News Kadaba Desk

ದ್ವಿಚಕ್ರ ವಾಹನ ಅಪಘಾತ ➤ ಆರೋಗ್ಯ ಕೇಂದ್ರಾಧಿಕಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಮಾ. 26. ಇಲ್ಲಿನ ಕಮಲಾಪುರ ತಾಲೂಕಿನ ಕಿಣ್ಣಿ ಸಡಕ್ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ರಸ್ತೆ ಅಪಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಬೇಲೂರ ಕ್ರಾಸ್ ಮದರ್ ತೆರೆಸಾ ಆಸ್ಪತ್ರೆ ಹತ್ತಿರ ನಡೆದಿದೆ.   ಮೃತರನ್ನು ಕನ್ಯಾಕುಮಾರಿ ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಕರ್ತವ್ಯ ಮುಗಿಸಿ ಸ್ಕೂಟಿಯಲ್ಲಿ ಕಲಬುರಗಿಗೆ ಹೋಗುತ್ತಿದ್ದ ವೇಳೆ ಎತ್ತಿನ ಬಂಡಿಗೆ ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ […]

ದ್ವಿಚಕ್ರ ವಾಹನ ಅಪಘಾತ ➤ ಆರೋಗ್ಯ ಕೇಂದ್ರಾಧಿಕಾರಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪರಿಚಿತ ವೃದ್ದೆ ಪತ್ತೆ ➤ ವಾರಸುದಾರ ಪತ್ತೆಗೆ ಕಡಬ ಎಸ್.ಐ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಮಾ. 26. ಇಲ್ಲಿನ ಕುಂತೂರು ಎಂಬಲ್ಲಿ ಅಪರಿಚಿತ ವೃದ್ದೆಯೋರ್ವರು ಪತ್ತೆಯಾಗಿದ್ದು, ಅವರನ್ನು ಕಡಬ ಎಸ್.ಐ ರುಕ್ಮ ನಾಯ್ಕ್ ಅವರು ಸಮುದಾಯ ಆಸ್ಪತ್ರೆ ಗೆ ದಾಖಲಿಸಿದ್ದಾರೆ. ಈ ಅಪರಿಚಿತ ಅಜ್ಜಿಗೆ 60-70 ವರ್ಷ ಆಗಿರಬಹುದು, ಇವರು ಯಾವುದೇ ಮಾತನಾಡುತ್ತಿಲ್ಲ ಆದುದರಿಂದ ಈ ಅಜ್ಜಿಯ ವಾರೀಸುದಾರರಿದ್ದಲ್ಲಿ ಕಡಬ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.  

ಅಪರಿಚಿತ ವೃದ್ದೆ ಪತ್ತೆ ➤ ವಾರಸುದಾರ ಪತ್ತೆಗೆ ಕಡಬ ಎಸ್.ಐ ಮನವಿ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಆಟೋರಿಕ್ಷಾ ಪಲ್ಟಿ ➤ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.26. ತಾಂತ್ರಿಕ ತೊಂದರೆಯಿಂದಾಗಿ ಆಟೋ ರಿಕ್ಷಾವೊಂದು ಪಟ್ಟಿಯಾದ ಘಟನೆ ನೆಲ್ಯಾಡಿ ಸಮೀಪದ ಕೊಣಾಲು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ನೆಲ್ಯಾಡಿಯ ಕೊಣಾಲು ಶಾಲೆಯ ಬಳಿಯಿಂದ ತೆರಳುತ್ತಿದ್ದ ಆಟೋರಿಕ್ಷಾದ ಚಕ್ರ ಜಾಮ್ ಆಗಿದ್ದು, ಈ ವೇಳೆ ರಿಕ್ಷಾ ಉರುಳಿ ಬಿದ್ದಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.    

ನೆಲ್ಯಾಡಿ: ಆಟೋರಿಕ್ಷಾ ಪಲ್ಟಿ ➤ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಈಜಲೆಂದು ತೆರಳಿದ್ದ ವೇಳೆ ಕೊಳದಲ್ಲಿ ಮುಳುಗಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಹಾವೇರಿ, ಮಾ. 26. ಈಜಲು ಗೊತ್ತಿಲ್ಲದೇ ನೀರಿನಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಮಯೂರಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ನಗರದ ಜಿ.ಹೆಚ್ ಕಾಲೇಜಿನ ಗುರುಕೃಪಾ ಈಜುಕೊಳಕ್ಕೆ ಸ್ನೇಹಿತರೊಂದಿಗೆ ಈಜಲೆಂದು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  

ಈಜಲೆಂದು ತೆರಳಿದ್ದ ವೇಳೆ ಕೊಳದಲ್ಲಿ ಮುಳುಗಿ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆ (ಮಾ. 27) ಕಡಬ ತಾಲೂಕು ಶಿಕ್ಷಕರ ಪ್ರಥಮ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 26. ಕಡಬ ತಾಲೂಕು ಶಿಕ್ಷಕರ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ ವತಿಯಿಂದ ಶಿಕ್ಷಕರ ಪ್ರಥಮ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನವು ಮಾ.27ರಂದು ಬೆಳಗ್ಗೆ 9 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ಶಿಕ್ಷಕರ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಹರಿಕಿರಣ್ ಕೊಯಿಲ ತಿಳಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತೆಗೆಯಲು ಪ್ರಪ್ರಥಮವಾಗಿ ಈ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಬೆಳಗ್ಗೆ

ನಾಳೆ (ಮಾ. 27) ಕಡಬ ತಾಲೂಕು ಶಿಕ್ಷಕರ ಪ್ರಥಮ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ Read More »

ಕರಾವಳಿ, ಕರ್ನಾಟಕ

ಕ್ಯಾಂಪಸ್ ಫ್ರಂಟ್ ಅಧ್ಯಕ್ಷರಾಗಿ ಎಂ.ಎಸ್ ಸಾಜಿದ್ ಆಯ್ಕೆ

(ನ್ಯೂಸ್ ಕಡಬ) newskadaba.com ಮಲಪ್ಪುರಂ, ಮಾ. 26. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರತಿನಿಧಿ ಸಭೆಯು ಕೇರಳದ ಮಲಪ್ಪುರಂ ನಲ್ಲಿ ನಡೆಯಿತು. ಎರಡು ದಿನಗಳ ಪ್ರತಿನಿಧಿ ಸಭೆಯ ಅಧ್ಯಕ್ಷತೆಯನ್ನು ರಾಷ್ಟ್ರೀಯ ಅಧ್ಯಕ್ಷರಾದ ಎಂ.ಎಸ್ ಸಾಜಿದ್ ವಹಿಸಿ ಮಾತನಾಡಿ “ದೇಶದಲ್ಲಿ ಅಸಮಾನತೆ ಮತ್ತು ಅಭದ್ರತೆ ಹೆಚ್ಚುತ್ತಿರುವಾಗ ವಿದ್ಯಾರ್ಥಿ ಸಮುದಾಯವು ಅತೀ ಕ್ರಿಯಾಶೀಲ ಪಾತ್ರವನ್ನು ವಹಿಸಬೇಕಾಗಿದೆ” ಎಂದು ಅವರು ಹೇಳಿದರು. ಸಭೆಯಲ್ಲಿ ದೇಶದ ಶೈಕ್ಷಣಿಕ, ರಾಜಕೀಯ, ಸಾಮಾಜಿಕ ವಿಷಯಗಳ ಕುರಿತು ಚರ್ಚೆ ನಡೆಯಿತು. ರಾಷ್ಟ್ರೀಯ ಕಾರ್ಯದರ್ಶಿ ಇರ್ಶಾದ್ ಕಾವು

ಕ್ಯಾಂಪಸ್ ಫ್ರಂಟ್ ಅಧ್ಯಕ್ಷರಾಗಿ ಎಂ.ಎಸ್ ಸಾಜಿದ್ ಆಯ್ಕೆ Read More »

ಕರ್ನಾಟಕ

ಕೊರೋನಾ ನಿಯಂತ್ರಣಕ್ಕೆ ಸರಕಾರದಿಂದ ಪರಿಷ್ಕೃತ ಮಾರ್ಗಸೂಚಿ ➤ ಯುಗಾದಿ, ಹೋಳಿ, ಬರಾಅತ್, ಗುಡ್ ಫ್ರೈಡೇ ಆಚರಣೆಗೆ ನಿಷೇಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.26. ಕೋವಿಡ್-19 ಎರಡನೇ ಅಲೆಯಿಂದಾಗಿ ದಿಢೀರ್ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ರಾಜ್ಯ ಸರಕಾರವು ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಟಿಸಿದೆ. ಮುಂಬರುವ ಯುಗಾದಿ, ಹೋಳಿ, ಶಬೇ – ಬರಾಅತ್, ಗುಡ್ ಫ್ರೈಡೆ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡದಂತೆ ನಿಷೇಧ ಹೇರಿ ಸರಕಾರವು ಆದೇಶ ಹೊರಡಿಸಿದೆ. ಪರಿಷ್ಕೃತ ಮಾರ್ಗಸೂಚಿಯ ಅನ್ವಯ ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್, ಮಾರ್ಕೆಟ್ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ಹಬ್ಬಗಳ ಆಚರಣೆಯನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದರೆ ಎನ್‍ಡಿಎಂಎ

ಕೊರೋನಾ ನಿಯಂತ್ರಣಕ್ಕೆ ಸರಕಾರದಿಂದ ಪರಿಷ್ಕೃತ ಮಾರ್ಗಸೂಚಿ ➤ ಯುಗಾದಿ, ಹೋಳಿ, ಬರಾಅತ್, ಗುಡ್ ಫ್ರೈಡೇ ಆಚರಣೆಗೆ ನಿಷೇಧ Read More »

ಕರ್ನಾಟಕ

ಎಡಮಂಗಲ: ದಲಿತ ಮಹಿಳೆಯ ಮನೆ ಧ್ವಂಸ ಪ್ರಕರಣ ➤ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

(ನ್ಯೂಸ್ ಕಡಬ) newskadaba.com ಎಡಮಂಗಲ, ಮಾ. 26. ದಲಿತ ಮಹಿಳೆಯೋರ್ವರು ವಾಸಿಸುತ್ತಿದ್ದ ತಾತ್ಕಾಲಿಕ ಮನೆಯನ್ನು ಧ್ವಂಸ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಾ. 03 ರಂದು ರವಿ ಶೆಟ್ಟಿ ಮತ್ತು ವಿದ್ಯಾ ಶೆಟ್ಟಿ ಹಾಗೂ ಮತ್ತಿಬ್ಬರು ಎಡಮಂಗಲ ಗ್ರಾಮದ ಕಜೆತ್ತಡ್ಕ ಎಂಬಲ್ಲಿ ಬಾಲಕಿ ಎಂಬವರು 20 ವರ್ಷಗಳಿಂದ ವಾಸಿಸುತ್ತಿದ್ದ ಮನೆಗೆ ಬಂದು ಅವಾಚ್ಯ

ಎಡಮಂಗಲ: ದಲಿತ ಮಹಿಳೆಯ ಮನೆ ಧ್ವಂಸ ಪ್ರಕರಣ ➤ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆಯಿಂದ (ಮಾ.27) ಏ. 04ರವರೆಗೆ ಬ್ಯಾಂಕ್ ಗಳು ಬಂದ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮಾ. 26. ಬ್ಯಾಂಕ್ ಗ್ರಾಹಕರು ಬ್ಯಾಂಕ್ ಕೆಲಸವೇನೇ ಇದ್ದರೂ ಇಂದೇ ಮುಗಿಸಿಕೊಳ್ಳುವುದು ಒಳ್ಳೆಯದು. ಇಲ್ಲದಿದ್ದರೆ ಮುಂದಿನ ವಾರದ ಮಂಗಳವಾರದವರೆಗೂ ಕಾಯಬೇಕಾಗುತ್ತದೆ. ನಾಳೆ(ಮಾ.27)ಯಿಂದ ಸತತ ಮೂರು ದಿನಗಳು ಬ್ಯಾಂಕ್‌ ಗಳಿಗೆ ರಜೆ ಇರಲಿವೆ.   ಮಾ.27ರಿಂದ ಆರಂಭಗೊಂಡು ಎ. 04 ರವರೆಗೆ ಒಂಭತ್ತು ದಿನಗಳಲ್ಲಿ ಕೇವಲ ಎರಡು ದಿನಗಳು ಮಾತ್ರ ಬ್ಯಾಂಕುಗಳು ತೆರೆದುಕೊಳ್ಳಲಿವೆ. ಬ್ಯಾಂಕ್ ರಜೆಗಳ ವಿವರ:- ಮಾ.27- ಕೊನೆಯ ಶನಿವಾರ, ಮಾ.28- ರವಿವಾರ, ಮಾ.29- ಹೋಳಿ ರಜೆ, ಮಾ.30: ಮಂಗಳವಾರ, ತೆರೆದಿರುತ್ತದೆ,

ನಾಳೆಯಿಂದ (ಮಾ.27) ಏ. 04ರವರೆಗೆ ಬ್ಯಾಂಕ್ ಗಳು ಬಂದ್ Read More »

ರಾಷ್ಟ್ರೀಯ ನ್ಯೂಸ್

ವಿಟ್ಲ: ಬೆಳ್ಳಂಬೆಳಗ್ಗೆ ಕರ್ತವ್ಯದಲ್ಲಿದ್ದ ಎಸ್.ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 26. ಕರ್ತವ್ಯ ನಿರತರಾಗಿದ್ದ ವಿಟ್ಲ ಎಸ್.ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲೆತ್ನಿಸಿದ ದುಷ್ಕರ್ಮಿಯನ್ನು ವಿಟ್ಲ ಪೋಲೀಸರು ಬಂಧಿಸಿದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ನಡೆದಿದೆ. ವಿಟ್ಲ ಸಮೀಪದ ಸಾಲೆತ್ತೂರು ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ವಿಟ್ಲ ಎಸ್ಐ ವಿನೋದ್ ರೆಡ್ಡಿ ಹಾಗೂ ಸಿಬ್ಬಂದಿಗಳು ವಾಹನಗಳನ್ನು ತಡೆದು, ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಯೊರ್ವ ಎಸ್ಐ

ವಿಟ್ಲ: ಬೆಳ್ಳಂಬೆಳಗ್ಗೆ ಕರ್ತವ್ಯದಲ್ಲಿದ್ದ ಎಸ್.ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ➤ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top