News Kadaba Desk

ಪಾಲುದಾರಿಕೆ ವ್ಯವಹಾರದಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ. 24. ಪಾಲುದಾರಿಕೆ ವ್ಯವಹಾರದಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ ಮಾಡಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ತಲ್ಲೂರು ಗ್ರಾಮದ ಕೆಳ ಹಿತ್ಲುವಿನ ನಾಗೇಶ್ ರಾಮ ಚಂದನ್ ಎಂಬವರಿಗೆ ಪ್ರಮೋದ ತಲ್ಲೂರು ಎಂಬವರು ಕರೆ ಮಾಡಿ ತಾನು ಬೆಂಗಳೂರಿನ ನಾಗರಬಾವಿಯ ಸುಷ್ಮಾ ಎಂಬವರೊಂದಿಗೆ ಪಾಲುದಾರಿಕೆಯಲ್ಲಿ ಕಾರು ವ್ಯವಹಾರ ಆರಂಭಿಸಿದ್ದಲ್ಲದೇ ಕಾರು ಮಾರಾಟದ ವ್ಯವಹಾರಕ್ಕೆ ಸಂಬಂಧಿಸಿ ಇದರಲ್ಲಿ ಹಣ ತೊಡಗಿಸಿದರೆ 20 ಶೇಕಡಾ ಲಾಭವನ್ನು ಪಡೆಯಬಹುದಾಗಿದೆ ಎಂದೂ ತಿಳಿಸಿದ್ದಾರೆ. ಇದನ್ನು […]

ಪಾಲುದಾರಿಕೆ ವ್ಯವಹಾರದಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

? ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಮಾ. 24. ವರದಕ್ಷಿಣೆ ಕಿರುಕುಳವನ್ನು ಸಹಿಸಲಾರದೇ ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ನಡೆದಿದೆ.   ಆತ್ಮಹತ್ಯೆಗೈದವರನ್ನು ನಳಿನಿ (36) ಎಂದು ಗುರುತಿಸಲಾಗಿದೆ. ಮೂಲತಃ ಶಿಡ್ಲಘಟ್ಟದವರಾದ ಇವರನ್ನು 16 ವರ್ಷಗಳ ಹಿಂದೆ ಚಿಂತಾಮಣಿ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಶ್ರೀರಾಮ ಎಂಬವರಿಗೆ ವಿವಾಹ ಮಾಡಲಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ವಿವಾಹವಾಗಿ ಕೆಲ ವರ್ಷಗಳ ಬಳಿಕ ಆಕೆಯ ಪತಿ ವರದಕ್ಷಿಣೆ ತರುವಂತೆ ನಳಿನಿಗೆ ಹೊಡೆದು ತವರು ಮನೆಗೆ

? ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಕಾಡಿನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 24. ಧರ್ಮಸ್ಥಳದ ಬಾಹುಬಲಿ ಬೆಟ್ಟದ ಹಿಂಭಾಗದ ಕಾಡೊಂದರಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹವು ಪತ್ತೆಯಾಗಿದೆ.   ಬಾಹುಬಲಿ ಬೆಟ್ಟದ ಹಿಂಭಾಗದ ಕಾಡಿನಲ್ಲಿ ವಾಸನೆ ಬರುತ್ತಾ ಇದೆ ಎಂದು ಯಾತ್ರಾರ್ಥಿಗಳು ನೀಡಿದ ಮಾಹಿತಿಯಂತೆ ಕ್ಷೇತ್ರದ ಮಾಹಿತಿ ಕಚೇರಿಯ ಮೇಲ್ವಿಚಾರಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಸುಮಾರು 60-65 ವರ್ಷದ ಅಪರಿಚಿತ ಹೆಂಗಸಿನ ಮೃತದೇಹವೊಂದು ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್

ಧರ್ಮಸ್ಥಳ: ಕಾಡಿನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಸರಕಾರಿ ಬಸ್ಸುಗಳ ಕೊರತೆ ನೀಗಿಸಲು ಸಂಚಾರಿ ನಿಯಂತ್ರಕರಿಗೆ (TC) ಸಿಎಫ್ಐ ವತಿಯಿಂದ ಮನವಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 24. ತಾಲೂಕಿನಾದ್ಯಂತ ವಿವಿಧ ಪ್ರದೇಶಗಳಿಗೆ ಸಂಚರಿಸುವ ಬಸ್ಸುಗಳಲ್ಲಿ ಪ್ರಮುಖವಾಗಿ ವೇಣೂರು, ಮೂಡಬಿದ್ರೆ, ಕಾರ್ಕಳ ಭಾಗದಿಂದ ಬರುವಂತಹ ವಿದ್ಯಾರ್ಥಿಗಳು ಖಾಸಗಿ ಬಸ್ಸುಗಳಲ್ಲಿ ನೇತಾಡುತ್ತಾ ತುಂಬಾ ಸಂಕಷ್ಟದಿಂದ ಹೋಗುವುದನ್ನು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ಇದರಿಂದ ವಿದ್ಯಾರ್ಥಿಗಳು ತರಗತಿಗೆ ಮತ್ತು ಪರೀಕ್ಷೆಗೆ ಸಮಯಕ್ಕೆ ಸರಿಯಾಗಿ ತಲುಪಲು ತೊಂದರೆ ಉಂಟಾಗುತ್ತಿದೆ. ಖಾಸಗಿ ಬಸ್ಸುಗಳ ನಿರ್ವಾಹಕರು ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಲೆಕ್ಕಕ್ಕಿಂತ ಹೆಚ್ಚು ಹತ್ತಿಸಿ ಬೇಜವಾಬ್ದಾರಿ ತೋರಿರುವುದರಿಂದ ಅಪಾಯಕಾರಿ ಸಂಭವಗಳು ಉಂಟಾಗಿರುವುದು, ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ

ಬೆಳ್ತಂಗಡಿ: ಸರಕಾರಿ ಬಸ್ಸುಗಳ ಕೊರತೆ ನೀಗಿಸಲು ಸಂಚಾರಿ ನಿಯಂತ್ರಕರಿಗೆ (TC) ಸಿಎಫ್ಐ ವತಿಯಿಂದ ಮನವಿ Read More »

ಕರಾವಳಿ, ಕರ್ನಾಟಕ

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಕಡಬದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.24. ಬೈಕೊಂದು ಸ್ಕೂಟಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕಡಬದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಮರ್ಧಾಳ ಸಮೀಪದ ಕೆರ್ಮಾಯಿ ನಿವಾಸಿ ಸನು ಅಬ್ರಹಾಂ (21) ಎಂದು ಗುರುತಿಸಲಾಗಿದೆ. ಸನು ಅಬ್ರಹಾಂ ಚಲಾಯಿಸುತ್ತಿದ್ದ ಯಮಹಾ ಯಂಟಿ ಬೈಕ್ ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಕಡಬದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಬೈಕ್ ಅಪಘಾತ ➤ ಕಡಬದ ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.24. ಬೈಕೊಂದು ಸ್ಕೂಟಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕಡಬದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಗಂಭೀರ ಗಾಯಗೊಂಡಿರುವ ಯುವಕನನ್ನು ಕಡಬ ತಾಲೂಕಿನ ಮರ್ಧಾಳ ಸಮೀಪದ ಕೆರ್ಮಾಯಿ ನಿವಾಸಿ ಸನು ಅಬ್ರಹಾಂ (21) ಎಂದು ಗುರುತಿಸಲಾಗಿದೆ. ಸನು ಅಬ್ರಹಾಂ ಚಲಾಯಿಸುತ್ತಿದ್ದ ಯಮಹಾ ಯಂಟಿ ಬೈಕ್ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿರುವ ಸನು ಅಬ್ರಹಾಂ ಇದೀಗ

ಮಂಗಳೂರಿನಲ್ಲಿ ಬೈಕ್ ಅಪಘಾತ ➤ ಕಡಬದ ಯುವಕ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಮೇರಿಕಾದ ಸರ್ಜನ್ ಜನರಲ್ ಆಗಿ ಕರ್ನಾಟಕದ ವೈದ್ಯ ವಿವೇಕ್ ಮೂರ್ತಿ ನೇಮಕ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಮಾ. 24. ಕೊರೋನಾ ವೈರಸ್ ಮಧ್ಯೆ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಿದ ಆರೋಗ್ಯಾಧಿಕಾರಿಗಳಲ್ಲಿ ಒಬ್ಬರಾಗಿರುವ ಕರ್ನಾಟಕ ಮೂಲದ ವೈದ್ಯ ವಿವೇಕ್ ಮೂರ್ತಿಯವರು ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ರವರ ಸರ್ಜನ್ ಜನರಲ್ ಆಗಿ ಆಯ್ಕೆಯಾಗಿದ್ದಾರೆ ಎಂದು ಯುಎಸ್ ಸೆನೆಟ್ ದೃಢೀಕರಿಸಿದೆ. ಅಮೇರಿಕದ ನೂತನ ಅಧ್ಯಕ್ಷ ಜೋ ಬೈಡೆನ್ ರವರ ಸರ್ಜನ್ ಜನರಲ್ ಆಯ್ಕೆ ಪ್ರಕ್ರಿಯೆಗೆ ಚುನಾವಣೆ ನಡೆದಿದ್ದು, ಯುಎಸ್ ಸೆನೆಟರ್ ಗಳು 57-43 ಮತ ಚಲಾಯಿಸುವ ಮೂಲಕ ಇಂಡಿಯನ್- ಅಮೆರಿಕನ್

ಅಮೇರಿಕಾದ ಸರ್ಜನ್ ಜನರಲ್ ಆಗಿ ಕರ್ನಾಟಕದ ವೈದ್ಯ ವಿವೇಕ್ ಮೂರ್ತಿ ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊರೋನಾ ಎರಡನೇ ಅಲೆ ಹಿನ್ನೆಲೆ ➤ ಮುಂಜಾಗ್ರತಾ ಕ್ರಮ ಪಾಲಿಸದವರ ವಿರುದ್ಧ ಕಾನೂನು ಕ್ರಮ- ಕಡಬ ತಹಶೀಲ್ದಾರ್ ಅನಂತ್ ಶಂಕರ್

(ನ್ಯೂಸ್ ಕಡಬ) newskadaba.com ಕಡಬ, ಮಾ. 24.‌ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕಾದುದು ಎಲ್ಲರ ಕರ್ತವ್ಯವಾಗಿದೆ. ಮುಂಜಾಗೃತಾ ಕ್ರಮ ಪಾಲಿಸದ ಮತ್ತು ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಡಬ ತಾಲೂಕು ಆಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕಡಬ ಪೇಟೆಯಲ್ಲಿ ಆಯೋಜಿಸಿದ್ದ ಕೊರೋನಾ ಜನಜಾಗೃತಿ ಜಾಥಾದಲ್ಲಿ ಕಡಬ ತಹಶೀಲ್ದಾರ್ ಅನಂತ ಶಂಕರ್ ಎಚ್ಚರಿಕೆ ನೀಡಿದ್ದಾರೆ.   ಬಳಿಕ ತಾ.ಪಂ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಮಾತನಾಡಿ, ಮುಂಜಾಗೃತಾ ಕ್ರಮಗಳನ್ನು ಪಾಲಿಸುವ ಮೂಲಕ

ಕೊರೋನಾ ಎರಡನೇ ಅಲೆ ಹಿನ್ನೆಲೆ ➤ ಮುಂಜಾಗ್ರತಾ ಕ್ರಮ ಪಾಲಿಸದವರ ವಿರುದ್ಧ ಕಾನೂನು ಕ್ರಮ- ಕಡಬ ತಹಶೀಲ್ದಾರ್ ಅನಂತ್ ಶಂಕರ್ Read More »

ಕರಾವಳಿ, ಕರ್ನಾಟಕ

? ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಜೀವನ್ಮರಣ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 24. 10 ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಳ್ತಂಗಡಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಳನ್ನು ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ದೇವಗಿರಿ ನಿವಾಸಿ ಬಿಜು ಎಂಬವರ ಮಗಳು ವಿನ್ಸಿ (20 ) ಎಂದು ಗುರುತಿಸಲಾಗಿದೆ. ಈಕೆ ಮಾ .14 ರಂದು ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿ, ತೀವ್ರ ಅಸ್ವಸ್ಥಗೊಂಡಿದ್ದು, ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ ನಡೆಸುತ್ತಿದ್ದ ಈಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

? ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಜೀವನ್ಮರಣ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಸ್ಕ್ ಧರಿಸದೆ ಇನ್ಮುಂದೆ ಯಾರೂ ಮನೆಯಿಂದ ಹೊರ ಬರಬೇಡಿ ➤ ದ.ಕ ಜಿಲ್ಲಾಧಿಕಾರಿ ಖಡಕ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 23. ಇನ್ಮುಂದೆ ಮಾಸ್ಕ್ ಧಾರಣೆ ಕಡ್ಡಾಯ, ನಿಯಮ ಮೀರಿದ್ದಲ್ಲಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ತೀವಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಕೊರೊನಾ 2ನೇ ಅಲೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗ್ತಿದೆ. ಇವತ್ತು ಸಾಂಕೇತಿಕವಾಗಿ ಡಿಸಿ, ಡಿಸಿಪಿ, ಆರೋಗ್ಯಾಧಿಕಾರಿ ಮೂಲಕ ಮಾಸ್ಕ್ ಕಾರ್ಯಾಚರಣೆ ಮಾಡಲಾಗಿದ್ದು, ಮಂಗಳೂರು ನಗರದಲ್ಲಿ ಮಾಸ್ಕ್ ಧರಿಸದವರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಮಾಸ್ಕ್ ಧರಿಸದೆ ಇನ್ಮುಂದೆ ಯಾರೂ ಮನೆಯಿಂದ ಹೊರ ಬರಬೇಡಿ ➤ ದ.ಕ ಜಿಲ್ಲಾಧಿಕಾರಿ ಖಡಕ್ ಆದೇಶ Read More »

ಕರಾವಳಿ, ಕರ್ನಾಟಕ
Scroll to Top