವಾರದಂದು ಸಂಜೆ ಪಾಣೆಮಂಗಳೂರು ಹೊಸ ನೇತ್ರಾವತಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಕಂಡ ಸ್ಥಳೀಯರು, ಜೀವರಕ್ಷಕ ಸತ್ತಾರ್ ಅವರಿಗೆ

ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ ➤ ಸ್ಥಳೀಯರಿಂದ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಕ್ಸಿಜನ್ ಕೊರತೆಯ ನಡುವೆ ಮನೆಯಲ್ಲೇ ಅಕ್ರಮ ಆಕ್ಸಿಜನ್ ಸಿಲಿಂಡರ್ ಮಾರಾಟ ➤ ಆರೋಪಿ ಅಂದರ್, 48 ಸಿಲಿಂಡರ್ ವಶ

(ನ್ಯೂಸ್ ಕಡಬ) newskadaba.com ನವದೆಹಲಿ, ಎ. 24. ಮನೆಯಲ್ಲೇ ಅಕ್ರಮವಾಗಿ ಆಮ್ಲಜನಕ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟು ಹೆಚ್ಚಿನ ಬೆಲೆಗೆ ವ್ಯಾಪಾರ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು ಅನಿಲ್ ಕುಮಾರ್​​ ಎಂದು ಗುರುತಿಸಲಾಗಿದೆ. ಈ ಕುರಿತಂತೆ ನಿಖರ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದಾಗ ದೆಹಲಿಯ ದಶರತ್​ಪುರ ಪ್ರದೇಶದ ಮನೆಯೊಂದರಲ್ಲಿ ತಲಾ 67 ಲೀಟರ್ ಸಾಮರ್ಥ್ಯವುಳ್ಳ 32 ದೊಡ್ಡ ಹಾಗೂ ತಲಾ 10 ಲೀಟರ್​ ಸಾಮರ್ಥ್ಯದ 16 ಸಣ್ಣ ಆಕ್ಸಿಜನ್​

ಆಕ್ಸಿಜನ್ ಕೊರತೆಯ ನಡುವೆ ಮನೆಯಲ್ಲೇ ಅಕ್ರಮ ಆಕ್ಸಿಜನ್ ಸಿಲಿಂಡರ್ ಮಾರಾಟ ➤ ಆರೋಪಿ ಅಂದರ್, 48 ಸಿಲಿಂಡರ್ ವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಕೊರೋನಾ ಟಾಸ್ಕ್ ಫೋರ್ಸ್ ಸಭೆ ➤ ಕೋವಿಡ್ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಿ- ತಹಶೀಲ್ದಾರ್ ಅನಂತ್ ಶಂಕರ್

(ನ್ಯೂಸ್ ಕಡಬ) newskadaba.com ಕಡಬ, ಎ.23. ರಾಜ್ಯದಲ್ಲಿ ಕೊರೋನಾ ಸೋಂಕು ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ಸರಕಾರವು ಕಟ್ಟನಿಟ್ಟಿನ ಆದೇಶಗಳನ್ನು ಜಾರಿ ಮಾಡಿದ್ದು, ಕೊರೋನಾ ನಿರ್ಮೂಲನೆಗೆ ಸರಕಾರದ ಆಡಳಿತ ವ್ಯವಸ್ಥೆಯೊಂದಿಗೆ ಸರಕಾರದ ಆದೇಶದ ಪಾಲನೆಗೆ ಸಾರ್ವಜನಿಕರು ಅಗತ್ಯವಾಗಿ ಸಹಕರಿಸಬೇಕು ಎಂದು ಕಡಬ ತಹಶಿಲ್ದಾರ್ ಅನಂತಶಂಕರ್ ಮನವಿ ಮಾಡಿದರು. ಅವರು ಶುಕ್ರವಾರ ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಕಡಬ ತಾಲೂಕು ಮಟ್ಟದ ಕೋವಿಡ್ ಕಾರ್ಯಪಡೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜನರ ಆರೋಗ್ಯ ಅವರ ಕೈಯಲ್ಲಿಯೇ ಇದೆ, ಸರಕಾರ ರೂಪಿಸಿದ

ಕಡಬ: ಕೊರೋನಾ ಟಾಸ್ಕ್ ಫೋರ್ಸ್ ಸಭೆ ➤ ಕೋವಿಡ್ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಿ- ತಹಶೀಲ್ದಾರ್ ಅನಂತ್ ಶಂಕರ್ Read More »

ಕರಾವಳಿ, ಕರ್ನಾಟಕ

ಕಡಬ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಎ. 23. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ತಾಲೂಕಿನ ಕೊಯಿಲದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೆಮ್ಮಾರ ಗ್ರಾಮದ ಇಲ್ಯಾಸ್ ಎಂದು ಗುರುತಿಸಲಾಗಿದೆ. ಕಡಬ ತಾಲೂಕಿನ ಕೆಮ್ಮಾರದ ಮನೆಯೊಂದರ ಹಿಂಬದಿಯ ಅಂಗಳದಲ್ಲಿ ಅಕ್ರಮ ಕಸಾಯಿಖಾನೆ ನಿರ್ಮಿಸಿ ದನದ ಮಾಂಸ ಮಾಡಿ ಮಾರಾಟಕ್ಕೆ ತಯಾರು ಮಾಡುತ್ತಿದ್ದ ಸಂದರ್ಭ, ಈ ಕುರಿತ ಖಚಿತ ಮಾಹಿತಿಯನ್ನು ಆಧರಿಸಿ ಕಡಬ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು. ಬಂಧಿತನಿಂದ ತಕ್ಕಡಿ, ಮೂವತ್ತೈದು ಕೆ.ಜಿಯಷ್ಟು ಗೋಮಾಂಸ

ಕಡಬ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋಟ: ಕಾರು ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸ್ಕೂಟರ್ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕೋಟ, ಎ. 23. ಸ್ಕೂಟರ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟಿಯಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಸಾಲಿಗ್ರಾಮ ಗುರುನರಸಿಂಹ ಮಂಟಪದ ಎದುರುಗಡೆ ಸಂಭವಿಸಿದೆ. ಗಾಯಗೊಂಡವರನ್ನು ಚಿತ್ರಪಾಡಿಯ ಸತೀಶ್ ಆಚಾರಿ(42) ಹಾಗೂ ಸುಬ್ರಹ್ಮಣ್ಯ(13) ಎಂದು ಗುರುತಿಸಲಾಗಿದೆ. ಚಿತ್ರಪಾಡಿಯಿಂದ ಸಾಲಿಗ್ರಾಮ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಅತಿವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯ ಬಳಿಕ ಕಾರು ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಲೆತ್ನಿಸಿದ್ದು, ಸಾಸ್ತಾನ ಟೋಲ್

ಕೋಟ: ಕಾರು ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸ್ಕೂಟರ್ ಸವಾರರಿಬ್ಬರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top