News Kadaba Desk

ಸುಬ್ರಹ್ಮಣ್ಯ: ಸರಳ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐದು ನವಜೋಡಿಗಳು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ. 31. ಕರ್ನಾಟಕ ಸರ್ಕಾರದ ಯೋಜನೆಯಂತೆ ಕುಕ್ಕೇ ಸುಬ್ರಹ್ಮಣ್ಯದಲ್ಲಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವು ಬುಧವಾರದಂದು ನಡೆಯಿತು. ಆದಿಸುಬ್ರಹ್ಮಣ್ಯ ಕಲ್ಯಾಣ ಪಂಟಪದಲ್ಲಿ ನಡೆದ ಈ ವಿವಾಹ ಕಾರ್ಯಕ್ರಮದಲ್ಲಿ 5 ಜೋಡಿಗಳು ಸಪ್ತಪದಿ ತುಳಿದರು. ವಿಶೇಷವಾಗಿ ಗಣಹವನ ನಡೆಸಲಾಯಿತು. ಬಳಿಕ ಪುರೋಹಿತರ ಮಂತ್ರಘೋಷದೊಂದಿಗೆ ಜೋಡಿಗಳ ಧಾರಾ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ವತಿಯಿಂದ ತಾಳಿ, ಸೀರೆ, ದೋತಿ, ಸ್ಮರಣಿಕೆ ಹಾಗೂ ಪ್ರಸಾದ ನೀಡಿ ಹರಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ ರಾಮ್ […]

ಸುಬ್ರಹ್ಮಣ್ಯ: ಸರಳ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐದು ನವಜೋಡಿಗಳು Read More »

ಕರಾವಳಿ, ಕರ್ನಾಟಕ

ಅಕ್ರಮ ಸಂಬಂಧದಲ್ಲಿ ಬಿರುಕು ➤ ಪ್ರಿಯತಮೆಯ ಮಗನನ್ನೇ ಕತ್ತು ಹಿಸುಕಿ ಕೊಲೆಗೈದ ಪ್ರಿಯತಮ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಮಾ. 31. ಪ್ರಿಯಕರನೋರ್ವ ತನ್ನ ಪ್ರಿಯತಮೆಯ 6 ವರ್ಷದ ಮಗನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ಕಾಣೆಯಾಗಿದ್ದ 6 ವರ್ಷದ ಬಾಲಕನ ಅಸ್ಥಿಪಂಜರ ಪತ್ತೆಯಾಗಿದೆ. ಕೊಲೆಯಾದವನ್ನು ವಾಟದ ಹೊಸಹಳ್ಳಿಯ ವಿಷ್ಣುವರ್ಧನ್ (6) ಎಂದು ಗುರುತಿಸಲಾಗಿದೆ. ಆರೋಪಿ ವಾಟದ ಹೊಸಹಳ್ಳಿ ಗ್ರಾಮದ ರಾಮಾಂಜಿ ಎಂಬಾತ ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ್ದು, ಗೌರಿಬಿದನೂರು ತಾಲೂಕಿನ ಸಾದರ್ಲಹಳ್ಳಿ ಬಳಿ ಬಾಲಕನ ಅಸ್ಥಿಪಂಜರ ಪತ್ತೆಯಾಗಿದೆ. ಬಾಲಕ ವಿಷ್ಣುವರ್ಧನ್ ಪ್ರಭಾವತಿ ಹಾಗೂ ನಾರಾಯಣಸ್ವಾಮಿ ದಂಪತಿಯ ಮಗನಾಗಿದ್ದು, ಮಾರ್ಚ್ 16

ಅಕ್ರಮ ಸಂಬಂಧದಲ್ಲಿ ಬಿರುಕು ➤ ಪ್ರಿಯತಮೆಯ ಮಗನನ್ನೇ ಕತ್ತು ಹಿಸುಕಿ ಕೊಲೆಗೈದ ಪ್ರಿಯತಮ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 31. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಇಲ್ಲಿನ ಎಸ್.ವಿ.ಎಸ್ ಕಾಲೇಜಿನ ಬಳಿ ನಡೆದಿದೆ.   ವಾಮದಪದವು, ಪೂಂಜಾಲಕಟ್ಟೆ, ಮೂರ್ಜೆ ಮಾರ್ಗವಾಗಿ ಬಿಸಿ ರೋಡಿಗೆ ಬರುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಇದರಲ್ಲಿ ಪರೀಕ್ಷೆಗೆಂದು ತೆರಳುತ್ತಿದ್ದ ವಿದ್ಯಾರ್ಥಿಗಳ ಸಹಿತ 25 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಸುಮಾರು 12 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಇವರುನ್ನು ಬಂಟ್ವಾಳದ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬಸ್ಸಿನಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ ➤ ಬಸ್ ತಡೆದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಸುರತ್ಕಲ್, ಮಾ. 31. ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯೊಂದನ್ನು ಸುರತ್ಕಲ್ ಬಳಿ ಬಸ್ಸು ತಡೆದ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಲವ್‌ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣ ಕಂಡು ಬಂದಲ್ಲಿ ಮತ್ತೆ ನೇರಕಾರ್ಯಾಚರಣೆ ನಡೆಸುತ್ತೇವೆಂದು ಬಜರಂಗದಳ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದೆ.  

ಮಂಗಳೂರು: ಬಸ್ಸಿನಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ ➤ ಬಸ್ ತಡೆದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ➤ ಮಾಜಿ ಪ್ರಧಾನಿ ದೇವೆಗೌಡ ಹಾಗೂ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 31. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. “ನಾನು ಮತ್ತು ನನ್ನ ಪತ್ನಿ ಚೆನ್ನಮ್ಮಗೆ ಕೋವಿಡ್ ಪಾಸಿಟಿವ್ ಬಂದಿದ್ದು, ನಮ್ಮ ಕುಟುಂಬದ ಸದಸ್ಯರಿಂದ ಸ್ವಯಂ ಆಗಿ ಪ್ರತ್ಯೇಕವಾಗಿರುತ್ತೇವೆ. ಕಳೆದ ಕೆಲವು ದಿನಗಳಿಂದ ನಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆಗೆ ಒಳಪಡುವಂತೆ ಮನವಿ

ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ➤ ಮಾಜಿ ಪ್ರಧಾನಿ ದೇವೆಗೌಡ ಹಾಗೂ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಮಂಗಳೂರು: ಖಾಸಗಿ ಬಸ್ಸಿನಡಿಗೆ ಬಿದ್ದು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 31. ಖಾಸಗಿ ಬಸ್ಸಿನ ಅಡಿಗೆ ಬಿದ್ದು ಕಾಲೇಜು ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರದಂದು ಬೆಳಗ್ಗೆ ನಗರದ ಮರಕಡ ಜಂಕ್ಷನ್ ನಲ್ಲಿ ನಡೆದಿದೆ.   ಮೃತ ವಿದ್ಯಾರ್ಥಿನಿಯನ್ನು ಚೆಲ್ಲಯ್ಯ ಅವರ ಪುತ್ರಿ, ಕಾವೂರು ಕುಂಜತ್ ಬೈಲ್ ಜ್ಯೋತಿನಗರ ನಿವಾಸಿ ಸಿ.ಪವಿತ್ರ (21) ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.  

ಮಂಗಳೂರು: ಖಾಸಗಿ ಬಸ್ಸಿನಡಿಗೆ ಬಿದ್ದು ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ಯಾಸ್ ಟ್ಯಾಂಕರ್ – ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಗಾಯಾಳುಗಳ ಪೈಕಿ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.30. ಇಂದು ಬೆಳಿಗ್ಗೆ ಪಾಣೆ ಮಂಗಳೂರಿನಲ್ಲಿ ಅನಿಲ ಸಾಗಾಟದ ಟ್ಯಾಂಕರೊಂದು ಮಾರುತಿ ಇಕೋ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಮುಲ್ಕಿ ಸಮೀಪದ ಕಿನ್ನಿಗೋಳಿ ಐಕಳ ನಿವಾಸಿ ಗೋಪಾಲ್(41) ಎಂದು ಗುರುತಿಸಲಾಗಿದೆ. ಇನ್ನುಳಿದಂತೆ ರಘುನಾಥ್, ಶೇಖರ್, ಮುದರ, ರಾಜೇಶ್ ಹಾಗೂ ಸಂದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಕಳ ನಿವಾಸಿಗಳು ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ಕೊರಗಜ್ಜ ದೈವದ

ಗ್ಯಾಸ್ ಟ್ಯಾಂಕರ್ – ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಗಾಯಾಳುಗಳ ಪೈಕಿ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆಕ್ಸ್ ಸಿಡಿ ಪ್ರಕರಣಕ್ಕೆ ಬಿಗ್ ಬ್ರೇಕ್ ➤ ಕೊನೆಗೂ ಕೋರ್ಟ್ ಗೆ ಹಾಜರಾದ ಯುವತಿ..‼️➤ ಬಂಧನ ಭೀತಿಯಲ್ಲಿ ಟೆಂಪಲ್ ರನ್ ಆರಂಭಿಸಿದ ಸಿಡಿ ಹೀರೊ ಜಾರಕಿಹೊಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.30. ತೀವ್ರ ಕುತೂಹಲ ಕೆರಳಿಸಿದ್ದ ಸಿಡಿ ಪ್ರಕರಣದ ಸಂತ್ರಸ್ತೆ ಯುವತಿಯು 28 ದಿನಗಳ ಬಳಿಕ ಕೊನೆಗೂ ಮಂಗಳವಾರದಂದು ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಳೆ. ವೀಡಿಯೋ ಬಿಡುಗಡೆಯಾಗಿ 28 ದಿನಗಳ ಬಳಿಕ ಯುವತಿ ತನ್ನ ಹೇಳಿಕೆ ನೀಡುವುದಕ್ಕಾಗಿ ವಿಶೇಷ ಭದ್ರತೆಯಲ್ಲಿ ಕೋರ್ಟ್ ಗೆ ಬಂದಿದ್ದು, ಅಲ್ಲಿ ನ್ಯಾಯಾಧೀಶರು ಮತ್ತು ಟೈಪಿಸ್ಟ್ ಎದುರುಗಡೆ ಯುವತಿಯು ಸೆಕ್ಷನ್ 164 ಅಡಿ ತನ್ನ ಸ್ವಯಂ ಹೇಳಿಕೆಯನ್ನು ನೀಡಿದ್ದಾಳೆ. ತದನಂತರ ಹೇಳಿಕೆ ದಾಖಲಿಸಿಕೊಳ್ಳುವ ಸಲುವಾಗಿ ಯುವತಿಯ ವಕೀಲರು ಎಸ್ಐಟಿ ಅಧಿಕಾರಿಗಳ

ಸೆಕ್ಸ್ ಸಿಡಿ ಪ್ರಕರಣಕ್ಕೆ ಬಿಗ್ ಬ್ರೇಕ್ ➤ ಕೊನೆಗೂ ಕೋರ್ಟ್ ಗೆ ಹಾಜರಾದ ಯುವತಿ..‼️➤ ಬಂಧನ ಭೀತಿಯಲ್ಲಿ ಟೆಂಪಲ್ ರನ್ ಆರಂಭಿಸಿದ ಸಿಡಿ ಹೀರೊ ಜಾರಕಿಹೊಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಲೈಮಾಕ್ಸ್ ಹಂತಕ್ಕೆ ತಲುಪಿದ ಸೆಕ್ಸ್‌ ಸಿಡಿ ಪ್ರಕರಣ..‼️ ➤ ನ್ಯಾಯಾಲಯದತ್ತ ಹೊರಟ ಸಿಡಿ ಲೇಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.30. ರಾಜ್ಯ ರಾಜಕೀಯದಲ್ಲಿ ಕ್ಷಣಕ್ಕೊಂದು ತಿರುವು ಪಡೆಯುತ್ತಿರುವ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣವು ಕೊನೆಗೂ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಈ ಕುರಿತು ಯುವತಿಯು ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಲು ಅವಕಾಶ ಕೋರಿ ಯುವತಿಯ ಪರ ವಕೀಲರಾದ ಜಗದೀಶ್ ಸಲ್ಲಿಸಿದ್ದ ಅರ್ಜಿಗೆ ಅನುಮತಿ ದೊರೆತಿದ್ದು,‌ ಇದೀಗ ಯುವತಿಯು ನ್ಯಾಯಾಲಯದ ಕಡೆಗೆ ಹೊರಟಿರುವುದಾಗಿ ಮಾಹಿತಿ ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ ಯುವತಿಯು ಕೋರ್ಟ್ ಗೆ ಆಗಮಿಸಲಿದ್ದು, ನ್ಯಾಯಾಲಯದ ಸುತ್ತ ಬಿಗಿ

ಕ್ಲೈಮಾಕ್ಸ್ ಹಂತಕ್ಕೆ ತಲುಪಿದ ಸೆಕ್ಸ್‌ ಸಿಡಿ ಪ್ರಕರಣ..‼️ ➤ ನ್ಯಾಯಾಲಯದತ್ತ ಹೊರಟ ಸಿಡಿ ಲೇಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದುವರಿದ ಕೊರೋನಾ ಅಟ್ಟಹಾಸ ➤ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.30. ಕೊರೊನಾ ವೈರಸ್‌ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಸಭೆಗಳನ್ನು ನಡೆಸುವಂತಿಲ್ಲ. ಇದಲ್ಲದೆ ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಮೇಳ, ಜಾತ್ರೆ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ

ಮುಂದುವರಿದ ಕೊರೋನಾ ಅಟ್ಟಹಾಸ ➤ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top