News Kadaba Desk

ಮಂಗಳೂರು: ಲಂಚ ಸ್ವೀಕಾರ ಪ್ರಕರಣ ➤ ನಗರ ಸರ್ವೇಯರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,‌ ಫೆ. 24. ಲಂಚಕ್ಕಾಗಿ ಬೇಡಿಕೆ ಇಡುತ್ತಿದ್ದ ಆರೋಪದ ಮೇರೆಗೆ ಮಂಗಳೂರು ನಗರ ಸರ್ವೇಯರ್ ಗಂಗಾಧರ್ ಅವರನ್ನು ಎಸಿಬಿ ಅಧಿಕಾರಿಗಳ ಬಂಧಿಸಿದ್ದಾರೆ.. ನಗರದಲ್ಲಿ ಉದ್ಯಮಿಯೋರ್ವರು ತಮ್ಮ ಕಚೇರಿಗೆ ಪೀಠೋಪಕರಣ ಮಾಡಿಸಲೆಂದು ತಮ್ಮ ಮನೆಯ ಆವರಣದಲ್ಲಿದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿಗೆಂದು ಕೋರಿಕೆ ಪತ್ರ ಸಲ್ಲಿಸಿದ್ದು, ಮಂಗಳೂರು ನಗರ ಅರಣ್ಯ ಇಲಾಖೆಯು ಈ ಪತ್ರವನ್ನು ಕಂದಾಯ ಇಲಾಖೆಗೆ ಕಳುಹಿಸಿತ್ತು. ಒಂದು ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್, […]

ಮಂಗಳೂರು: ಲಂಚ ಸ್ವೀಕಾರ ಪ್ರಕರಣ ➤ ನಗರ ಸರ್ವೇಯರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಡ್ರಗ್ಸ್ ದಂಧೆ ಪ್ರಕರಣ ➤ ಬಿಜೆಪಿ ಮುಖಂಡ ಹಾಗೂ ಇಬ್ಬರು ಪುತ್ರರು ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಫೆ. 24. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ರಾಕೇಶ್ ಸಿಂಗ್ ಅವರನ್ನು ಮಂಗಳವಾರ ರಾತ್ರಿ ಪುರ್ಬಾ ಬರ್ಧಮಾನ್ ಜಿಲ್ಲೆಯ ಗಲ್ಸಿ ಎಂಬಲ್ಲಿ ಕೋಲ್ಕತ್ತಾ ಪೋಲೀಸರು ಬಂಧಿಸಿದ್ದಾರೆ. ಇದರ ಜೊತೆಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ರಾಕೇಶ್ ಸಿಂಗ್ ಅವರ ಇಬ್ಬರು ಪುತ್ರರನ್ನೂ ಬಂಧಿಸಲಾಗಿದೆ. ಇತ್ತೀಚೆಗೆ ಕೊಕೇನ್ ಸಾಗಿಸುತ್ತಿದ್ದ ವೇಳೆ ಬಂಧಿಸಲ್ಪಟ್ಟಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪಮೇಲಾ ಗೋಸ್ವಾಮಿಯನ್ನು ವಿಚಾರಿಸಿದ ವೇಳೆ ರಾಕೇಶ್ ಸಿಂಗ್ ಹೆಸರು ಬಹಿರಂಗಪಡಿಸಿದ್ದರು.

ಡ್ರಗ್ಸ್ ದಂಧೆ ಪ್ರಕರಣ ➤ ಬಿಜೆಪಿ ಮುಖಂಡ ಹಾಗೂ ಇಬ್ಬರು ಪುತ್ರರು ಪೊಲೀಸ್ ಬಲೆಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಚು ರೂಪಿಸುತ್ತಿದ್ದ ರೌಡಿ ಗ್ಯಾಂಗ್ ಮೇಲೆ ಸಿಸಿಬಿ ದಾಳಿ ➤ ನೆಲ್ಯಾಡಿಯ ವ್ಯಕ್ತಿ ಸೇರಿದಂತೆ 11 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 24. ತಾಲೂಕಿನ ಶಿಶಿಲ ಗ್ರಾಮದ ನಿವಾಸಿ ರೌಡಿ ಶೀಟರ್ ಕಿರಣ್ ಗೌಡ ಎಂಬಾತನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಇನ್ನೊಂದು ಗ್ಯಾಂಗಿನ ಮೇಲೆ ದಾಳಿ ನಡೆಸುವ ಕುರಿತು ಗುಂಪೊಂದು ಸಂಚು ರೂಪಿಸಿತ್ತು. ಇದರ ಖಚಿತ ಮಾಹಿತಿ ಪಡೆದ ಬೆಂಗಳೂರು ಸಿಸಿಬಿ ಪೊಲೀಸರು ಸಂಚುಕೋರರನ್ನು ಬೆನ್ನಟ್ಟಿ ಮಾರ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ. ಒಟ್ಟು 11 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಅದರಲ್ಲಿ ಓರ್ವ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ದೇವಸ

ಸಂಚು ರೂಪಿಸುತ್ತಿದ್ದ ರೌಡಿ ಗ್ಯಾಂಗ್ ಮೇಲೆ ಸಿಸಿಬಿ ದಾಳಿ ➤ ನೆಲ್ಯಾಡಿಯ ವ್ಯಕ್ತಿ ಸೇರಿದಂತೆ 11 ಮಂದಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇರಳ- ಕರ್ನಾಟಕ ಪ್ರಯಾಣ ನಿಷೇಧವಿಲ್ಲ, ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ➤ ಸಚಿವ ಸುಧಾಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 24. ಕರ್ನಾಟಕ ಮತ್ತು ಕೇರಳ ನಡುವಿನ ಅಂತರಾಜ್ಯ ಪ್ರಯಾಣ ನಿಷೇಧ ಮಾಡಿಲ್ಲ. ಆದರೆ ಪ್ರಯಾಣಿಸುವ 72 ಗಂಟೆಗೆ ಮೊದಲು(ಹಳೆಯದಲ್ಲ) ಕೋವಿಡ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಯನಾಡ್ ಜಿ.ಪಂ ಅಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಗಡಿಯಲ್ಲಿ ವಿಧಿಸಿರುವ ನಿರ್ಬಂಧ ತೆರವುಗೊಳಿಸಬೇಕು ಎಂದು ಆಗ್ರಹಿಸಿದ್ದರು. ಸರಕಾರದ ಆದೇಶದಿಂದಾಗಿ ದಕ್ಷಿಣ ಕನ್ನಡದ ತಲಪಾಡಿ ಮಾರ್ಗವಾಗಿ ಸಂಚಾರ

ಕೇರಳ- ಕರ್ನಾಟಕ ಪ್ರಯಾಣ ನಿಷೇಧವಿಲ್ಲ, ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ➤ ಸಚಿವ ಸುಧಾಕರ್ Read More »

ರಾಷ್ಟ್ರೀಯ ನ್ಯೂಸ್

ಕಡಬ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ➤ ಅದ್ದೂರಿ ಮೆರವಣಿಗೆ, ಧ್ವಜಾರೋಹಣ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ‌.24. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕಡಬ ತಾಲೂಕಿನ 2ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಸುಬ್ರಹ್ಮಣ್ಯ ವಲ್ಲೀಶ ಸಭಾಭವನದ ದಿ.ಪಟೇಲ್ ಕೂಜುಗೋಡು ನಾಗಪ್ಪ ಗೌಡ ವೇದಿಕೆಯಲ್ಲಿ ನಡೆಯುತ್ತಿದ್ದು, ಸಮ್ಮೇಳನಾಧ್ಯಕ್ಷ ಕೇಶವ ಭಟ್ ಅವರನ್ನು ಅದ್ಧೂರಿ ಮೆರವಣಿಗೆಯಲ್ಲಿ ಕರೆತರಲಾಯಿತು. ಬಳಿಕ ರಾಷ್ಟ್ರಧ್ವಜವನ್ನು ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಆರೋಹಣ ಮಾಡಿದರು. ಪರಿಷತ್ ಧ್ವಜವನ್ನು ಪ್ರದೀಪ್ ಕುಮಾರ ಕಲ್ಕೂರ ಹಾಗೂ ಸಮ್ಮೇಳನ ಧ್ವಜವನ್ನು ಜನಾರ್ದನ ಗೌಡ

ಕಡಬ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ➤ ಅದ್ದೂರಿ ಮೆರವಣಿಗೆ, ಧ್ವಜಾರೋಹಣ Read More »

ಕರಾವಳಿ

ಟ್ರೆಕ್ಕಿಂಗ್ ಹೋಗುವವರಿಗೆ ಬಿಗ್ ಶಾಕ್ ➤ ಮಾ. 01ರಿಂದ ಕುಮಾರಪರ್ವತ ಚಾರಣಕ್ಕೆ ನಿಷೇಧ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 24. ಮಾರ್ಚ್ ಒಂದರಿಂದ ಮುಂದಿನ ಆದೇಶದವರೆಗೆ ಕುಮಾರಪರ್ವತ ಚಾರಣವನ್ನು ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆ ಆದೇಶಿಸಿದೆ. ಪಶ್ಚಿಮಘಟ್ಟದ ಶೋಲಾ ಅರಣ್ಯಕ್ಕೆ ಬೇಸಿಗೆ ಕಾಲದಲ್ಲಿ ಬೆಂಕಿ ತಗುಲುವ ಹಿನ್ನೆಲೆ ಹಾಗೂ ಮಳೆಗಾಲದಲ್ಲಿ ಭೂ ಕುಸಿತವಾಗುವ ಕಾರಣಕ್ಕೆ ಕುಮಾರಪರ್ವತ ಚಾರಣವನ್ನು ಮುಂದಿನ ಮಳೆಗಾಲದ ಕೊಮೆಯವರೆಗೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಕುಮಾರ ಪರ್ವತವು ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳನ್ನು ಹಂಚಿಕೊಂಡಿದೆ. ಈ ತಾಣವು ಸಮುದ್ರಮಟ್ಟದಿಂದ 1,712 ಮೀಟರ್ ಎತ್ತರದಲ್ಲಿದೆ. ಇಲ್ಲಿಂದ ಕುಕ್ಕೆ ಸುಬ್ರಹ್ಮಣ್ಯ ತಲುಪಿದರೆ

ಟ್ರೆಕ್ಕಿಂಗ್ ಹೋಗುವವರಿಗೆ ಬಿಗ್ ಶಾಕ್ ➤ ಮಾ. 01ರಿಂದ ಕುಮಾರಪರ್ವತ ಚಾರಣಕ್ಕೆ ನಿಷೇಧ Read More »

ಕರಾವಳಿ

ಕಡಬ: ನಾಳೆ (ಫೆ. 24) ನಡೆಯಲಿರುವ ತಾಲೂಕು ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಸಮ್ಯಕ್ತ್ ಜೈನ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 23.‌ ತಾಲೂಕಿನ ಎರಡನೇ ಸಾಹಿತ್ಯ ಸಮ್ಮೇಳನವು ಫೆ.24 ರಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಲಿದ್ದು, ಈ ಸಮ್ಮೇಳನದ ಕವಿಗೋಷ್ಠಿಗಾಗಿ ನೂಜಿಬಾಳ್ತಿಲದ ಯುವ ಸಾಹಿತಿ ಸಮ್ಯಕ್ತ್ ಜೈನ್ ರವರು ಆಯ್ಕೆಯಾಗಿದ್ದಾರೆ. ಸಾಫಿಯೆನ್ಶಿಯಾ ಬೆಥನಿ ಕಾಲೇಜು ನೆಲ್ಯಾಡಿಯಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ಪಡೆಯುತ್ತಿರುವ ಇವರು ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಹಾಗು ಮಂಜುಳಾ ದಂಪತಿಯ ಸುಪುತ್ರ. ಎಳೆ ವಯಸ್ಸಿನಲ್ಲಿಯೇ ಮೂರು ಸಾಹಿತ್ಯ ಕೃತಿ ಬರೆದು ಬಿಡುಗಡೆಗೊಳಿಸಿ ಸಾಹಿತ್ಯ ಕ್ಷೇತ್ರದಲ್ಲಿ ಮುಂದುವರೆಯುತ್ತಿದ್ದಾರೆ.

ಕಡಬ: ನಾಳೆ (ಫೆ. 24) ನಡೆಯಲಿರುವ ತಾಲೂಕು ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಸಮ್ಯಕ್ತ್ ಜೈನ್ ಆಯ್ಕೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ಟಿಪ್ಪರ್ ಹಾಗೂ ಸಿಹಿತಿಂಡಿ ಸಾಗಾಟದ ಓಮ್ನಿ ನಡುವೆ ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.23. ಮಾರುತಿ ಓಮ್ನಿ ಕಾರು ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಮುಕ್ರಂಪಾಡಿಯಲ್ಲಿ ಮಂಗಳವಾರದಂದು ನಡೆದಿದೆ. ಪುತ್ತೂರಿನಿಂದ ಮುಕ್ರಂಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಹಾಗೂ ಸಿಹಿತಿಂಡಿ ಸಾಗಾಟದ ಓಮ್ನಿ ಕಾಎಉ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಪುತ್ತೂರು: ಟಿಪ್ಪರ್ ಹಾಗೂ ಸಿಹಿತಿಂಡಿ ಸಾಗಾಟದ ಓಮ್ನಿ ನಡುವೆ ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ

ಕಡಬ: ಕೋಟೆಸಾರು ಹೊಳೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ ➤ ಸ್ವತಃ ನೀರಿಗಿಳಿದು ಮೃತದೇಹ ಮೇಲಕ್ಕೆತ್ತಿದ ಕಡಬ ಎಸ್ಐ ರುಕ್ಮನಾಯ್ಕ್

(ನ್ಯೂಸ್ ಕಡಬ) newskadaba.com ಕಡಬ, ಫೆ.23. ಠಾಣಾ ವ್ಯಾಪ್ತಿಯ ಬಿಳಿನೆಲೆ ಗ್ರಾಮದ ಕೈಕಂಬ ಸಮೀಪದ ಕೋಟೆಸಾರು ಹೊಳೆಯಲ್ಲಿ ಸುಮಾರು 65 ರಿಂದ 70 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಮೃತದೇಹವೊಂದು ಮಂಗಳವಾರದಂದು ಪತ್ತೆಯಾಗಿದೆ.   ಮಂಗಳವಾರದಂದು ಕೈಕಂಬದ ಕೋಟೆಸಾರು ಹೊಳೆಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ಕಂಡು ಬಂದಿದೆ. ಮೃತದೇಹದ ಸಮೀಪ ಮೃತರು ಧರಿಸಿದ ಚಪ್ಪಲ್ ಹಾಗೂ ಕೈಯಲ್ಲಿ ಕನ್ನಡಕ ಇದ್ದು, ಮೃತರು ಇಂದು ಬೆಳಿಗ್ಗೆ ಯಾವುದೋ ಕಾರಣಕ್ಕಾಗಿ ಹೊಳೆಗೆ ಇಳಿದ ವೇಳೆ ಕಾಲು ಜಾರಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.

ಕಡಬ: ಕೋಟೆಸಾರು ಹೊಳೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ ➤ ಸ್ವತಃ ನೀರಿಗಿಳಿದು ಮೃತದೇಹ ಮೇಲಕ್ಕೆತ್ತಿದ ಕಡಬ ಎಸ್ಐ ರುಕ್ಮನಾಯ್ಕ್ Read More »

ಕರಾವಳಿ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ➤ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಬಸ್ ಚಾಲಕ, ನಿರ್ವಾಹಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.23. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಸ್ ಚಾಲಕ ಮತ್ತು ನಿರ್ವಾಹಕ ಸೇರಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಮಂಗಳವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಪೊಲೀಸರ ವಶದಲ್ಲಿರುವ ಯುವಕನನ್ನು ಚಿಕ್ಕಮಗಳೂರು ನಿವಾಸಿ ಮುಹಮ್ಮದ್ ಸೈಫುಲ್ಲಾ ಎಂದು ಗುರುತಿಸಲಾಗಿದೆ. ಆರೋಪಿಯು ಮಂಗಳವಾರ ಬೆಳಗ್ಗೆ ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ವಿದ್ಯಾರ್ಥಿನಿಯ ಮೈ ಮುಟ್ಟಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯು ಬಸ್ ಚಾಲಕ, ನಿರ್ವಾಹಕರಲ್ಲಿ ಈ ವಿಚಾರ ತಿಳಿಸಿದ್ದು, ತಕ್ಷಣವೇ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ➤ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಬಸ್ ಚಾಲಕ, ನಿರ್ವಾಹಕ Read More »

ಕರಾವಳಿ
Scroll to Top