News Kadaba Desk

ಧೈರ್ಯಕ್ಕೆ ಮತ್ತೊಂದು ಹೆಸರೇ ಛತ್ರಪತಿ ಶಿವಾಜಿ ➤ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಧೈರ್ಯಕ್ಕೆ ಮತ್ತೊಂದು ಹೆಸರು ಛತ್ರಪತಿ ಶಿವಾಜಿಯವರದ್ದು, ಇವರು ಒಬ್ಬ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ ಇವರ  ದೇಶಪ್ರೇಮ ಯುವಜನತೆಯಲ್ಲಿ ಮೂಡಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಛತ್ರಪತಿ ಶಿವಾಜಿ ಮತ್ತು ಸವಿತಾ ಮಹರ್ಷಿ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶಪ್ರೇಮ, ತ್ಯಾಗ, ಬಲಿದಾನಕ್ಕೆ ಛತ್ರಪತಿ ಶಿವಾಜಿಯವರು ಹೆಸರುವಾಸಿಯಾಗಿದ್ದು, ಇಂದಿಗೂ ಭಾರತ ಅವರನ್ನು ಸ್ಮರಿಸಿಕೊಳ್ಳುತ್ತಿದೆ. ಭಾರತದ ಚರಿತ್ರೆಯಲ್ಲಿಯೇ ನಿಲ್ಲುವಂತಹ ಕಾರ್ಯಗಳನ್ನು ಮಾಡಿದ್ದಾರೆ. […]

ಧೈರ್ಯಕ್ಕೆ ಮತ್ತೊಂದು ಹೆಸರೇ ಛತ್ರಪತಿ ಶಿವಾಜಿ ➤ ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ

ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಮಾ. 15ರಂದು ಚುನಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. ವಿಧಾನ ಪರಿಷತ್ ನ ಉಪ ಸಭಾಪತಿಯಾಗಿದ್ದ ದಿ/ ಎಸ್.ಎಲ್ ಧರ್ಮೇಗೌಡ ಅವರ ನಿಧನದಿಂದಾಗಿ ತೆರವಾಗಿದ್ದ ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಮಾ. 15ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉಪಚುನಾವಣೆಗೆ ಅಧಿಸೂಚನೆಯನ್ನು ಫೆ. 25ರಂದು ನೀಡಲಾಗುವುದು. ಇದಕ್ಕೆ ನಾಮಪತ್ರ ಸಲ್ಲಿಸಲು ಮಾ. 04 ಕೊನೆಯ ದಿನ ಹಾಗೂ ನಾಮಪತ್ರ ಹಿಂಪಡೆಯಲು ಮಾ. 08 ಕೊನೆಯ ದಿನವೆಂದು ಆಯೋಗ ತಿಳಿಸಿದೆ.

ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಮಾ. 15ರಂದು ಚುನಾವಣೆ Read More »

ಕರ್ನಾಟಕ

? ರಾಷ್ಟ್ರ ರಾಜಧಾನಿಯಲ್ಲಿ ಪ್ರತೀ ಐದು ಗಂಟೆಗೊಮ್ಮೆ ಅತ್ಯಾಚಾರ ಪ್ರಕರಣ ದಾಖಲು ➤ ಆತಂಕಕಾರಿ ಅಂಶವನ್ನು ಬಿಡುಗಡೆಗೊಳಿಸಿದ ದಿಲ್ಲಿ ಪೊಲೀಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ರಾಷ್ಟ್ರ ರಾಜಧಾನಿಯಾದ ದೆಹಲಿಯಲ್ಲಿ ಪ್ರತೀ ಐದು ಗಂಟೆಗೊಂದು ಅತ್ಯಾಚಾರ, 19 ಗಂಟೆಗೊಂದು ಕೊಲೆ, 15 ನಿಮಿಷಕ್ಕೊಂದು ಕಾರು ಕಳ್ಳತನ, ಗಂಟೆಗೊಂದು ಸರಗಳ್ಳತನ ನಡೆಯುತ್ತಿದೆ ಎಂಬ ಆತಂಕಕಾರಿ ಅಂಕಿ ಅಂಸವನ್ನು ದಿಲ್ಲಿ ಪೊಲೀಸರು ಬಹಿರಂಗಗೊಳಿಸಿದ್ದಾರೆ. 2019ರಲ್ಲಿ ನಾಲ್ಕು ಗಂಟೆಗೊಂದು ಅತ್ಯಾಚಾರ, 17 ಗಂಟೆಗೊಂದು ಹತ್ಯೆ ಮತ್ತು 12 ನಿಮಿಷಕ್ಕೊಂದು ವಾಹನ ಕಳ್ಳತನ ನಡೆಯುತ್ತಿತ್ತು. ಆದರೆ ಸರಗಳ್ಳತನ ಪ್ರಕರಣಗಳು 2019ರಲ್ಲಿ ದಿನಕ್ಕೆ ಸರಾಸರಿ 17 ವರದಿಯಾದರೆ, ಇದೀಗ ಪ್ರತಿದಿನ ಸರಾಸರಿ 24

? ರಾಷ್ಟ್ರ ರಾಜಧಾನಿಯಲ್ಲಿ ಪ್ರತೀ ಐದು ಗಂಟೆಗೊಮ್ಮೆ ಅತ್ಯಾಚಾರ ಪ್ರಕರಣ ದಾಖಲು ➤ ಆತಂಕಕಾರಿ ಅಂಶವನ್ನು ಬಿಡುಗಡೆಗೊಳಿಸಿದ ದಿಲ್ಲಿ ಪೊಲೀಸ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಮಂಗಳೂರು: ಟ್ರೋಲಿ ಬ್ಯಾಗ್ ನ ಚಕ್ರಗಳಲ್ಲಿ ಅಕ್ರಮ ಚಿನ್ನ ಸಾಗಾಟ ➤ 19 ಲಕ್ಷ ರೂ. ಮೌಲ್ಯದ 402 ಗ್ರಾಂ ಚಿನ್ನ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ವಿದೇಶದಿಂದ ಬರುವ ಪ್ರಯಾಣಿಕರು ವಿವಿಧ ರೀತಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದು, ಇದೀಗ ಟ್ರಾಲಿ ಬ್ಯಾಗ್ ನ ಚಕ್ರಗಳಲ್ಲೂ ಚಿನ್ನ ಸಾಗಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಶುಕ್ರವಾರದಂದು ದುಬೈನಿಂದ ಆಗಮಿಸಿದ ಕಾಸರಗೋಡು ನಿವಾಸಿ ಶೇಕ್ ಹನೀಫ್ ಅವರನ್ನು ಅಕ್ರಮ ಸಾಗಾಟ ಮಾಡುತ್ತಿದ್ದ 402 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಟ್ರಾಲಿ ಬ್ಯಾಗ್ ನ ಚಕ್ರಗಳಲ್ಲಿ ಹಾಗೂ ವ್ಯಾಕ್ಯೂಮ್ ಕ್ಲೀನರ್ ನ ಪ್ಲೇಟ್ ಗಳಲ್ಲಿ ಪಾದರಸ ಲೇಪಿತ ಚಿನ್ನವನ್ನು

? ಮಂಗಳೂರು: ಟ್ರೋಲಿ ಬ್ಯಾಗ್ ನ ಚಕ್ರಗಳಲ್ಲಿ ಅಕ್ರಮ ಚಿನ್ನ ಸಾಗಾಟ ➤ 19 ಲಕ್ಷ ರೂ. ಮೌಲ್ಯದ 402 ಗ್ರಾಂ ಚಿನ್ನ ಪತ್ತೆ Read More »

ಕರಾವಳಿ, ಕರ್ನಾಟಕ

ಕಡಬ: ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 20. ವ್ಯಕ್ತಿಯೋರ್ವ ನಾಪತ್ತೆಯಾದ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರನ್ನು ಕಡಬ ನಿವಾಸಿ ಸಂಶುದ್ದೀನ್(27) ಎಂದು ಗುರುತಿಸಲಾಗಿದೆ. ಇವರು ಫೆಬ್ರವರಿ 13 ರಂದು ಕಾಣೆಯಾಗಿದ್ದಾರೆ. ಕಾಣೆಯಾದ ವ್ಯಕ್ತಿಯು ಸುಮಾರು 5.4 ಅಡಿ ಎತ್ತರವಿದ್ದು, ಸಪೂರ ಶರೀರ ಹೊಂದಿದ್ದಾರೆ. ನೀಲಿ ಬಣ್ಣದ ನೈಟ್ ಪ್ಯಾಂಟ್, ಲೈಟ್ ಪಿಂಕ್ ಟೀ ಶರ್ಟ್ ಧರಿಸಿರುತ್ತಾರೆ. ವ್ಯಕ್ತಿಯು ಕನ್ನಡ ಹಾಗೂ ತುಳು ಭಾಷೆಯನ್ನು ಮಾತನಾಡುತ್ತಾರೆ. ಕಾಣೆಯಾದ ದಿನ KA-19-HE-2931 Honda Activa ಮೋಟಾರ್

ಕಡಬ: ಯುವಕ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಡಾ. ಕುಮಾರ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿ ಡಾ. ಕುಮಾರ್ ಅವರು ಶುಕ್ರವಾರದಂದು ಅಧಿಕಾರ ವಹಿಸಿಕೊಂಡರು. ಅವರು ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ 2018ರ ಮಾರ್ಚ್ 21 ರಿಂದ 2018 ರ ಜೂನ್ 26 ರವರೆಗೆ ಹಾಗೂ 2019ರ ಫೆಬ್ರವರಿ 15 ರಿಂದ 2021ರ ಫೆಬ್ರವರಿ 17 ರವರೆಗೆ ಕಾರ್ಯನಿರ್ವಹಿಸುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸಹ 2015ರ ಆಗಸ್ಟ್ 12 ರಿಂದ 2018ರ

ದ.ಕ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಡಾ. ಕುಮಾರ್ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ ಕುಕ್ಕೇ ದೇವಳದಲ್ಲಿ ಪ್ರತೀ ತಿಂಗಳಿಗೊಮ್ಮೆ ಸಾಮೂಹಿಕ ವಿವಾಹ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 20. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಪ್ರತೀ ತಿಂಗಳಿಗೊಮ್ಮೆ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 2021 ನೇ ಸಾಲಿನ ಮಾ.31, ಎ.25, ಮೇ.21, ಜೂ.27 ಹಾಗೂ ಜು.07ರಂದು ಸರಳ ಸಾಮೂಹಿಕ ವಿವಾಹವು ಬೆಳಗ್ಗೆ ಅಭಿಜಿನ್ ಲಗ್ನ ಸುಮೂಹೂರ್ತದಲ್ಲಿ ಸಂಪ್ರದಾಯಗಳಿಗೆ ಅನುಗುಣವಾಗಿ ನೆರವೇರಲಿದೆ ಎಂದು ಶ್ರೀ ದೇವಳದ ಆಡಳಿತಾಧಿಕಾರಿ ಹಾಗೂ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.

ಸುಬ್ರಹ್ಮಣ್ಯ ಕುಕ್ಕೇ ದೇವಳದಲ್ಲಿ ಪ್ರತೀ ತಿಂಗಳಿಗೊಮ್ಮೆ ಸಾಮೂಹಿಕ ವಿವಾಹ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ದಿಶಾರವಿ ಬಂಧನ ವಿರೋಧಿಸಿ NWF ವತಿಯಿಂದ ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆ ➤ ಶೀಘ್ರ ಬಿಡುಗಡೆಗೆ ಒತ್ತಾಯಿಸಿ ಉಪತಹಶೀಲ್ದಾರ್ ಮೂಲಕ ಮನವಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 20. ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಸ್ವೀಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ ಬರ್ಗ್ ಟೂಲ್‌ ಕಿಟ್ ವಿಚಾರವಾಗಿ ಕರ್ನಾಟಕದ ಯುವ ಪರಿಸರ ಹೋರಾಟಗಾರ್ತಿ ದಿಶಾ ರವಿಯವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಉಪ್ಪಿನಂಗಡಿ ನ್ಯಾಷನಲ್ ವುಮೆನ್ಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಉಪ್ಪಿನಂಗಡಿ ನಾಡ ಕಚೇರಿ ಮುಂಭಾಗದಲ್ಲಿ ಭಿತ್ತಿ ಪತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ NWF ಉಪ್ಪಿನಂಗಡಿ ವಲಯಾಧ್ಯಕ್ಷೆ ಮುಮ್ತಾಜ್ ಮಾತನಾಡಿ, ದೇಶದಾದ್ಯಂತ ನ್ಯಾಯಪರ

ಉಪ್ಪಿನಂಗಡಿ: ದಿಶಾರವಿ ಬಂಧನ ವಿರೋಧಿಸಿ NWF ವತಿಯಿಂದ ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆ ➤ ಶೀಘ್ರ ಬಿಡುಗಡೆಗೆ ಒತ್ತಾಯಿಸಿ ಉಪತಹಶೀಲ್ದಾರ್ ಮೂಲಕ ಮನವಿ Read More »

ಕರಾವಳಿ, ಕರ್ನಾಟಕ

ಶ್ವಾಸಕೋಶದ ತೊಂದರೆಯಿಂದಾಗಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ವಿವಾದಿತ ಬಿಜೆಪಿ ಸಂಸದೆ, ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಸದರ ಕಚೇರಿಯು ಅಧಿಕೃತ ಮಾಹಿತಿ ಹೊರಡಿಸಿದೆ. ಇವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಇವರಿಗೆ ಡಿಸೆಂಬರ್ ನಲ್ಲಿ ಕೋವಿಡ್ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶ್ವಾಸಕೋಶದ ತೊಂದರೆಯಿಂದಾಗಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರಿನಲ್ಲಿ ಕೋಕೇನ್ ಸಾಗಾಟ ➤ ಬಿಜೆಪಿ ನಾಯಕಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪಶ್ಚಿಮ ಬಂಗಾಳ, ಫೆ. 20. ಬಿಜೆಪಿಯ ಯುವ ನಾಯಕಿ ಪಮೇಲಾ ಗೋಸ್ವಾಮಿ ಅವರನ್ನು ಕಾರಿನಲ್ಲಿ ಕೊಕೇನ್(ಮಾದಕ ದ್ರವ್ಯ) ಸಾಗಿಸುತ್ತಿದ್ದ ಆರೋಪದಡಿ ಪೊಲೀಸರು ಶುಕ್ರವಾರದಂದು ಬಂಧಿಸಿದ್ದಾರೆ. ಬಿಜೆಪಿ ಯುವ ನಾಯಕಿಯಾಗಿರುವ ಪಮೇಲಾ ಗೋಸ್ವಾಮಿ ಮತ್ತು ಅವರ ಸ್ನೇಹಿತ ಪ್ರೋಬೀರ್‌ ಕುಮಾರ್‌ ಡೇ ಅವರನ್ನು ಕಲ್ಕತ್ತಾದ ನ್ಯೂ ಅಲಿಪುರ್‌ ಪ್ರದೇಶದ ಎನ್‌.ಆರ್‌ ಅವೆನ್ಯೂ ಎಂಬಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಅವರು ತಮ್ಮ ಕಾರಿನಲ್ಲಿ ಕೊಕೇನ್ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಕೋಕೇನ್ ಸಾಗಾಟ ➤ ಬಿಜೆಪಿ ನಾಯಕಿ ಅರೆಸ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top