News Kadaba Desk

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಗೆ ಸ್ಕೂಟರ್ ಅಡ್ಡ ಇಟ್ಟು ನಿಂದಿಸಿ ಚಾಲಕನ ಕೊಲೆಗೆ ಯತ್ನ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 06. ಪುತ್ತೂರಿನಿಂದ ಮಂಗಳೂರು ಕಡೆಗೆ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಬಸ್ ಚಾಲಕರೋರ್ವರಿಗೆ ಪಡೀಲ್ ಎಂಬಲ್ಲಿ ಸ್ಕೂಟರ್ ಸವಾರನೊಬ್ಬ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ ಸ್ಕೂಟರ್ ಸವಾರನನ್ನು‌ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಸೊಹಿಫ್ ಎಂದು ಗುರುತಿಸಲಾಗಿದೆ. ಪುತ್ತೂರು ಡಿಪೋದ ಕೆಎಸ್ಆರ್​​​​ಟಿಸಿ ಬಸ್ ಚಾಲಕ ರಾಜು ಗಜಕೋಶ ಎಂಬವರು ಪುತ್ತೂರಿನಿಂದ ಮಂಗಳೂರು ಕಡೆಗೆ ಬಸ್​ ಚಲಾಯಿಸಿಕೊಂಡು ಹೋಗುತ್ತಿದ್ದ‌ ವೇಳೆ ಬಸ್ ಪಡೀಲ್ ಕಣ್ಣೂರು ತಲುಪುತ್ತಿದ್ದಂತೆಯೇ […]

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಗೆ ಸ್ಕೂಟರ್ ಅಡ್ಡ ಇಟ್ಟು ನಿಂದಿಸಿ ಚಾಲಕನ ಕೊಲೆಗೆ ಯತ್ನ ➤ ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಸುಬ್ರಹ್ಮಣ್ಯ: ಉಯ್ಯಾಲೆಯಲ್ಲಿ ಆಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಹಗ್ಗ ಬಿಗಿದು ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ. 06. ಹುಟ್ಟುಹಬ್ಬದ ದಿನದಂದೇ ಉಯ್ಯಾಲೆಯ ಹಗ್ಗಕ್ಕೆ ಸಿಲುಕಿ ದಾರುಣವಾಗಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಕಡಬ ತಾಲೂಕಿನ ಏನೆಕಲ್ಲಿನಲ್ಲಿ ಸಂಭವಿಸಿದೆ. ಮೃತಳನ್ನು ಯೇನೆಕಲ್ಲು ಗ್ರಾಮದ ಮುತ್ಲಾಜಡ್ಕ ಬಾಬು ಅಜಿಲ ಅವರ ಪುತ್ರಿ ಏನೆಕಲ್ಲು ಸರಕಾರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಶೃತಿ(11) ಎಂದು ಗುರುತಿಸಲಾಗಿದೆ. ಶುಕ್ರವಾರದಂದು ಈಕೆಯ ಹುಟ್ಟು ಹಬ್ಬವಾದುದರಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದು ಮದ್ಯಾಹ್ನದ ವೇಳೆ ಮನೆಯ ಪಕ್ಕದಲ್ಲಿದ್ದ ಪೇರಳೆ ಮರಕ್ಕೆ ಕಟ್ಟಲಾದ ಉಯ್ಯಾಲೆಯೊಂದರಲ್ಲಿ ಆಟವಾಡುತ್ತಿದ್ದ ಸಂದರ್ಭ ಉಯ್ಯಾಲೆಯ

? ಸುಬ್ರಹ್ಮಣ್ಯ: ಉಯ್ಯಾಲೆಯಲ್ಲಿ ಆಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಹಗ್ಗ ಬಿಗಿದು ಬಾಲಕಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಗುಡ್ಡಕ್ಕೆ ಬೆಂಕಿ ➤ ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 06. ಇಲ್ಲಿನ ಪನ್ನೆ ಎಂಬಲ್ಲಿ ಶುಕ್ರವಾರದಂದು ಸಂಜೆ ವೇಳೆ ಗುಡ್ಡೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಸ್ಥಳೀಯರು ಅಗ್ನಿಶಾಮಕ ದಳದವರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ಲೈನ್ ನಿಂದಾಗಿ ಬೆಂಕಿ ತಗುಲಿ ಗುಡ್ಡೆಗೆ ವ್ಯಾಪಿಸಿತ್ತು. ಈ ಹಿಂದೆಯೂ ಇದೇ ಸ್ಥಳದಲ್ಲಿ ಬೆಂಕಿ ಅವಘಡ ನಡೆದಿತ್ತು. ಈ ಕುರಿತು ವಿದ್ಯುತ್ ಲೈನ್ ಬದಲಾವಣೆ ಬಗ್ಗೆ ಮೆಸ್ಕಾಂಗೆ ತಿಳಿಸಿದ್ದರೂ ನಿರ್ಲಕ್ಷ್ಯ ವಹಿಸುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಬೆಳ್ಳಾರೆ: ಗುಡ್ಡಕ್ಕೆ ಬೆಂಕಿ ➤ ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಲಿಮಲೆ: ದೇವಚಳ್ಳ ಶಾಲೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಎಲಿಮಲೆ, ಮಾ. 05. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಮಾ. 05 ರಂದು ಎಲಿಮಲೆಯ ದೇವಚಳ್ಳ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಭೇಟಿ ನೀಡಿ ಇಲ್ಲಿ ನಡೆಯುತ್ತಿರುವ ಉತ್ತಮ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.   ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಂಭ್ರಮ ನಡೆಯಲಿರುವುದರಿಂದ ವಿಶೇಷ ಅನುದಾನ ಒದಗಿಸಬೇಕೆಂದು ಮನವಿ ಸಲ್ಲಿಸಲಾಯಿತು. ಖಂಡಿತವಾಗಿಯೂ ಅನುದಾನ ಕೊಡುತ್ತೇನೆ ಕಾರ್ಯಕ್ರಮಕ್ಕೆ ಆಮಂತ್ರಿಸಿ, ಬರುತ್ತೇನೆ ಎಂದು

ಎಲಿಮಲೆ: ದೇವಚಳ್ಳ ಶಾಲೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ Read More »

ಕರಾವಳಿ, ಕರ್ನಾಟಕ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರ ನೇಮಕಗೊಳಿಸಿ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ. 06. ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 9 ಮಂದಿಯ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಈ ಹಿಂದೆ ನೇಮಿಸಲಾಗಿದ್ದ ಅಭಿವೃದ್ಧಿ ಸಮಿತಿಯ ಕೆಲ ಸದಸ್ಯರನ್ನು ಉಳಿಸಿಕೊಂಡು ಹೊಸದಾಗಿ ನಾಲ್ಕು ಮಂದಿಯನ್ನು ಸೇರ್ಪಡೆಗೊಳಿಸಿ ಒಟ್ಟು 9 ಮಂದಿಯ ವ್ಯವಸ್ಥಾಪನಾ ಸಮಿತಿ ರಚಿಸಿ ಧಾರ್ಮಿಕ ಸಂಸ್ಥೆ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮಾ.5 ರಂದು ಆದೇಶ ಹೊರಡಿಸಿದ್ದಾರೆ. ಈ ಹಿಂದೆ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರ ನೇಮಕಗೊಳಿಸಿ ಸರಕಾರ ಆದೇಶ Read More »

ಕರಾವಳಿ, ಕರ್ನಾಟಕ

? ಮಂಗಳೂರು: ಗ್ರಾಹಕನ ಸೋಗಿನಲ್ಲಿ ಬಂದು ಉಂಗುರ ಹಿಡಿದುಕೊಂಡು ಓಟಕ್ಕಿತ್ತ ಖದೀಮ ➤ ಬೆನ್ನಟ್ಟಿ ಹಿಡಿದ ಶಾಪ್ ಮಾಲಕ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 05. ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳನೋರ್ವ ನಗರದ ಜ್ಯುವೆಲ್ಲರಿ ಶಾಪ್ ನಿಂದ ಹಾಡಹಗಲೇ ಉಂಗುರವೊಂದನ್ನು ಕಳವುಗೈದು ಓಡಿದ್ದು ಸ್ವತಃ ಜ್ಯುವೆಲ್ಲರಿ ಸಿಬಂದಿ ಮತ್ತು ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ. ಅರುಣ್ ಜಿ. ಶೇಟ್ ಎಂಬವರಿಗೆ ಸೇರಿದ ನಗರದ ಅರುಣ್ ಜಿ. ಶೇಟ್ ಜ್ಯುವೆಲ್ಲರಿ ಆ್ಯಂಡ್ ಡೈಮಂಡ್ ವರ್ಕ್ಸ್ ಶಾಪ್ ಗೆ ಗುರುವಾರ ಮಧ್ಯಾಹ 2 ಗಂಟೆಯ ವೇಳೆವೆ ಗ್ರಾಹಕರ ಸೋಗಿನಲ್ಲಿ ಬಂದ ಖದೀಮ, ಆಭರಣವನ್ನು ಖರೀದಿಸುವಂತೆ ನಟಿಸಿದ್ದು,

? ಮಂಗಳೂರು: ಗ್ರಾಹಕನ ಸೋಗಿನಲ್ಲಿ ಬಂದು ಉಂಗುರ ಹಿಡಿದುಕೊಂಡು ಓಟಕ್ಕಿತ್ತ ಖದೀಮ ➤ ಬೆನ್ನಟ್ಟಿ ಹಿಡಿದ ಶಾಪ್ ಮಾಲಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಈ ವರ್ಷದ ಹಜ್ ಗೆ ಅವಕಾಶ ➤ ಸೌದಿ ಆರೋಗ್ಯ ಸಚಿವಾಲಯ

(ನ್ಯೂಸ್ ಕಡಬ) newskadaba.com ರಿಯಾದ್, ಮಾ. 05. ಪ್ರಸಕ್ತ ವರ್ಷ ವಿದೇಶಗಳಿಂದ ಬರುವ ವಿದೇಶಿ ಯಾತ್ರಾರ್ಥಿಗಳಿಗೂ ಹಜ್ ನಿರ್ವಹಿಸಲು ಅವಕಾಶ ನೀಡಲಾಗುವುದು ಆದರೆ, ಕೋವಿಡ್ ಲಸಿಕೆ ಹಾಕಿಸಿಕೊಂಡರೆ ಮಾತ್ರ ಈ ವರ್ಷದ ಹಜ್ ನಿರ್ವಹಿಸಲು ಅವಕಾಶ ಎಂದು ಸೌದಿ ಆರೋಗ್ಯ ಸಚಿವಾಲಯ ವರದಿ ಪ್ರಕಟಿಸಿದೆ. ಕೋವಿಡ್ ನಡುವೆಯೂ ಹಜ್ ನಿರ್ವಹಣೆಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದ್ದು, ಈ ಬಾರಿಯೂ ಕೋವಿಡ್ ಭಯದ ಮಧ್ಯೆ ಹಜ್ ನಡೆಯಲಿದೆ. ಕಳೆದ ವರ್ಷ ಸೌದಿ ಅರೇಬಿಯಾದ ಒಳಗಿನ ಸುಮಾರು 1,000 ಜನರಿಗೆ ಮಾತ್ರ

? ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಈ ವರ್ಷದ ಹಜ್ ಗೆ ಅವಕಾಶ ➤ ಸೌದಿ ಆರೋಗ್ಯ ಸಚಿವಾಲಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಡ್ರಗ್ಸ್ ಜಾಲ ಪ್ರಕರಣ ➤ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ನಿವಾಸದ ಮೇಲೆ ಪೊಲೀಸ್ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 05. ಡ್ರಗ್ಸ್ ಜಾಲದಲ್ಲಿ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಸಂಜಯ್ ನಗರದಲ್ಲಿರುವ ಅವರ ನಿವಾಸದ ಮೇಲೆ ಬೆಂಗಳೂರು ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಮಸ್ತಾನ್ ಚಂದ್ರ ಅವರು ನಿರ್ದೇಶಕ, ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು, ಸಿತಾರ ಸೇರಿದಂತೆ ಹಲವಾರು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಅಲ್ಲದೇ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್‌ ಬಾಸ್ ಎಂಟ್ರಿ ಕೊಟ್ಟಿದ್ದರು. ಡ್ರಗ್ಸ್ ಜಾಲದಲ್ಲಿ

ಡ್ರಗ್ಸ್ ಜಾಲ ಪ್ರಕರಣ ➤ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ನಿವಾಸದ ಮೇಲೆ ಪೊಲೀಸ್ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಚಾಲಕಿಯ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು ➤ 7 ಬೈಕ್ ಗಳು ಜಖಂ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 05. ಚಾಲಕಿಯ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿದ ಪರಿಣಾಮ ರಸ್ತೆ ಬದಿಯಲ್ಲಿದ್ದ 7 ದ್ವಿಚಕ್ರ ವಾಹನಗಳು ನಜ್ಜುಗುಜ್ಜಾದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಿಂದ ಮಣಿಪಾಲದ ಕಡೆಗೆ ತೆರಳುತ್ತಿದ್ದ ಕಾರು ಲಕ್ಷ್ಮೀಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದ್ದು, ಈ ಸಂದರ್ಭದಲ್ಲಿ 7 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದೆ. ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪುರ್ಣವಾಗಿ ಕಂದಕಕ್ಕೆ ಉರುಳದೆ ವಾಲಿ ನಿಂತಿದೆ.

ಉಡುಪಿ: ಚಾಲಕಿಯ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು ➤ 7 ಬೈಕ್ ಗಳು ಜಖಂ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಡಮಂಗಲ: ದಲಿತ ಮಹಿಳೆಯೋರ್ವರ ಮನೆ ಧ್ವಂಸ ➤ ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆ ಆಗ್ರಹ

(ನ್ಯೂಸ್ ಕಡಬ) newskadaba.com ಎಡಮಂಗಲ, ಮಾ. 05. ದಲಿತ ಮಹಿಳೆಯೋರ್ವರಿಗೆ ಸೇರಿದ ಮನೆಯೊಂದನ್ನು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಧ್ವಂಸ ಮಾಡಿರುವ ಘಟನೆ ಎಡಮಂಗಲದಲ್ಲಿ ಬುಧವಾರದಂದು ನಡೆದಿದೆ. ಕಜೆತ್ತಡ್ಕದ ಬಾಲಕಿ ಎಂಬವರ ಮನೆಯನ್ನು ಹಾನಿ ಮಾಡಲಾಗಿದ್ದು, ಸೀಟು ಸಹಿತ ಮನೆಯ ವಸ್ತುಗಳನ್ನೆಲ್ಲ ಎಸೆಯುವ ಅಮಾನವೀಯ ದೃಶ್ಯವು ಮೊಬೈಲ್ ನಲ್ಲಿ ಸೆರೆಯಾಗಿದೆ. ಈ ಘಟಗೆ ಸಂಬಂಧಿಸಿ ಆರೋಪಿಗಳಾದ ವಿ ಶೆಟ್ಟಿ ಹಾಗೂ ವಿದ್ಯಾ ಸೇರಿದಂತೆ ನಾಲ್ವರ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಎಫ್. ಐ.ಆರ್ ದಾಖಲಾಗಿದೆ. ಬಾಲಕಿ ಎಂಬವರು ನೀಡಿದ

ಎಡಮಂಗಲ: ದಲಿತ ಮಹಿಳೆಯೋರ್ವರ ಮನೆ ಧ್ವಂಸ ➤ ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆ ಆಗ್ರಹ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top