News Kadaba Desk

ದಕ್ಷಿಣ ಕನ್ನಡ ಎಸ್ಪಿ ಲಕ್ಷ್ಮೀ ಪ್ರಸಾದ್ ವರ್ಗಾವಣೆ ➤ ನೂತನ ಎಸ್ಪಿಯಾಗಿ ರಿಷಿಕೇಶ್ ಭಗವಾನ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.01. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್ ರವರನ್ನು ವರ್ಗಾಯಿಸಿರುವ ರಾಜ್ಯ ಸರಕಾರ ನೂತನ ಎಸ್ಪಿಯಾಗಿ ರಿಷಿಕೇಶ್ ಭಗವಾನ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಯಾದಗಿರಿ ಜಿಲ್ಲೆಯಲ್ಲಿ ಎಸ್ಪಿಯಾಗಿದ್ದ ಎಸ್. ರಿಷಿಕೇಶ್ ಭಗವಾನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ ವರ್ಗಾಯಿಸಲಾಗಿದೆ. ಶಿವಮೊಗ್ಗ ಎಸ್ಪಿಯಾಗಿರುವ ಕೆ.ಎಂ.ಶಾಂತರಾಜು ಅವರನ್ನು ಬೆಂಗಳೂರು ಪೂರ್ವದ ಸಂಚಾರ ವಿಭಾಗ ಡಿಸಿಪಿ ಆಗಿ ವರ್ಗಾಯಿಸಿರುವ ಸರಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಆಗಿದ್ದ ಬಿ.ಎಂ.ಲಕ್ಷ್ಮೀ ಪ್ರಸಾದ್ […]

ದಕ್ಷಿಣ ಕನ್ನಡ ಎಸ್ಪಿ ಲಕ್ಷ್ಮೀ ಪ್ರಸಾದ್ ವರ್ಗಾವಣೆ ➤ ನೂತನ ಎಸ್ಪಿಯಾಗಿ ರಿಷಿಕೇಶ್ ಭಗವಾನ್ ನೇಮಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅಮಾಯಕ ಮುಸ್ಲಿಂ ಯುವಕರಿಗೆ ಸಂಘಪರಿವಾರದ ಗೂಂಡಾಗಳಿಂದ ಅಮಾನುಷ ರೀತಿಯಲ್ಲಿ ಹಲ್ಲೆ, ಕೊಲೆಯತ್ನ – ಪಾಪ್ಯುಲರ್ ಫ್ರಂಟ್ ಖಂಡನೆ ➤ ಕೃತ್ಯ ನಡೆಸಲು ಆರೋಪಿಗಳನ್ನು ಛೂ ಬಿಟ್ಟ ಸೂತ್ರಧಾರಿಗಳನ್ನು ಪತ್ತೆಹಚ್ಚಿ ಬಂಧಿಸಲು ಆಗ್ರಹ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ. 01. ತಾಲೂಕಿನ ಮೇಲೆಂತಬೆಟ್ಟು ಎಂಬಲ್ಲಿ ಬುಧವಾರ ರಾತ್ರಿ ಪಿಕಪ್ ನಲ್ಲಿ ಸಂಚರಿಸುತ್ತಿದ್ದ ಅಮಾಯಕ ಮುಸ್ಲಿಂ ವೃದ್ದ ವ್ಯಕ್ತಿ ಹಾಗೂ ಇನ್ನೋರ್ವ ಯುವಕನಿಗೆ ಸಂಘಪರಿವಾರದ ಸುಮಾರು 50 ಗೂಂಡಾಗಳು ಉತ್ತರ ಪ್ರದೇಶದ ಮಾದರಿಯಲ್ಲಿ ಅಮಾನುಷ ರೀತಿಯಲ್ಲಿ ಹಲ್ಲೆ ಹಾಗೂ ಕೊಲೆಯತ್ನ ನಡೆಸಿದ ಬೀಭತ್ಸ ಕೃತ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಬೆಳ್ತಂಗಡಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಗ್ಯಾರೇಜ್ ನಲ್ಲಿ ತಮ್ಮ ಪಿಕಪ್ ವಾಹನದ ರಿಪೇರಿ ನಡೆಸಿ ಸವಣಾಲು ಎಂಬಲ್ಲಿ

ಬೆಳ್ತಂಗಡಿ: ಅಮಾಯಕ ಮುಸ್ಲಿಂ ಯುವಕರಿಗೆ ಸಂಘಪರಿವಾರದ ಗೂಂಡಾಗಳಿಂದ ಅಮಾನುಷ ರೀತಿಯಲ್ಲಿ ಹಲ್ಲೆ, ಕೊಲೆಯತ್ನ – ಪಾಪ್ಯುಲರ್ ಫ್ರಂಟ್ ಖಂಡನೆ ➤ ಕೃತ್ಯ ನಡೆಸಲು ಆರೋಪಿಗಳನ್ನು ಛೂ ಬಿಟ್ಟ ಸೂತ್ರಧಾರಿಗಳನ್ನು ಪತ್ತೆಹಚ್ಚಿ ಬಂಧಿಸಲು ಆಗ್ರಹ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ದನಗಳ್ಳರು ಎಂದು ಆರೋಪಿಸಿ ಅಮಾಯಕರ ಮೇಲೆ ಹಲ್ಲೆ ಪ್ರಕರಣ ➤ ಏಳು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 01.‌ ಪಿಕಪ್ ವಾಹನವೊಂದರಲ್ಲಿ ಸಂಬಂಧಿಕರ ಮನೆಗೆಂದು ಹೋಗಿ ವಾಪಸಾಗುತ್ತಿದ್ದ ವೇಳೆ ದನ ಕಳ್ಳರೆಂದು ಆರೋಪಿಸಿ ಇಬ್ಬರ ಮೇಲೆ ಮೇಲಂತಬೆಟ್ಟು ಎಂಬಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಏಳು ಮಂದಿ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ಆರೋಪಿಗಳಾದ ರಾಕೇಶ್ ಭಟ್, ರಾಜೇಶ್ ಭಟ್, ಗುರುಪ್ರಸಾದ್, ಚಿದಾನಂದ ಮತ್ತು ಲೋಕೇಶ್ ಮತ್ತು ಇತರೆ ಇಬ್ಬರನ್ನು ಬಂಧಿಸಲಾಗಿದೆ. ಕುಪ್ಪೆಟ್ಟಿಯ ರಹಿಮಾನ್ ಎಂಬವರು ಬುಧವಾರ ಸಂಜೆ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಪಿಕಪ್ ನ ಬಾಡಿ ಕೆಲಸ ಮಾಡಿಸಲೆಂದು ಹೋಗಿದ್ದು,

ಬೆಳ್ತಂಗಡಿ: ದನಗಳ್ಳರು ಎಂದು ಆರೋಪಿಸಿ ಅಮಾಯಕರ ಮೇಲೆ ಹಲ್ಲೆ ಪ್ರಕರಣ ➤ ಏಳು ಮಂದಿ ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಣಿ: ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಮಹಿಳೆ ಹಾಗೂ ಮಗು ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಎ. 01. ಕಾರು ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆ ಹಾಗೂ ಮಗು ಗಂಭೀರ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದಿದೆ. ಮಹಿಳೆಯು ನೇರಳಕಟ್ಟೆ ಹಾಲ್ ನಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಗಡಿಯಾರದ ತಮ್ಮ ಮನೆ ಕಡೆಗೆ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಮಹಿಳೆ ಹಾಗೂ ಮಗು ಗಾಯಗೊಂಡಿದ್ದು,

ಮಾಣಿ: ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಮಹಿಳೆ ಹಾಗೂ ಮಗು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಮಂಗಳೂರು ಮೂಲದ ಉದ್ಯಮಿ ವಿಜಯಪುರದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಜಯಪುರ, ಎ. 01. ಇಲ್ಲಿನ ಇಂಡಿ ಎಂಬಲ್ಲಿ ಅಮರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಉದ್ಯಮಿಯೋರ್ವರು ಕೊರೋನಾ ವೈರಸ್ ನಿಂದಾಗಿ ಹೋಟೆಲ್ ಉದ್ಯಮದಲ್ಲಿ ಭಾರಿ ನಷ್ಟ ಅನುಭವಿಸಿದ ಕಾರಣ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮಂಗಳೂರು ಮೂಲದ ಗಣೇಶ್ ಎಂದು ಗುರುತಿಸಲಾಗಿದೆ. ಇವರು ಹೋಟೆಲ್ ನಡೆಸಲು 30 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಇದರ ಬಡ್ಡಿ ಕಟ್ಟಲಾಗದೇ ಒದ್ದಾಡುತ್ತಿದ್ದರು. ಅಲ್ಲದೇ ಕೊರೋನಾದಿಂದಾಗಿ ಹೋಟೆಲ್​​ ಕೂಡಾ ಸರಿಯಾಗಿ ನಡೆಯದೆ ಚಿಂತೆಗೀಡಾಗಿ

? ಮಂಗಳೂರು ಮೂಲದ ಉದ್ಯಮಿ ವಿಜಯಪುರದಲ್ಲಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಟ್ರಕ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಎ. 01. ಟ್ರಕ್‍ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಾಪುರದ ಮಾಸ್ತಿಕಟ್ಟೆಯ ಯಡೂರು ಬಳಿ ನಡೆದಿದೆ. ಮೃತರನ್ನು ಉಡುಪಿಯ ಪೆರಂಪಳ್ಳಿಯ ಜೋಸೆಫ್ ಗೋಮ್ಸ್ (28) ಎಂದು ಗುರುತಿಸಲಾಗಿದೆ. ಜೋಸೆಫ್ ಗೋಮ್ಸ್ ಹಾಗೂ ಮತ್ತವರ ಸ್ನೇಹಿತರು ಮಾಸ್ತಿಕಟ್ಟೆಯಲ್ಲಿರುವ ಸ್ನೇಹಿತನ ಮನೆಗೆ ತೆರಳುತ್ತಿದ್ದ ವೇಳೆ ಜೋಸೆಫ್ ರವರ ಬೈಕ್ ನಿಯಂತ್ರಣ ಕಳೆದುಕೊಂಡು ಮುಂದಿನಿಂದ ಬರುತ್ತಿದ್ದ ಟ್ರಕ್‍ ಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಗಂಭೀರ

ಉಡುಪಿ: ಟ್ರಕ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಕಡಬ ತಾಲೂಕಿನಲ್ಲಿ ಮತ್ತೆ 2 ಜೋಡಿ ಚಿರತೆ ಪ್ರತ್ಯಕ್ಷ

(ನ್ಯೂಸ್ ಕಡಬ) newskadaba.com ಕಡಬ, ಏ. 01. ತಾಲೂಕಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಜೋಡಿ ಚಿರತೆಗಳು ಕಾಣಿಯೂರು – ಚಾರ್ವಾಕ- ಕಡಬ ರಸ್ತೆಯ ದೋಳ್ಪಾಡಿ ಮರ್ಲಾಣಿ ಎಂಬಲ್ಲಿ ಕೊಜಂಬೇಡಿ ಸೇತುವೆಯ ಮೇಲ್ಭಾಗದಲ್ಲಿ 2 ಚಿರತೆಗಳು ರಸ್ತೆ ದಾಟಿ ದೋಳ್ಪಾಡಿ ಕಡೆ ಸಾಗುವುದನ್ನು ಕಡಬ ಕಡೆಯಿಂದ ಬರುತ್ತಿದ್ದ ಪ್ರಯಾಣಿಕರಿಗೆ ಕಂಡುಬಂದಿದೆ. ಇತ್ತೀಚೆಗೆ ಕೆಲವರಿಗೆ ಕಾಡಿನಿಂದ ಚಿರತೆ ಕೂಗುವ ಶಬ್ದ ಕೇಳಿಬಂದಿದೆ ಎನ್ನಲಾಗಿದೆ. ಚಿರತೆ ಪತ್ತೆಯಾಗಿರುವ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ತಿಂಗಳ ಹಿಂದೆಯಷ್ಟೇ ಕಡಬ ತಾಲೂಕಿನಲ್ಲಿ

? ಕಡಬ ತಾಲೂಕಿನಲ್ಲಿ ಮತ್ತೆ 2 ಜೋಡಿ ಚಿರತೆ ಪ್ರತ್ಯಕ್ಷ Read More »

ಕರಾವಳಿ, ಕರ್ನಾಟಕ

ಕಡಬ: ಮನೆಮಂದಿ ಜಾತ್ರೆಗೆ ತೆರಳಿದ್ದ ಸಂದರ್ಭ ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಏ. 01. ಮನೆಯವರೆಲ್ಲರೂ ಜಾತ್ರೆಗೆ ತೆರಳಿದ್ದ ಸಂದರ್ಭ ಕೊಯಿಲ ಗ್ರಾಮದ ಗಂಡಿಬಾಗಿಲು ಆನೆಗುಂಡಿ ಎಂಬಲ್ಲಿ ಚೆನ್ನಪ್ಪ ಗೌಡ ಎಂಬವರ ಮನೆಗೆ ಬುಧವಾರದಂದು ರಾತ್ರಿ ನುಗ್ಗಿದ ಕಳ್ಳರು ಸುಮಾರು ಏಳೂವರೆ ಪವನ್ ಚಿನ್ನಾಭರಣ ಲೂಟಿಗೈದ ಘಟನೆ ನಡೆದಿದೆ.   ಮನೆಯವರೆಲ್ಲ ಸಂಜೆ 7 ಗಂಟೆಗೆ ಕೊಯಿಲದಲ್ಲಿ ನಡೆಯುತ್ತಿದ್ದ ಜಾತ್ರೆಗೆಂದು ಹೋಗಿದ್ದು, ಮರಳಿ 10 ಗಂಟೆಗೆ ಬರುವುದರ ನಡುವೆ ಈ ಕೃತ್ಯ ನಡೆದಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಡಬ: ಮನೆಮಂದಿ ಜಾತ್ರೆಗೆ ತೆರಳಿದ್ದ ಸಂದರ್ಭ ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಜ್ಯುವೆಲ್ಲರಿ ಮಾರ್ಟ್ ಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ ಹಾಗೂ ನಗದು ಜೊತೆ ಸಿಸಿ ಕ್ಯಾಮರಾ ಹೊತ್ತೊಯ್ದರು

(ನ್ಯೂಸ್ ಕಡಬ) newskadaba.com ಸುಳ್ಯ, ಏ. 01. ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್ ಗೆ ಬುಧವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಚಿನ್ನದ ಅಂಗಡಿಯ ಬೀಗ ಮುರಿದಿರುವ ವಿಷಯ ತಿಳಿದ ಸ್ಥಳೀಯರು, ಅಂಗಡಿ ಮಾಲಕರು ಹಾಗೂ ಪೋಲೀಸರು ಬಂದು ಪರಿಶೀಲಿಸಿದಾಗ ಚಿನ್ನಾಭರಣ ಹಾಗೂ ನಗದು ಜೊತೆಗೆ ಸಿಸಿ ಕ್ಯಾಮರಾವನ್ನೂ ಕಳ್ಳರು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದ್ದು, ಕಳವಾದ ಸ್ವತ್ತುಗಳ

ಸುಳ್ಯ: ಜ್ಯುವೆಲ್ಲರಿ ಮಾರ್ಟ್ ಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ ಹಾಗೂ ನಗದು ಜೊತೆ ಸಿಸಿ ಕ್ಯಾಮರಾ ಹೊತ್ತೊಯ್ದರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.01. ಕಡಬದ ವಿದ್ಯಾರ್ಥಿಯೋರ್ವ ಮಂಗಳೂರಿನಲ್ಲಿ ಮೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕಡಬ ತಾಲೂಕಿನ ಇಚಿಲಂಪಾಡಿ ನಿವಾಸಿ ರಿನು ವರ್ಗೀಸ್(20) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದ ರಿನು ವರ್ಗೀಸ್, ಬುಧವಾರ ರಾತ್ರಿ ತಾನು ತಂಗಿದ್ದ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ

ಕಡಬದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top