News Kadaba Desk

? ಆಟವಾಡುತ್ತಿದ್ದ ವೇಳೆ ಅಡಿಕೆ ನುಂಗಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ತೀರ್ಥಹಳ್ಳಿ, ಫೆ. 06. ಮನೆಯಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಹಸುಗೂಸೊಂದು ಅಡಿಕೆ ನುಂಗಿ ಮೃತಪಟ್ಟ ಘಟನೆ ತಾಲೂಕಿನ ಹೆದ್ದೂರು ಗ್ರಾಮದಲ್ಲಿ ನಡೆದಿದೆ. ಅರ್ಚನಾ ಹಾಗೂ ಸಂದೇಶ್ ದಂಪತಿಯ ಎಂಬ ಒಂದು ವರ್ಷದ ಶ್ರೀಹಾನ್ ಮೃತಪಟ್ಟ ಮಗು. ಮಗುವು ಆಟವಾಡುತ್ತಿದ್ದ ವೇಳೆ ಅಂಗಳದಲ್ಲಿದ್ದ ಅಡಿಕೆ ನುಂಗಿ ಉಸಿರುಗಟ್ಟಿ ಮೃತಪಟ್ಟಿದೆ. ಅಡಿಕೆ ನುಂಗಿದ ತಕ್ಷಣವೇ ಮಗುವನ್ನ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಆಸ್ಪತ್ರೆಯಲ್ಲೇ ಅಸುನೀಗಿದೆ. ಮಗುವಿನ ಅಗಲಿಕೆಯಿಂದ ಕುಟುಂಬಸ್ಥರ ಆಕ್ರಂದನ […]

? ಆಟವಾಡುತ್ತಿದ್ದ ವೇಳೆ ಅಡಿಕೆ ನುಂಗಿ ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೂಜಿಬಾಳ್ತಿಲ: ಯುವಸಾಹಿತಿ ಸಮ್ಯಕ್ತ್ ಜೈನ್ ಹಾಗೂ ದಿನೇಶ್ ರೈ ಅವರಿಗೆ ಕನ್ವರೆ ಸಾರಿಮಂಟಮೆಯಲ್ಲಿ ಸನ್ಮಾನ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಫೆ. 06. ನೂಜಿಬಾಳ್ತಿಲ ಗ್ರಾಮದ ಕನ್ವರೆ ಸಾರಿಮಂಟಮೆಯಲ್ಲಿ ಶ್ರೀರಾಜನ್ ದೈವದ ವಾರ್ಷಿಕ ನೇಮೋತ್ಸವವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಂತೆ ಅದ್ದೂರಿಯಿಂದ ಭಕ್ತರ ಸಮ್ಮುಖದಲ್ಲಿ ನೆರವೇರಿತು. ಈ ವೇಳೆ ಉದಯೋನ್ಮುಖ ಯುವ ಸಾಹಿತಿ ಸಮ್ಯಕ್ತ್ ಜೈನ್ ರವರನ್ನು ಹಾಗೂ ಯಕ್ಷಕಲಾವಿದ ದಿನೇಶ್ ರೈ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ನೂಜಿಬಾಳ್ತಿಲ: ಯುವಸಾಹಿತಿ ಸಮ್ಯಕ್ತ್ ಜೈನ್ ಹಾಗೂ ದಿನೇಶ್ ರೈ ಅವರಿಗೆ ಕನ್ವರೆ ಸಾರಿಮಂಟಮೆಯಲ್ಲಿ ಸನ್ಮಾನ Read More »

ಕರಾವಳಿ, ಕರ್ನಾಟಕ

ವಿಟ್ಲ: ಟಿಪ್ಪರ್ ಹಾಗೂ ಓಮ್ನಿ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 06. ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ವಿಟ್ಲ- ಪುತ್ತೂರು ರಸ್ತೆಯ ಕಲ್ಲಕಟ್ಟ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಓಮ್ನಿ ಚಾಲಕ ಸುದರ್ಶನ ಶರ್ಮಾ ಮತ್ತು ಅವರ ತಂದೆ ಗಣಪತಿ ಭಟ್ ಎಂದು ಗುರುತಿಸಲಾಗಿದೆ. ಇವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು ವಾಹನಗಳನ್ನು ವಶಪಡಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

ವಿಟ್ಲ: ಟಿಪ್ಪರ್ ಹಾಗೂ ಓಮ್ನಿ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಉಡುಪಿ: ನಿಯಂತ್ರಣ ತಪ್ಪಿ ಮನೆಗೆ ಢಿಕ್ಕಿ ಹೊಡೆದ ಕಾರು…! ➤ ಮನೆಗೋಡೆ ಕುಸಿತ, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 06. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಹಿರಿಯಡ್ಕದ ಕೊಂಡಾಡಿಯ ಭಜನೆಕಟ್ಟೆ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಹರಿಣ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈ ಘಟನೆಯ ವೇಳೆ ಅಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರಿಗೂ ಗಾಯವಾಗಿದೆ. ಹರಿಣ್ ಶೆಟ್ಟಿ ಎಂಬವರು ಕಾರ್ಕಳದಿಂದ ಉಡುಪಿ ಕಡೆಗೆ ಬರುತ್ತಿದ್ದು, ಹಿರಿಯಡ್ಕದ ಕೊಂಡಾಡಿಯ ಭಜನೆಕಟ್ಟೆ ಸಮೀಪ ತಲುಪುತ್ತಿದ್ದಂತೆಯೇ ಕಾರು ಚಾಲಕನ ನಿಯಂತ್ರಣ ತಪ್ಪಿ

? ಉಡುಪಿ: ನಿಯಂತ್ರಣ ತಪ್ಪಿ ಮನೆಗೆ ಢಿಕ್ಕಿ ಹೊಡೆದ ಕಾರು…! ➤ ಮನೆಗೋಡೆ ಕುಸಿತ, ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಶಕ್ತಿ ಶಿಕ್ಷಣ ಸಂಸ್ಥೆಯಿಂದ ನಿಧಿ ಸಮರ್ಪಣೆ

(ನ್ಯೂಸ್ ಕಡಬ) newsladaba.com ಮಂಗಳೂರು, ಫೆ. 06. ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ಅಯೋಧ್ಯಯಲ್ಲಿ ನಿರ್ಮಾಣವಾಗಲಿರುವ ಶ್ರೀ ರಾಮ ಮಂದಿರದ ನಿರ್ಮಾಣಕ್ಕೆ ನಿಧಿ ಸಮರ್ಪಣೆಯನ್ನು ಶ್ರೀ ಗೋಪಾಲಕೃಷ್ಣ ದೇವರಿಗೆ ಪೂಜೆ ಸಲ್ಲಿಸಿ ಅಯೋಧ್ಯ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಗೆ ಸಮರ್ಪಿಸಲಾಯಿತು.   ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಸಿ.ಪಿ ಕಾಮತ್, ಶಕ್ತಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಡಾ. ಕೆ.ಸಿ ನಾಯಕ್, ಶಕ್ತಿ ಶಿಕ್ಷಣ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಶಕ್ತಿ ಶಿಕ್ಷಣ ಸಂಸ್ಥೆಯಿಂದ ನಿಧಿ ಸಮರ್ಪಣೆ Read More »

ಕರಾವಳಿ, ಕರ್ನಾಟಕ

ರಕ್ತದಾನದಿಂದ ಭಾತೃತ್ರ ವೃದ್ದಿಸುತ್ತದೆ ➤ ಡಾ. ರಾಜೇಂದ್ರ ಪ್ರಸಾದ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ರಕ್ತದಾನ ಶ್ರೇಷ್ಠದಾನ. ರಕ್ತಕ್ಕೆ ಪರ್ಯಾಯವಾದ ವಸ್ತು ಇನ್ನೊಂದಿಲ್ಲ. ರಕ್ತದಾನದಿಂದಲೇ ರಕ್ತದ ಕೊರತೆಯನ್ನು ನೀಗಿಸಲು ಸಾದ್ಯವಾಗುತ್ತದೆ. ಈ ಕಾರಣದಿಂದ ಪ್ರತಿಯೊಬ್ಬರೂ ನಿಯಮಿತವಾಗಿ ರಕ್ತದಾನ ಮಾಡಬೇಕು, ರಕ್ತದಾನದಿಂದ ವೈದ್ಯರ ಕೆಲಸ ಸುಲಭವಾಗುತ್ತದೆ. ರಕ್ತದಾನದಿಂದ ಸಹೋದರತ್ವ ವೃದ್ದಿಸಿ ಭಾತೃತ್ವ ವೃದ್ದಿಸುತ್ತದೆ. ಕೋವಿಡ್ ಸಂಕಷ್ಟದ ದಿನಗಳಲ್ಲಿ ರಕ್ತದ ಕೃತಕ ಅಭಾವ ಉಂಟಾಗಿದ್ದು, ಎಲ್ಲರೂ ರಕ್ತದಾನ ಮಾಡುವುದರ ಮುಖಾಂತರ ಈ ಕೊರತೆಯನ್ನು ನೀಗಿಸಬಹುದು ಎಂದು ಮಂಗಳೂರು ಹವ್ಯಕ ಮಹಾಸಭಾದ ಉಪಾಧ್ಯಕ್ಷರಾದ ಡಾ|| ರಾಜೇಂದ್ರ ಪ್ರಸಾದ್ ಅವರು

ರಕ್ತದಾನದಿಂದ ಭಾತೃತ್ರ ವೃದ್ದಿಸುತ್ತದೆ ➤ ಡಾ. ರಾಜೇಂದ್ರ ಪ್ರಸಾದ್ Read More »

ಕರಾವಳಿ, ಕರ್ನಾಟಕ

ನೂಜಿಬಾಳ್ತಿಲ: ಕನ್ವಾರೆಯಲ್ಲಿ ಶ್ರೀರಾಜನ್ ದೈವದ ನೇಮೋತ್ಸವ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಫೆ. 06. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಾಳ್ತಿಲ-ಕನ್ವಾರೆ ಸಾರಿಮಂಟಮೆ ಶ್ರೀ ರಾಜನ್ ದೈವಸ್ಥಾನದಲ್ಲಿ ನೇಮೋತ್ಸವ ಗುರುವಾರದಂದು ಜರುಗಿತು. ಬುಧವಾರ ಬೆಳಗ್ಗೆ ಸಾರಿಮಂಟಮೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನಡೆದು ಮದ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಬಾಳ್ತಿಲ ಚಾವಡಿಯಿಂದ ಶ್ರೀ ರಾಜನ್ ದೈವದ ಭಂಡಾರ ಹಿಡಿದು ಕನ್ವಾರೆಗೆ ಬರಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯರಿಂದ ವಿವಿಧ ವಿನೋದಾವಳಿಗಳು, ಬಾಲಕೃಷ್ಣ ಶಾಂತಿಗುರಿ ಪ್ರಾಯೋಜಕತ್ವದಲ್ಲಿ ಉಪ್ಪಿನಂಗಡಿಯ ಆನಂದ ಮತ್ತು ಬಳಗದ ಬೀಟ್ ವಾರಿಯರ್ಸ್ ಡಾನ್ಸ್

ನೂಜಿಬಾಳ್ತಿಲ: ಕನ್ವಾರೆಯಲ್ಲಿ ಶ್ರೀರಾಜನ್ ದೈವದ ನೇಮೋತ್ಸವ Read More »

ಕರಾವಳಿ, ಕರ್ನಾಟಕ

ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಕೋವಿಡ್-19 ಕಾರಣದಿಂದಾಗಿ ವಿಶೇಷ ಅಗತ್ಯವುಳ್ಳ 10ನೇ ತರಗತಿ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಿಂದ ಪರೀಕ್ಷೆಗೆ ಒಳಗಾಗಿ ವೈದ್ಯಕೀಯ ಪ್ರಮಾಣ ಪತ್ರವನ್ನು ಸಕಾಲದಲ್ಲಿ ಪಡೆಯಲು ಸಾಧ್ಯವಾಗಿರಲಿಲ್ಲ. ಈ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿವಿಧ ವಿನಾಯಿತಿ/ಸೌಲಭ್ಯಗಳನ್ನು ನೀಡಲು ಅವಕಾಶವಿರುತ್ತದೆ. 2021ರ ಎಸ್.ಎಸ್.ಎಲ್.ಸಿ. ಪರೀಕ್ಷಾ ನೋಂದಣಿ ಫೆಬ್ರವರಿ 1 ರಿಂದ 15ರವರೆಗೆ ಕಾಲಾವಕಾಶ ನೀಡಲಾಗಿದ್ದು, ಈ ಸೀಮಿತ ಅವಧಿಯಲ್ಲಿ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳು ಜಿಲ್ಲಾ ವೈದ್ಯಾಧಿಕಾರಿಗಳಿಂದ ವೈದ್ಯಕೀಯ ಪ್ರಮಾಣ ಪತ್ರ ಪಡೆದುಕೊಳ್ಳಲು

ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಬಿರ Read More »

ಕರಾವಳಿ, ಕರ್ನಾಟಕ

? ದಂಡ ಹಾಕಿದ್ದಕ್ಕೆ ಟ್ರಾಫಿಕ್ ಸಿಗ್ನಲ್ ಹಾಗೂ ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ ಭೂಪ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ. 05. ದಂಡ ಹಾಕಿದ್ದಾರೆ ಎಂಬ ಕೋಪದಿಂದ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್ ಮತ್ತು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ ಆರೋಪಿ ವಿದ್ಯುತ್ ಇಲಾಖೆಯ ನೌಕರನನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಎ.ರಮೇಶ್ ಎಂದು ಗುರುತಿಸಲಾಗಿದೆ. ಈತ ಸಂಚಾರಿ ನಿಯಮ ಉಲ್ಲಂಘಿಸಿದ್ದರಿಂದ ಪೊಲೀಸರು ದಂಡ ವಿಧಿಸಿದ್ದರು. ಕೆಲ ದಿನಗಳ ಹಿಂದೆ ರಮೇಶ್ ಅವರ ಬೈಕನ್ನು ಓರ್ವ ಅಪ್ರಾಪ್ತ ಓಡಿಸುತ್ತಿದ್ದು, ಹಾಗಾಗಿ ಪೊಲೀಸರು ಬೈಕ್ ತಡೆ ಹಿಡಿದು, ರಮೇಶ್ ಮನವಿ ಮಾಡಿಕೊಂಡರಾದರೂ ನಿಯಮದ

? ದಂಡ ಹಾಕಿದ್ದಕ್ಕೆ ಟ್ರಾಫಿಕ್ ಸಿಗ್ನಲ್ ಹಾಗೂ ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ ಭೂಪ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಳಿನೆಲೆ: ಗೋಪಾಲಕೃಷ್ಣ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹಿರಿಯಣ್ಣ ಗೌಡ ಅವರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಫೆ. 06. ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಮುಖ್ಯ ಶಿಕ್ಷಕ ಹಿರಿಯಣ್ಣ ಗೌಡ ಅಮೈ ಅವರಿಗೆ ಬೀಳ್ಕೊಡುಗೆ ಸಮಾರಂಭವು ಇಂದು ಶಾಲೆಯ ಸಭಾಂಗಣದಲ್ಲಿ ನಡೆಯಿತು. ಇವರನ್ನು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಸನ್ಮಾನಿಸಿ, ಆಶೀರ್ವದಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಡಬ ಸಮಿತಿಯ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಅಭಿನಂದನಾ ಭಾಷಣ ಮಾಡಿದರು. ಈ ಸಂದರ್ಭ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಬೈಲು, ಎಸ್.ಡಿ.ಎಂ.ಸಿ ಅಧ್ಯಕ್ಷ ಗಿರೀಶ್ ಕಳಿಗೆ, ವೇದವ್ಯಾಸ

ಬಿಳಿನೆಲೆ: ಗೋಪಾಲಕೃಷ್ಣ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹಿರಿಯಣ್ಣ ಗೌಡ ಅವರಿಗೆ ಬೀಳ್ಕೊಡುಗೆ Read More »

ಕರಾವಳಿ, ಕರ್ನಾಟಕ
Scroll to Top